AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

45 ವರ್ಷಗಳ ದಾಖಲೆ ಧೂಳೀಪಟ ಮಾಡಿದ ಭಾರತ-ನ್ಯೂಜಿಲೆಂಡ್ ಪಂದ್ಯ

ಭಾರತ-ನ್ಯೂಜಿಲೆಂಡ್ ಏಕದಿನ ಸರಣಿಯನ್ನು ಭಾರತ 3-1ರಿಂದ ಗೆದ್ದಿದೆ. ಅಂತಿಮ ಪಂದ್ಯದಲ್ಲಿ ಯಾವುದೇ ಬ್ಯಾಟ್ಸ್‌ಮನ್ ಅರ್ಧಶತಕ ಗಳಿಸದಿದ್ದರೂ, ಎರಡೂ ತಂಡಗಳು 396 ರನ್‌ಗಳಿಸಿ 45 ವರ್ಷಗಳ ಹಿಂದಿನ ದಾಖಲೆ ಮುರಿದಿವೆ. ಭಾರತವು ನ್ಯೂಜಿಲೆಂಡ್‌ನ ಏಳು ವರ್ಷಗಳ ತವರಿನ ಏಕದಿನ ಸರಣಿ ಗೆಲುವಿನ ಓಟಕ್ಕೆ ಬ್ರೇಕ್ ಹಾಕುವ ಮೂಲಕ ಪ್ರಬಲ ಪ್ರದರ್ಶನ ನೀಡಿದೆ. ಈ ಸರಣಿಯು ಹಲವು ವಿಶೇಷತೆಗಳಿಗೆ ಸಾಕ್ಷಿಯಾಗಿದೆ.

45 ವರ್ಷಗಳ ದಾಖಲೆ ಧೂಳೀಪಟ ಮಾಡಿದ ಭಾರತ-ನ್ಯೂಜಿಲೆಂಡ್ ಪಂದ್ಯ
India Vs New ZealandImage Credit source: BCCI X
ಪೃಥ್ವಿಶಂಕರ
|

Updated on: Nov 15, 2026 | 10:41 PM

Share

ಭಾರತ-ನ್ಯೂಜಿಲೆಂಡ್ ಏಕದಿನ ಸರಣಿ ಅಂತ್ಯಗೊಂಡಿದೆ. ಐದನೇ ಹಾಗೂ ಅಂತಿಮ ಪಂದ್ಯದಲ್ಲಿ ಟೀಂ ಇಂಡಿಯಾ 22 ರನ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಐದು ಪಂದ್ಯಗಳ ಸರಣಿಯನ್ನು 3-1 ಅಂತರದಿಂದ ತನ್ನದಾಗಿಸಿಕೊಂಡಿದೆ. ಒಂದು ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಈ ಸರಣಿಯ ಬಹುತೇಕ ಪಂದ್ಯಗಳು ಕಡಿಮೆ ಮೊತ್ತಕ್ಕೆ ಸಾಕ್ಷಿಯಾಗಿದ್ದವು. ಅದರಲ್ಲೂ ಅಂತಿಮ ಪಂದ್ಯದಲ್ಲಿ ವಿಶೇಷ ದಾಖಲೆಯೊಂದು ನಿರ್ಮಾಣವಾಗಿದೆ. ಇಡೀ ಪಂದ್ಯದಲ್ಲಿ ಎರಡೂ ತಂಡಗಳು ಸೇರಿ 400 ರನ್‌ಗಳನ್ನು ಗಳಿಸಲಿಲ್ಲ. ಅಷ್ಟೇ ಅಲ್ಲ, ಯಾವುದೇ ಬ್ಯಾಟ್ಸ್‌ಮನ್ ಅರ್ಧಶತಕವನ್ನೂ ಬಾರಿಸಲಿಲ್ಲ. ಆದರೂ ಈ ಪಂದ್ಯ ಬರೋಬ್ಬರಿ 45 ವರ್ಷಗಳ ಹಿಂದಿನ ದಾಖಲೆಯನ್ನು ಮುರಿಯುವಲ್ಲಿ ಯಶಸ್ವಿಯಾಗಿದೆ.

