AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs IRE: ಭಾರತ-ಐರ್ಲೆಂಡ್ ನಡುವಿನ ಟಿ20 ಸರಣಿಯ ಸಮಯ ಬದಲಾವಣೆ

India vs Ireland T20 Series: ಭಾರತ ಹಾಗೂ ಐರ್ಲೆಂಡ್ ನಡುವಿನ ಎರಡು ಪಂದ್ಯಗಳ T20 ಸರಣಿ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದೆ. ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಟೀಂ ಇಂಡಿಯಾ ಅಖಾಡಕ್ಕಿಳಿಯಲಿದೆ. ಮಹಿಳಾ T20 ವಿಶ್ವಕಪ್ ಕಾರಣದಿಂದ ಪಂದ್ಯಗಳ ಆರಂಭಿಕ ಸಮಯವನ್ನು ಸಂಜೆ 7 ರಿಂದ 6 ಗಂಟೆಗೆ ಬದಲಾಯಿಸಲಾಗಿದೆ. ಜೂನ್ 26 ಮತ್ತು 28 ರಂದು ಪಂದ್ಯಗಳು ನಡೆಯಲಿವೆ.

IND vs IRE: ಭಾರತ-ಐರ್ಲೆಂಡ್ ನಡುವಿನ ಟಿ20 ಸರಣಿಯ ಸಮಯ ಬದಲಾವಣೆ
Ind Vs IreImage Credit source: x.com
ಪೃಥ್ವಿಶಂಕರ
|

Updated on:Jun 25, 2026 | 4:21 PM

Share

ಭಾರತ ಹಾಗೂ ಐರ್ಲೆಂಡ್ (India vs Ireland) ನಡುವೆ ಎರಡು ಪಂದ್ಯಗಳ ಟಿ20 ಸರಣಿಯ ಆರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಈಗಾಗಲೇ ಟೀಂ ಇಂಡಿಯಾ ಕೂಡ ಎರಡೆರಡು ಬ್ಯಾಚ್​ಗಳಲ್ಲಿ ಐರ್ಲೆಂಡ್ ತಲುಪಿದೆ. ಐಪಿಎಲ್ ಬಳಿಕ ಟೀಂ ಇಂಡಿಯಾ ಆಡುತ್ತಿರುವ ಮೊದಲ ಟಿ20 ಸರಣಿ ಇದಾಗಿದೆ. ಹಾಗೆಯೇ ಸೂರ್ಯಕುಮಾರ್ ಯಾದವ್​ ಅವರನ್ನು ಟಿ20 ತಂಡದಿಂದ ಕೈಬಿಟ್ಟ ಬಳಿಕ ನೂತನ ನಾಯಕನಾಗಿ ಶ್ರೇಯಸ್ ಅಯ್ಯರ್ ಅವರನ್ನು ಆಯ್ಕೆ ಮಾಡಲಾಗಿದೆ. ಹೀಗಾಗಿ ನೂತನ ನಾಯಕನ ನಾಯಕತ್ವದಲ್ಲಿ ತಂಡ ಯಾವ ರೀತಿಯ ಪ್ರದರ್ಶನ ನೀಡುತ್ತದೆ ಎಂಬುದನ್ನು ಕಾದುನೋಡಬೇಕಿದೆ. ಆದರೆ ಅದಕ್ಕೂ ಮುನ್ನ ಈ ಎರಡು ಪಂದ್ಯಗಳ ಆರಂಭದ ಸಮಯವನ್ನು ಬದಲಾಯಿಸಲಾಗಿದೆ. ಇದಕ್ಕೆ ಕಾರಣ ಮಹಿಳಾ ಟಿ20 ವಿಶ್ವಕಪ್ ಎನ್ನಲಾಗುತ್ತಿದೆ.

ವಾಸ್ತವವಾಗಿ ಈ ಮೊದಲು ಭಾರತ ಹಾಗೂ ಐರ್ಲೆಂಡ್ ನಡುವಿನ ಈ ಎರಡು ಪಂದ್ಯಗಳು ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಆರಂಭವಾಗಬೇಕಿತ್ತು. ಆದರೆ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮಹಿಳಾ ಟಿ20 ವಿಶ್ವಕಪ್ ಪಂದ್ಯವು ಕೂಡ ಜೂನ್ 28 ರ ಭಾನುವಾರದಂದು ಅದೇ ಸಮಯಕ್ಕೆ ಅಂದರೆ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಈ ದಿನ ಭಾರತ ಮತ್ತು ಐರ್ಲೆಂಡ್ ನಡುವಿನ ಸರಣಿಯ ಎರಡನೇ ಮತ್ತು ಅಂತಿಮ ಟಿ20 ಪಂದ್ಯ ಕೂಡ ನಡೆಯಲಿದೆ. ಹೀಗಾಗಿ ಭಾರತ ಹಾಗೂ ಐರ್ಲೆಂಡ್ ನಡುವಿನ ಎರಡು ಪಂದ್ಯಗಳ ಸಮಯವನ್ನು ಒಂದು ಗಂಟೆ ಮುಂಚಿತವಾಗಿ ಆರಂಭಿಸಲು ತೀರ್ಮಾನಿಸಲಾಗಿದೆ.

