IND vs PAK: ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ ಗೆಲ್ಲಬೇಕೆಂದರೆ ಹೀಗೆ ಮಾಡಿದರೆ ಸಾಕು..!

T20 World Cup 2022: ಕಳೆದ ಒಂದು ವರ್ಷದಲ್ಲಿ ನೆರೆಹೊರೆಯವರ ನಡುವೆ ಮೂರು ಪಂದ್ಯಗಳು ನಡೆದಿವೆ. ಅದರಲ್ಲಿ ಟೀಂ ಇಂಡಿಯಾ ಎರಡು ಪಂದ್ಯಗಳಲ್ಲಿ ಸೋತು ಒಂದರಲ್ಲಿ ಗೆಲುವು ಸಾಧಿಸಿದೆ.

IND vs PAK: ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ ಗೆಲ್ಲಬೇಕೆಂದರೆ ಹೀಗೆ ಮಾಡಿದರೆ ಸಾಕು..!
IND vs PAK
Follow us
TV9 Web
| Updated By: ಪೃಥ್ವಿಶಂಕರ

Updated on:Oct 23, 2022 | 11:46 AM

2022 ರ ಟಿ20 ವಿಶ್ವಕಪ್‌ನಲ್ಲಿ (T20 World Cup 2022) ಟೀಂ ಇಂಡಿಯಾ (Team India) ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧದ ಪಂದ್ಯದೊಂದಿಗೆ ತನ್ನ ಪ್ರಯಾಣವನ್ನು ಪ್ರಾರಂಭಿಸಲಿದೆ. ಉಭಯ ದೇಶಗಳ ನಡುವಿನ ಈ ಬ್ಲಾಕ್‌ಬಸ್ಟರ್ ಪಂದ್ಯವು ಅಕ್ಟೋಬರ್ 23 ರಂದು ಮೆಲ್ಬೋರ್ನ್‌ನಲ್ಲಿ (Melbourne) ನಡೆಯಲಿದೆ. ಇದಕ್ಕಾಗಿ ವಿಶ್ವದಾದ್ಯಂತ ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಕಳೆದ ವರ್ಷ ನಡೆದ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ ಸೋಲು ಅನುಭವಿಸಬೇಕಾಯಿತು. ಅದಕ್ಕೆ ಸೇಡು ತೀರಿಸಿಕೊಳ್ಳಲು ರೋಹಿತ್ ದಳ ಉತ್ಸುಕವಾಗಿದೆ. ಕಳೆದ ಒಂದು ವರ್ಷದಲ್ಲಿ ನೆರೆಹೊರೆಯವರ ನಡುವೆ ಮೂರು ಪಂದ್ಯಗಳು ನಡೆದಿವೆ. ಅದರಲ್ಲಿ ಟೀಂ ಇಂಡಿಯಾ ಎರಡು ಪಂದ್ಯಗಳಲ್ಲಿ ಸೋತು ಒಂದರಲ್ಲಿ ಗೆಲುವು ಸಾಧಿಸಿದೆ.

ಅದೇ ಸಮಯದಲ್ಲಿ, ಇತ್ತೀಚೆಗೆ ನಡೆದ ಏಷ್ಯಾ ಕಪ್‌ನಲ್ಲಿ, ಎರಡು ತಂಡಗಳು ತಲಾ ಒಂದೊಂದು ಪಂದ್ಯದಲ್ಲಿ ಗೆಲುವು ಸಾಧಿಸಿದ್ದವು. ಇಂತಹ ಸ್ಥಿತಿಯಲ್ಲಿ ಈ ಬಾರಿಯೂ ಜಿದ್ದಾಜಿದ್ದಿನ ಪೈಪೋಟಿ ಎದುರಾಗುವ ನಿರೀಕ್ಷೆ ಇದೆ. ಆದಾಗ್ಯೂ, ಪಾಕಿಸ್ತಾನದ ವಿರುದ್ಧ ಗೆಲ್ಲಬೇಕೆಂದರೆ ಟೀಂ ಇಂಡಿಯಾ ಈ ಹಿಂದೆ ಮಾಡಿದ ಈ 5 ತಪ್ಪುಗಳನ್ನು ಮಾಡದಂತೆ ಎಚ್ಚರಿಕೆವಹಿಸಬೇಕಾಗಿದೆ.

