India New Test Captain: ಭಾರತ ಟೆಸ್ಟ್ ತಂಡದ ನಾಯಕನ ಹೆಸರು ಫೈನಲ್: ಶೀಘ್ರದಲ್ಲೇ ಘೋಷಣೆ

| Updated By: ಝಾಹಿರ್ ಯೂಸುಫ್

Updated on: Jan 23, 2022 | 4:30 PM

India New Test Captain: ಸೌತ್ ಆಫ್ರಿಕಾ ವಿರುದ್ದದ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಕೆಎಲ್ ರಾಹುಲ್ ಮುನ್ನಡೆಸುತ್ತಿದ್ದಾರೆ. ಈ ಸರಣಿ ಬಳಿಕ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ದ ಏಕದಿನ ಹಾಗೂ ಟಿ20 ಸರಣಿ ಆಡಬೇಕಿದೆ.

India New Test Captain: ಭಾರತ ಟೆಸ್ಟ್ ತಂಡದ ನಾಯಕನ ಹೆಸರು ಫೈನಲ್: ಶೀಘ್ರದಲ್ಲೇ ಘೋಷಣೆ
India New Test Captain
Follow us on

ದಕ್ಷಿಣ ಆಫ್ರಿಕಾ ವಿರುದ್ದದ ಟೆಸ್ಟ್ ಸರಣಿ ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾ (Team India) ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ (Virat Kohli) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೇ ಭಾರತ ಟೆಸ್ಟ್ ತಂಡದ ಮುಂದಿನ ನಾಯಕ ಯಾರು ಎಂಬ ಪ್ರಶ್ನೆಗಳು ಹುಟ್ಟಿಕೊಂಡಿತ್ತು. ಅಲ್ಲದೆ ನಾಯಕನ ಸ್ಥಾನಕ್ಕಾಗಿ ರೋಹಿತ್ ಶರ್ಮಾ (Rohit Sharma), ಕೆಎಲ್ ರಾಹುಲ್ (KL Rahul), ರಿಷಭ್ ಪಂತ್ (Rishab Pant) ಮತ್ತು ಜಸ್ಪ್ರೀತ್ ಬುಮ್ರಾ ಹೆಸರುಗಳೂ ಮುಂಚೂಣಿಯಲ್ಲಿವೆ ಎಂದು ವರದಿಯಾಗಿತ್ತು. ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ವೇಗಿ ಬುಮ್ರಾ ನಾನು ಟೆಸ್ಟ್ ನಾಯಕನಾಗಲು ಸಿದ್ಧ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು. ಹೀಗಾಗಿ ಈ ಬಾರಿ ಯಾರಿಗೆ ನಾಯಕತ್ವ ಒಲಿಯಲಿದೆ ಎಂಬ ಪ್ರಶ್ನೆ ಕುತೂಹಲಕ್ಕೆ ಕಾರಣವಾಗಿದೆ.

ಆದರೆ ಈ ಕುತೂಹಲವನ್ನು ತಣಿಸುವಂತೆ ಇದೀಗ ಬಿಸಿಸಿಐ ಟೀಮ್ ಇಂಡಿಯಾ ಟೆಸ್ಟ್ ತಂಡದ ನಾಯಕನಾಗಿ ಯಾರನ್ನು ಆಯ್ಕೆ ಮಾಡಲು ಬಯಸಿದೆ ಎಂಬುದು ಬಹಿರಂಗವಾಗಿದೆ. ಅದರಂತೆ ಭಾರತ ಟೆಸ್ಟ್ ತಂಡದ ನಾಯಕನಾಗಿ ರೋಹಿತ್ ಶರ್ಮಾ ಅವರನ್ನು ಫೈನಲ್ ಮಾಡಿದೆ ಎಂದು ಬಿಸಿಸಿಐ ಮೂಲಗಳಿಂದ ತಿಳಿದು ಬಂದಿದೆ.

