
ಭಾರತದಲ್ಲಿ ನಡೆಯುತ್ತಿರುವ ಇಂಟರ್ನ್ಯಾಷನಲ್ ಮಾಸ್ಟರ್ಸ್ ಲೀಗ್ (International Masters League) ಟಿ20 ಪಂದ್ಯಾವಳಿ ಇದೀಗ ಅಂತಿಮ ಹಂತಕ್ಕೆ ಬಂದಿ ನಿಂತಿದೆ. ಈ ಲೀಗ್‌ನ ಫೈನಲ್ ಪಂದ್ಯ ರಾಯ್ಪುರದಲ್ಲಿರುವ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂಡಿಯಾ ಮಾಸ್ಟರ್ಸ್ ಮತ್ತು ವೆಸ್ಟ್ ಇಂಡೀಸ್ ಮಾಸ್ಟರ್ಸ್ ತಂಡಗಳ ನಡುವೆ ನಡೆಯಲ್ಲಿದೆ. 5 ತಂಡಗಳ ನಡುವೆ ನಡೆದ ಈನ ಪಂದ್ಯಾವಳಿಯಲ್ಲಿ ಇಂಡಿಯಾ ಮಾಸ್ಟರ್ಸ್, ಆಸ್ಟ್ರೇಲಿಯಾ ಮಾಸ್ಟರ್ಸ್ ತಂಡವನ್ನು ಸೆಮಿಫೈನಲ್‌ನಲ್ಲಿ ಮಣಿಸಿ ಫೈನಲ್ಗೇರಿತ್ತು. ಇತ್ತ ವೆಸ್ಟ್ ಇಂಡೀಸ್ ಮಾಸ್ಟರ್ಸ್ ಲೀಗ್‌ನ ಎರಡನೇ ಸೆಮಿಫೈನಲ್‌ನಲ್ಲಿ ಶ್ರೀಲಂಕಾ ಮಾಸ್ಟರ್ಸ್ ವಿರುದ್ಧ ರೋಮಾಂಚಕ ಗೆಲುವು ಸಾಧಿಸಿ ಫೈನಲ್‌ಗೆ ಸ್ಥಾನ ಪಡೆದುಕೊಂಡಿದೆ.
ಇಂಡಿಯಾ ಮಾಸ್ಟರ್ಸ್ ತಂಡವು ಇಂಟರ್ನ್ಯಾಷನಲ್ ಮಾಸ್ಟರ್ಸ್ ಲೀಗ್ 2025 ರ ಪಾಯಿಂಟ್ಸ್ ಪಟ್ಟಿಯಲ್ಲಿ ಎರಡನೇ ಸ್ಥಾನ ಗಳಿಸಿತು. ತಂಡವು ಒಟ್ಟು 5 ಪಂದ್ಯಗಳನ್ನು ಆಡಿದ್ದು, ಅದರಲ್ಲಿ ನಾಲ್ಕರಲ್ಲಿ ಗೆದ್ದು ಒಂದರಲ್ಲಿ ಮಾತ್ರ ಸೋತಿತ್ತು. ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ಮಾಸ್ಟರ್ಸ್ ತಂಡವನ್ನು ಸೋಲಿಸುವ ಮೂಲಕ ಫೈನಲ್ ಪ್ರವೇಶಿಸಿತು. ಮತ್ತೊಂದೆಡೆ, ವೆಸ್ಟ್ ಇಂಡೀಸ್ ಮಾಸ್ಟರ್ಸ್ ತಂಡ ಪಾಯಿಂಟ್ಸ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಆಡಿದ ಐದು ಪಂದ್ಯಗಳಲ್ಲಿ ಒಟ್ಟು ಮೂರು ಪಂದ್ಯಗಳನ್ನು ಆಡಿದ್ದು, ಅವುಗಳಲ್ಲಿ ಎರಡರಲ್ಲಿ ಗೆಲುವು ಸಾಧಿಸಿತು. ಇದಾದ ನಂತರ, ಸೆಮಿಫೈನಲ್‌ನಲ್ಲಿ ಶ್ರೀಲಂಕಾವನ್ನು ಮಣಿಸಿದ ವೆಸ್ಟ್ ಇಂಡೀಸ್ ಫೈನಲ್ ಪ್ರವೇಶಿಸಿದೆ.