ಇದನ್ನೂ ಓದಿ: IND vs PAK: ಮೆಲ್ಬೋರ್ನ್​ನಲ್ಲಿ ಭಾರತಕ್ಕೆ ಸಿಹಿ- ಕಹಿ ಅನುಭವ; ಈ ಮೈದಾನದ ಟೀಂ ಇಂಡಿಯಾ ರೆಕಾರ್ಡ್ ಹೇಗಿದೆ ಗೊತ್ತಾ?

1.ಫೀಲ್ಡಿಂಗ್ ಕಳಪೆಯಾಗಿರಬಾರದು: ಟೀಮ್ ಇಂಡಿಯಾ ಫೀಲ್ಡಿಂಗ್ ವಿಚಾರದಲ್ಲಿ ಕೆಲವು ಅದ್ಭುತ ಫೀಲ್ಡರ್​ಗಳನ್ನು ಹೊಂದಿದೆ. ಆದರೆ ಪಾಕಿಸ್ತಾನ ವಿರುದ್ಧದ ಹಿಂದಿನ ಪಂದ್ಯಗಳಲ್ಲಿ ಭಾರತ ತಂಡದ ಫೀಲ್ಡಿಂಗ್ ಅಷ್ಟೇನೂ ವಿಶೇಷವೇನೂ ಆಗಿರಲಿಲ್ಲ. ಪಾಕಿಸ್ತಾನ ವಿರುದ್ಧದ ಏಷ್ಯಾಕಪ್ ಪಂದ್ಯದ ನಿರ್ಣಾಯಕ ಹಂತದಲ್ಲಿ ಅರ್ಷದೀಪ್ ಸಿಂಗ್ ಕ್ಯಾಚ್ ಕೈಬಿಟ್ಟರು. ಇದರಿಂದ ಟೀಂ ಇಂಡಿಯಾ ಸೋಲಿನ ಭಾರ ಹೊರಬೇಕಾಯಿತು. ಇದಲ್ಲದೇ ಹಲವು ಸಂದರ್ಭಗಳಲ್ಲಿ ಟೀಂ ಇಂಡಿಯಾ ಆಟಗಾರರ ಫೀಲ್ಡಿಂಗ್ ಅಷ್ಟೊಂದು ಉತ್ತಮವಾಗಿರಲಿಲ್ಲ. ಆದರೆ ಇತ್ತೀಚೆಗೆ ನಡೆದ ಆಸ್ಟ್ರೇಲಿಯಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ರೋಹಿತ್ ಪಡೆ ಉತ್ತಮವಾಗಿ ಫೀಲ್ಡಿಂಗ್ ಮಾಡಿತ್ತು. ಇದನ್ನು ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲೂ ಮುಂದುವರಿಸಬೇಕಿದೆ.

2. ಓಪನಿಂಗ್ ಕಳಪೆಯಾಗಬಾರದು: ಪಾಕಿಸ್ತಾನದ ವಿರುದ್ಧ ಆರಂಭಿಕ ಓವರ್‌ಗಳಲ್ಲಿ ಭಾರತೀಯ ಬ್ಯಾಟ್ಸ್‌ಮನ್‌ಗಳು ರನ್​ಗಳಿಸಲು ಹೆಣಗಾಡುತ್ತಾರೆ. ಈ ಹಿಂದೆ ಏಷ್ಯಾಕಪ್​ನ ಆರಂಭಿಕ ಪಂದ್ಯದಲ್ಲೂ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಜೋಡಿ ಪರಿಣಾಮಕಾರಿಯಾಗಿರಲಿಲ್ಲ. ಅದೇ ವೇಳೆ ಕಳೆದ ವಿಶ್ವಕಪ್‌ನಲ್ಲೂ ಉಭಯ ಆಟಗಾರರ ಪರಿಸ್ಥಿತಿ ಇದೇ ಆಗಿತ್ತು. ಹೀಗಾಗಿ ಈ ಪ್ರಮುಖ ಪಂದ್ಯದಲ್ಲಿ ಈ ಇಬ್ಬರು ಆಟಗಾರರು ತಂಡಕ್ಕೆ ಉತ್ತಮ ಆರಂಭ ನೀಡಬೇಕು ಎಂಬುದು ಭಾರತೀಯ ಅಭಿಮಾನಿಗಳ ಹಾರೈಕೆಯಾಗಿದೆ. ಇಬ್ಬರೂ ಆಟಗಾರರು ಶಾಹೀನ್ ಅಫ್ರಿದಿಯಂತಹ ಬೌಲರ್ ಎದುರು ಸರಾಗವಾಗಿ ರನ್ ಗಳಿಸಿದರೆ, ಮುಂದೆ ಬರುವ ಆಟಗಾರರಿಗೂ ರನ್ ಗಳಿಸಲು ಪ್ರೇರಣೆ ಸಿಕ್ಕಂತ್ತಾಗುತ್ತದೆ.

