AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಚ್ ಬಿಟ್ಟಿದ್ದೇ ನ್ಯೂಜಿಲೆಂಡ್‌ಗೆ ಮುಳುವಾಯ್ತಾ? ಸೋಲಿನ ಬಳಿಕ ಸ್ಯಾಂಟ್ನರ್ ಬೇಸರ

ಕ್ರೈಸ್ಟ್‌ಚರ್ಚ್‌ನಲ್ಲಿ ನಡೆದ ಭಾರತ-ನ್ಯೂಜಿಲೆಂಡ್ 2ನೇ T20 ಪಂದ್ಯದಲ್ಲಿ ಭಾರತ 4 ವಿಕೆಟ್‌ಗಳಿಂದ ರೋಚಕ ಜಯ ಗಳಿಸಿತು. ಮಿಚೆಲ್ ಸ್ಯಾಂಟ್ನರ್ 4 ವಿಕೆಟ್ ಪಡೆದು ಮಿಂಚಿದರೂ, ನ್ಯೂಜಿಲೆಂಡ್ ತಂಡದ ಫೀಲ್ಡಿಂಗ್ ತಪ್ಪುಗಳಿಂದ ಸೋಲು ಕಂಡಿತು. ತಿಲಕ್ ವರ್ಮಾ, ನಮನ್ ಧೀರ್, ನಿತೀಶ್ ಕುಮಾರ್ ರೆಡ್ಡಿ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಸ್ಯಾಂಟ್ನರ್ ಯುವ ಭಾರತೀಯ ಆಟಗಾರರನ್ನು ಶ್ಲಾಘಿಸಿದರು.

ಕ್ಯಾಚ್ ಬಿಟ್ಟಿದ್ದೇ ನ್ಯೂಜಿಲೆಂಡ್‌ಗೆ ಮುಳುವಾಯ್ತಾ? ಸೋಲಿನ ಬಳಿಕ ಸ್ಯಾಂಟ್ನರ್ ಬೇಸರ
Mitchell Santner
ಪೃಥ್ವಿಶಂಕರ
|

Updated on: Oct 24, 2026 | 9:41 PM

Share

ಕ್ರೈಸ್ಟ್‌ಚರ್ಚ್‌ನ ಹ್ಯಾಗ್ಲಿ ಓವಲ್‌ನಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 4 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿತು. ಪಂದ್ಯದಲ್ಲಿ ಸೋಲು ಕಂಡರೂ ನ್ಯೂಜಿಲೆಂಡ್ ನಾಯಕ ಮಿಚೆಲ್ ಸ್ಯಾಂಟ್ನರ್ ತಮ್ಮ ಸ್ಪಿನ್ ಬೌಲಿಂಗ್ ಮೂಲಕ ಗಮನ ಸೆಳೆದರು. ಸ್ಯಾಂಟ್ನರ್ ನಾಲ್ಕು ವಿಕೆಟ್‌ಗಳನ್ನು ಕಬಳಿಸಿ ಭಾರತೀಯ ಬ್ಯಾಟರ್‌ಗಳಿಗೆ ಕಾಟ ಕೊಟ್ಟರು. ಆದರೆ, ಕೊನೆಗೆ ಗೆಲುವು ಮಾತ್ರ ಟೀಂ ಇಂಡಿಯಾ ಪಾಲಾಯಿತು. ಪಂದ್ಯದಲ್ಲಿ ಒಂದು ಹಂತದಲ್ಲಿ ನ್ಯೂಜಿಲೆಂಡ್ ಗೆಲುವು ಸಾಧಿಸುವುದು ಬಹುತೇಕ ಖಚಿತ ಎನ್ನುವಂತಿತ್ತು. ಆದರೆ ಭಾರತದ ಯುವ ಆಟಗಾರರು ಕೊನೆಯವರೆಗೂ ಹೋರಾಡಿ ಕಿವೀಸ್ ತಂಡಕ್ಕೆ ಸೋಲಿನ ರುಚಿ ತೋರಿಸಿದರು.

ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 180 ರನ್ ಗಳಿಸಿತು. ಗ್ಲೆನ್ ಫಿಲಿಪ್ಸ್ 70 ರನ್ ಸಿಡಿಸಿ ತಂಡಕ್ಕೆ ಆಸರೆಯಾದರು. ಆರಂಭದಲ್ಲಿ ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಕಿವೀಸ್ ತಂಡಕ್ಕೆ ಫಿಲಿಪ್ಸ್ ಮತ್ತು ಬೆವನ್ ಜೇಕಬ್ಸ್ ಉತ್ತಮ ಜೊತೆಯಾಟದ ಮೂಲಕ ಚೇತರಿಕೆ ನೀಡಿದರು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಭಾರತ ಕೂಡ ಒಂದು ಹಂತದಲ್ಲಿ ಸಂಕಷ್ಟಕ್ಕೆ ಸಿಲುಕಿತ್ತು. ಆದರೆ ತಿಲಕ್ ವರ್ಮಾ, ನಮನ್ ಧೀರ್ ಮತ್ತು ನಿತೀಶ್ ಕುಮಾರ್ ರೆಡ್ಡಿ ಅವರ ಉತ್ತಮ ಆಟದಿಂದ ಟೀಮ್ ಇಂಡಿಯಾ ರೋಚಕ ಗೆಲುವು ದಾಖಲಿಸಿತು.