ಬಿಸಿಸಿಐ ಟೆಸ್ಟ್ ತಂಡಕ್ಕೂ ರೋಹಿತ್ ಶರ್ಮಾ ಅವರನ್ನೇ ನಾಯಕನ್ನನಾಗಿಸಲು ಬಯಸಿದ್ದು, ಅದರಂತೆ ಹಿಟ್​ಮ್ಯಾನ್​ಗೆ ಹೊಸ ಜವಾಬ್ದಾರಿ ಸಿಗಲಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸದ್ಯ ಏಕದಿನ ಹಾಗೂ ಟಿ20 ತಂಡದ ನಾಯಕರಾಗಿರುವ ರೋಹಿತ್ ಶರ್ಮಾ ಗಾಯದ ಕಾರಣ ಸೌತ್ ಆಫ್ರಿಕಾ ಸರಣಿಯಿಂದ ಹೊರಗುಳಿದಿದ್ದಾರೆ.

ಇದೀಗ ಸೌತ್ ಆಫ್ರಿಕಾ ವಿರುದ್ದದ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಕೆಎಲ್ ರಾಹುಲ್ ಮುನ್ನಡೆಸುತ್ತಿದ್ದಾರೆ. ಈ ಸರಣಿ ಬಳಿಕ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ದ ಏಕದಿನ ಹಾಗೂ ಟಿ20 ಸರಣಿ ಆಡಬೇಕಿದೆ. ಈ ಸರಣಿಗಾಗಿ ಟೀಮ್ ಇಂಡಿಯಾದಲ್ಲಿ ಬದಲಾವಣೆ ಕಂಡು ಬರುವ ಸಾಧ್ಯತೆಯಿದ್ದು, ಈ ತಂಡಗಳ ಘೋಷಣೆ ವೇಳೆಯೇ ರೋಹಿತ್ ಶರ್ಮಾ ಅವರನ್ನು ಟೆಸ್ಟ್ ತಂಡದ ನಾಯಕ ಎಂದು ಘೋಷಿಸಲಿದ್ದಾರೆಂದು ವರದಿಯಲ್ಲಿ ತಿಳಿಸಲಾಗಿದೆ.

ಅದರಂತೆ ಶ್ರೀಲಂಕಾ ವಿರುದ್ದದ ಟೆಸ್ಟ್ ಸರಣಿಯಲ್ಲಿ ರೋಹಿತ್ ಶರ್ಮಾ ಟೆಸ್ಟ್ ತಂಡದ ನಾಯಕನಾಗಿ ಪಾದರ್ಪಣೆ ಮಾಡಲಿದ್ದಾರೆ. ಇನ್ನು ಉಪನಾಯಕರ ಪಟ್ಟಿಯಲ್ಲಿ ಕೆಎಲ್ ರಾಹುಲ್, ರಿಷಬ್ ಪಂತ್, ಜಸ್ಪ್ರೀತ್ ಬುಮ್ರಾ ಹೆಸರುಗಳಿದ್ದು, ಈ ಮೂವರಲ್ಲಿ ಒಬ್ಬರು ತಂಡದ ಉಪನಾಯಕನಾಗಿ ಆಯ್ಕೆಯಾಗಲಿದ್ದಾರೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ICC Mens ODI Team: ಐಸಿಸಿ ಏಕದಿನ ತಂಡ ಪ್ರಕಟ: ಟೀಮ್ ಇಂಡಿಯಾದ ಆಟಗಾರರಿಗಿಲ್ಲ ಸ್ಥಾನ

ಇದನ್ನೂ ಓದಿ: IPL 2022: ಹೊಸ ಎರಡು ತಂಡಗಳು ಆಯ್ಕೆ ಮಾಡಿದ 6 ಆಟಗಾರರು ಇವರೇ..!

(India New Test Captain: BCCI to officially name Rohit Sharma as new test captain)