AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಈ ದಿನದಂದು ಭಾರತ ಟೆಸ್ಟ್ ತಂಡಕ್ಕೆ ನೂತನ ನಾಯಕನ ನೇಮಕ

India's New Test Captain Announcement: ರೋಹಿತ್ ಶರ್ಮಾ ಅವರ ನಿವೃತ್ತಿಯ ನಂತರ, ಭಾರತದ ಹೊಸ ಟೆಸ್ಟ್ ನಾಯಕನ ಆಯ್ಕೆ ದೊಡ್ಡ ಪ್ರಶ್ನೆಯಾಗಿದೆ. ಮೇ 24 ರಂದು ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಹೊಸ ನಾಯಕನ ಹೆಸರನ್ನು ಘೋಷಿಸಲಿದ್ದಾರೆ. ಶುಭ್ಮನ್ ಗಿಲ್, ರಿಷಭ್ ಪಂತ್ ಮತ್ತು ಜಸ್ಪ್ರೀತ್ ಬುಮ್ರಾ ಅವರ ಹೆಸರುಗಳು ಪರಿಗಣನೆಯಲ್ಲಿದ್ದು, ಜೂನ್ 20 ರಂದು ಪ್ರಾರಂಭವಾಗುವ ಇಂಗ್ಲೆಂಡ್ ಪ್ರವಾಸಕ್ಕೆ ಮುನ್ನ ಈ ಘೋಷಣೆ ಮಹತ್ವದ್ದಾಗಿದೆ.

IND vs ENG: ಈ ದಿನದಂದು ಭಾರತ ಟೆಸ್ಟ್ ತಂಡಕ್ಕೆ ನೂತನ ನಾಯಕನ ನೇಮಕ
Team India
ಪೃಥ್ವಿಶಂಕರ
|

Updated on:May 21, 2025 | 6:23 PM

Share

ರೋಹಿತ್ ಶರ್ಮಾ (Rohit Sharma) ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತರಾದ ನಂತರ, ಎಲ್ಲಾ ಅಭಿಮಾನಿಗಳ ಮುಂದೆ ಇದ್ದ ದೊಡ್ಡ ಪ್ರಶ್ನೆ ಎಂದರೆ ಭಾರತ ಟೆಸ್ಟ್ ತಂಡಕ್ಕೆ (India Test Captain) ನೂತನ ನಾಯಕ ಯಾರಾಗ್ತಾರೆ ಎಂಬುದು. ಇದೀಗ ಭಾರತ ಟೆಸ್ಟ್ ತಂಡದ ನೂತನ ನಾಯಕನ ಘೋಷಣೆ ಯಾವ ದಿನಾಂಕದಂದು ಆಗಲಿದೆ ಎಂಬ ಸುದ್ದಿ ಹೊರಬಂದಿದೆ. ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ಆಯ್ಕೆ ಮಂಡಳಿ ಅಧ್ಯಕ್ಷ ಅಜಿತ್ ಅಗರ್ಕರ್ ಜಂಟಿಯಾಗಿ ಹೊಸ ಟೆಸ್ಟ್ ನಾಯಕನ ಹೆಸರನ್ನು ಘೋಷಿಸಲಿದ್ದಾರೆ. ಇವರಿಬ್ಬರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಲಿದ್ದು, ಹೊಸ ನಾಯಕನಿಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ.