ಇಂಡಿಯಾ ಮಾಸ್ಟರ್ಸ್ ಮತ್ತು ವೆಸ್ಟ್ ಇಂಡೀಸ್ ಮಾಸ್ಟರ್ಸ್ ನಡುವಿನ ಫೈನಲ್ ಪಂದ್ಯದ ನೇರ ಪ್ರಸಾರವು ಜಿಯೋ ಹಾಟ್‌ಸ್ಟಾರ್‌ನಲ್ಲಿ ಲಭ್ಯವಿರುತ್ತದೆ. ಇದಕ್ಕಾಗಿ ಕ್ರಿಕೆಟ್ ಅಭಿಮಾನಿಗಳು ತಮ್ಮ ಫೋನ್‌ಗಳಲ್ಲಿ ಜಿಯೋ ಹಾಟ್‌ಸ್ಟಾರ್ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿಕೊಳ್ಳಬೇಕು. ವಿಶೇಷವೆಂದರೆ ಅಭಿಮಾನಿಗಳು ಈ ಪಂದ್ಯವನ್ನು ಜಿಯೋ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ವೀಕ್ಷಿಸಬಹುದಾಗಿದೆ.
ಇಂಡಿಯಾ ಮಾಸ್ಟರ್ಸ್ ತಂಡ: ಅಂಬಟಿ ರಾಯುಡು(ವಿಕೆಟ್ ಕೀಪರ್), ಸಚಿನ್ ತೆಂಡೂಲ್ಕರ್(ಸಿ), ಪವನ್ ನೇಗಿ, ಯುವರಾಜ್ ಸಿಂಗ್, ಸ್ಟುವರ್ಟ್ ಬಿನ್ನಿ, ಯೂಸುಫ್ ಪಠಾಣ್, ಇರ್ಫಾನ್ ಪಠಾಣ್, ಗುರುಕೀರತ್ ಸಿಂಗ್ ಮಾನ್, ವಿನಯ್ ಕುಮಾರ್, ಶಹಬಾಜ್ ನದೀಮ್, ಧವಲ್ ಕುಲಕರ್ಣಿ, ನಮನ್ ಓಜಾ, ಸೌರಭ್ ತಿವಾರಿ, ಅಭಿಮನ್ಯು ಮಿಥುನ್, ರಾಹುಲ್ ಶರ್ಮಾ
ವೆಸ್ಟ್ ಇಂಡೀಸ್ ಮಾಸ್ಟರ್ಸ್ ತಂಡ: ಡ್ವೇನ್ ಸ್ಮಿತ್, ವಿಲಿಯಂ ಪರ್ಕಿನ್ಸ್, ಲೆಂಡ್ಲ್ ಸಿಮ್ಮನ್ಸ್, ಬ್ರಿಯಾನ್ ಲಾರಾ(ನಾಯಕ), ಚಾಡ್ವಿಕ್ ವಾಲ್ಟನ್, ದಿನೇಶ್ ರಾಮ್ದಿನ್(ವಿಕೆಟ್ ಕೀಪರ್), ಆಶ್ಲೇ ನರ್ಸ್, ಟಿನೋ ಬೆಸ್ಟ್, ಜೆರೋಮ್ ಟೇಲರ್, ಸುಲೈಮಾನ್ ಬೆನ್, ರವಿ ರಾಂಪಾಲ್, ಕಿರ್ಕ್ ಎಡ್ವರ್ಡ್ಸ್, ಜೊನಾಥನ್ ಕಾರ್ಟರ್, ಫಿಡೆಲ್ ಎಡ್ವರ್ಡ್ಸ್, ನರಸಿಂಗ್ ಡಿಯೋನರೈನ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:13 pm, Sat, 15 March 25