AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ಟಾಸ್ ಗೆದ್ದ ಟೀಂ ಇಂಡಿಯಾ ಬೌಲಿಂಗ್ ಆಯ್ಕೆ; ತಂಡದಲ್ಲಿ 2 ಬದಲಾವಣೆ

India vs New Zealand T20: ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿದ್ದು, ಗುವಾಹಟಿಯಲ್ಲಿ 3ನೇ ಪಂದ್ಯ ನಡೆಯುತ್ತಿದೆ. ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ದುಕೊಂಡಿದೆ. ಜಸ್ಪ್ರೀತ್ ಬುಮ್ರಾ, ರವಿ ಬಿಷ್ಣೋಯಿ ಸೇರಿರುವ ಭಾರತ ಸರಣಿ ಗೆಲ್ಲುವ ತವಕದಲ್ಲಿದೆ. ಆದರೆ, ಗುವಾಹಟಿಯಲ್ಲಿ ಭಾರತದ ಟಿ20 ದಾಖಲೆ ಉತ್ತಮವಾಗಿಲ್ಲ. ಸರಣಿಯಲ್ಲಿ ಉಳಿಯಲು ನ್ಯೂಜಿಲೆಂಡ್‌ಗೆ ಈ ಪಂದ್ಯ ಅತ್ಯಗತ್ಯ.

IND vs NZ: ಟಾಸ್ ಗೆದ್ದ ಟೀಂ ಇಂಡಿಯಾ ಬೌಲಿಂಗ್ ಆಯ್ಕೆ; ತಂಡದಲ್ಲಿ 2 ಬದಲಾವಣೆ
Ind Vs Nz
ಪೃಥ್ವಿಶಂಕರ
|

Updated on:Jan 25, 2026 | 6:50 PM

Share

ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ (India vs New Zealand) ತಂಡವು ಇದುವರೆಗೆ ಭರ್ಜರಿ ಪ್ರದರ್ಶನ ನೀಡುವ ಮೂಲಕ ಸರಣಿಯಲ್ಲಿ 2-0 ಅಂತರದ ಮುನ್ನಡೆ ಸಾಧಿಸಿದೆ. ಇದೀಗ ಸರಣಿಯ ಮೂರನೇ ಪಂದ್ಯ ಗುವಾಹಟಿಯ ಬರ್ಸಪರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಈ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಅಜೇಯ ಮುನ್ನಡೆ ಸಾಧಿಸುವುದರೊಂದಿಗೆ ಸರಣಿಯನ್ನು ವಶಪಡಿಸಿಕೊಳ್ಳುವ ಇರಾದೆಯಲ್ಲಿದೆ. ಇತ್ತ ಸರಣಿಯಲ್ಲಿ ಉಳಿಯಲು ನ್ಯೂಜಿಲೆಂಡ್ ಯಾವುದೇ ಬೆಲೆ ತೆತ್ತಾದರೂ ಈ ಪಂದ್ಯವನ್ನು ಗೆಲ್ಲಲೇಬೇಕಾಗಿದೆ.

ಟಾಸ್ ಗೆದ್ದ ಟೀಂ ಇಂಡಿಯಾ

ಬರ್ಸಪರ ಕ್ರಿಕೆಟ್ ಕ್ರೀಡಾಂಗಣದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ನ್ಯೂಜಿಲೆಂಡ್ ಮೊದಲು ಬ್ಯಾಟಿಂಗ್‌ ಮಾಡುತ್ತಿದೆ. ಎರಡನೇ ಇನ್ನಿಂಗ್ಸ್​ನಲ್ಲಿ ಬ್ಯಾಟಿಂಗ್‌ ಮಾಡುವ ತಂಡಕ್ಕೆ ಇಬ್ಬನಿಯ ನೆರವು ಸಿಗುವುದರಿಂದ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಸೂರ್ಯ ಹೇಳಿದ್ದಾರೆ. ಇದರೊಂದಿಗೆ ಉಭಯ ತಂಡಗಳ ಪ್ಲೇಯಿಂಗ್ 11 ಕೂಡ ಹೊರಬಿದ್ದಿದ್ದು, ಭಾರತ ತಂಡದಲ್ಲಿ 2 ಬದಲಾವಣೆಗಳನ್ನು ಮಾಡಲಾಗಿದೆ.ಅರ್ಷದೀಪ್ ಸಿಂಗ್ ಹಾಗೂ ವರುಣ್ ಚಕ್ರವರ್ತಿ ಈ ಪಂದ್ಯದಿಂದ ಹೊರಗುಳಿದಿದ್ದು, ಅವರ ಸ್ಥಾನದಲ್ಲಿ ಜಸ್ಪ್ರೀತ್ ಬುಮ್ರಾ ಹಾಗೂ ರವಿ ಬಿಷ್ಣೋಯಿ ಆಡಲಿದ್ದಾರೆ.

ಗುವಾಹಟಿಯಲ್ಲಿ ಟೀಂ ಇಂಡಿಯಾ ದಾಖಲೆ

ಭಾರತವು ಇಲ್ಲಿಯವರೆಗೆ ಗುವಾಹಟಿಯಲ್ಲಿ ನಾಲ್ಕು ಟಿ20ಪಂದ್ಯಗಳನ್ನು ಆಡಿದೆ. ಈ ಅವಧಿಯಲ್ಲಿ ಟೀಂ ಇಂಡಿಯಾ ಕೇವಲ ಒಂದು ಪಂದ್ಯವನ್ನು ಗೆದ್ದಿದ್ದು, ಎರಡರಲ್ಲಿ ಸೋತಿದೆ ಮತ್ತು ಒಂದು ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಭಾರತ ಕೊನೆಯದಾಗಿ 2023 ರಲ್ಲಿ ಗುವಾಹಟಿಯಲ್ಲಿ ಟಿ20ಪಂದ್ಯವನ್ನು ಆಡಿತ್ತು, ಆ ಸಮಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತಿತ್ತು. 222 ರನ್ ಬಾರಿಸಿದ್ದರೂ, ಟೀಂ ಇಂಡಿಯಾಕ್ಕೆ ಆಸ್ಟ್ರೇಲಿಯಾವನ್ನು ಕಟ್ಟಿ ಹಾಕಲು ಸಾಧ್ಯವಾಗಲಿಲ್ಲ.

ಉಭಯ ತಂಡಗಳು

ಭಾರತ ತಂಡ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಹರ್ಷಿತ್ ರಾಣಾ, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಮತ್ತು ಜಸ್ಪ್ರೀತ್ ಬುಮ್ರಾ.

ನ್ಯೂಜಿಲೆಂಡ್ ತಂಡ: ಡೆವೊನ್ ಕಾನ್ವೇ, ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ರಚಿನ್ ರವೀಂದ್ರ, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಡ್ಯಾರಿಲ್ ಮಿಚೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಕೈಲ್ ಜೇಮಿಸನ್, ಮ್ಯಾಟ್ ಹೆನ್ರಿ, ಇಶ್ ಸೋಧಿ ಮತ್ತು ಜಾಕೋಬ್ ಡಫ್ಫಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:46 pm, Sun, 25 January 26