‘ಭಾರತ ಯಾರ ಮಾತನ್ನೂ ಕೇಳುವ ಸ್ಥಿತಿಯಲ್ಲಿಲ್ಲ’: ಪಾಕ್ ಮಂಡಳಿಗೆ ಕ್ರೀಡಾ ಸಚಿವ ಅನುರಾಗ್ ಠಾಕೂರ್ ತಿರುಗೇಟು

ಭಾರತ ಯಾರ ಮಾತನ್ನೂ ಕೇಳುವ ಸ್ಥಿತಿಯಲ್ಲಿಲ್ಲ. ಮುಂದಿನ ವರ್ಷ ಏಕದಿನ ವಿಶ್ವಕಪ್ ಭಾರತದಲ್ಲಿ ನಡೆಯಲಿದ್ದು, ಪಾಕಿಸ್ತಾನ ಸೇರಿದಂತೆ ವಿಶ್ವಕಪ್​ನಲ್ಲಿ ಭಾಗವಹಿಸುವ ಎಲ್ಲಾ ದೇಶಗಳನ್ನು ಆತ್ಮೀಯವಾಗಿ ಆಹ್ವಾನಿಸಲಾಗುವುದು ಎಂದಿದ್ದಾರೆ.

‘ಭಾರತ ಯಾರ ಮಾತನ್ನೂ ಕೇಳುವ ಸ್ಥಿತಿಯಲ್ಲಿಲ್ಲ’: ಪಾಕ್ ಮಂಡಳಿಗೆ ಕ್ರೀಡಾ ಸಚಿವ ಅನುರಾಗ್ ಠಾಕೂರ್ ತಿರುಗೇಟು
ಅನುರಾಗ್ ಠಾಕೂರ್ (ಸಂಗ್ರಹ ಚಿತ್ರ)
Follow us
TV9 Web
| Updated By: ಪೃಥ್ವಿಶಂಕರ

Updated on:Oct 20, 2022 | 4:18 PM

ಕಳೆದೆರಡು ದಿನಗಳಿಂದ ಕ್ರಿಕೆಟ್​ ಲೋಕದಲ್ಲಿ ಸಾಕಷ್ಟು ಸುದ್ದಿ ಮಾಡುತ್ತಿರುವ ಬಿಸಿಸಿಐ (BCCI) ಹಾಗೂ ಪಾಕ್ ಮಂಡಳಿ (PCB) ನಡುವಿನ ಕದನಕ್ಕೆ ಸಖತ್ ಟ್ವಿಸ್ಟ್ ಸಿಕ್ಕಿದೆ. ನಿನ್ನೆ ಅಂದರೆ ಅ. 19 ರಂದು, ಭಾರತದಲ್ಲಿ ಮುಂದಿನ ವರ್ಷ ನಡೆಲ್ಲಿರುವ ಏಕದಿನ ವಿಶ್ವಕಪ್​ನಿಂದ (World Cup) ಹಿಂದೆ ಸರಿಯುವ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮಾತನಾಡಿತ್ತು. ಪಾಕಿಸ್ತಾನದ ಈ ಹೇಳಿಕೆಗೆ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ (Anurag Thakur) ತನ್ನದೇ ಆದ ಶೈಲಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿದ ಠಾಕೂರ್, ಭಾರತ ಯಾರ ಮಾತನ್ನೂ ಕೇಳುವ ಸ್ಥಿತಿಯಲ್ಲಿಲ್ಲ. ಮುಂದಿನ ವರ್ಷ ಏಕದಿನ ವಿಶ್ವಕಪ್ ಭಾರತದಲ್ಲಿ ನಡೆಯಲಿದ್ದು, ಪಾಕಿಸ್ತಾನ ಸೇರಿದಂತೆ ವಿಶ್ವಕಪ್​ನಲ್ಲಿ ಭಾಗವಹಿಸುವ ಎಲ್ಲಾ ದೇಶಗಳನ್ನು ಆತ್ಮೀಯವಾಗಿ ಆಹ್ವಾನಿಸಲಾಗುವುದು. ಅಲ್ಲದೆ ವೇಳಾಪಟ್ಟಿಯಂತೆ ಪಂದ್ಯಾವಳಿಯೂ ನಡೆಯಲಿದೆ ಎಂದು ಠಾಕೂರ್ ಹೇಳಿದ್ದಾರೆ.

