AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಗೆಲ್ಲುವ ಬದಲು ಟೀಮ್ ಇಂಡಿಯಾ ಡ್ರಾ ಮಾಡಿಕೊಳ್ಳಬೇಕು… ಯಾಕೆ ಗೊತ್ತಾ?

India vs South Africa 2nd Test: ಗುವಾಹಟಿಯ ಬರ್ಸಪಾರ ಸ್ಟೇಡಿಯಂನಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಸೌತ್ ಆಫ್ರಿಕಾ ತಂಡವು 489 ರನ್ ಕಲೆಹಾಕಿದರೆ, ಟೀಮ್ ಇಂಡಿಯಾ ಕೇವಲ 201 ರನ್​ಗಳಿಸಿ ಆಲೌಟ್ ಆಗಿದೆ. ಇದೀಗ 288 ರನ್​ಗಳ ಮುನ್ನಡೆಯೊಂದಿಗೆ ಸೌತ್ ಆಫ್ರಿಕಾ ತಂಡ ದ್ವಿತೀಯ ಇನಿಂಗ್ಸ್​ನಲ್ಲಿ 260 ರನ್​​ಗಳಿಸಿ ಡಿಕ್ಲೇರ್ ಘೋಷಿಸಿದೆ.

IND vs SA: ಗೆಲ್ಲುವ ಬದಲು ಟೀಮ್ ಇಂಡಿಯಾ ಡ್ರಾ ಮಾಡಿಕೊಳ್ಳಬೇಕು... ಯಾಕೆ ಗೊತ್ತಾ?
Team India
ಝಾಹಿರ್ ಯೂಸುಫ್
|

Updated on: Nov 26, 2025 | 8:53 AM

Share

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ದ್ವಿತೀಯ ಟೆಸ್ಟ್ ಪಂದ್ಯವು ಐದನೇ ದಿನದಾಟಕ್ಕೆ ಕಾಲಿಟ್ಟಿದೆ. ಶುಕ್ರವಾರ ಶುರುವಾದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡವು ಮೊದಲು ಬ್ಯಾಟ್ ಮಾಡಿತು. ಅದರಂತೆ ಮೊದಲ ಇನಿಂಗ್ಸ್​ನಲ್ಲಿ ಸೌತ್ ಆಫ್ರಿಕಾ ತಂಡ ಪೇರಿಸಿದ್ದು ಬರೋಬ್ಬರಿ 489 ರನ್​​ಗಳು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಟೀಮ್ ಇಂಡಿಯಾ ಕೇವಲ 201 ರನ್​​ಗಳಿಗೆ ಆಲೌಟ್ ಆಗಿ 288 ರನ್​​ಗಳ ಹಿನ್ನಡೆ ಅನುಭವಿಸಿತು.

288 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಸೌತ್ ಆಫ್ರಿಕಾ ತಂಡವು 5 ವಿಕೆಟ್ ನಷ್ಟಕ್ಕೆ 260 ರನ್​ಗಳಿಸಿ ಡಿಕ್ಲೇರ್ ಘೋಷಿಸಿದೆ. ಈ ಮೂಲಕ ಸೌತ್ ಆಫ್ರಿಕಾ ತಂಡವು ಟೀಮ್ ಇಂಡಿಯಾಗೆ ಕೊನೆಯ ಇನಿಂಗ್ಸ್​ನಲ್ಲಿ 549 ರನ್​​ಗಳ ಗುರಿ ನೀಡಿದೆ.

ಅದರಂತೆ 549 ರನ್​ಗಳ ಬೆನ್ನತ್ತಲಾರಂಭಿಸಿದ ಟೀಮ್ ಇಂಡಿಯಾ ಯಶಸ್ವಿ ಜೈಸ್ವಾಲ್ (13) ಹಾಗೂ ಕೆಎಲ್ ರಾಹುಲ್ (6) ವಿಕೆಟ್ ಕಳೆದುಕೊಂಡಿದೆ. ಇನ್ನು ಕೊನೆಯ ದಿನದಾಟದಲ್ಲಿ 522 ರನ್​​ಗಳಿಸಿದರೆ ಭಾರತ ತಂಡವು ಗೆಲುವನ್ನು ತನ್ನದಾಗಿಸಿಕೊಳ್ಳಬಹುದು. ಆದರೆ ಇಲ್ಲಿ ಟೀಮ್ ಇಂಡಿಯಾ ಪಂದ್ಯ ಗೆಲ್ಲುವ ಬದಲು ಡ್ರಾನತ್ತ ಮುಖ ಮಾಡಬೇಕಿರುವುದು ಅನಿವಾರ್ಯ.

