AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ಕಿವೀಸ್ ವಿರುದ್ಧ ಭಾರತ ತಂಡದಲ್ಲಿ 2 ಬದಲಾವಣೆ ಸಾಧ್ಯತೆ; ಯಾರು ಇನ್, ಯಾರು ಔಟ್?

Champions Trophy 2025: 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಭಾರತ ತಂಡದಲ್ಲಿ ಎರಡು ಬದಲಾವಣೆಗಳಾಗುವ ಸಾಧ್ಯತೆಯಿದೆ. ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡಿದರೆ ಅರ್ಷ್‌ದೀಪ್ ಸಿಂಗ್ ಆಡಬಹುದು. ಹಾಗೆಯೇ ಗಾಯಗೊಂಡಿರುವ ರೋಹಿತ್ ಶರ್ಮಾ ಬದಲಿಗೆ ರಿಷಭ್ ಪಂತ್ ಅವಕಾಶ ಪಡೆಯಬಹುದು.

IND vs NZ: ಕಿವೀಸ್ ವಿರುದ್ಧ ಭಾರತ ತಂಡದಲ್ಲಿ 2 ಬದಲಾವಣೆ ಸಾಧ್ಯತೆ; ಯಾರು ಇನ್, ಯಾರು ಔಟ್?
Team India
Follow us
ಪೃಥ್ವಿಶಂಕರ
|

Updated on:Mar 02, 2025 | 2:10 PM

2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ (Champions Trophy 2025) ಗುಂಪು ಹಂತದ ಕೊನೆಯ ಪಂದ್ಯವು ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ತಂಡಗಳ ನಡುವೆ ನಡೆಯಲಿದೆ. ಉಭಯ ತಂಡಗಳ ನಡುವಿನ ಈ ಪಂದ್ಯ ದುಬೈನ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಎರಡೂ ತಂಡಗಳು ಈಗಾಗಲೇ ಸೆಮಿಫೈನಲ್‌ಗೆ ತಲುಪಿವೆ. ಈಗ ಗುಂಪು ಹಂತದಲ್ಲಿ ಅಗ್ರಸ್ಥಾನ ಪಡೆಯಲು ಎರಡೂ ತಂಡಗಳ ನಡುವೆ ಪೈಪೋಟಿ ನಡೆಯುತ್ತಿದೆ. ಆದಾಗ್ಯೂ, ಮುಂಬರುವ ನಾಕೌಟ್ ಪಂದ್ಯಗಳನ್ನು ಗಮನದಲ್ಲಿಟ್ಟುಕೊಂಡು ಈ ಪಂದ್ಯದ ಗೆಲುವು ಉಭಯ ತಂಡಗಳಿಗೆ ಅತ್ಯವಶ್ತಕವಾಗಿದೆ. ಹೀಗಾಗಿ ಭಾರತ ತಂಡ ಬಲಿಷ್ಠ ಆಡುವ ಹನ್ನೊಂದರ ಬಳಗದೊಂದಿಗೆ ಕಣಕ್ಕಿಳಿಯಬೇಕಿದೆ.

ಭಾರತ ತಂಡದಲ್ಲಿ ಎರಡು ಬದಲಾವಣೆ

ನ್ಯೂಜಿಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡಬಹುದು. ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಮೊಹಮ್ಮದ್ ಶಮಿ ಅವರಿಗೆ ಸ್ವಲ್ಪ ಕಾಲಿನ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಶಮಿಗೆ ವಿಶ್ರಾಂತಿ ನೀಡಿದರೆ ಅರ್ಷ್‌ದೀಪ್ ಸಿಂಗ್‌ಗೆ ಆಡಲು ಅವಕಾಶ ಸಿಗಬಹುದು. ಮಾಧ್ಯಮ ವರದಿಗಳ ಪ್ರಕಾರ, ಅರ್ಷ್‌ದೀಪ್ ಅಭ್ಯಾಸದ ವೇಳೆ ಬೌಲಿಂಗ್ ತರಬೇತುದಾರ ಮಾರ್ನೆ ಮಾರ್ಕೆಲ್ ಅವರೊಂದಿಗೆ ಸಾಕಷ್ಟು ಸಮಯ ಕಳೆಯುವುದರೊಂದಿಗೆ 13 ಓವರ್‌ಗಳನ್ನು ಬೌಲಿಂಗ್ ಮಾಡಿದರು. ಮತ್ತೊಂದೆಡೆ, ಶಮಿ ಕೇವಲ ಆರು-ಏಳು ಓವರ್‌ಗಳನ್ನು ಬೌಲಿಂಗ್ ಮಾಡಿದರು. ಅಂತಹ ಪರಿಸ್ಥಿತಿಯಲ್ಲಿ, ಶಮಿ ಬದಲಿಗೆ ಅರ್ಷ್‌ದೀಪ್ ಆಡುವುದನ್ನು ಕಾಣಬಹುದು.