3. ಮಧ್ಯಮ ಓವರ್‌ಗಳಲ್ಲಿ ರನ್-ರೇಟ್ ಕಡಿಮೆಯಾಗಬಾರದು: ಏಷ್ಯಾಕಪ್‌ನ ಸೂಪರ್-4 ಹಂತದ ಪಂದ್ಯದಲ್ಲಿ ಟೀಂ ಇಂಡಿಯಾ ಉತ್ತಮ ಆರಂಭ ಪಡೆದಿತ್ತು. ಆದರೆ, ಮಧ್ಯಮ ಓವರ್‌ಗಳಲ್ಲಿ ಭಾರತ ತಂಡ ವಿಕೆಟ್ ಕಳೆದುಕೊಂಡಿದರಿಂದ ರನ್ ರೇಟ್ ಕುಸಿಯಿತು. ಇದರಿಂದಾಗಿ ಆ ಪಂದ್ಯದಲ್ಲಿ ಭಾರತಕ್ಕೆ ಇನ್ನೂರರ ಗಡಿ ಮುಟ್ಟಲು ಸಾಧ್ಯವಾಗಲಿಲ್ಲ. ಕಳೆದ ವಿಶ್ವಕಪ್‌ನಲ್ಲೂ ಭಾರತದ ಆಟಗಾರರು ಮಧ್ಯಮ ಓವರ್‌ಗಳಲ್ಲಿ ಪಾಕಿಸ್ತಾನ ತಂಡದ ವಿರುದ್ಧ ರನ್​ಗಳಿಸಲು ಹೆಣಗಾಡಿದನ್ನು ನಾವೆಲ್ಲ ಕಂಡಿದ್ದೇವೆ. ಈಗ ಈ ನ್ಯೂನತೆಯನ್ನು ಸರಿಪಡಿಸಿಕೊಂಡರೆ ಟೀಂ ಇಂಡಿಯಾ ಪಾಕ್ ವಿರುದ್ಧ ಬೃಹತ್ ಟಾರ್ಗೆಟ್ ಸೆಟ್ ಮಾಡಬಹುದಾಗಿದೆ.

4. 19ನೇ ಓವರ್​ಗೆ ಪರಿಹಾರ ಕಂಡುಕೊಳ್ಳಬೇಕು: ಕಳೆದ ಕೆಲವು ಪಂದ್ಯಗಳಿಂದ 19ನೇ ಓವರ್ ಟೀಂ ಇಂಡಿಯಾಕ್ಕೆ ತಲೆನೋವಾಗಿ ಪರಿಣಮಿಸಿದೆ. ಇತ್ತೀಚಿನ ದಿನಗಳಲ್ಲಿ ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್​ರಂತಹ ಬೌಲರ್​ಗಳು 19ನೇ ಓವರ್​ನಲ್ಲಿ ಅಧಿಕ ರನ್ ಬಿಟ್ಟುಕೊಟ್ಟು ದುಬಾರಿಯಾಗಿರುವುದು ಗೊತ್ತೇ ಇದೆ. ಏಷ್ಯಾಕಪ್‌ನಲ್ಲೂ ಈ ಸಮಸ್ಯೆ ಕಾಣಿಸಿಕೊಂಡಿತ್ತು. ಅಲ್ಲಿ ಪಾಕಿಸ್ತಾನ ವಿರುದ್ಧದ ಗುಂಪಿನ ಪಂದ್ಯದಲ್ಲಿ ಭುವಿ 19ನೇ ಓವರ್‌ನಲ್ಲಿ 19 ರನ್ ನೀಡಿದ್ದರು. ಇದೀಗ ಭಾರತ ತಂಡ ಪಾಕಿಸ್ತಾನದ ವಿರುದ್ಧ ಈ ದೌರ್ಬಲ್ಯವನ್ನು ಮೆಟ್ಟಿ ನಿಲ್ಲಬೇಕಿದೆ. ಆಸ್ಟ್ರೇಲಿಯ ವಿರುದ್ಧ ಆಕರ್ಷಕ ಪ್ರದರ್ಶನ ನೀಡಿದ ಹರ್ಷಲ್ ಪಟೇಲ್ ಈ ಪಂದ್ಯದಲ್ಲೂ ಅದೇ ಪ್ರದರ್ಶನವನ್ನು ಮುಂದುವರೆಸಬೇಕಿದೆ.