ಸೋಲಿಗೆ ಫೀಲ್ಡಿಂಗ್ ತಪ್ಪುಗಳೇ ಕಾರಣ

ಪಂದ್ಯ ಮುಗಿದ ಬಳಿಕ ಮಾತನಾಡಿದ ನ್ಯೂಜಿಲೆಂಡ್ ನಾಯಕ ಮಿಚೆಲ್ ಸ್ಯಾಂಟ್ನರ್ ತಮ್ಮ ತಂಡದ ಫೀಲ್ಡಿಂಗ್ ಬಗ್ಗೆ ಅಸಮಾಧಾನ ಹೊರಹಾಕಿದರು. ಇಂತಹ ಬಲಿಷ್ಠ ತಂಡಗಳ ವಿರುದ್ಧ ಆಡುವಾಗ ಸಣ್ಣಪುಟ್ಟ ತಪ್ಪುಗಳೂ ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ಅವರು ಹೇಳಿದರು. ತಂಡದ ಆಟಗಾರರು ಕ್ಯಾಚ್‌ಗಳನ್ನು ಕೈಬಿಟ್ಟಿದ್ದು ಮತ್ತು ಫೀಲ್ಡಿಂಗ್‌ನಲ್ಲಿ ಮಾಡಿದ ತಪ್ಪುಗಳು ಗೆಲುವಿನ ಅವಕಾಶವನ್ನು ಕಸಿದುಕೊಂಡವು ಎಂದು ಸ್ಯಾಂಟ್ನರ್ ಅಭಿಪ್ರಾಯಪಟ್ಟರು. ಕೈಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಂಡಿದ್ದರೆ ಪಂದ್ಯದ ಫಲಿತಾಂಶವೇ ಬೇರೆಯಾಗಿರುತ್ತಿತ್ತು ಎಂಬರ್ಥದಲ್ಲಿ ಮಾತನಾಡಿದರು.

ವೈಭವ್ ಕ್ಯಾಚ್ ಬಿಟ್ಟ ಜೇಕಬ್ಸ್

ಪಂದ್ಯದ ವೇಳೆ ಬೆವನ್ ಜೇಕಬ್ಸ್, ಮೈಕೆಲ್ ಬ್ರೇಸ್‌ವೆಲ್ ಬೌಲಿಂಗ್‌ನಲ್ಲಿ ಯುವ ಆಟಗಾರ ವೈಭವ್ ಸೂರ್ಯವಂಶಿ ಅವರ ಕ್ಯಾಚ್ ಕೈಬಿಟ್ಟರು. ಈ ವೇಳೆ ಸ್ಯಾಂಟ್ನರ್ ಕೋಪಗೊಂಡ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಆದರೆ ಈ ಅವಕಾಶದ ಲಾಭವನ್ನು ವೈಭವ್ ಹೆಚ್ಚು ಹೊತ್ತು ಬಳಸಿಕೊಳ್ಳಲಿಲ್ಲ. ಅವರು ಕೇವಲ 4 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

ಆದರೂ, ನಿರ್ಣಾಯಕ ಸಮಯದಲ್ಲಿ ಇಂತಹ ಕ್ಯಾಚ್‌ಗಳನ್ನು ಕೈಬಿಡುವುದು ತಂಡಕ್ಕೆ ಹಿನ್ನಡೆಯಾಗುತ್ತದೆ ಎಂಬುದು ಸ್ಯಾಂಟ್ನರ್ ಅಭಿಪ್ರಾಯ. ಕೊನೆಯ ಹಂತದಲ್ಲಿ ಮತ್ತೊಂದು ವಿಕೆಟ್ ಪಡೆಯಲು ಸಾಧ್ಯವಾಗಿದ್ದರೆ ಪಂದ್ಯವನ್ನು ತಮ್ಮ ಪರವಾಗಿ ತಿರುಗಿಸಬಹುದಿತ್ತು ಎಂದರು.