ಅರ್ಧಶತಕವಿಲ್ಲದ ಪಂದ್ಯದಲ್ಲಿ ದಾಖಲೆಯ ರನ್

ಮೌಂಟ್ ಮೌಂಗನುಯಿಯ ಬೇ ಓವಲ್ ಮೈದಾನದಲ್ಲಿ ನಡೆದ ಸರಣಿಯ ಕೊನೆಯ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 209 ರನ್‌ಗಳಿಗೆ ಆಲೌಟ್ ಆಯಿತು. ಟೀಮ್ ಇಂಡಿಯಾ ಪರ ಅಕ್ಷರ್ ಪಟೇಲ್ ಮತ್ತು ಇಶಾನ್ ಕಿಶನ್ ತಲಾ 46 ರನ್ ಗಳಿಸಿ ತಂಡಕ್ಕೆ ಆಸರೆಯಾದರು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ ಭಾರತದ ಬೌಲರ್‌ಗಳ ದಾಳಿಗೆ ತತ್ತರಿಸಿ 187 ರನ್‌ಗಳಿಗೆ ಸರ್ವಪತನ ಕಂಡಿತು. ಆ ಮೂಲಕ ಭಾರತ 22 ರನ್‌ಗಳ ಗೆಲುವು ದಾಖಲಿಸಿತು. ಕಿವೀಸ್ ಪರ ಡೀನ್ ಫಾಕ್ಸ್‌ಕ್ರಾಫ್ಟ್ 31 ರನ್ ಗಳಿಸಿ ತಂಡದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರು.

ಈ ಪಂದ್ಯದಲ್ಲಿ ಭಾರತ ಗೆದ್ದರೂ, ನ್ಯೂಜಿಲೆಂಡ್ ಕೂಡ ದಾಖಲೆಯ ಭಾಗವಾಯಿತು. ಉಭಯ ತಂಡಗಳು ಸೇರಿ ಒಟ್ಟು 396 ರನ್ ಗಳಿಸಿದವು. ಆದರೆ ಅಚ್ಚರಿಯ ಸಂಗತಿಯೆಂದರೆ, ಎರಡೂ ತಂಡಗಳ ಯಾವುದೇ ಬ್ಯಾಟ್ಸ್‌ಮನ್ ಅರ್ಧಶತಕದ ಗಡಿ ದಾಟಲಿಲ್ಲ. ನ್ಯೂಜಿಲೆಂಡ್‌ನಲ್ಲಿ ನಡೆದ ಏಕದಿನ ಪಂದ್ಯಗಳ ಇತಿಹಾಸದಲ್ಲಿ ಅರ್ಧಶತಕವೊಂದೂ ದಾಖಲಾಗದೆ ಎರಡೂ ತಂಡಗಳು ಸೇರಿ ಗಳಿಸಿದ ಅತ್ಯಧಿಕ ಮೊತ್ತ ಇದಾಗಿದೆ. ಈ ಮೂಲಕ ಭಾರತ ಮತ್ತು ನ್ಯೂಜಿಲೆಂಡ್ ಜಂಟಿಯಾಗಿ 45 ವರ್ಷಗಳ ಹಿಂದಿನ ದಾಖಲೆಯನ್ನು ಅಳಿಸಿಹಾಕಿವೆ. 1981ರಲ್ಲಿ ನಡೆದಿದ್ದ ಪಂದ್ಯವೊಂದರಲ್ಲಿ ಉಭಯ ತಂಡಗಳು ಒಟ್ಟಾಗಿ 363 ರನ್ ಗಳಿಸಿದ್ದವು. ಆದರೆ ಆ ಪಂದ್ಯದಲ್ಲೂ ಯಾರೊಬ್ಬರೂ ಅರ್ಧಶತಕ ಗಳಿಸಿರಲಿಲ್ಲ.

