AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India ODI World Cup 2023 Squad: ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಗೆ ಭಾರತ ತಂಡ ಪ್ರಕಟ: ಇಲ್ಲಿದೆ ನೋಡಿ 15 ಸದಸ್ಯರ ಪಟ್ಟಿ

India Team for ICC ODI World Cup 2023: ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟವಾಗಿದೆ. ಅಕ್ಟೋಬರ್ 5 ರಿಂದ ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿ ಆರಂಭವಾಗಲಿದೆ. ಇದೀಗ ನಾಯಕ ರೋಹಿತ್ ಶರ್ಮಾ ಮತ್ತು ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಜೊತೆಯಾಗಿ ತಂಡವನ್ನು ಹೆಸರಿಸಿದ್ದಾರೆ.

India ODI World Cup 2023 Squad: ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಗೆ ಭಾರತ ತಂಡ ಪ್ರಕಟ: ಇಲ್ಲಿದೆ ನೋಡಿ 15 ಸದಸ್ಯರ ಪಟ್ಟಿ
India ODI World Cup 2023 Squad
Vinay Bhat
|

Updated on:Sep 05, 2023 | 1:45 PM

Share

ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವಕಪ್ 2023 (ICC ODI World Cup) ಟೂರ್ನಿಗೆ ಭಾರತ ತಂಡ ಪ್ರಕಟವಾಗಿದೆ. ಅಕ್ಟೋಬರ್ 5 ರಿಂದ ಆರಂಭವಾಗಲಿರುವ ವಿಶ್ವಕಪ್ ಮಹಾಸಮರಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 15 ಸದಸ್ಯರ ಟೀಮ್ ಇಂಡಿಯಾವನ್ನು ಹೆಸರಿಸಿದೆ. ಭಾರತದ ನಾಯಕ ರೋಹಿತ್ ಶರ್ಮಾ ಮತ್ತು ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಕ್ಯಾಂಡಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಜೊತೆಯಾಗಿ ತಂಡವನ್ನು ಹೆಸರಿಸಿದ್ದಾರೆ. ಕೆಎಲ್ ರಾಹುಲ್ ಭಾರತ ತಂಡದ ಪ್ರಮುಖ ವಿಕೆಟ್-ಕೀಪರ್ ಬ್ಯಾಟರ್ ಆಗಿ ಆಯ್ಕೆ ಆಗಿದ್ದು, ಸಂಜು ಸ್ಯಾಮ್ಸನ್ ಅವರನ್ನು ಕೈಬಿಡಲಾಗಿದೆ.

ಏಷ್ಯಾಕಪ್ 2023 ಕ್ಕಾಗಿ ಪ್ರಸ್ತುತ ಶ್ರೀಲಂಕಾದಲ್ಲಿರುವ ಸಂಜು ಸ್ಯಾಮ್ಸನ್, ತಿಲಕ್ ವರ್ಮಾ ಮತ್ತು ಪ್ರಸಿದ್ಧ್ ಕೃಷ್ಣ ಅವರು ಭಾರತ ತಂಡದ ವಿಶ್ವಕಪ್ ಪಟ್ಟಿಯಿಂದ ಹೊರಗುಳಿದಿದ್ದಾರೆ. ಭರ್ಜರಿ ಫಾರ್ಮ್​ನಲ್ಲಿರುವ ಇಶಾನ್ ಕಿಶನ್ ಬ್ಯಾಕಪ್ ವಿಕೆಟ್ ಕೀಪರ್ ಆಗಿದ್ದಾರೆ. ಟೀಮ್ ಇಂಡಿಯಾದ ಬ್ಯಾಟಿಂಗ್ ಶಕ್ತಿಯನ್ನು ಹೆಚ್ಚಿಸುವ ದೃಷ್ಟಿಯಿಂದ ವಾಷಿಂಗ್ಟನ್ ಸುಂದರ್ ಮತ್ತು ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಇಬ್ಬರನ್ನೂ ಕೈಬಿಡಲಾಗಿದೆ. ಆಲ್‌ರೌಂಡರ್‌ಗಳಾದ ಅಕ್ಷರ್ ಪಟೇಲ್ ಮತ್ತು ಶಾರ್ದೂಲ್ ಠಾಕೂರ್ ಸ್ಥಾನ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ
Image
ನೇಪಾಳ ಆಟಗಾರನ ಕನಸನ್ನು ನನಸು ಮಾಡಿದ ಕೊಹ್ಲಿ
Image
ಏಷ್ಯಾಕಪ್​ನಲ್ಲಿಂದು ಲಂಕಾ-ಅಫ್ಘಾನ್ ಮುಖಾಮುಖಿ: ಸೂಪರ್-4 ನತ್ತ ಶನಕಾ ಪಡೆ
Image
ಒಂದೇ ಪಂದ್ಯದಲ್ಲಿ ಬರೋಬ್ಬರಿ ನಾಲ್ಕು ದಾಖಲೆ ಬರೆದ ರೋಹಿತ್ ಶರ್ಮಾ
Image
ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಇಂದು ಭಾರತ ತಂಡ ಪ್ರಕಟ: ಎಷ್ಟು ಗಂಟೆಗೆ?