ಈ ದಿನದಂದು ಹೊಸ ನಾಯಕನ ಘೋಷಣೆ

ಸಿಕ್ಕಿರುವ ಮಾಹಿತಿ ಪ್ರಕಾರ, ಭಾರತದ ಹೊಸ ಟೆಸ್ಟ್ ನಾಯಕನ ಘೋಷಣೆ ಮೇ 24 ರಂದು ಆಗಲಿದೆ. ಅಂದರೆ ಬರುವ ಶನಿವಾರದಂದು ಕ್ರಿಕೆಟ್​ನ ದೀರ್ಘ ಸ್ವರೂಪಕ್ಕೆ ಹೊಸ ನಾಯಕ ಸಿಗಲಿದ್ದಾನೆ. ಇಲ್ಲಿಯವರೆಗೆ, ನಾಯಕನಾಗಿ ಆಯ್ಕೆಯಾಗುವ ಬಗ್ಗೆ ಚರ್ಚೆಯಾಗುತ್ತಿರುವ ಆಟಗಾರರ ಹೆಸರುಗಳಲ್ಲಿ, ಶುಭ್‌ಮನ್ ಗಿಲ್ ಅವರ ಹೆಸರು ಅಗ್ರಸ್ಥಾನದಲ್ಲಿದೆ. ಅವರಲ್ಲದೆ, ರಿಷಭ್ ಪಂತ್ ಮತ್ತು ಜಸ್ಪ್ರೀತ್ ಬುಮ್ರಾ ಅವರ ಹೆಸರುಗಳನ್ನು ಸಹ ಪರಿಗಣಿಸಲಾಗುತ್ತಿದೆ.

ಹಲವು ಕ್ರಿಕೆಟ್ ಪಂಡಿತರು ಭಾರತದ ಹೊಸ ಟೆಸ್ಟ್ ನಾಯಕನ ಬಗ್ಗೆ ತಮ್ಮದೇ ಆದ ಅಭಿಪ್ರಾಯವನ್ನು ಹೊಂದಿದ್ದಾರೆ. ಕೆಲವರು ಶುಭ್​ಮನ್ ಗಿಲ್ ಪರ ವಕಾಲತ್ತು ವಹಿಸುತ್ತಿದ್ದರೆ, ಇನ್ನು ಕೆಲವರು ಬುಮ್ರಾ ಬಗ್ಗೆ ತಮ್ಮ ಉದ್ದೇಶಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಅದೇ ಸಮಯದಲ್ಲಿ, ಟೆಸ್ಟ್ ಕ್ರಿಕೆಟ್ ವಿಷಯಕ್ಕೆ ಬಂದರೆ, ರಿಷಭ್ ಪಂತ್‌ಗೆ ಅವಕಾಶ ನೀಡಬೇಕು ಎಂದು ಕೆಲವರು ಹೇಳುತ್ತಾರೆ.

ಇಂಗ್ಲೆಂಡ್ ಪ್ರವಾಸದೊಂದಿಗೆ WTC ಸೀಸನ್ ಪ್ರಾರಂಭ

ಭಾರತದ ಹೊಸ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಆವೃತ್ತಿಯು ಜೂನ್ 20 ರಂದು ಪ್ರಾರಂಭವಾಗುವ ಇಂಗ್ಲೆಂಡ್ ಪ್ರವಾಸದೊಂದಿಗೆ ಪ್ರಾರಂಭವಾಗುತ್ತದೆ. ಇಂಗ್ಲೆಂಡ್ ಪ್ರವಾಸದಲ್ಲಿ ಭಾರತ 5 ಟೆಸ್ಟ್‌ಗಳ ಸರಣಿಯನ್ನು ಆಡಬೇಕಾಗಿದೆ . ಈ ಸರಣಿಗೆ ತಂಡವನ್ನು ಆಯ್ಕೆ ಮಾಡುವ ಮೊದಲು ನಾಯಕನ ಹೆಸರನ್ನು ಘೋಷಿಸುವುದು ಅವಶ್ಯಕ. ವಾಗಿದ್ದು, ಮೇ 24 ರಿಂದ ನೂತನ ನಾಯಕನ ಘೋಷಣೆಯಾಗಲಿದೆ.

ಐಸಿಸಿ ಈವೆಂಟ್​​ಗಳಲ್ಲೇ ಅತಿ ಹೆಚ್ಚು ವೀಕ್ಷಣೆ; ದಾಖಲೆ ಬರೆದ 2025 ರ ಚಾಂಪಿಯನ್ಸ್ ಟ್ರೋಫಿ

ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ಸಂಭಾವ್ಯ 15 ಸದಸ್ಯರ ತಂಡ

ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ಸಾಯಿ ಸುದರ್ಶನ್, ಕೆಎಲ್ ರಾಹುಲ್, ರಿಷಭ್ ಪಂತ್, ಶಾರ್ದೂಲ್ ಠಾಕೂರ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ ಮತ್ತು ಪ್ರಸಿದ್ಧ್ ಕೃಷ್ಣ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:20 pm, Wed, 21 May 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