2029ರ ಚಾಂಪಿಯನ್ಸ್ ಟ್ರೋಫಿಗೆ ಭಾರತದ ಆತಿಥ್ಯ; 2031ರ ವಿಶ್ವಕಪ್ ಕೂಡ ನಮ್ಮಲ್ಲೇ..!

ಗೆಲುವಿನ ಓಟಕ್ಕೆ ಬ್ರೇಕ್ ಹಾಕಿದ ಭಾರತ

ಈ ಗೆಲುವಿನೊಂದಿಗೆ ಭಾರತ ತಂಡ ನ್ಯೂಜಿಲೆಂಡ್‌ನ ತವರಿನ ಏಕದಿನ ಸರಣಿಗಳಲ್ಲಿನ ಸುದೀರ್ಘ ಗೆಲುವಿನ ಓಟಕ್ಕೆ ಅಂತ್ಯ ಹಾಡಿದೆ. 2019ರ ಬಳಿಕ ನ್ಯೂಜಿಲೆಂಡ್ ತವರಿನಲ್ಲಿ ಯಾವುದೇ ಏಕದಿನ ಸರಣಿಯನ್ನು ಸೋತಿರಲಿಲ್ಲ. ಅಂದು ಕೂಡ ಭಾರತವೇ ಕಿವೀಸ್ ತಂಡವನ್ನು ಮಣಿಸಿತ್ತು. ಆ ಬಳಿಕ ತವರಿನಲ್ಲಿ ಸತತ 11 ಏಕದಿನ ಸರಣಿಗಳನ್ನು ಗೆದ್ದು ಬೀಗಿದ್ದ ನ್ಯೂಜಿಲೆಂಡ್ ತಂಡಕ್ಕೆ ಇದೀಗ ಟೀಮ್ ಇಂಡಿಯಾ ಸೋಲಿನ ರುಚಿ ತೋರಿಸಿದೆ. ಈ ಮೂಲಕ ಏಳು ವರ್ಷಗಳ ಬಳಿಕ ಕಿವೀಸ್ ತವರಿನಲ್ಲಿ ಏಕದಿನ ಸರಣಿ ಸೋಲುವಂತಾಗಿದೆ. ಭಾರತ ತಂಡದ ಈ ಗೆಲುವು ನ್ಯೂಜಿಲೆಂಡ್‌ನ ಪ್ರಾಬಲ್ಯಕ್ಕೆ ಬ್ರೇಕ್ ಹಾಕಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಪಿಎಸ್ಐ ವಿದ್ಯಾಶ್ರೀ, ಕಾನ್ಸ್‌ಟೇಬಲ್ ಪ್ರವೀಣ್ ಅಮಾನತು
ಪಿಎಸ್ಐ ವಿದ್ಯಾಶ್ರೀ, ಕಾನ್ಸ್‌ಟೇಬಲ್ ಪ್ರವೀಣ್ ಅಮಾನತು
ಪ್ರಾಸ ಬಳಸಿ ಸ್ಪರ್ಧಿಗಳ ವ್ಯಕ್ತಿತ್ವ ವಿವರಿಸಿದ ಮಾಡರ್ನ್ ಕವಿ ಮಂಜ: ವಿಡಿಯೋ
ಪ್ರಾಸ ಬಳಸಿ ಸ್ಪರ್ಧಿಗಳ ವ್ಯಕ್ತಿತ್ವ ವಿವರಿಸಿದ ಮಾಡರ್ನ್ ಕವಿ ಮಂಜ: ವಿಡಿಯೋ
ಅಧ್ಯಕ್ಷ ಸ್ಥಾನದಲ್ಲಿದ್ದರೂ ಮೈಕ್ ಆಫ್ ಮಾಡಿದ್ದಕ್ಕೆ ಶಾಸಕ ಕೆಂಡಾಮಂಡಲ