5. ರಿಜ್ವಾನ್-ಬಾಬರ್​ರನ್ನು ಬೇಗನೇ ಔಟ್ ಮಾಡಬೇಕು: ಪಾಕಿಸ್ತಾನದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್‌ ಮೊಹಮ್ಮದ್ ರಿಜ್ವಾನ್ ಮತ್ತು ಬಾಬರ್ ಆಜಮ್ ಟೀಂ ಇಂಡಿಯಾ ವಿರುದ್ಧ ಹಲವು ಬಾರಿ ಮಿಂಚಿದ್ದಾರೆ. ಕಳೆದ ವಿಶ್ವಕಪ್‌ನಲ್ಲಿ ಇವರಿಬ್ಬರೂ ಸೇರಿಕೊಂಡು ಪಾಕಿಸ್ತಾನಕ್ಕೆ 10 ವಿಕೆಟ್​ಗಳ ಜಯ ತಂದುಕೊಟ್ಟಿದ್ದರು. ಏಷ್ಯಾಕಪ್​ನಲ್ಲಿ ಬಾಬರ್ ವಿಫಲವಾದರೆ, ರಿಜ್ವಾನ್ ಮಾತ್ರ ಎರಡೂ ಪಂದ್ಯಗಳಲ್ಲಿ ಅದ್ಭುತ ಆಟ ಪ್ರದರ್ಶಿಸಿದ್ದರು. ಹೀಗಾಗಿ ಇಂದಿನ ಪಂದ್ಯದಲ್ಲಿ ಭಾರತ ಗೆಲ್ಲಬೇಕಾದರೆ ಬಾಬರ್ ಮತ್ತು ರಿಜ್ವಾನ್ ಜೋಡಿಯನ್ನು ಬೇಗನೇ ಪೆವಿಲಿಯನ್​ಗೆ ಕಳುಹಿಸಬೇಕಾಗಿದೆ. ಇದಕ್ಕಾಗಿ, ವಿಶೇಷವಾಗಿ ವೇಗದ ಬೌಲರ್‌ಗಳು ಆರಂಭಿಕ ಓವರ್‌ಗಳಲ್ಲಿ ನೇರ ಲೆಂಗ್ತ್-ಲೈನ್‌ನೊಂದಿಗೆ ಬೌಲಿಂಗ್ ಮಾಡಬೇಕಾಗುತ್ತದೆ. ಇದು ಉಭಯ ಆಟಗಾರರ ಮೇಲೆ ಒತ್ತಡವನ್ನು ಹೆಚ್ಚಿಸಬಹುದು. ಪರಿಣಾಮವಾಗಿ, ಅವರು ಬೇಗನೇ ವಿಕೆಟ್ ಒಪ್ಪಿಸುವ ಸಂಭವ ಹೆಚ್ಚಾಗಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:39 am, Sun, 23 October 22

