AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆ.22 ರಂದು ಕಣಕ್ಕಿಳಿಯಲಿದೆ ಟೀಂ ಇಂಡಿಯಾ; ಎದುರಾಳಿ ಯಾರು? ಎಷ್ಟು ಗಂಟೆಗೆ ಪಂದ್ಯ?

ಭಾರತ ಮತ್ತು ಜಪಾನ್ ನಡುವಿನ ಮೊದಲ ಐತಿಹಾಸಿಕ T20 ಪಂದ್ಯ ಆಗಸ್ಟ್ 22 ರಂದು ನಡೆಯಲಿದೆ. ಏಷ್ಯನ್ ಗೇಮ್ಸ್‌ಗಾಗಿ ಆಯ್ಕೆಯಾದ ಯುವ ಭಾರತೀಯ ತಂಡವು ಈ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಭಾರತ-ಜಪಾನ್ ರಾಜತಾಂತ್ರಿಕ ಸಂಬಂಧಗಳ 75ನೇ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಈ ಪಂದ್ಯ ಕ್ರೀಡೆಗಳ ಮೂಲಕ ಸ್ನೇಹ ಸಂಬಂಧ ಬಲಪಡಿಸುವ ಉದ್ದೇಶ ಹೊಂದಿದೆ. ಇದನ್ನು ಫ್ಯಾನ್‌ಕೋಡ್ ಅಪ್ಲಿಕೇಶನ್‌ನಲ್ಲಿ ನೇರವಾಗಿ ವೀಕ್ಷಿಸಬಹುದು.

ಸೆ.22 ರಂದು ಕಣಕ್ಕಿಳಿಯಲಿದೆ ಟೀಂ ಇಂಡಿಯಾ; ಎದುರಾಳಿ ಯಾರು? ಎಷ್ಟು ಗಂಟೆಗೆ ಪಂದ್ಯ?
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on: Sep 19, 2026 | 7:42 PM

Share

ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಯನ್ನು ಆಡಿ ಮುಗಿಸಿರುವ ಟೀಂ ಇಂಡಿಯಾ, ಏಷ್ಯನ್ ಗೇಮ್ಸ್​ನಲ್ಲಿ ಪಾಲ್ಗೊಳ್ಳಲು ಸಕಲ ತಯಾರಿ ಮಾಡಿಕೊಂಡಿದೆ. ಆದರೆ ಈ ಪಂದ್ಯಾವಳಿಯಲ್ಲಿ ಭಾಗವಹಿಸುವುದಕ್ಕೆ ಮುನ್ನ ಟೀಂ ಇಂಡಿಯಾ ಜಪಾನ್ ವಿರುದ್ಧ ಏಕೈಕ ಟಿ20 ಪಂದ್ಯವನ್ನಾಡಲಿದೆ. ಅಂತರರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಭಾರತ ಮತ್ತು ಜಪಾನ್ ಕ್ರಿಕೆಟ್ ತಂಡಗಳು ಮೊದಲ ಬಾರಿಗೆ ಪರಸ್ಪರ ಮುಖಾಮುಖಿಯಾಗುತ್ತಿರುವುದರಿಂದ ಅಭಿಮಾನಿಗಳಲ್ಲಿ ಆಸಕ್ತಿ ಇಮ್ಮಡಿಗೊಂಡಿದೆ. ಈ ಐತಿಹಾಸಿಕ ಏಕೈಕ ಟಿ20 ಪಂದ್ಯ ಈ ತಿಂಗಳ 22 ರಂದು ಜಪಾನ್‌ನ ಸಾನೋ ಕ್ರೀಡಾಂಗಣದಲ್ಲಿ ನಡೆಯಲಿದೆ.

ಪಂದ್ಯದ ವಿವರ ಹೀಗಿದೆ

ಪಂದ್ಯವು ಭಾರತೀಯ ಕಾಲಮಾನ ಬೆಳಿಗ್ಗೆ 9:30 ಕ್ಕೆ ಆರಂಭವಾಗಲಿದೆ. ಅಭಿಮಾನಿಗಳು OTT ಪ್ಲಾಟ್‌ಫಾರ್ಮ್‌ಗಳಲ್ಲಿ ಮಾತ್ರ ಪಂದ್ಯವನ್ನು ವೀಕ್ಷಿಸಲು ಸಾಧ್ಯವಾಗುತ್ತದೆ. ಟಿವಿ ಪ್ರಸಾರ ಹಕ್ಕುಗಳಿಗಾಗಿ ಯಾವುದೇ ಚಾನೆಲ್ ಮುಂದೆ ಬರದ ಕಾರಣ, ಇದು ಫ್ಯಾನ್‌ಕೋಡ್ ಅಪ್ಲಿಕೇಶನ್‌ನಲ್ಲಿ ಮಾತ್ರ ನೇರಪ್ರಸಾರವಾಗಲಿದೆ. ಕ್ರಿಕೆಟ್ ಅಭಿಮಾನಿಗಳು ತಮ್ಮ ಸ್ಮಾರ್ಟ್‌ಫೋನ್‌ಗಳು ಅಥವಾ ಇತರ ಸಾಧನಗಳಲ್ಲಿ ಪಂದ್ಯವನ್ನು ವೀಕ್ಷಿಸಬಹುದು.

