AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup: ಟೀಂ ಇಂಡಿಯಾದ ಮುಂದಿನ ಪಂದ್ಯ ಯಾವಾಗ? ಎದುರಾಳಿ ಯಾರು?

India vs Namibia T20 World Cup 2026: ಟಿ20 ವಿಶ್ವಕಪ್ 2026 ರಲ್ಲಿ ಭಾರತ ತಂಡ ನಮೀಬಿಯಾವನ್ನು ಫೆಬ್ರವರಿ 12 ರಂದು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ಎದುರಿಸಲಿದೆ. ಮೊದಲ ಪಂದ್ಯ ಗೆದ್ದು ವಿಶ್ರಾಂತಿಯಲ್ಲಿರುವ ಟೀಂ ಇಂಡಿಯಾ, ನಮೀಬಿಯಾವನ್ನು ಹಗುರವಾಗಿ ಪರಿಗಣಿಸಬಾರದು. ಪಂದ್ಯವು ಸಂಜೆ 7 ಗಂಟೆಗೆ ಆರಂಭವಾಗಲಿದ್ದು, ಸ್ಟಾರ್ ಸ್ಪೋರ್ಟ್ಸ್ ಮತ್ತು ಜಿಯೋಹಾಟ್‌ಸ್ಟಾರ್‌ನಲ್ಲಿ ನೇರ ಪ್ರಸಾರ ಲಭ್ಯ. ತಂಡಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

T20 World Cup: ಟೀಂ ಇಂಡಿಯಾದ ಮುಂದಿನ ಪಂದ್ಯ ಯಾವಾಗ? ಎದುರಾಳಿ ಯಾರು?
Team India
ಪೃಥ್ವಿಶಂಕರ
|

Updated on: Feb 08, 2026 | 5:34 PM

Share

2026 ರ ಟಿ20 ವಿಶ್ವಕಪ್ (T20 World Cup 2026)​ ಪಂದ್ಯಾವಳಿಯನ್ನು ಗೆಲುವಿನೊಂದಿಗೆ ಆರಂಭಿಸಿರುವ ಟೀಂ ಇಂಡಿಯಾ ಪ್ರಸ್ತುತ ವಿಶ್ರಾಂತಿ ಮೂಡ್​ನಲ್ಲಿದೆ. ತನ್ನ ಮೊದಲ ಪಂದ್ಯದಲ್ಲಿ ಅಮೆರಿಕವನ್ನು ಮಣಿಸಿರುವ ಭಾರತ ತಂಡಕ್ಕೆ ಮುಂದಿನ 4 ದಿನಗಳವರೆಗೆ ಯಾವುದೇ ಪಂದ್ಯಗಳಿಲ್ಲ. ಇದು ಕೂಡ ಭಾರತ ತಂಡಕ್ಕೆ ಉಪಯುಕ್ತವಾಗಿದೆ. ಏಕಂದರೆ ತಂಡದ ಕೆಲವು ಆಟಗಾರರು ಅನಾರೋಗ್ಯದಿಂದ ಬಳಲುತ್ತಿದ್ದು, ಅವರು ಚೇತರಿಸಿಕೊಳ್ಳಲು ಸಮಯಾವಕಾಶ ಸಿಕ್ಕಂತ್ತಾಗಿದೆ. ಹಾಗೆಯೇ ಮೊದಲ ಪಂದ್ಯದಲ್ಲಿ ಮಾಡಿದ ತಪ್ಪುಗಳನ್ನು ಸರಿಪಡಿಸಿಕೊಳ್ಳುವ ಕೆಲಸವನ್ನು ತಂಡ ಮಾಡಬೇಕಿದೆ. ಇನ್ನು ಸೂರ್ಯಕುಮಾರ್ ಪಡೆ ತನ್ನ ಎರಡನೇ ಪಂದ್ಯದಲ್ಲಿ ನಮೀಬಿಯಾ ತಂಡವನ್ನು ಎದುರಿಸುತ್ತಿದ್ದು, ಈ ತಂಡವನ್ನು ಅಷ್ಟು ಸುಲಭವಾಗಿ ಪರಿಗಣಿಸುವ ತಪ್ಪನ್ನು ಮಾಡುವಂತಿಲ್ಲ.