ಅಧ್ಯಕ್ಷ ಸ್ಥಾನದಲ್ಲಿದ್ದರೂ ಮೈಕ್ ಆಫ್ ಮಾಡಿದ್ದಕ್ಕೆ ಶಾಸಕ ಕೆಂಡಾಮಂಡಲ
ಹನುಮನ ದೇಗುಲದಲ್ಲಿ ದನದ ಮಾಂಸ ಬಿಸಾಡಿದ ಕಿಡಿಗೇಡಿಗಳು, ಭುಗಿಲೆದ್ದ ಆಕ್ರೋಶ
ಹನುಮನ ದೇಗುಲದಲ್ಲಿ ದನದ ಮಾಂಸ ಬಿಸಾಡಿದ ಕಿಡಿಗೇಡಿಗಳು, ಭುಗಿಲೆದ್ದ ಆಕ್ರೋಶ
ಮುತ್ತುರಾಯನಸ್ವಾಮಿ ಬೆಟ್ಟದಲ್ಲಿ ದಾರಿ ತಪ್ಪಿದ್ದ ಯುವಕನ ರಕ್ಷಣೆ
ಮುತ್ತುರಾಯನಸ್ವಾಮಿ ಬೆಟ್ಟದಲ್ಲಿ ದಾರಿ ತಪ್ಪಿದ್ದ ಯುವಕನ ರಕ್ಷಣೆ
‘ಯಶಸ್ ನಯವಂಚಕ, ಚಿಲ್ಲರೆ ಬುದ್ಧಿ’: ಸುದೀಪ್ ಎದುರಲ್ಲೇ ಆರೋಪಗಳ ಸುರಿಮಳೆ
‘ಯಶಸ್ ನಯವಂಚಕ, ಚಿಲ್ಲರೆ ಬುದ್ಧಿ’: ಸುದೀಪ್ ಎದುರಲ್ಲೇ ಆರೋಪಗಳ ಸುರಿಮಳೆ
ಬಿರ್ಸಾ ಮುಂಡಾ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಪ್ರಧಾನಿ ಮೋದಿ
ಬಿರ್ಸಾ ಮುಂಡಾ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಪ್ರಧಾನಿ ಮೋದಿ
ಕಾಮುಕನ ವಿಕೃತಿಗೆ ಬೇಸತ್ತ ಹಾಸ್ಟೆಲ್ ವಿದ್ಯಾರ್ಥಿನಿಯರು
ಕಾಮುಕನ ವಿಕೃತಿಗೆ ಬೇಸತ್ತ ಹಾಸ್ಟೆಲ್ ವಿದ್ಯಾರ್ಥಿನಿಯರು
ಮೋದಿ ಬಂದ ರೋಡಿಗೆ ಮಾತ್ರ ಥಳಥಳ ಡಾಂಬರ್, ಉಳಿದ ರಸ್ತೆ ತುಂಬಾ ನೂರಾರು ಗುಂಡಿ
ಮೋದಿ ಬಂದ ರೋಡಿಗೆ ಮಾತ್ರ ಥಳಥಳ ಡಾಂಬರ್, ಉಳಿದ ರಸ್ತೆ ತುಂಬಾ ನೂರಾರು ಗುಂಡಿ
ಹೊಸ ಶರ್ಟ್ ಕತ್ತರಿಸಲು ಹಿಂದೇಟು:ಬನಿಯನ್‌ನಲ್ಲೇ KASಪರೀಕ್ಷೆ ಬರೆದ ಅಭ್ಯರ್ಥಿ
ಹೊಸ ಶರ್ಟ್ ಕತ್ತರಿಸಲು ಹಿಂದೇಟು:ಬನಿಯನ್‌ನಲ್ಲೇ KASಪರೀಕ್ಷೆ ಬರೆದ ಅಭ್ಯರ್ಥಿ