ಈ ಏಕೈಕ ಟಿ20 ಪಂದ್ಯಕ್ಕೂ ಬಿಸಿಸಿಐ, ಏಷ್ಯನ್ ಕ್ರೀಡಾಕೂಟಕ್ಕೆ ಈಗಾಗಲೇ ಘೋಷಿಸಲಾದ ತಂಡವನ್ನೇ ಕಣಕ್ಕಿಳಿಸಲಿದೆ. ಈ ತಂಡದಲ್ಲಿ, ಹಿರಿಯ ಆಟಗಾರರ ಬದಲು ಯುವ ಪ್ರತಿಭೆಗಳಿಗೆ ಆದ್ಯತೆ ನೀಡಲಾಗಿದೆ. ಯುವ ಆಟಗಾರರಿಗೆ ಅಂತರರಾಷ್ಟ್ರೀಯ ಅನುಭವ ನೀಡುವುದು ಮತ್ತು ಅವರ ಸಾಮರ್ಥ್ಯಗಳನ್ನು ಪರೀಕ್ಷಿಸುವುದು ಈ ನಿರ್ಧಾರದ ಹಿಂದಿನ ಉದ್ದೇಶವಾಗಿದೆ. ಭಾರತ ಇತ್ತೀಚೆಗೆ ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯನ್ನು 3-0 ಅಂತರದಿಂದ ಗೆದ್ದುಕೊಂಡಿತು. ಆ ಗೆಲುವಿನ ನಂತರ, ಈ ಯುವ ತಂಡವು ಜಪಾನಿನ ನೆಲದಲ್ಲಿ ಹೇಗೆ ಪ್ರದರ್ಶನ ನೀಡುತ್ತದೆ ಎಂಬುದನ್ನು ನೋಡಲು ಆಸಕ್ತಿದಾಯಕವಾಗಿರುತ್ತದೆ.

ಈ ಪಂದ್ಯದ ವಿಶೇಷತೆ ಏನು?

ಈ ಪಂದ್ಯ ಕೇವಲ ಕ್ರಿಕೆಟ್ ಪಂದ್ಯವಲ್ಲ, ರಾಜತಾಂತ್ರಿಕ ಮಹತ್ವವನ್ನೂ ಹೊಂದಿದೆ. ಭಾರತ ಮತ್ತು ಜಪಾನ್ ನಡುವಿನ ಕ್ರೀಡಾ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಹೆಚ್ಚಿಸುವ ಉದ್ದೇಶದಿಂದ ಈ ಪಂದ್ಯವನ್ನು ಆಯೋಜಿಸಲಾಗಿದೆ. ಕ್ರೀಡೆಗಳ ಮೂಲಕ ಎರಡೂ ದೇಶಗಳ ನಡುವಿನ ಸ್ನೇಹ ಸಂಬಂಧವನ್ನು ಬಲಪಡಿಸುವ ಉದ್ದೇಶದಿಂದ ಟೀಂ ಇಂಡಿಯಾ ಮೊದಲ ಬಾರಿಗೆ ಜಪಾನ್ ತಂಡವನ್ನು ಎದುರಿಸಲಿದೆ. ಭಾರತ ಮತ್ತು ಜಪಾನ್ ನಡುವಿನ ರಾಜತಾಂತ್ರಿಕ ಸಂಬಂಧಗಳ 75 ನೇ ವಾರ್ಷಿಕೋತ್ಸವದ ನೆನಪಿಗಾಗಿ ಈ ಪಂದ್ಯವನ್ನು ಆಡಲಾಗುತ್ತಿದೆ. ಜಪಾನ್​ನಲ್ಲಿ ಕ್ರಿಕೆಟ್ ಜನಪ್ರಿಯತೆಯ ಕೊರತೆಯಿರುವ ಸಂದರ್ಭದಲ್ಲಿ, ಈ ಪಂದ್ಯವು ಕ್ರಿಕೆಟ್ ಅನ್ನು ಹೊಸ ಪ್ರೇಕ್ಷಕರಿಗೆ ಹತ್ತಿರ ತರಬಹುದು ಎಂಬುದು ಬಿಸಿಸಿಐ ಉದ್ದೇಶವಾಗಿದೆ.

ಅಫ್ಘನ್ ವಿರುದ್ದದ ಟಿ20 ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದ ಭಾರತ

ಟೀಂ ಇಂಡಿಯಾದ ಮುಂದಿನ ವೇಳಾಪಟ್ಟಿ

ಜಪಾನ್ ವಿರುದ್ಧದ ಈ ಏಕೈಕ ಟಿ20 ಪಂದ್ಯದ ಹೊರತಾಗಿ, ಈ ತಿಂಗಳು ಟೀಂ ಇಂಡಿಯಾ ಬಿಡುವಿಲ್ಲದ ವೇಳಾಪಟ್ಟಿಯನ್ನು ಹೊಂದಿದೆ. ಜಪಾನ್‌ನಲ್ಲಿ ನಡೆಯಲಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾಗವಹಿಸುವುದರ ಜೊತೆಗೆ, ಭಾರತವು ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಮತ್ತು ಟಿ20 ಸರಣಿಯಲ್ಲೂ ಮುಖಾಮುಖಿಯಾಗಲಿದೆ. ಈ ಸರಣಿಯ ಪಂದ್ಯಗಳು ಯುವ ಆಟಗಾರರಿಗೆ ತಮ್ಮ ಪ್ರತಿಭೆಯನ್ನು ಸಾಬೀತುಪಡಿಸಲು ಉತ್ತಮ ಅವಕಾಶವನ್ನು ಒದಗಿಸುತ್ತವೆ. ಜಪಾನ್ ವಿರುದ್ಧದ ಪಂದ್ಯದಲ್ಲಿ ಯುವ ಭಾರತೀಯ ತಂಡವು ಹೇಗೆ ಪ್ರದರ್ಶನ ನೀಡುತ್ತದೆ ಎಂಬುದನ್ನು ನೋಡಲು ಕ್ರಿಕೆಟ್ ಜಗತ್ತು ಕುತೂಹಲದಿಂದ ಕಾಯುತ್ತಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