ವಿಶ್ವಕಪ್​ಗೆ ಬಿಸಿಸಿಐ ಪ್ರಕಟಿಸಿರುವ ಭಾರತ ತಂಡ:

ಕೆಎಲ್ ರಾಹುಲ್ ಫಿಟ್ ಆಗಿದ್ದಾರೆ ಎಂದು ಆಯ್ಕೆ ಸಮಿತಿ ಅಧ್ಯಕ್ಷ ಅಗರ್ಕರ್ ಹೇಳಿದ್ದಾರೆ. ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದರೂ ಸಂಪೂರ್ಣ ಫಿಟ್ ಇಲ್ಲದ ಕಾರಣ ಏಷ್ಯಾಕಪ್​ನ ಮೊದಲ ಎರಡು ಪಂದ್ಯಗಳಲ್ಲಿ ಇವರು ಆಡಿರಲಿಲ್ಲ. ಇದೀಗ ಶ್ರೀಲಂಕಾಕ್ಕೆ ಪ್ರಯಾಣ ಬೆಳೆಸಿರುವ ರಾಹುಲ್ ಮುಂದಿನ ಪಂದ್ಯಕ್ಕೆ ಲಭ್ಯರಾಗಿ ವಿಶ್ವಕಪ್​ಗೆ ತಯಾರಾಗಲಿದ್ದಾರೆ.

India vs Pakistan: ಭಾರತ-ಪಾಕಿಸ್ತಾನ್ ನಡುವಣ 2ನೇ ಮ್ಯಾಚ್​ಗೆ ಡೇಟ್ ಫಿಕ್ಸ್

ಇನ್ನು ಸೂರ್ಯಕುಮಾರ್ ಯಾದವ್ ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದಾರೆ. ಅದ್ಭುತ ಫಾರ್ಮ್​ನಲ್ಲಿ ಇಲ್ಲದಿದ್ದರೂ ಇವರನ್ನು ಆಯ್ಕೆ ಮಾಡಲಾಗಿದೆ. ಶ್ರೇಯಸ್ ಅಯ್ಯರ್ ಇರುವ ಕಾರಣ ಸೂರ್ಯಕುಮಾರ್​ಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಸಿಗುವುದು ಅನುಮಾನ. ಸ್ಪಿನ್ ವಿಭಾಗದಲ್ಲಿ ರವೀಂದ್ರ ಜಡೇಜಾ ಭಾರತದ ಮೊದಲ ಆಯ್ಕೆಯಾಗಿದ್ದು, ಯುಜ್ವೇಂದ್ರ ಚಹಲ್ ಅವರನ್ನು ಪರಿಗಣಿಸಿಲ್ಲ. ಬದಲಾಗಿ ಕುಲ್ದೀಪ್ ಯಾದವ್ ಆಯ್ಕೆ ಆಗಿದ್ದಾರೆ. ಹಾರ್ದಿಕ್ ಪಾಂಡ್ಯ ಕೂಡ ಇದ್ದಾರೆ. ವೇಗಿಗಳ ಸಾಲಿನಲ್ಲಿ ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಇದ್ದಾರೆ.

ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ತಂಡ ಇಲ್ಲಿದೆ:

ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಥಾಕೂರ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:33 pm, Tue, 5 September 23

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