1 ಗಂಟೆ ಮುಂಚಿತವಾಗಿ ಆರಂಭ

ಎರಡೂ ಟಿ20 ಪಂದ್ಯಗಳು ಭಾರತೀಯ ಕಾಲಮಾನ ಸಂಜೆ 6 ಗಂಟೆಗೆ ಪ್ರಾರಂಭವಾಗಲಿವೆ ಎಂದು ಐರ್ಲೆಂಡ್ ಕ್ರಿಕೆಟ್ ಹೇಳಿರುವುದಾಗಿ ಕ್ರಿಕ್‌ಬಜ್ ಉಲ್ಲೇಖಿಸಿದೆ. ಮೂಲತಃ ಪಂದ್ಯಗಳು ಸಂಜೆ 7:00 ಗಂಟೆಗೆ ಆರಂಭವಾಗಬೇಕಿತ್ತು. ಸಮಯವನ್ನು ಉದ್ದೇಶಪೂರ್ವಕವಾಗಿ ಒಂದು ಗಂಟೆ ಮುಂಚಿತವಾಗಿ ಬದಲಾಯಿಸಲಾಗಿದೆ. ಭಾರತ ಮತ್ತು ವಿದೇಶಗಳಲ್ಲಿ ನಡೆಯುವ ಟಿ20 ಪಂದ್ಯಗಳು ಸಾಮಾನ್ಯವಾಗಿ ಸ್ಥಳೀಯ ಸಮಯ ಸಂಜೆ 7 ಗಂಟೆಗೆ ಪ್ರಾರಂಭವಾಗುತ್ತವೆ. ಐರ್ಲೆಂಡ್ ಟಿ20 ಸರಣಿಯನ್ನು ಇದೇ ರೀತಿ ನಿಗದಿಪಡಿಸಲಾಗಿತ್ತು, ಆದರೆ ಕೊನೆಯ ಕ್ಷಣದಲ್ಲಿ ಬದಲಾಯಿಸಬೇಕಾಯಿತು.

ಟಿ20 ಸರಣಿ ವೇಳಾಪಟ್ಟಿ

  • ಮೊದಲ ಟಿ20 ಪಂದ್ಯ ಜೂನ್ 26 ರಂದು ಬೆಲ್‌ಫಾಸ್ಟ್‌ನಲ್ಲಿ ಸಂಜೆ 6 ಗಂಟೆಗೆ ಆರಂಭವಾಗಲಿದೆ.
  • ಎರಡನೇ ಟಿ20 ಪಂದ್ಯ ಜೂನ್ 28 ರಂದು ಸಂಜೆ 6 ಗಂಟೆಗೆ ಬೆಲ್‌ಫಾಸ್ಟ್‌ನಲ್ಲಿ ನಡೆಯಲಿದೆ.

ಭಾರತದ ಟಿ20 ನಾಯಕನಾಗಿ ಶ್ರೇಯಸ್ ಅಯ್ಯರ್​ ಪ್ರಯಾಣ ಇಷ್ಟರಲ್ಲೇ ಅಂತ್ಯ

ಉಭಯ ತಂಡಗಳು

ಐರ್ಲೆಂಡ್ ತಂಡ: ಲೋರ್ಕನ್ ಟಕರ್ (ನಾಯಕ), ರಾಸ್ ಅಡೈರ್, ಬೆನ್ ಕೌಲ್ಟಿಡ್ಜ್, ಗ್ಯಾರೆತ್ ಡೆಲಾನಿ, ಜಾರ್ಜ್ ಡಾಕ್ರೆಲ್, ಸ್ಟೀಫನ್ ಡೊಹೆನಿ, ಮ್ಯಾಥ್ಯೂ ಹಂಫ್ರೈಸ್, ಗ್ಯಾವಿನ್ ಹೋಯ್, ಮ್ಯಾಥ್ಯೂ ಹೊಲ್ಲಾರ್ಡ್, ಲಿಯಾಮ್ ಮೆಕಾರ್ಥಿ, ಜೇ ಮುಂದ್ರಾ, ಹ್ಯಾರಿ ಟೆಕ್ಟರ್, ಟಿಮ್ ಟೆಕ್ಟರ್, ರೂಬೆನ್ ವಿಲ್ಸನ್.

ಭಾರತ ತಂಡ: ಶ್ರೇಯಸ್ ಅಯ್ಯರ್ (ನಾಯಕ), ಇಶಾನ್ ಕಿಶನ್, ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಶಿವಂ ದುಬೆ, ತಿಲಕ್ ವರ್ಮಾ (ಉಪನಾಯಕ), ನಿತೀಶ್ ರೆಡ್ಡಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್ ಮತ್ತು ವೈಭವ್ ಸೂರ್ಯವಂಶಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:13 pm, Thu, 25 June 26

Follow Us
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ
‘11 ವರ್ಷಗಳಾದ್ರೂ ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ನೇಮಕಾತಿ ಇಲ್ಲ’
‘11 ವರ್ಷಗಳಾದ್ರೂ ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ನೇಮಕಾತಿ ಇಲ್ಲ’
ಐವರು ಜಲಸಮಾಧಿ ಕೇಸ್​: ಘಟನೆಯಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು?
ಐವರು ಜಲಸಮಾಧಿ ಕೇಸ್​: ಘಟನೆಯಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು?