AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Road Safety World Series: ಇಂದಿನ ಲೆಜೆಂಡ್ಸ್ ಕಾಳಗದಲ್ಲಿ ಸಚಿನ್- ಲಾರಾ ಮುಖಾಮುಖಿ; ಪಂದ್ಯ ಆರಂಭ ಎಷ್ಟು ಗಂಟೆಗೆ?

Road Safety World Series: ಭಾರತ ತಂಡ, ದಕ್ಷಿಣ ಆಫ್ರಿಕಾ ಲೆಜೆಂಡ್ಸ್ ತಂಡವನ್ನು 61 ರನ್ಗಳಿಂದ ಸೋಲಿಸಿದರೆ, ವೆಸ್ಟ್ ಇಂಡೀಸ್ ಲೆಜೆಂಡ್ಸ್, ಬಾಂಗ್ಲಾದೇಶ ಲೆಜೆಂಡ್ಸ್ ತಂಡವನ್ನು 9 ವಿಕೆಟ್ಗಳಿಂದ ಸೋಲಿಸಿತು.

Road Safety World Series: ಇಂದಿನ ಲೆಜೆಂಡ್ಸ್ ಕಾಳಗದಲ್ಲಿ ಸಚಿನ್- ಲಾರಾ ಮುಖಾಮುಖಿ; ಪಂದ್ಯ ಆರಂಭ ಎಷ್ಟು ಗಂಟೆಗೆ?
India Legends vs West Indies Legends
TV9 Web
| Updated By: ಪೃಥ್ವಿಶಂಕರ|

Updated on: Sep 14, 2022 | 4:14 PM

Share

ಕಾನ್ಪುರದ ಗ್ರೀನ್ ಪಾರ್ಕ್‌ನಲ್ಲಿ ಬುಧವಾರ ನಡೆಯಲಿರುವ ರೋಡ್ ಸೇಫ್ಟಿ ವರ್ಲ್ಡ್ ಸಿರೀಸ್ (Road Safety World Series) ಸೀಸನ್ 2 ರಲ್ಲಿ ಇಂಡಿಯಾ ಲೆಜೆಂಡ್ಸ್(India Legends), ವೆಸ್ಟ್ ಇಂಡೀಸ್ ಲೆಜೆಂಡ್‌ ತಂಡವನ್ನು ಎದುರಿಸಲಿದೆ. ಈ ಎರಡು ತಂಡಗಳಲ್ಲಿ ಕ್ರಿಕೆಟ್ ಲೋಕದ ಇಬ್ಬರು ಲೆಜೆಂಡ್ಸ್​ಗಳು ಆಡುತ್ತಿದ್ದು ಭಾರತದ ಪರ ಸಚಿನ್ ತೆಂಡೂಲ್ಕರ್ (Sachin Tendulkar) ಇದ್ದರೆ, ವಿಂಡೀಸ್ ಪರ ಬ್ರಿಯಾನ್ ಲಾರಾ (Brian Lara) ಆಡುತ್ತಿದ್ದಾರೆ. ಹೀಗಾಗಿ ನಿರೀಕ್ಷೆಯಂತೆ ಈ ಪಂದ್ಯದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಈ ಮುಂಚೆ ಆಡಿದ ಬಾಂಗ್ಲಾದೇಶ ಲೆಜೆಂಡ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಲೆಜೆಂಡ್ಸ್‌ ತಂಡದಲ್ಲಿ ಲಾರಾ ಇರಲಿಲ್ಲ. ಆದರೆ ಈಗ ಲಾರಾ ಭಾರತ ವಿರುದ್ಧದ ಪಂದ್ಯಕ್ಕೆ ತಂಡವನ್ನು ಸೇರಿಕೊಂಡಿದ್ದರು.

ಇಂಡಿಯಾ ಲೆಜೆಂಡ್ಸ್ ಮತ್ತು ವೆಸ್ಟ್ ಇಂಡೀಸ್ ಲೆಜೆಂಡ್ಸ್ ಎರಡೂ ತಂಡಗಳು ಕೂಡ ತಮ್ಮ ಆರಂಭಿಕ ಪಂದ್ಯಗಳಲ್ಲಿ ಗೆಲ್ಲುವುದರೊಂದಿಗೆ ಪಂದ್ಯಾವಳಿಯನ್ನು ಪ್ರಾರಂಭಿಸಿವೆ. ಭಾರತ ತಂಡ, ದಕ್ಷಿಣ ಆಫ್ರಿಕಾ ಲೆಜೆಂಡ್ಸ್ ತಂಡವನ್ನು 61 ರನ್ಗಳಿಂದ ಸೋಲಿಸಿದರೆ, ವೆಸ್ಟ್ ಇಂಡೀಸ್ ಲೆಜೆಂಡ್ಸ್, ಬಾಂಗ್ಲಾದೇಶ ಲೆಜೆಂಡ್ಸ್ ತಂಡವನ್ನು 9 ವಿಕೆಟ್ಗಳಿಂದ ಸೋಲಿಸಿತು.

ಪಂದ್ಯದ ಬಗ್ಗೆ ಮಾಹಿತಿ

ಇದನ್ನೂ ಓದಿ
Image
Suresh Raina: ವಿದಾಯ ಹೇಳಿದ 4 ದಿನಗಳಲ್ಲೇ ಮತ್ತೆ ಅಖಾಡಕ್ಕಿಳಿದ ರೈನಾ..! ಇಂದಿನ ಪಂದ್ಯದ ಬಗೆಗಿನ ವಿವರ ಹೀಗಿದೆ
Image
Road Safety World Series 2022: ಇಂದಿನಿಂದ ಲೆಜೆಂಡ್ಸ್ ಕಾಳಗ; ಸಚಿನ್-ಜಾಂಟಿ ಮುಖಾಮುಖಿ
Image
RSWS: ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್‌ನಲ್ಲಿ ಆಡುತ್ತಿರುವ ತಂಡಗಳ ಹೆಸರು ಮತ್ತು ನಾಯಕರ ವಿವರ ಹೀಗಿದೆ

ಇಂಡಿಯಾ ಲೆಜೆಂಡ್ಸ್ ಮತ್ತು ವೆಸ್ಟ್ ಇಂಡೀಸ್ ಲೆಜೆಂಡ್ಸ್ ನಡುವಿನ ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್ 2022 ಪಂದ್ಯ ಯಾವಾಗ ಪ್ರಾರಂಭವಾಗುತ್ತದೆ?

ಇಂಡಿಯಾ ಲೆಜೆಂಡ್ಸ್ ಮತ್ತು ವೆಸ್ಟ್ ಇಂಡೀಸ್ ಲೆಜೆಂಡ್ಸ್ ನಡುವಿನ ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್ 2022 ಪಂದ್ಯವು ಸೆಪ್ಟೆಂಬರ್ 14, ಬುಧವಾರದಂದು 7:30 PM IST ಕ್ಕೆ ಪ್ರಾರಂಭವಾಗುತ್ತದೆ.

ಇಂಡಿಯಾ ಲೆಜೆಂಡ್ಸ್ ಮತ್ತು ವೆಸ್ಟ್ ಇಂಡೀಸ್ ಲೆಜೆಂಡ್ಸ್ ನಡುವಿನ ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್ 2022 ಪಂದ್ಯವನ್ನು ಯಾವಾಗ ಆಡಲಾಗುತ್ತದೆ?

ಇಂಡಿಯಾ ಲೆಜೆಂಡ್ಸ್ ಮತ್ತು ವೆಸ್ಟ್ ಇಂಡೀಸ್ ಲೆಜೆಂಡ್ಸ್ ನಡುವಿನ ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್ 2022 ಪಂದ್ಯವು ಬುಧವಾರ, ಸೆಪ್ಟೆಂಬರ್ 14, 2022 ರಂದು ನಡೆಯಲಿದೆ.

ಇಂಡಿಯಾ ಲೆಜೆಂಡ್ಸ್ ಮತ್ತು ವೆಸ್ಟ್ ಇಂಡೀಸ್ ಲೆಜೆಂಡ್ಸ್ ನಡುವಿನ ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್ 2022 ಪಂದ್ಯವನ್ನು ಎಲ್ಲಿ ಆಡಲಾಗುತ್ತದೆ?

ಇಂಡಿಯಾ ಲೆಜೆಂಡ್ಸ್ ಮತ್ತು ವೆಸ್ಟ್ ಇಂಡೀಸ್ ಲೆಜೆಂಡ್ಸ್ ನಡುವಿನ ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್ 2022 ಪಂದ್ಯ ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಇಂಡಿಯಾ ಲೆಜೆಂಡ್ಸ್ ಮತ್ತು ವೆಸ್ಟ್ ಇಂಡೀಸ್ ಲೆಜೆಂಡ್ಸ್ ನಡುವಿನ ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್ 2022 ಪಂದ್ಯವನ್ನು ಯಾವ ಟಿವಿ ಚಾನೆಲ್‌ಗಳು ಪ್ರಸಾರ ಮಾಡುತ್ತವೆ?

ಇಂಡಿಯಾ ಲೆಜೆಂಡ್ಸ್ ಮತ್ತು ವೆಸ್ಟ್ ಇಂಡೀಸ್ ಲೆಜೆಂಡ್ಸ್ ನಡುವಿನ ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್ 2022 ಪಂದ್ಯವನ್ನು ಸ್ಪೋರ್ಟ್ಸ್ 18 ನಲ್ಲಿ ಪ್ರಸಾರ ಮಾಡಲಾಗುತ್ತದೆ.

ಇಂಡಿಯಾ ಲೆಜೆಂಡ್ಸ್ ಮತ್ತು ವೆಸ್ಟ್ ಇಂಡೀಸ್ ಲೆಜೆಂಡ್ಸ್ ನಡುವಿನ ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್ 2022 ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಹೇಗೆ ವೀಕ್ಷಿಸುವುದು?

ಇಂಡಿಯಾ ಲೆಜೆಂಡ್ಸ್ ಮತ್ತು ವೆಸ್ಟ್ ಇಂಡೀಸ್ ಲೆಜೆಂಡ್ಸ್ ನಡುವಿನ ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್ 2022 ಪಂದ್ಯದ ಲೈವ್ ಸ್ಟ್ರೀಮಿಂಗ್ Voot ನಲ್ಲಿ ಲಭ್ಯವಿರುತ್ತದೆ.