India Odi Squad: ಟೀಮ್ ಇಂಡಿಯಾದಲ್ಲಿ 5 ಆಲ್​ರೌಂಡರ್ಸ್​, 6 ಬೌಲರ್​ಗಳು..!

India Odi Squad: ವಿಕೆಟ್ ಕೀಪರ್ ಸ್ಥಾನದಲ್ಲಿ ಈ ಬಾರಿ ಅವಕಾಶ ಪಡೆದಿರುವುದು ಇಶಾನ್ ಕಿಶನ್ ಮಾತ್ರ. ಇದಾಗ್ಯೂ ಅನಿವಾರ್ಯ ಸಂದರ್ಭಗಳಲ್ಲಿ ಕೀಪಿಂಗ್ ಜವಾಬ್ದಾರಿ ನಿರ್ವಹಿಸಲು ಕೆಎಲ್ ರಾಹುಲ್ ಕೂಡ ತಂಡದಲ್ಲಿದ್ದಾರೆ.

India Odi Squad: ಟೀಮ್ ಇಂಡಿಯಾದಲ್ಲಿ 5 ಆಲ್​ರೌಂಡರ್ಸ್​, 6 ಬೌಲರ್​ಗಳು..!
ಸಾಂದರ್ಭಿಕ ಚಿತ್ರ
Edited By:

Updated on: Feb 19, 2023 | 10:59 PM

India vs Australia: ಭಾರತ-ಆಸ್ಟ್ರೇಲಿಯಾ (IND vs AUS) ನಡುವಣ ಏಕದಿನ ಸರಣಿಗಾಗಿ ಟೀಮ್ ಇಂಡಿಯಾವನ್ನು (Team India) ಪ್ರಕಟಿಸಲಾಗಿದೆ. 18 ಸದಸ್ಯರ ಈ ಬಳಗದಲ್ಲಿ ಐವರು ಆಲ್​ರೌಂಡರ್​ಗಳಿದ್ದರೆ, ಆರು ಬೌಲರ್​ಗಳಿದ್ದಾರೆ. ಇನ್ನು ವಿಕೆಟ್ ಕೀಪರ್​ ಆಗಿ ಸ್ಥಾನ ಪಡೆದಿರುವುದು ಏಕೈಕ ಆಟಗಾರ. ಇನ್ನುಳಿದಂತೆ 6 ಬ್ಯಾಟ್ಸ್​ಮನ್​ಗಳು ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅದರಂತೆ ಇಲ್ಲಿ ಆರಂಭಿಕರಾಗಿ ರೋಹಿತ್ ಶರ್ಮಾ (Rohit Sharma) ಹಾಗೂ ಶುಭ್​ಮನ್​ ಗಿಲ್ ಆಯ್ಕೆಯಾಗಿದ್ದಾರೆ. ಇನ್ನು ಮೂರನೇ ಕ್ರಮಾಂಕದ ಬ್ಯಾಟರ್​ ಆಗಿ ವಿರಾಟ್ ಕೊಹ್ಲಿ (Virat Kohli) ಸ್ಥಾನ ಪಡೆದಿದ್ದಾರೆ. ಹಾಗೆಯೇ ಶ್ರೇಯಸ್ ಅಯ್ಯರ್ ಹಾಗೂ ಕೆಎಲ್ ರಾಹುಲ್ ಕೂಡ ಬ್ಯಾಟರ್​ಗಳಾಗಿ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.