ಭಾರತವನ್ನು ಕಡೆಗಣಿಸಲು ಸಾಧ್ಯವಿಲ್ಲ

ಮುಂದುವರೆದು ಮಾತನಾಡಿದ ಠಾಕೂರ್, ಇದು ಬಿಸಿಸಿಐಗೆ ಸಂಬಂಧಿಸಿದ ವಿಷಯವಾಗಿದೆ. ಹೀಗಾಗಿ ಅವರು ಈ ವಿಷಯದ ಬಗ್ಗೆ ಪ್ರತಿಕ್ರಿಯಿಸುತ್ತಾರೆ. ಭಾರತ ಈಗಾಗಲೇ ಕ್ರೀಡೆಯಲ್ಲಿ ದೊಡ್ಡ ಶಕ್ತಿಯಾಗಿ ಬೆಳೆದಿದೆ. ಅಲ್ಲದೆ ಈಗಾಗಲೇ ಭಾರತದಲ್ಲಿ ಅನೇಕ ವಿಶ್ವಕಪ್‌ಗಳನ್ನು ಆಯೋಜಿಸಲಾಗಿದೆ. ಹಾಗೆಯೇ ನಿಗದಿಯಂತೆ ಮುಂದಿನ ವರ್ಷ ಭಾರತದಲ್ಲಿ ಏಕದಿನ ವಿಶ್ವಕಪ್ ನಡೆಯಲಿದ್ದು, ಪ್ರತಿಯೊಂದು ಪ್ರಮುಖ ತಂಡಗಳು ಇದರಲ್ಲಿ ಪಾಲ್ಗೊಳ್ಳಲಿವೆ. ಏಕೆಂದರೆ ಯಾವುದೇ ಕ್ರೀಡೆಯಲ್ಲಿ ಭಾರತವನ್ನು ಕಡೆಗಣಿಸಲು ಸಾಧ್ಯವಿಲ್ಲ. ಮುಂದಿನ ವರ್ಷ ಭಾರತದಲ್ಲಿ ವಿಶ್ವಕಪ್ ನಡೆಯಲಿದ್ದು, ಅದ್ಧೂರಿಯಾಗಿ ಆಯೋಜನೆಯಾಗಲಿದೆ ಎಂದು ಅನುರಾಗ್ ಠಾಕೂರ್ ಹೇಳಿದ್ದಾರೆ. ಭದ್ರತಾ ಸಂಬಂಧಿ ಪ್ರಶ್ನೆಗಳಿರುವ ಕಾರಣ ಪಾಕಿಸ್ತಾನಕ್ಕೆ, ಟೀಂ ಇಂಡಿಯಾ ತೆರಳುವ ಬಗ್ಗೆ ಗೃಹ ಸಚಿವಾಲಯ ನಿರ್ಧಾರ ಕೈಗೊಳ್ಳಲಿದೆ ಎಂದಿದ್ದಾರೆ.

ವಿಶ್ವಕಪ್ ಆಡುವ ಬಗ್ಗೆ ಚಿಂತಿಸಬೇಕಾಗುತ್ತದೆ ಎಂದಿದ್ದ ಪಾಕ್ ಮಂಡಳಿ

ವಾಸ್ತವವಾಗಿ ಈ ಎಲ್ಲಾ ಬೆಳವಣಿಗೆಗಳಿಗೂ ಅ.18 ರಂದು ಬಿಸಿಸಿಐ ಕಾರ್ಯದರ್ಶಿ ಜೈ ಶಾ ನೀಡಿದ್ದ ಹೇಳಿಕೆ ಕಾರಣವಾಗಿದೆ. ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಡೆಯಲ್ಲಿರುವ ಏಷ್ಯಾಕಪ್​ಗೆ ಟೀಂ ಇಂಡಿಯಾವನ್ನು ಕಳುಹಿಸಲು ಸಾಧ್ಯವಿಲ್ಲ ಎಂದು ಜೈ ಶಾ ಹೇಳಿದ್ದರು. ಅಲ್ಲದೆ ಏಷ್ಯಾಕಪ್ ಕ್ರೀಡಾಕೂಟವನ್ನು ಪಾಕಿಸ್ತಾನದಲ್ಲಿ ಬಿಟ್ಟು ಬೇರೆ ತಟಸ್ಥ ಸ್ಥಳದಲ್ಲಿ ಆಯೋಜನೆ ಮಾಡುವುದಾದರೆ ಮಾತ್ರ ಟೀಂ ಇಂಡಿಯಾ ಈ ಟೂರ್ನಿಯಲ್ಲಿ ಪಾಲ್ಗೊಳ್ಳುವುದಾಗಿ ಶಾ ಹೇಳಿದ್ದರು. ಇದಾದ ಬಳಿಕ ಅವರ ಈ ಕಾಮೆಂಟ್‌ಗೆ ನಿರಂತರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಪಾಕಿಸ್ತಾನ ಕೂಡ ತನ್ನ ನಿಲುವುನ್ನು ವ್ಯಕ್ತಪಡಿಸಿತ್ತು.

