IND vs SL: ವಿರಾಟ್ ಕೊಹ್ಲಿ-ರೋಹಿತ್ ರಿ ಎಂಟ್ರಿ: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11

|

Updated on: Aug 01, 2024 | 12:15 PM

India vs Sri Lanka: ಭಾರತ ಮತ್ತು ಶ್ರೀಲಂಕಾ ನಡುವಣ ಏಕದಿನ ಸರಣಿಯು ಆಗಸ್ಟ್ 2 ರಿಂದ ಶುರುವಾಗಲಿದೆ. ಮೊದಲ ಪಂದ್ಯ ಶುಕ್ರವಾರ ನಡೆದರೆ, 2ನೇ ಪಂದ್ಯವು ಆಗಸ್ಟ್ 4 ರಂದು ಜರುಗಲಿದೆ. ಇನ್ನು ಮೂರನೇ ಪಂದ್ಯ ಆಗಸ್ಟ್ 7 ರಂದು ನಡೆಯಲಿದೆ. ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆಯಲಿರುವ ಈ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ಮಧ್ಯಾಹ್ನ 2.30 ರಿಂದ ಶುರುವಾಗಲಿದೆ.

IND vs SL: ವಿರಾಟ್ ಕೊಹ್ಲಿ-ರೋಹಿತ್ ರಿ ಎಂಟ್ರಿ: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11
Team India
Follow us on

ಭಾರತ ಮತ್ತು ಶ್ರೀಲಂಕಾ ನಡುವಣ ಏಕದಿನ ಸರಣಿಯು ಶುಕ್ರವಾರದಿಂದ (ಆ.2) ಶುರುವಾಗಲಿದೆ. ಕೊಲಂಬೊದ ಆರ್​ ಪ್ರೇಮದಾಸ ಮೈದಾನದಲ್ಲಿ ನಡೆಯಲಿರುವ ಮೊದಲ ಪಂದ್ಯದ ಮೂಲಕ ಟೀಮ್ ಇಂಡಿಯಾ ದಿಗ್ಗಜರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಮತ್ತೆ ಮೈದಾನಕ್ಕಿಳಿಯಲಿದ್ದಾರೆ. ಅಂದರೆ ಟಿ20 ವಿಶ್ವಕಪ್​ ಬಳಿಕ ಕಿಂಗ್ ಕೊಹ್ಲಿ ಹಾಗೂ ಹಿಟ್​ಮ್ಯಾನ್ ಯಾವುದೇ ಪಂದ್ಯವಾಡಿಲ್ಲ. ಇದೀಗ ಗೌತಮ್ ಗಂಭೀರ್ ಅವರ ಮುಂದಾಳತ್ವದಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

ಹಾಗೆಯೇ ಈ ಪಂದ್ಯದೊಂದಿಗೆ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಮತ್ತೆ ಬ್ಲೂ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಇಬ್ಬರು ಆಟಗಾರರನ್ನು ಟಿ20 ವಿಶ್ವಕಪ್​ಗೆ ಪರಿಗಣಿಸಲಾಗಿರಲಿಲ್ಲ. ಅಲ್ಲದೆ ಆ ಬಳಿಕ ನಡೆದ ಟಿ20 ಸರಣಿಗೂ ಆಯ್ಕೆಯಾಗಿರಲಿಲ್ಲ. ಇದೀಗ ಏಕದಿನ ಸರಣಿ ಮೂಲಕ ಕಂಬ್ಯಾಕ್ ಮಾಡಲು ರಾಹುಲ್-ಅಯ್ಯರ್ ಸಜ್ಜಾಗಿದ್ದಾರೆ.

ಅದರಂತೆ ಶ್ರೀಲಂಕಾ ವಿರುದ್ಧದ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಇನಿಂಗ್ಸ್ ಆರಂಭಿಸಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಬ್ಯಾಟ್ ಬೀಸಲಿದ್ದಾರೆ. ಹಾಗೆಯೇ ನಾಲ್ಕನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಆಡಿದರೆ, ವಿಕೆಟ್ ಕೀಪರ್ ಬ್ಯಾಟರ್​ ಆಗಿ ಕೆಎಲ್ ರಾಹುಲ್ ಐದನೇ ಕ್ರಮಾಂಕದಲ್ಲಿ ಆಡಬಹುದು.

ಇನ್ನು ಆಲ್​ರೌಂಡರ್​ಗಳ ಸ್ಥಾನದಲ್ಲಿ ಅಕ್ಷರ್ ಪಟೇಲ್ ಹಾಗೂ ಶಿವಂ ದುಬೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ವೇಗಿಗಳಾಗಿ ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್ ಹಾಗೂ ಖಲೀಲ್ ಅಹ್ಮದ್​ಗೆ ಅವಕಾಶ ಸಿಗಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್​ ಈ ಕೆಳಗಿನಂತಿರಲಿದೆ…

  1. ರೋಹಿತ್ ಶರ್ಮಾ (ನಾಯಕ),
  2. ಶುಭ್​ಮನ್ ಗಿಲ್
  3. ವಿರಾಟ್ ಕೊಹ್ಲಿ
  4. ಶ್ರೇಯಸ್ ಅಯ್ಯರ್
  5. ಕೆಎಲ್ ರಾಹುಲ್ (ವಿಕೆಟ್ ಕೀಪರ್)
  6. ಶಿವಂ ದುಬೆ
  7. ಅಕ್ಷರ್ ಪಟೇಲ್
  8. ಕುಲ್ದೀಪ್ ಯಾದವ್
  9. ಖಲೀಲ್ ಅಹ್ಮದ್
  10. ಅರ್ಷದೀಪ್ ಸಿಂಗ್
  11. ಮೊಹಮ್ಮದ್ ಸಿರಾಜ್

ಜಸ್​ಪ್ರೀತ್ ಬುಮ್ರಾಗೆ ವಿಶ್ರಾಂತಿ:

ಈ ಸರಣಿಯಲ್ಲಿ ಜಸ್​ಪ್ರೀತ್ ಬುಮ್ರಾ ಕಾಣಿಸಿಕೊಳ್ಳುವುದಿಲ್ಲ. ಟಿ20 ವಿಶ್ವಕಪ್​ ಮುಕ್ತಾಯದ ಬಳಿಕ ಬುಮ್ರಾಗೆ ದೀರ್ಘಾವಧಿಯ ವಿಶ್ರಾಂತಿ ನೀಡಲಾಗಿದ್ದು, ಅದರಂತೆ ಮುಂಬರುವ ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿ ಮೂಲಕ ಮತ್ತೆ ಅವರು ಮೈದಾನಕ್ಕಿಳಿಯಲಿದ್ದಾರೆ.

ಇದನ್ನೂ ಓದಿ: IPL 2025: RCB ತಂಡದಿಂದ ಗ್ಲೆನ್ ಮ್ಯಾಕ್ಸ್​ವೆಲ್ ಔಟ್?

ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಬ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್ , ಖಲೀಲ್ ಅಹ್ಮದ್, ಹರ್ಷಿತ್ ರಾಣ.