ಉಭಯ ತಂಡಗಳಿಗೆ ಈ ಪಂದ್ಯಾವಳಿಯಲ್ಲಿ ಇದು ಎರಡನೇ ಪಂದ್ಯವಾಗಿರಲಿದೆ. ಭಾರತ ತಂಡ ತನ್ನ ಮೊದಲ ಪಂದ್ಯದಲ್ಲಿ ಅಮೆರಿಕವನ್ನು ಸೋಲಿಸಿದ್ದರೆ, ಇತ್ತ ನಮೀಬಿಯಾ ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಸೋತಿರುವ ನೆದರ್ಲ್ಯಾಂಡ್ಸ್ ತಂಡವನ್ನು ಫೆಬ್ರವರಿ 10 ರಂದು ಎದುರಿಸಲಿದೆ.

ಭಾರತ ಹಾಗೂ ನಮೀಬಿಯಾ ನಡುವಿನ ಟಿ20 ವಿಶ್ವಕಪ್ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಹಾಗೂ ನಮೀಬಿಯಾ ನಡುವಿನ ಟಿ20 ವಿಶ್ವಕಪ್ ಪಂದ್ಯ ಫೆಬ್ರವರಿ 12 ರಂದು ನಡೆಯಲಿದೆ.

ಭಾರತ ಹಾಗೂ ನಮೀಬಿಯಾ ನಡುವಿನ ಟಿ20 ವಿಶ್ವಕಪ್ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಹಾಗೂ ನಮೀಬಿಯಾ ನಡುವಿನ ಟಿ20 ವಿಶ್ವಕಪ್ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ.

ಭಾರತ ಹಾಗೂ ನಮೀಬಿಯಾ ನಡುವಿನ ಟಿ20 ವಿಶ್ವಕಪ್ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಭಾರತ ಹಾಗೂ ನಮೀಬಿಯಾ ನಡುವಿನ ಟಿ20 ವಿಶ್ವಕಪ್ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ.

ಭಾರತ ಹಾಗೂ ನಮೀಬಿಯಾ ನಡುವಿನ ಟಿ20 ವಿಶ್ವಕಪ್ ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಟಿ20 ವಿಶ್ವಕಪ್‌ನ ಎಲ್ಲಾ ಪಂದ್ಯಗಳು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಟಿವಿಯಲ್ಲಿ ಲಭ್ಯವಿರುತ್ತವೆ. ನೀವು ಜಿಯೋಹಾಟ್‌ಸ್ಟಾರ್ ಅಪ್ಲಿಕೇಶನ್ ಮೂಲಕ ಮೊಬೈಲ್/ಲ್ಯಾಪ್‌ಟಾಪ್ ಮತ್ತು ಟಿವಿಯಲ್ಲಿ ಲೈವ್ ಪಂದ್ಯಗಳನ್ನು ವೀಕ್ಷಿಸಬಹುದು.

T20 World Cup: 20 ತಂಡಗಳು, 55 ಪಂದ್ಯಗಳು, 1 ಟ್ರೋಫಿ; ಟಿ20 ವಿಶ್ವಕಪ್ ವೇಳಾಪಟ್ಟಿ ಹೀಗಿದೆ

ಉಭಯ ತಂಡಗಳು

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

ನಮೀಬಿಯಾ ತಂಡ: ಗೆರ್ಹಾರ್ಡ್ ಎರಾಸ್ಮಸ್ (ನಾಯಕ), ಜೇನ್ ಗ್ರೀನ್, ಬರ್ನಾರ್ಡ್ ಸ್ಕೋಲ್ಟ್ಜ್, ರೂಬೆನ್ ಟ್ರಂಪೆಲ್ಮನ್, ಜೆಜೆ ಸ್ಮಿಟ್, ಜಾನ್ ಫ್ರಿಲಿಂಕ್, ಲೌರೆನ್ ಸ್ಟೀನ್‌ಕ್ಯಾಂಪ್, ಮಲನ್ ಕ್ರುಗರ್, ನಿಕೋಲ್ ಲಾಫ್ಟಿ-ಈಟನ್, ಜ್ಯಾಕ್ ಬ್ರಾಸ್ಸೆಲ್, ಬೆನ್ ಶಿಕೊಂಗೊ, ಜೆಸಿ ಬಾಲ್ಟ್, ಡೈಲನ್ ಲೀಚರ್, WP ಮೈಬರ್ಗ್, ಮ್ಯಾಕ್ಸ್ ಹೀಂಗೊ.

ಮೀಸಲು ಆಟಗಾರ: ಅಲೆಕ್ಸಾಂಡರ್ ವೋಲ್ಶೆಂಕ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್