AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Squad: ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ

India Squad For Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿ ಅಕ್ಟೋಬರ್ 19 ರಿಂದ ಶುರುವಾಗಲಿದೆ. ಕಾಂಗರೂನಾಡಿನಲ್ಲಿ ನಡೆಯಲಿರುವ ಈ ಸರಣಿಗಾಗಿ ಭಾರತ ಏಕದಿನ ತಂಡವನ್ನು ಪ್ರಕಟಿಸಲಾಗಿದೆ. ಈ ಸರಣಿಯ ಮೂಲಕ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕಂಬ್ಯಾಕ್ ಮಾಡಲಿದ್ದಾರೆ.

India Squad: ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ
Team India
ಝಾಹಿರ್ ಯೂಸುಫ್
|

Updated on:Oct 04, 2025 | 3:15 PM

Share

ಆಸ್ಟ್ರೇಲಿಯಾ ವಿರುದ್ಧದ ಸರಣಿಗಾಗಿ ಭಾರತ ತಂಡವನ್ನು (India Squad) ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಶುಭ್​ಮನ್ ಗಿಲ್ ಮುನ್ನಡೆಸಲಿದ್ದಾರೆ. ಇನ್ನು ಉಪನಾಯಕನಾಗಿ ಶ್ರೇಯಸ್ ಅಯ್ಯರ್ ಕಾಣಿಸಿಕೊಳ್ಳಲಿದ್ದಾರೆ. ವಿಶೇಷ ಎಂದರೆ ಈ ಸರಣಿಯ ಮೂಲಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಮತ್ತೆ ಟೀಮ್ ಇಂಡಿಯಾ ಪರ ಕಣಕ್ಕಿಳಿಯಲಿದ್ದಾರೆ. ಅಂದರೆ ಟಿ20 ಹಾಗೂ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿರುವ ರೋಹಿತ್ ಹಾಗೂ ವಿರಾಟ್ ಚಾಂಪಿಯನ್ಸ್ ಟ್ರೋಫಿ ಫೈನಲ್ ಬಳಿಕ ಭಾರತದ ಪರ ಯಾವುದೇ ಪಂದ್ಯವಾಡಿರಲಿಲ್ಲ. ಇದೀಗ ಆರು ತಿಂಗಳುಗಳ ಬಳಿಕ ಮತ್ತೆ ಬ್ಲೂ ಜೆರ್ಸಿಯಲ್ಲಿ ಕಣಕ್ಕಿಳಿಯಲು ಅಣಿಯಾಗಿದ್ದಾರೆ.

ಇನ್ನು ಈ ಸರಣಿಗಾಗಿ ಆರಂಭಿಕನಾಗಿ ಯಶಸ್ವಿ ಜೈಸ್ವಾಲ್ ಆಯ್ಕೆಯಾಗಿದ್ದಾರೆ. ಇದರ ಜೊತೆಗೆ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕೆಎಲ್ ರಾಹುಲ್ ತಂಡದಲ್ಲಿದ್ದು, ಹೆಚ್ಚುವರಿ ಕೀಪರ್ ಸ್ಥಾನದಲ್ಲಿ ಧ್ರುವ್ ಜುರೆಲ್​ಗೆ ಅವಕಾಶ ನೀಡಲಾಗಿದೆ.

ಇನ್ನುಳಿದಂತೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಣಕ್ಕಿಳಿದಿದ್ದ ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್ ಹಾಗೂ ವಾಷಿಂಗ್ಟನ್ ಸುಂದರ್​ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅದರಂತೆ ಆಸ್ಟ್ರೇಲಿಯಾ ಸರಣಿಗೆ ಭಾರತ ಏಕದಿನ ತಂಡ ಈ ಕೆಳಗಿನಂತಿದೆ…

ಭಾರತ ಏಕದಿನ ತಂಡ : ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಧ್ರುವ್ ಜುರೆಲ್.

ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿಗೆ ಭಾರತ ತಂಡ:

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗಾಗಿ ಭಾರತ ತಂಡವನ್ನು ಘೋಷಿಸಲಾಗಿದೆ. 16 ಸದಸ್ಯರುಗಳ ಈ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಉಪನಾಯಕನಾಗಿ ಶುಭ್​ಮನ್ ಗಿಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಏಷ್ಯಾಕಪ್ ಟೂರ್ನಿಯಲ್ಲಿ ಕಣಕ್ಕಿಳಿದ ತಂಡವನ್ನೇ ಈ ಟೂರ್ನಿಗಾಗಿ ಮುಂದುವರೆಸಲಾಗಿದೆ.

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವರುಣ್ ಚಕ್ರವರ್ತಿ, ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ.

ಭಾರತ ಮತ್ತು ಆಸ್ಟ್ರೇಲಿಯಾ ಸರಣಿ ವೇಳಾಪಟ್ಟಿ:

  • ಏಕದಿನ ಸರಣಿ ವೇಳಾಪಟ್ಟಿ:
  • ಅಕ್ಟೋಬರ್ 19: ಮೊದಲ ಏಕದಿನ ಪಂದ್ಯ ಪರ್ತ್ ಕ್ರೀಡಾಂಗಣ, ಪರ್ತ್
  • ಅಕ್ಟೋಬರ್ 23: ಎರಡನೇ ಏಕದಿನ ಪಂದ್ಯ ಅಡಿಲೇಡ್ ಓವಲ್
  • ಅಕ್ಟೋಬರ್ 25: ಮೂರನೇ ಏಕದಿನ ಪಂದ್ಯ ಸಿಡ್ನಿ ಕ್ರಿಕೆಟ್ ಮೈದಾನ, ಸಿಡ್ನಿ

ಇದನ್ನೂ ಓದಿ: T20 World Cup 2026: ಟಿ20 ವಿಶ್ವಕಪ್​ಗೆ 17 ತಂಡಗಳು ಎಂಟ್ರಿ

  • ಟಿ20 ಸರಣಿ ವೇಳಾಪಟ್ಟಿ:
  • ಅಕ್ಟೋಬರ್ 29: ಮೊದಲ ಟಿ20 ಪಂದ್ಯ ಮನುಕಾ ಓವಲ್, ಕ್ಯಾನ್‌ಬೆರಾ
  • ಅಕ್ಟೋಬರ್ 31: ಎರಡನೇ ಟಿ20 ಪಂದ್ಯ ಮೆಲ್ಬೋರ್ನ್ ಕ್ರಿಕೆಟ್ ಮೈದಾನ
  • ನವೆಂಬರ್ 2,: ಮೂರನೇ ಟಿ20 ಪಂದ್ಯ ಬೆಲ್ಲೆರಿವ್ ಓವಲ್, ಹೋಬಾರ್ಟ್
  • ನವೆಂಬರ್ 6: ನಾಲ್ಕನೇ ಟಿ20 ಪಂದ್ಯ ಗೋಲ್ಡ್ ಕೋಸ್ಟ್ ಕ್ರೀಡಾಂಗಣ, ಕ್ಯಾರಾರಾ
  • ನವೆಂಬರ್ 8: ಐದನೇ ಟಿ20 ಪಂದ್ಯ ದಿ ಗಬ್ಬಾ, ಬ್ರಿಸ್ಬೇನ್