ಯುವ ಆಟಗಾರರ ಆಟಕ್ಕೆ ಸ್ಯಾಂಟ್ನರ್ ಮೆಚ್ಚುಗೆ

ಭಾರತದ ಯುವ ಬ್ಯಾಟರ್‌ಗಳು ಒತ್ತಡದ ಸಂದರ್ಭದಲ್ಲೂ ಉತ್ತಮ ನಿಯಂತ್ರಣದೊಂದಿಗೆ ಬ್ಯಾಟಿಂಗ್ ಮಾಡಿದರು ಎಂದು ಸ್ಯಾಂಟ್ನರ್ ಒಪ್ಪಿಕೊಂಡರು. ತಿಲಕ್ ವರ್ಮಾ, ನಮನ್ ಧೀರ್ ಮತ್ತು ನಿತೀಶ್ ಕುಮಾರ್ ರೆಡ್ಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಇತ್ತ ನ್ಯೂಜಿಲೆಂಡ್ ಬೌಲರ್‌ಗಳು ಆರಂಭದ ಓವರ್‌ಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದರೂ, ಫೀಲ್ಡಿಂಗ್‌ನಲ್ಲಾದ ತಪ್ಪುಗಳು ತಂಡಕ್ಕೆ ಹಿನ್ನಡೆಯಾದವು. ಬ್ಯಾಟಿಂಗ್‌ನಲ್ಲೂ ಆರಂಭದಲ್ಲೇ ಮೂರು ವಿಕೆಟ್ ಕಳೆದುಕೊಂಡಿದ್ದ ನ್ಯೂಜಿಲೆಂಡ್ ತಂಡಕ್ಕೆ ಗ್ಲೆನ್ ಫಿಲಿಪ್ಸ್ ಅವರ ಅರ್ಧಶತಕ ದೊಡ್ಡ ಆಸರೆಯಾಗಿತ್ತು.

ಬ್ಯಾಟಿಂಗ್ ಅಲ್ಲ, ಫೀಲ್ಡಿಂಗ್‌ನಲ್ಲಿ ವಿಶ್ವದಾಖಲೆ ಬರೆದ ತಿಲಕ್ ವರ್ಮಾ!

ಇನ್ನು ಸರಣಿಯ ಮುಂದಿನ ಪಂದ್ಯಗಳ ಬಗ್ಗೆ ಮಾತನಾಡಿದ ಸ್ಯಾಂಟ್ನರ್, ಆಟಗಾರರ ಕೆಲಸದ ಒತ್ತಡವನ್ನು ಗಮನದಲ್ಲಿಟ್ಟುಕೊಂಡು ತಂಡದಲ್ಲಿ ಬದಲಾವಣೆ ಮಾಡುವ ಸಾಧ್ಯತೆಯ ಸುಳಿವನ್ನೂ ನೀಡಿದರು. ಒಟ್ಟಿನಲ್ಲಿ, ಗೆಲುವಿನ ಹೊಸ್ತಿಲಲ್ಲಿದ್ದ ನ್ಯೂಜಿಲೆಂಡ್ ತಂಡ ಫೀಲ್ಡಿಂಗ್ ತಪ್ಪುಗಳಿಂದ ಪಂದ್ಯವನ್ನು ಕೈಚೆಲ್ಲಿದರೆ, ಟೀಂ ಇಂಡಿಯಾ ಯುವ ಆಟಗಾರರ ಹೋರಾಟದಿಂದ ಅಮೋಘ ಗೆಲುವು ತನ್ನದಾಗಿಸಿಕೊಂಡಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ
2 ವರ್ಷ 10 ತಿಂಗಳ ಕಂದನಿಂದ ತಬಲಾ ವಾದನ
2 ವರ್ಷ 10 ತಿಂಗಳ ಕಂದನಿಂದ ತಬಲಾ ವಾದನ
40 ದಿನ ನಂತರ ಪತ್ತೆಯಾದ ಕೆಆರ್‌ಐಡಿಎಲ್ ಎಇಇ ಪರ್ವೀಜ್​ಗೆ ಈಗ ಪೊಲೀಸರ ಗ್ರಿಲ್
40 ದಿನ ನಂತರ ಪತ್ತೆಯಾದ ಕೆಆರ್‌ಐಡಿಎಲ್ ಎಇಇ ಪರ್ವೀಜ್​ಗೆ ಈಗ ಪೊಲೀಸರ ಗ್ರಿಲ್
ಡೈಮಂಡ್ ಟಾಸ್ಕ್​ ವಿಷಯದಲ್ಲಿ ಪಂಚಾಯ್ತಿ ಮಾಡಲು ಬಂದ ಸುದೀಪ್
ಡೈಮಂಡ್ ಟಾಸ್ಕ್​ ವಿಷಯದಲ್ಲಿ ಪಂಚಾಯ್ತಿ ಮಾಡಲು ಬಂದ ಸುದೀಪ್
ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್