ರಿಷಭ್ ಪಂತ್ ಆಡುವ ಸಾಧ್ಯತೆ ಇದೆ

ಮತ್ತೊಂದೆಡೆ, ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ರೋಹಿತ್ ಶರ್ಮಾ ಕೂಡ ಗಾಯಗೊಂಡಿದ್ದರು. ಅವರಿಗೆ ಮಂಡಿರಜ್ಜು ಗಾಯವಾಗಿತ್ತು. ಅಂತಹ ಪರಿಸ್ಥಿತಿಯಲ್ಲಿ, ರೋಹಿತ್‌ಗೆ ವಿಶ್ರಾಂತಿ ನೀಡಲು ಮ್ಯಾನೇಜ್‌ಮೆಂಟ್ ಸಹ ನಿರ್ಧರಿಸಬಹುದು. ರೋಹಿತ್‌ಗೆ ವಿಶ್ರಾಂತಿ ನೀಡಿದರೆ, ರಿಷಭ್ ಪಂತ್ ಆಡುವ 11 ರ ಬಳಗದಲ್ಲಿ ಅವಕಾಶ ಪಡೆಯಬಹುದು. ಅರ್ಷ್​ದೀಪ್ ಸಿಂಗ್ ಮತ್ತು ರಿಷಭ್ ಪಂತ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಇನ್ನೂ ಒಂದೇ ಒಂದು ಪಂದ್ಯವನ್ನು ಆಡಿಲ್ಲ. ಈ ಆಟಗಾರರಿಗೆ ಅವಕಾಶ ಸಿಕ್ಕರೆ, ಇದು ಚಾಂಪಿಯನ್ಸ್ ಟ್ರೋಫಿಯಲ್ಲಿ ಅವರ ಚೊಚ್ಚಲ ಪಂದ್ಯವಾಗಲಿದೆ.

ರೋಹಿತ್ ಶರ್ಮಾ ಪಂದ್ಯದಿಂದ ಹೊರಗುಳಿದರೆ, ಬ್ಯಾಟಿಂಗ್ ಕ್ರಮಾಂಕದಲ್ಲೂ ಬದಲಾವಣೆ ಇರುತ್ತದೆ. ಶುಭ್​ಮನ್ ಗಿಲ್ ಜೊತೆ ಕೆಎಲ್ ರಾಹುಲ್ ಇನ್ನಿಂಗ್ಸ್ ಆರಂಭಿಸುವುದನ್ನು ಕಾಣಬಹುದು. ಪ್ರಸ್ತುತ ಕೆಎಲ್ ರಾಹುಲ್ ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದಾರೆ, ಆದರೆ ಅವರಿಗೆ ಆರಂಭಿಕನಾಗಿಯೂ ಸಾಕಷ್ಟು ಅನುಭವವಿದೆ. ಮತ್ತೊಂದೆಡೆ, ರಿಷಭ್ ಪಂತ್ ಕೆಳ ಕ್ರಮಾಂಕದಲ್ಲಿ ಬ್ಯಾಟ್ ಬೀಸಬಹುದು.

ಭಾರತದ ಸಂಭಾವ್ಯ ಪ್ಲೇಯಿಂಗ್ 11: ಶುಭ್​ಮನ್ ಗಿಲ್, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ಹರ್ಷಿತ್ ರಾಣಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:12 pm, Sat, 1 March 25

ದಂಪತಿಗೆ ಮದುವೆಯಾಗಿ ಕೇವಲ ಎರಡು ವರ್ಷವಾಗಿತ್ತು
ದಂಪತಿಗೆ ಮದುವೆಯಾಗಿ ಕೇವಲ ಎರಡು ವರ್ಷವಾಗಿತ್ತು
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