AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC ಅಂಕ ಪಟ್ಟಿಯಲ್ಲಿ ಭಾರತ ತಂಡವನ್ನು ಹಿಂದಿಕ್ಕಿದ ಆಸ್ಟ್ರೇಲಿಯಾ

World Test Championship: ಪಾಕಿಸ್ತಾನ್ ವಿರುದ್ಧದ ಸರಣಿ ಗೆಲುವಿನೊಂದಿಗೆ ಆಸ್ಟ್ರೇಲಿಯಾ ತಂಡವು ಟೆಸ್ಟ್ ತಂಡಗಳ ಶ್ರೇಯಾಂಕದಲ್ಲೂ ಅಗ್ರಸ್ಥಾನ ಅಲಂಕರಿಸಿದೆ. 117 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದ ಟೀಮ್ ಇಂಡಿಯಾವನ್ನು ಹಿಂದಿಕ್ಕಿ ಆಸೀಸ್ ಪಡೆ ಮೊದಲ ಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದೆ.

WTC ಅಂಕ ಪಟ್ಟಿಯಲ್ಲಿ ಭಾರತ ತಂಡವನ್ನು ಹಿಂದಿಕ್ಕಿದ ಆಸ್ಟ್ರೇಲಿಯಾ
ಆಸ್ಟ್ರೇಲಿಯಾ ತಂಡ
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jan 06, 2024 | 10:26 AM

ಪಾಕಿಸ್ತಾನ್ ವಿರುದ್ಧದ ಟೆಸ್ಟ್ ಸರಣಿಯನ್ನು ಆಸ್ಟ್ರೇಲಿಯಾ (Australia) ತಂಡ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಮೂರು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ 360 ರನ್​ಗಳ ಭರ್ಜರಿ ಜಯ ಸಾಧಿಸಿದರೆ, 2ನೇ ಪಂದ್ಯದಲ್ಲಿ 79 ರನ್​ಗಳ ಗೆಲುವು ದಾಖಲಿಸಿತು. ಇನ್ನು 3ನೇ ಪಂದ್ಯದಲ್ಲಿ 9 ವಿಕೆಟ್​ಗಳ ಅಮೋಘ ಗೆಲುವಿನೊಂದಿಗೆ ಸರಣಿಯನ್ನು 3-0 ಅಂತರದಿಂದ ಗೆದ್ದುಕೊಂಡಿತು.

ಈ ಭರ್ಜರಿ ಗೆಲುವಿನ ಬೆನ್ನಲ್ಲೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕಪಟ್ಟಿಯಲ್ಲೂ ಆಸ್ಟ್ರೇಲಿಯಾ ತಂಡ ಅಗ್ರಸ್ಥಾನಕ್ಕೇರಿದೆ. ಇದಕ್ಕೂ ಮುನ್ನ ಭಾರತ ತಂಡ ಮೊದಲ ಸ್ಥಾನದಲ್ಲಿತ್ತು. ಇದೀಗ 56.25% ಗೆಲುವಿನ ಶೇಕಡಾವಾರು ಹೊಂದಿರುವ ಆಸ್ಟ್ರೇಲಿಯಾ ತಂಡ ಮೊದಲ ಸ್ಥಾನಕ್ಕೇರಿದೆ.

ಆಸ್ಟ್ರೇಲಿಯಾ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯಲ್ಲಿ ಒಟ್ಟು 8 ಪಂದ್ಯಗಳನ್ನಾಡಿದೆ. ಈ ವೇಳೆ 5 ಪಂದ್ಯಗಳಲ್ಲಿ ಜಯ ಸಾಧಿಸಿದರೆ, 1 ಪಂದ್ಯವನ್ನು ಡ್ರಾ ಮಾಡಿಕೊಂಡಿದೆ. ಇನ್ನು ಕೇವಲ 2 ಪಂದ್ಯಗಳಲ್ಲಿ ಮಾತ್ರ ಸೋಲನುಭವಿಸಿದೆ. ಈ ಮೂಲಕ 54 ಪಾಯಿಂಟ್ಸ್ ಕಲೆಹಾಕಿ ಆಸ್ಟ್ರೇಲಿಯಾ WTC ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ.

