
ಸೌತ್ ಆಫ್ರಿಕಾ ವಿರುದ್ಧದ ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾದ ಸೆಮಿಫೈನಲ್ ಲೆಕ್ಕಾಚಾರಗಳು ಶುರುವಾಗಿದೆ. ಇದಕ್ಕೆ ಮುಖ್ಯ ಕಾರಣ ಭಾರತ ತಂಡವು ಹೀನಾಯವಾಗಿ ಸೋತಿರುವುದು. ಅಂದರೆ ಸೌತ್ ಆಫ್ರಿಕಾ ವಿರುದ್ಧದ 76 ರನ್‌ಗಳ ಅಂತರದಿಂದ ಸೋತಿರುವ ಕಾರಣ ಟೀಮ್ ಇಂಡಿಯಾದ ನೆಟ್ ರನ್ ರೇಟ್ -3.800 ಕ್ಕೆ ಕುಸಿದಿದೆ. ಈ ನೆಗೆಟಿವ್ ನೆಟ್ ರನ್ ರೇಟ್ ಅನ್ನು ಪಾಸಿಟಿಮ್ ಮಾಡಬೇಕಿದ್ದರೆ ಭಾರತ ತಂಡವು ಮುಂದಿನ ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಬೇಕು.
ಅದರಂತೆ ಭಾರತ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಝಿಂಬಾಬ್ವೆ ವಿರುದ್ಧ ಎಷ್ಟು ರನ್‌ಗಳ ಅಂತರದಿಂದ ಗೆಲ್ಲಬೇಕು ಎಂದು ನೋಡುವುದಾದರೆ…
ಈ ಮೂರು ಲೆಕ್ಕಾಚಾರಗಳೊಂದಿಗೆ ಭಾರತ ತಂಡವು ಝಿಂಬಾಬ್ವೆ ವಿರುದ್ಧ ಕಣಕ್ಕಿಳಿಯುವ ಸಾಧ್ಯತೆಯಿದೆ. ಅಲ್ಲದೆ ಈ ಮ್ಯಾಚ್ನಲ್ಲಿ ಭರ್ಜರಿ ಜಯ ಸಾಧಿಸಿದರೆ ಟೀಮ್ ಇಂಡಿಯಾದ ನೆಟ್ ರನ್ ರೇಟ್ + ಆಗಲಿದೆ.
ಇನ್ನು ವೆಸ್ಟ್ ಇಂಡೀಸ್ ವಿರುದ್ಧ ಕೂಡ ಭರ್ಜರಿ ಜಯ ಸಾಧಿಸುವ ಮೂಲಕ ಭಾರತ ತಂಡವು ತನ್ನ ನೆಟ್ ರನ್ ರೇಟ್ ಅನ್ನು ಹೆಚ್ಚಿಸಿಕೊಳ್ಳಬಹುದು. ಈ ಮೂಲಕ 4 ಅಂಕಗಳೊಂದಿಗೆ ನೆಟ್ ರನ್ ರೇಟ್ನಲ್ಲಿ ಇತರೆ ತಂಡಗಳನ್ನು ಹಿಂದಿಕ್ಕಿ ಸೆಮಿಫೈನಲ್ಗೇರಬಹುದು.
ನೆಟ್ ರನ್ ರೇಟ್ ಲೆಕ್ಕಾಚಾರವಿಲ್ಲದೇ ಭಾರತ ತಂಡ ಸೆಮಿಫೈನಲ್ಗೆ ಪ್ರವೇಶಿಸಬಹುದು. ಆದರೆ ಇಲ್ಲಿ ಸೌತ್ ಆಫ್ರಿಕಾ ತಂಡವು ತನ್ನ ಮುಂದಿನ ಎರಡು ಮ್ಯಾಚ್ಗಳಲ್ಲಿ ಝಿಂಬಾಬ್ವೆ ಮತ್ತು ವೆಸ್ಟ್ ಇಂಡೀಸ್ ವಿರುದ್ಧ ಗೆಲ್ಲಬೇಕು.
ಹೀಗಾದಲ್ಲಿ ವೆಸ್ಟ್ ಇಂಡೀಸ್ ಹಾಗೂ ಝಿಂಬಾಬ್ವೆ ತಂಡಕ್ಕೆ ಸೋಲುಣಿಸಿ ಟೀಮ್ ಇಂಡಿಯಾ ನೇರವಾಗಿ ಸೆಮಿಫೈನಲ್ಗೆ ಪ್ರವೇಶಿಸಬಹುದು.
ಇದನ್ನೂ ಓದಿ: ಇಬ್ಬರಲ್ಲಿ ಒಬ್ಬರು… ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