IND vs SA: ಟೀಮ್ ಇಂಡಿಯಾಗೆ ಶಿಖರ್ ಧವನ್ ನಾಯಕ, ಸಂಜು ಸ್ಯಾಮ್ಸನ್ ಉಪನಾಯಕ..!

India Odi Squad For South Africa: ಪ್ರಸ್ತುತ ಭಾರತ ಎ ತಂಡದಲ್ಲಿರುವ ಬಹುತೇಕ ಆಟಗಾರರು ಸೌತ್ ಆಫ್ರಿಕಾ ಸರಣಿಗೆ ಆಯ್ಕೆಯಾಗುವುದು ಖಚಿತ. ಏಕೆಂದರೆ ಭಾರತ-ಎ ತಂಡದಲ್ಲಿ ಹಲವು ಸ್ಟಾರ್ ಆಟಗಾರರಿದ್ದು, ಇವರನ್ನೇ ಏಕದಿನ ಸರಣಿಗೆ ಆಯ್ಕೆ ಮಾಡಲಿದೆ.

IND vs SA: ಟೀಮ್ ಇಂಡಿಯಾಗೆ ಶಿಖರ್ ಧವನ್ ನಾಯಕ, ಸಂಜು ಸ್ಯಾಮ್ಸನ್ ಉಪನಾಯಕ..!
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಝಾಹಿರ್ ಯೂಸುಫ್

Updated on: Sep 27, 2022 | 11:25 AM

ಭಾರತ – ಸೌತ್ ಆಫ್ರಿಕಾ (India vs South Africa) ನಡುವಣ ಟಿ20 ಸರಣಿ ಮುಕ್ತಾಯದ ಬೆನ್ನಲ್ಲೇ 3 ಪಂದ್ಯಗಳ ಏಕದಿನ ಸರಣಿ ಆಡಬೇಕಿದೆ. ಆದರೆ ಅಕ್ಟೋಬರ್ ಮೊದಲ ವಾರದಲ್ಲೇ ಟೀಮ್ ಇಂಡಿಯಾ (Team India) ಆಟಗಾರರು ಟಿ20 ವಿಶ್ವಕಪ್​ಗೆ (T20 World Cup 2022) ತೆರಳುವುದು ಬಹುತೇಕ ಖಚಿತವಾಗಿದೆ. ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಬದಲಿ ಟೀಮ್ ಇಂಡಿಯಾವನ್ನು ಆಯ್ಕೆ ಮಾಡಲಿದೆ ಎಂದು ವರದಿಯಾಗಿದೆ. ಅದರಂತೆ ತಂಡದ ನಾಯಕನಾಗಿ ಮತ್ತೆ ಶಿಖರ್ ಧವನ್ ಕಾಣಿಸಿಕೊಳ್ಳುವುದು ಖಚಿತ. ಈ ಹಿಂದೆ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ನಾಯಕರಾಗಿ ಕಾಣಿಸಿಕೊಂಡ ಧವನ್ ಸೌತ್ ಆಫ್ರಿಕಾ ವಿರುದ್ಧ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.