ಇನ್ನು WTC ಟೆಸ್ಟ್ ಸರಣಿಯಲ್ಲಿ ಒಟ್ಟು 4 ಪಂದ್ಯಗಳನ್ನಾಡಿರುವ ಟೀಮ್ ಇಂಡಿಯಾ 2 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಇನ್ನು ಒಂದು ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡರೆ, ಒಂದು ಮ್ಯಾಚ್​ನಲ್ಲಿ ಸೋಲನುಭವಿಸಿದೆ. ಈ ಮೂಲಕ 26 ಅಂಕ ಸಂಪಾದಿಸಿ ಭಾರತ ತಂಡವು ದ್ವಿತೀಯ ಸ್ಥಾನ ಅಲಂಕರಿಸಿದೆ.

ಮೂರನೇ ಸ್ಥಾನದಲ್ಲಿ ಸೌತ್ ಆಫ್ರಿಕಾ ತಂಡವಿದ್ದು, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯಲ್ಲಿ ಆಡಿದ 2 ಪಂದ್ಯಗಳಲ್ಲಿ ಒಂದರಲ್ಲಿ ಜಯ ಸಾಧಿಸಿದರೆ, ಮತ್ತೊಂದು ಪಂದ್ಯದಲ್ಲಿ ಸೋಲನುಭವಿಸಿದೆ. ಈ ಮೂಲಕ WTC ಅಂಕಪಟ್ಟಿಯಲ್ಲಿ 12 ಅಂಕಗಳನ್ನು ಕಲೆಹಾಕಿದೆ.

ತಂಡಗಳ ಶ್ರೇಯಾಂಕದಲ್ಲೂ ನಂಬರ್ 1:

ಪಾಕಿಸ್ತಾನ್ ವಿರುದ್ಧದ ಸರಣಿ ಗೆಲುವಿನೊಂದಿಗೆ ಆಸ್ಟ್ರೇಲಿಯಾ ತಂಡವು ಟೆಸ್ಟ್ ತಂಡಗಳ ಶ್ರೇಯಾಂಕದಲ್ಲೂ ಅಗ್ರಸ್ಥಾನ ಅಲಂಕರಿಸಿದೆ. 117 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದ ಟೀಮ್ ಇಂಡಿಯಾವನ್ನು ಹಿಂದಿಕ್ಕಿ ಆಸೀಸ್ ಪಡೆ ಮೊದಲ ಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದೆ. ಸದ್ಯ ಆಸ್ಟ್ರೇಲಿಯಾ ತಂಡವು ಒಟ್ಟು 118 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಭಾರತ ತಂಡವು ದ್ವಿತೀಯ ಸ್ಥಾನಕ್ಕೆ ಕುಸಿದಿದೆ.

ಇದನ್ನೂ ಓದಿ: IPL 2024: RCB ತಂಡದ ನಾಯಕತ್ವದಲ್ಲಿ ಮತ್ತೆ ಬದಲಾವಣೆ..?

ಇನ್ನು 3ನೇ ಸ್ಥಾನದಲ್ಲಿ ಇಂಗ್ಲೆಂಡ್, 4ನೇ ಸ್ಥಾನದಲ್ಲಿ ಸೌತ್ ಆಫ್ರಿಕಾ ತಂಡಗಳಿದ್ದರೆ, 5ನೇ ಸ್ಥಾನವನ್ನು ನ್ಯೂಝಿಲೆಂಡ್ ಅಲಂಕರಿಸಿದೆ. ಹಾಗೆಯೇ ಆಸ್ಟ್ರೇಲಿಯಾ ವಿರುದ್ಧ ಹೀನಾಯವಾಗಿ ಸರಣಿ ಸೋತಿರುವ ಪಾಕಿಸ್ತಾನ್ ತಂಡ 6ನೇ ಸ್ಥಾನಕ್ಕೆ ಕುಸಿದಿದೆ.

ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