ಆಲ್​ರೌಂಡರ್ ವಿಭಾಗದಲ್ಲಿ ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್ ಹಾಗೂ ಅಕ್ಷರ್ ಪಟೇಲ್ ಟೀಮ್ ಇಂಡಿಯಾದಲ್ಲಿದ್ದಾರೆ. ಅಂದರೆ ಇಲ್ಲಿ ಇಬ್ಬರು ವೇಗದ ಬೌಲಿಂಗ್ ಆಲ್​ರೌಂಡರ್​ಗಳಾಗಿ ಹಾರ್ದಿಕ್ ಪಾಂಡ್ಯ ಹಾಗೂ ಶಾರ್ದೂಲ್ ಕಾಣಿಸಿಕೊಂಡರೆ, ಉಳಿದವರು ಸ್ಪಿನ್ ಆಲ್​ರೌಂಡರ್​ಗಳಾಗಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಅದೇ ರೀತಿ ವಿಕೆಟ್ ಕೀಪರ್ ಸ್ಥಾನದಲ್ಲಿ ಈ ಬಾರಿ ಅವಕಾಶ ಪಡೆದಿರುವುದು ಇಶಾನ್ ಕಿಶನ್ ಮಾತ್ರ. ಇದಾಗ್ಯೂ ಅನಿವಾರ್ಯ ಸಂದರ್ಭಗಳಲ್ಲಿ ಕೀಪಿಂಗ್ ಜವಾಬ್ದಾರಿ ನಿರ್ವಹಿಸಲು ಕೆಎಲ್ ರಾಹುಲ್ ಕೂಡ ತಂಡದಲ್ಲಿದ್ದಾರೆ. ಇನ್ನು ಬೌಲಿಂಗ್ ಲೈನಪ್​ಗಾಗಿ ಟೀಮ್ ಇಂಡಿಯಾದಲ್ಲಿ 6 ಮಂದಿ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ
IND vs AUS: ರೋಹಿತ್ ಶರ್ಮಾ ಬದಲಿಗೆ ಹಾರ್ದಿಕ್ ಪಾಂಡ್ಯ​ ನಾಯಕ: ಕಾರಣ ತಿಳಿಸಿದ ಬಿಸಿಸಿಐ
World Record: ಮೆಕಲಂ ವಿಶ್ವ ದಾಖಲೆ ಉಡೀಸ್: ಬೆನ್​ ಸ್ಟೋಕ್ಸ್ ಹೊಸ​ ಸಿಕ್ಸರ್ ಕಿಂಗ್
IPL 2023: ಐಪಿಎಲ್​ ಟೂರ್ನಿಯಿಂದ ಕನ್ನಡಿಗ ಪ್ರಸಿದ್ಧ್ ಕೃಷ್ಣ ಔಟ್..!
IPL 2023 – WPL 2023: ತಂಡದಲ್ಲಿ ಕಿಂಗ್ ಅ್ಯಂಡ್ ಕ್ವೀನ್: ಈ ಸಲ ಕಪ್ ನಮ್ದೆ ಎಂದ RCB ಫ್ಯಾನ್ಸ್​

ಇದನ್ನೂ ಓದಿ: IND vs AUS: ರೋಹಿತ್ ಶರ್ಮಾ ಬದಲಿಗೆ ಹಾರ್ದಿಕ್ ಪಾಂಡ್ಯ​ ನಾಯಕ: ಕಾರಣ ತಿಳಿಸಿದ ಬಿಸಿಸಿಐ

ಅದರಂತೆ ಪರಿಪೂರ್ಣ ಸ್ಪಿನ್ನರ್​ಗಳಾಗಿ ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಾಲ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ವೇಗಿಗಳ ವಿಭಾಗದಲ್ಲಿ ಮೊಹಮ್ಮದ್ ಶಮಿ, ಉಮ್ರಾನ್ ಮಲಿಕ್ ಹಾಗೂ ಮೊಹಮ್ಮದ್ ಸಿರಾಜ್ ಇದ್ದಾರೆ. ಇನ್ನು ಎಡಗೈ ವೇಗಿಯಾಗಿ ಜಯದೇವ್ ಉನಾದ್ಕಟ್ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ.

ಭಾರತ ಏಕದಿನ ತಂಡ:

ಹಾರ್ದಿಕ್ ಪಾಂಡ್ಯ (ನಾಯಕ-ಮೊದಲ ಏಕದಿನ) ರೋಹಿತ್ ಶರ್ಮಾ (ಮೊದಲ ಪಂದ್ಯಕ್ಕೆ ಅಲಭ್ಯ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಜಯದೇವ್ ಉನಾದ್ಕಟ್.

ಭಾರತ-ಆಸ್ಟ್ರೇಲಿಯಾ ಏಕದಿನ ಸರಣಿ ವೇಳಾಪಟ್ಟಿ:

  1. ಮಾರ್ಚ್ 17- ಮೊದಲ ಏಕದಿನ ಪಂದ್ಯ (ವಾಂಖೆಡೆ ಸ್ಟೇಡಿಯಂ, ಮುಂಬೈ)
  2. ಮಾರ್ಚ್ 19- ಎರಡನೇ ಏಕದಿನ ಪಂದ್ಯ (ವೈಎಸ್​ಆರ್ ಸ್ಟೇಡಿಯಂ, ವಿಶಾಖಪಟ್ಟಣಂ)
  3. ಮಾರ್ಚ್ 22- ಮೂರನೇ ಏಕದಿನ ಪಂದ್ಯ (ಎಂಎ ಚಿದಂಬರಂ ಸ್ಟೇಡಿಯಂ, ಚೆನ್ನೈ).