ಇದನ್ನೂ ಓದಿ: SL vs NED: ನೆದರ್ಲೆಂಡ್ಸ್ ತಂಡವನ್ನು ಮಣಿಸಿ ಸೂಪರ್ 12 ಸುತ್ತಿಗೆ ಎಂಟ್ರಿಕೊಟ್ಟ ಶ್ರೀಲಂಕಾ ತಂಡ

ಪಾಕ್ ಮಂಡಳಿ ತನ್ನ ಹೇಳಿಕೆಯಲ್ಲಿ, ಇಂತಹ ಹೇಳಿಕೆಗಳು ಏಷ್ಯನ್ ಮತ್ತು ಅಂತರಾಷ್ಟ್ರೀಯ ಕ್ರಿಕೆಟ್ ಸಮುದಾಯಗಳ ಮೇಲೆ ನೇರ ಪರಿಣಾಮ ಬೀರಲಿವೆ. ಬಿಸಿಸಿಐನ ಈ ನಿರ್ಧಾರದಿಂದ ಪಿಸಿಬಿ ಕೂಡ ಮುಂದಿನ ವರ್ಷ ಭಾರತದಲ್ಲಿ ನಡೆಯಲ್ಲಿರುವ ಏಕದಿನ ವಿಶ್ವಕಪ್​ನಲ್ಲಿ ಪಾಲ್ಗೊಳ್ಳುವ ಬಗ್ಗೆ ಚಿಂತನೆ ನಡೆಸಬೇಕಾಗುತ್ತದೆ. ಹಾಗೆಯೇ ಏಕದಿನ ವಿಶ್ವಕಪ್ ಮಾತ್ರವಲ್ಲದೆ, 2024 ರಿಂದ 2031 ರವರೆಗೆ ಐಸಿಸಿ ಈವೆಂಟ್​ಗಳಿಗೆ ಆತಿಥ್ಯವಹಿಸಿರುವ ಭಾರತಕ್ಕೆ ಪಾಕ್ ತಂಡವನ್ನು ಕಳುಹಿಸುವ ಬಗ್ಗೆ ಯೋಚಿಸಬೇಕಾಗುತ್ತದೆ ಎಂದು ಪಿಸಿಬಿ ತನ್ನ ಹೇಳಿಕೆಯಲ್ಲಿ ತಿಳಿಸಿತ್ತು.

ತುರ್ತು ಸಭೆ ಕರೆಯುವಂತೆ ಮನವಿ

ಅಲ್ಲದೆ ಎಸಿಸಿ ಅಧ್ಯಕ್ಷರಾದ ಜೈ ಶಾ ಹೇಳಿಕೆಯ ಕುರಿತು ಪಿಸಿಬಿ ಇಲ್ಲಿಯವರೆಗೆ ಎಸಿಸಿಯಿಂದ ಯಾವುದೇ ಅಧಿಕೃತ ಸ್ಪಷ್ಟೀಕರಣವನ್ನು ಸ್ವೀಕರಿಸಿಲ್ಲ. ಹಾಗಾಗಿ, ಈ ಪ್ರಮುಖ ಮತ್ತು ಸೂಕ್ಷ್ಮ ವಿಷಯವನ್ನು ಚರ್ಚಿಸಲು ಪ್ರಾಯೋಗಿಕವಾಗಿ ಸಾಧ್ಯವಾದಷ್ಟು ಬೇಗ ತನ್ನ ಮಂಡಳಿಯ ತುರ್ತು ಸಭೆಯನ್ನು ಕರೆಯುವಂತೆ ಪಿಸಿಬಿ ಈಗ ಏಷ್ಯನ್ ಕ್ರಿಕೆಟ್ ಕೌನ್ಸಿಲ್‌ಗೆ ವಿನಂತಿಸಿದೆ ಎಂದು ತನ್ನ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:18 pm, Thu, 20 October 22

ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್