ಶೃಂಗಾರದ ಹೊಂಗೆ ಮರ: ಭವ್ಯಾ, ತ್ರಿವಿಕ್ರಮ್ ಡ್ಯಾನ್ಸ್ ನೋಡಿ ನಾಚಿದ ಮನೆ ಮಂದಿ
ಶೃಂಗಾರದ ಹೊಂಗೆ ಮರ: ಭವ್ಯಾ, ತ್ರಿವಿಕ್ರಮ್ ಡ್ಯಾನ್ಸ್ ನೋಡಿ ನಾಚಿದ ಮನೆ ಮಂದಿ
ಬ್ರ್ಯಾಂಡ್ ಬೆಂಗಳೂರು ಅಂದರೇನು ಅಂತ ಜನಕ್ಕೆ ಈಗ ಅರ್ಥವಾಗುತ್ತಿದೆ!
ಬ್ರ್ಯಾಂಡ್ ಬೆಂಗಳೂರು ಅಂದರೇನು ಅಂತ ಜನಕ್ಕೆ ಈಗ ಅರ್ಥವಾಗುತ್ತಿದೆ!
ಇಂದಿನಿಂದ ಶಬರಿಮಲೆ ಮಂಡಲಪೂಜೆ ಪ್ರಾರಂಭ; ದರ್ಶನಕ್ಕೆ ಜನಸಾಗರ
ಇಂದಿನಿಂದ ಶಬರಿಮಲೆ ಮಂಡಲಪೂಜೆ ಪ್ರಾರಂಭ; ದರ್ಶನಕ್ಕೆ ಜನಸಾಗರ
ಮಾಜಿ ಪ್ರಧಾನಿ ಒಬ್ಬ ಡಿಸಿಎಂ ಬಗ್ಗೆ ರೌಡಿ ಅಂತೆಲ್ಲ ಮಾತಾಡೋದು ಸರಿಯಲ್ಲ:ಶಾಸಕ
ಮಾಜಿ ಪ್ರಧಾನಿ ಒಬ್ಬ ಡಿಸಿಎಂ ಬಗ್ಗೆ ರೌಡಿ ಅಂತೆಲ್ಲ ಮಾತಾಡೋದು ಸರಿಯಲ್ಲ:ಶಾಸಕ
ದೇವರ ವಿಗ್ರಹ ವಿರೂಪಗೊಳಿಸಿ ವಿಕೃತಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೇವರ ವಿಗ್ರಹ ವಿರೂಪಗೊಳಿಸಿ ವಿಕೃತಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಆಯತಪ್ಪಿ ರೈಲಿಗೆ ಬೀಳ್ತಿದ್ದ ಪ್ರಯಾಣಿಕನ ಪಾಲಿಗೆ ದೇವರಾಗಿ ಬಂದ ಹೋಮ್​'ಗಾರ್ಡ
ಆಯತಪ್ಪಿ ರೈಲಿಗೆ ಬೀಳ್ತಿದ್ದ ಪ್ರಯಾಣಿಕನ ಪಾಲಿಗೆ ದೇವರಾಗಿ ಬಂದ ಹೋಮ್​'ಗಾರ್ಡ
ಕೇಂದ್ರದ ವಿಶೇಷ ವಿಮಾನ ಚೀನಾ ಕಳಿಸಿ ಪಿಪಿಈ ಕಿಟ್ ತರಿಸಲಾಗಿತ್ತು: ಸುಧಾಕರ್
ಕೇಂದ್ರದ ವಿಶೇಷ ವಿಮಾನ ಚೀನಾ ಕಳಿಸಿ ಪಿಪಿಈ ಕಿಟ್ ತರಿಸಲಾಗಿತ್ತು: ಸುಧಾಕರ್
ಮುಸ್ಲಿಮರ ಕೊಲ್ಲುವಂತಹ ದಿನ ಬರುತ್ತದೆ ಎಂದ ಈಶ್ವರಪ್ಪ ವಿರುದ್ಧ ಕೇಸ್ ಬುಕ್​!
ಮುಸ್ಲಿಮರ ಕೊಲ್ಲುವಂತಹ ದಿನ ಬರುತ್ತದೆ ಎಂದ ಈಶ್ವರಪ್ಪ ವಿರುದ್ಧ ಕೇಸ್ ಬುಕ್​!
ಚನ್ನಪಟ್ಟಣದಲ್ಲಿ ಯೋಗೇಶ್ವರ್​​ರನ್ನು ಎದುರಿಸುವವರಿಲ್ಲ: ಬಂಡಿಸಿದ್ದೇಗೌಡ
ಚನ್ನಪಟ್ಟಣದಲ್ಲಿ ಯೋಗೇಶ್ವರ್​​ರನ್ನು ಎದುರಿಸುವವರಿಲ್ಲ: ಬಂಡಿಸಿದ್ದೇಗೌಡ
ಸಿಎಂ ಹೀಗೆಲ್ಲ ಮಾತಾಡುತಿದ್ದರೆ ಜನ ತಲೆ ಕೆಟ್ಟಿದೆ ಅಂತಾರೆ: ಕುಮಾರಸ್ವಾಮಿ
ಸಿಎಂ ಹೀಗೆಲ್ಲ ಮಾತಾಡುತಿದ್ದರೆ ಜನ ತಲೆ ಕೆಟ್ಟಿದೆ ಅಂತಾರೆ: ಕುಮಾರಸ್ವಾಮಿ