ಏಕೆಂದರೆ ಸೌತ್ ಆಫ್ರಿಕಾ ತಂಡ ಈಗಾಗಲೇ 2 ವಿಕೆಟ್ ಕಬಳಿಸಿದೆ. ಇನ್ನುಳಿದ 8 ವಿಕೆಟ್​ಗಳನ್ನು ಪಡೆದರೆ ಪಂದ್ಯ ಗೆಲ್ಲಬಹುದು. ಅತ್ತ ಟೀಮ್ ಇಂಡಿಯಾ 522 ರನ್​ಗಳನ್ನು ಕಲೆಹಾಕಲು ಬಿರುಸಿನ ಬ್ಯಾಟಿಂಗ್​ ಪ್ರದರ್ಶಿಸಲೇಬೇಕು. ಇದರಿಂದ ವಿಕೆಟ್ ಬೀಳುವ ಸಾಧ್ಯತೆ ಹೆಚ್ಚು.

ಅಷ್ಟೇ ಅಲ್ಲದೆ ಟೆಸ್ಟ್ ಇತಿಹಾಸದಲ್ಲಿ ಯಾವುದೇ ತಂಡ 500+ ರನ್​ ಬೆನ್ನತ್ತಿ ಗೆದ್ದ ದಾಖಲೆ ಇಲ್ಲ. ಇನ್ನು ಏಷ್ಯನ್ ಪಿಚ್​ನಲ್ಲಿ ಟೀಮ್ ಇಂಡಿಯಾ ಕೊನೆಯ ಇನಿಂಗ್ಸ್​ನಲ್ಲಿ 400 ರನ್​ಗಳಿಸಿದ ಇತಿಹಾಸ ಕೂಡ ಇಲ್ಲ. ಹೀಗಾಗಿ 522 ರನ್​​ಗಳ ಗುರಿ ಬೆನ್ನತ್ತುವುದು ಕಷ್ಟಸಾಧ್ಯ. ಒಂದು ವೇಳೆ ಟೀಮ್ ಇಂಡಿಯಾ ಬಿರುಸಿನ ಬ್ಯಾಟಿಂಗ್​ನೊಂದಿಗೆ ಚೇಸಿಂಗ್​ಗೆ ಯತ್ನಿಸಿದರೆ ಆಲೌಟ್ ಆಗುವ ಸಾಧ್ಯತೆಯೇ ಹೆಚ್ಚು. ಹೀಗಾಗಿ ಭಾರತ ತಂಡವು ಈ ಪಂದ್ಯವನ್ನು ಡ್ರಾ ಮಾಡಿಕೊಳ್ಳಬೇಕು.

ಡ್ರಾ ಏಕೆ ಅವಶ್ಯಕ?

ಟೀಮ್ ಇಂಡಿಯಾ ಈ ಪಂದ್ಯವನ್ನು ಡ್ರಾ ಮಾಡಿಕೊಳ್ಳದೇ ಹೋರಾಡಿ ವಿರೋಚಿತವಾಗಿ ಸೋಲನ್ನು ಒಪ್ಪಿಕೊಳ್ಳಬಹುದಲ್ಲವೇ? ಎಂಬ ಪ್ರಶ್ನೆ ಮೂಡುವುದು ಸಹಜ. ಆದರೆ ಈ ಪಂದ್ಯವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯ ಭಾಗ. ಹೀಗಾಗಿ ಸೋಲಿಗಿಂತ ಡ್ರಾ ಅತ್ಯವಶ್ಯಕ.

ಏಕೆಂದರೆ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಸರಣಿಯ ಪಂದ್ಯವು ಡ್ರಾಗೊಂಡರೆ 4 ಅಂಕಗಳು ದೊರೆಯುತ್ತವೆ. ಈ ಅಂಕಗಳ ಮೂಲಕ ಭಾರತ ತಂಡವು ತನ್ನ ಗೆಲುವಿನ ಶೇಕಡಾವಾರನ್ನು ಉತ್ತಮಗೊಳಿಸಬಹುದು. ಅದೇ ಸೋಲನುಭವಿಸಿದರೆ ಅಂಕ ಪಟ್ಟಿಯಲ್ಲಿ ಭಾರೀ ಕುಸಿತಕ್ಕೊಳಗಾಗಲಿದೆ.

ಇದನ್ನೂ ಓದಿ: 20 ತಂಡಗಳು 29 ದಿನಗಳು: ಹೇಗಿರಲಿದೆ ಟಿ20 ವಿಶ್ವಕಪ್ ಟೂರ್ನಿ?

ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲುವ ಪ್ರಯತ್ನಕ್ಕೆ ಕೈ ಹಾಕದೇ ಡ್ರಾನತ್ತ ಮುಖ ಮಾಡುವುದು ಉತ್ತಮ.

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