Published On - 2:49 pm, Sat, 4 October 25

Follow Us
ಕಾವ್ಯಾನ ಮದುವೆ ಆಗಲ್ಲ: ಎಲ್ಲರ ಎದುರು ನೇರವಾಗಿ ಹೇಳಿದ ಗಿಲ್ಲಿ ನಟ
ಕಾವ್ಯಾನ ಮದುವೆ ಆಗಲ್ಲ: ಎಲ್ಲರ ಎದುರು ನೇರವಾಗಿ ಹೇಳಿದ ಗಿಲ್ಲಿ ನಟ
ಬ್ಯಾಡಗಿ ಮೆಣಸಿನ ರಫ್ತಿಗೂ ತಟ್ಟಿದ ಮಧ್ಯಪ್ರಾಚ್ಯ ಯುದ್ಧದ ಬಿಸಿ
ಬ್ಯಾಡಗಿ ಮೆಣಸಿನ ರಫ್ತಿಗೂ ತಟ್ಟಿದ ಮಧ್ಯಪ್ರಾಚ್ಯ ಯುದ್ಧದ ಬಿಸಿ
ಮದುವೆ ಮಾಡಿಕೊಂಡು ನೇರವಾಗಿ ದರ್ಶನ್ ಮನೆ ಮುಂದೆ ಬಂದ ನವ ಜೋಡಿ
ಮದುವೆ ಮಾಡಿಕೊಂಡು ನೇರವಾಗಿ ದರ್ಶನ್ ಮನೆ ಮುಂದೆ ಬಂದ ನವ ಜೋಡಿ
ಡಿಕೆ ಶಿವಕುಮಾರ್ ಶಾಕಿಂಗ್ ಮಾತು: ಮತ್ತೆ ಜೋರಾದ ಅಧಿಕಾರ ಹಂಚಿಕೆ ಬಿಕ್ಕಟ್ಟು
ಡಿಕೆ ಶಿವಕುಮಾರ್ ಶಾಕಿಂಗ್ ಮಾತು: ಮತ್ತೆ ಜೋರಾದ ಅಧಿಕಾರ ಹಂಚಿಕೆ ಬಿಕ್ಕಟ್ಟು
‘ಬಾಸ್’ ಚಿತ್ರದಲ್ಲಿ ರೇಣುಕಾಸ್ವಾಮಿ ಸಾವಿನ ಕಥೆ? ಸ್ಪಷ್ಟನೆ ನೀಡಿದ ನಿರ್ದೇಶಕ
‘ಬಾಸ್’ ಚಿತ್ರದಲ್ಲಿ ರೇಣುಕಾಸ್ವಾಮಿ ಸಾವಿನ ಕಥೆ? ಸ್ಪಷ್ಟನೆ ನೀಡಿದ ನಿರ್ದೇಶಕ
ಮೈದಾನದಲ್ಲಿ ಪತ್ನಿಗೆ ಲಿಪ್‌ಲಾಕ್ ಮಾಡಿದ ಕ್ರಿಕೆಟಿಗ
ಮೈದಾನದಲ್ಲಿ ಪತ್ನಿಗೆ ಲಿಪ್‌ಲಾಕ್ ಮಾಡಿದ ಕ್ರಿಕೆಟಿಗ
ದಳಪತಿ ವಿಜಯ್​​ಗೆ ಮತ್ತೆ ಹೆಚ್ಚಿತು ಸಂಕಷ್ಟ; ಎದುರಿಸಬೇಕಿದೆ ವಿಚಾರಣೆ
ದಳಪತಿ ವಿಜಯ್​​ಗೆ ಮತ್ತೆ ಹೆಚ್ಚಿತು ಸಂಕಷ್ಟ; ಎದುರಿಸಬೇಕಿದೆ ವಿಚಾರಣೆ
ಬೆಂಗಳೂರಿನ ಕೆಟ್ಟ ಸ್ಥಿತಿ ನಮಗೆ ಬಂದಿಲ್ಲ
ಬೆಂಗಳೂರಿನ ಕೆಟ್ಟ ಸ್ಥಿತಿ ನಮಗೆ ಬಂದಿಲ್ಲ
ಸಿಗರೇಟ್‌ಗೆ ಗಾಂಜಾ ತುಂಬಿಸಿ ನಶೆ ಏರಿಸುತ್ತಿದ್ದ ಇಬ್ಬರು ಖಾಕಿ ಬಲೆಗೆ
ಸಿಗರೇಟ್‌ಗೆ ಗಾಂಜಾ ತುಂಬಿಸಿ ನಶೆ ಏರಿಸುತ್ತಿದ್ದ ಇಬ್ಬರು ಖಾಕಿ ಬಲೆಗೆ
ಚಿನ್ನ ಕದ್ದ ಕ್ಯಾಬ್​​ ಚಾಲಕ ಲಾಕ್: ದರೋಡೆ ನಡೆಸಿದ ರೀತಿಯೇ ಇಂಟರೆಸ್ಟಿಂಗ್​!
ಚಿನ್ನ ಕದ್ದ ಕ್ಯಾಬ್​​ ಚಾಲಕ ಲಾಕ್: ದರೋಡೆ ನಡೆಸಿದ ರೀತಿಯೇ ಇಂಟರೆಸ್ಟಿಂಗ್​!