ಇನ್ನು ಟೀಮ್ ಇಂಡಿಯಾ ಟಿ20 ತಂಡದಿಂದ ಹೊರಗುಳಿದಿರುವ ಸಂಜು ಸ್ಯಾಮ್ಸನ್​ಗೆ ಉಪನಾಯಕನ ಪಟ್ಟ ಸಿಗುವುದು ಬಹುತೇಕ ಖಚಿತವಾಗಿದೆ. ಏಕೆಂದರೆ ಪ್ರಸ್ತುತ ಭಾರತ ಎ ತಂಡದ ನಾಯಕರಾಗಿ ಕಾಣಿಸಿಕೊಂಡಿರುವ ಸ್ಯಾಮ್ಸನ್ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲೂ ಆಡಲಿದ್ದಾರೆ. ಹೀಗಾಗಿ ವೈಸ್ ಕ್ಯಾಪ್ಟನ್ ಜವಾಬ್ದಾರಿಯೊಂದಿಗೆ ಸ್ಯಾಮ್ಸನ್ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇವರಲ್ಲದೆ ಪ್ರಸ್ತುತ ಭಾರತ ಎ ತಂಡದಲ್ಲಿರುವ ಬಹುತೇಕ ಆಟಗಾರರು ಸೌತ್ ಆಫ್ರಿಕಾ ಸರಣಿಗೆ ಆಯ್ಕೆಯಾಗುವುದು ಖಚಿತ. ಏಕೆಂದರೆ ಭಾರತ-ಎ ತಂಡದಲ್ಲಿ ಹಲವು ಸ್ಟಾರ್ ಆಟಗಾರರಿದ್ದು, ಇವರನ್ನೇ ಏಕದಿನ ಸರಣಿಗೆ ಆಯ್ಕೆ ಮಾಡಲಿದೆ. ಇನ್ನು ತಂಡದ ಕೋಚ್ ಆಗಿ ರಾಹುಲ್ ದ್ರಾವಿಡ್ ಬದಲಿಗೆ ವಿವಿಎಸ್​ ಲಕ್ಷ್ಮಣ್ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ
Image
2007ರ ಟಿ20 ವಿಶ್ವಕಪ್ ಫೈನಲ್‌ ಪಂದ್ಯದ ಹೀರೋಗಳು ಈಗ ಏನ್ಮಾಡ್ತಿದ್ದಾರೆ ಗೊತ್ತಾ?
Image
Team India New Jersey: 25 ಕ್ಕೂ ಹೆಚ್ಚು ಬಾರಿ ಜೆರ್ಸಿ ಬದಲಿಸಿದ ಟೀಮ್ ಇಂಡಿಯಾ: ಇಲ್ಲಿದೆ ಫೋಟೋಸ್
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ದ್ರಾವಿಡ್ ಟೀಮ್ ಇಂಡಿಯಾ ಜೊತೆ ಟಿ20 ವಿಶ್ವಕಪ್​ಗೆ ಪ್ರಯಾಣ ಬೆಳೆಸಲಿದ್ದು, ಹೀಗಾಗಿ ಲಕ್ಷ್ಮಣ್ ಅವರನ್ನು ಮುಖ್ಯ ಕೋಚ್ ಆಗಿ ಆಯ್ಕೆ ಮಾಡಲಿದೆ. ಈ ಹಿಂದೆ ರಾಹುಲ್ ದ್ರಾವಿಡ್ ಅನುಪಸ್ಥಿತಿಯಲ್ಲಿ ಐರ್ಲೆಂಡ್ ವಿರುದ್ಧದ ಸರಣಿಯಲ್ಲಿ ಲಕ್ಷ್ಮನ್ ಕೋಚ್ ಆಗಿದ್ದರು. ಅದರಂತೆ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಸಂಭಾವ್ಯ ಭಾರತ ತಂಡ ಹೀಗಿರಲಿದೆ…

ಶಿಖರ್ ಧವನ್ (ನಾಯಕ), ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ಪೃಥ್ವಿ ಶಾ, ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ರಾಹುಲ್ ತ್ರಿಪಾಠಿ, ರಜತ್ ಪಾಟಿದಾರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಉಮ್ರಾನ್ ಮಲಿಕ್, ಪ್ರಸಿದ್ಧ್ ಕೃಷ್ಣ , ಕುಲದೀಪ್ ಸೇನ್

ಭಾರತ-ಸೌತ್ ಆಫ್ರಿಕಾ ಏಕದಿನ ಸರಣಿಯ ವೇಳಾಪಟ್ಟಿ:

  1. ಅಕ್ಟೋಬರ್ 6- ಮೊದಲ ಏಕದಿನ ಪಂದ್ಯ (ಲಕ್ನೋ)
  2. ಅಕ್ಟೋಬರ್ 9- 2ನೇ ಏಕದಿನ ಪಂದ್ಯ (ರಾಂಚಿ)
  3. ಅಕ್ಟೋಬರ್ 11- 3ನೇ ಏಕದಿನ ಪಂದ್ಯ (ದೆಹಲಿ)
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