ಭಾರತ ಮತ್ತು ಇಂಗ್ಲೆಂಡ್ ನಡುವಣ ಟಿ20 ಸರಣಿಯು ಇಂದಿನಿಂದ (ಜ.22) ಶುರುವಾಗಲಿದೆ. ಈ ಸರಣಿಯು ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಗಂಭೀರ್ ಗರಡಿಯಲ್ಲಿ ಭಾರತ ತಂಡವು ಇದೇ ಮೊದಲ ಬಾರಿಗೆ ಇಂಗ್ಲೆಂಡ್ ತಂಡವನ್ನು ಎದುರಿಸುತ್ತಿದೆ. ಅದರಲ್ಲೂ ಟೀಮ್ ಇಂಡಿಯಾ ಕಳೆದ ಕಳೆದ ಹನ್ನೊಂದು ವರ್ಷಗಳಿಂದ ಆಂಗ್ಲರ ವಿರುದ್ಧ ಟಿ20 ಸರಣಿಯಲ್ಲಿ ಪಾರುಪತ್ಯ ಮೆರೆಯುತ್ತಾ ಬಂದಿದೆ.
ಇದೀಗ ಗೌತಮ್ ಗಂಭೀರ್ ಅವರ ಕೋಚಿಂಗ್ನಲ್ಲಿ ಟೀಮ್ ಇಂಡಿಯಾ ಕಣಕ್ಕಿಳಿಯುತ್ತಿರುವುದರಿಂದ ಈ ಬಾರಿ ಏನಾಗಲಿದೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಗಂಭೀರ್ ಕೋಚ್ ಆದ ಬಳಿಕ ಭಾರತ ತಂಡದ ಹಲವು ಗೆಲುವಿನ ನಾಗಾಲೋಟಗಳಿಗೆ ಬ್ರೇಕ್ ಬಿದ್ದಿದೆ. ಆ ಸೋಲುಗಳ ಸಂಪೂರ್ಣ ಮಾಹಿತಿ ಇಲ್ಲಿದೆ, ಕ್ಲಿಕ್ ಮಾಡಿ.
ಭಾರತ ತಂಡವು ಇಂಗ್ಲೆಂಡ್ ವಿರುದ್ಧ ಟಿ20 ಸರಣಿ ಸೋತು 11 ವರ್ಷಗಳೇ ಕಳೆದಿವೆ. 2014ರಲ್ಲಿ ಇಂಗ್ಲೆಂಡ್ ತವರಿನಲ್ಲಿ ಭಾರತವನ್ನು 1-0 ಅಂತರದಿಂದ ಮಣಿಸಿದ್ದು ಕೊನೆಯ ಸಾಧನೆ.
ಇದಾದ ಬಳಿಕ ಉಭಯ ತಂಡಗಳು 4 ಸರಣಿಗಳಲ್ಲಿ ಮುಖಾಮುಖಿಯಾಗಿವೆ. ಈ ನಾಲ್ಕು ಸರಣಿಗಳಲ್ಲಿ ತವರಿನಲ್ಲಿ ಭಾರತ ತಂಡ 2 ಸರಣಿಗಳನ್ನು ಗೆದ್ದುಕೊಂಡಿತ್ತು. ಅಲ್ಲದೆ ಇಂಗ್ಲೆಂಡ್ಗೆ ತೆರಳಿ ಆಂಗ್ಲರನ್ನು 2 ಬಾರಿ ಸೋಲಿಸಿದ್ದಾರೆ.
ಈ ಮೂಲಕ ಕಳೆದ 11 ವರ್ಷಗಳಲ್ಲಿ ಇಂಗ್ಲೆಂಡ್ ವಿರುದ್ಧ ಎಲ್ಲಾ ಟಿ20 ಸರಣಿ ಗೆದ್ದು ಟೀಮ್ ಇಂಡಿಯಾ ಪಾರುಪತ್ಯ ಮೆರೆದಿದೆ. ಇದೀಗ ಮತ್ತೊಮ್ಮೆ 5 ಪಂದ್ಯಗಳ ಸರಣಿಗಾಗಿ ಉಭಯ ತಂಡಗಳು ಮುಖಾಮುಖಿಯಾಗಲು ಸಜ್ಜಾಗಿದೆ.
ಭಾರತ ಮತ್ತು ಇಂಗ್ಲೆಂಡ್ ತಂಡಗಳು ಈವರೆಗೆ 24 ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 13 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಇಂಗ್ಲೆಂಡ್ 11 ಮ್ಯಾಚ್ಗಳಲ್ಲಿ ಗೆಲುವು ದಾಖಲಿಸಿದೆ.
ಇದನ್ನೂ ಓದಿ: ಸಿಕ್ಸ್ಗಳ ಸುರಿಮಳೆ… ಟಿ20 ಕ್ರಿಕೆಟ್ನಲ್ಲಿ ಕೀರನ್ ಪೊಲಾರ್ಡ್ ವಿಶ್ವ ದಾಖಲೆ
ಇಲ್ಲಿ ಗೆಲುವಿನ ಲೆಕ್ಕಾಚಾರದಲ್ಲಿ ಟೀಮ್ ಇಂಡಿಯಾ ಮುಂದಿದ್ದರೂ, ಇಂಗ್ಲೆಂಡ್ ಭಾರತ ತಂಡಕ್ಕೆ ಪ್ರಬಲ ಪೈಪೋಟಿ ನೀಡುತ್ತಾ ಬಂದಿರುವುದು ಸ್ಪಷ್ಟ. ಅಲ್ಲದೆ ಈ ಬಾರಿಯ ಸರಣಿಯ ಮೂಲಕ ಗೆಲುವಿನ ಲೆಕ್ಕಾಚಾರದಲ್ಲಿ ಟೀಮ್ ಇಂಡಿಯಾವನ್ನು ಹಿಂದಿಕ್ಕುವ ವಿಶ್ವಾಸದೊಂದಿಗೆ ಇಂಗ್ಲೆಂಡ್ ತಂಡ ಭಾರತಕ್ಕೆ ಬಂದಿಳಿದಿದೆ. ಹೀಗಾಗಿ ಈ ಬಾರಿ ಕೂಡ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.
Published On - 10:14 am, Wed, 22 January 25