AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kedar Jadhav: ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯ ನಡೆಯಲ್ಲ..!

Asia Cup 2025: ಯುಎಇನಲ್ಲಿ ನಡೆಯಲಿರುವ ಈ ಬಾರಿಯ ಏಷ್ಯಾಕಪ್​ನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳಲ್ಲಿ ಭಾರತ, ಪಾಕಿಸ್ತಾನ್, ಒಮಾನ್ ಮತ್ತು ಯುಎಇ ಗ್ರೂಪ್ ಎ ನಲ್ಲಿದ್ದರೆ, ಬಾಂಗ್ಲಾದೇಶ್, ಅಫ್ಘಾನಿಸ್ತಾನ್, ಹಾಂಗ್​ ಕಾಂಗ್ ಹಾಗೂ ಶ್ರೀಲಂಕಾ ಬಿ ಗ್ರೂಪ್​ನಲ್ಲಿದೆ. ಅದರಂತೆ ಮೊದಲ ಸುತ್ತಿನಲ್ಲಿ ಟೀಮ್ ಇಂಡಿಯಾ ಪಾಕಿಸ್ತಾನ್, ಒಮಾನ್ ಹಾಗೂ ಯುಎಇ ವಿರುದ್ಧ ಕಣಕ್ಕಿಳಿಯಲಿದೆ.

Kedar Jadhav: ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯ ನಡೆಯಲ್ಲ..!
Ind Vs Pak
ಝಾಹಿರ್ ಯೂಸುಫ್
|

Updated on: Aug 18, 2025 | 2:14 PM

Share

ಕ್ರಿಕೆಟ್ ಅಂಗಳದ ಹೈವೋಲ್ಟೇಜ್ ಕದನಕ್ಕೆ ವೇದಿಕೆ ಸಿದ್ಧವಾಗಿದೆ. ಸೆಪ್ಟೆಂಬರ್ 14 ರಂದು ದುಬೈನಲ್ಲಿ ನಡೆಯಲಿರುವ ಏಷ್ಯಾಕಪ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗಲಿದೆ. ಆದರೆ ಈ ಪಂದ್ಯದಿಂದ ಭಾರತ ತಂಡ ಹಿಂದೆ ಸರಿಯುವುದು ಖಚಿತ ಎಂದಿದ್ದಾರೆ ಟೀಮ್ ಇಂಡಿಯಾದ ಮಾಜಿ ಆಟಗಾರ ಕೇದಾರ್ ಜಾಧವ್.

ಎಎನ್​ಐ ಜೊತೆ ಮಾತನಾಡಿದ ಕೇದಾರ್ ಜಾಧವ್​, ನನ್ನ ಪ್ರಕಾರ ಭಾರತ ತಂಡವು ಪಾಕಿಸ್ತಾನ್ ವಿರುದ್ಧ ಯಾವುದೇ ಪಂದ್ಯವನ್ನು ಆಡಬಾರದು. ಇನ್ನು ಪಾಕ್ ವಿರುದ್ಧ ಎಲ್ಲೇ ಆಡಿದರೂ ಟೀಮ್ ಇಂಡಿಯಾ ಯಾವಾಗಲೂ ಗೆಲ್ಲುತ್ತದೆ. ಇದಾಗ್ಯೂ ನಾವು ಅವರ ವಿರುದ್ಧ ಆಡಲೇಬಾರದು ಎಂಬುದು ನನ್ನ ಅನಿಸಿಕೆ.

ಅಲ್ಲದೆ ಈ ಪಂದ್ಯವನ್ನು ಭಾರತ ತಂಡ ತಿರಸ್ಕರಿಸುತ್ತೆ ಎಂಬ ವಿಶ್ವಾಸವಿದೆ. ಟೀಮ್ ಇಂಡಿಯಾ ಪಾಕಿಸ್ತಾಣ್ ವಿರುದ್ಧ ಆಡಲ್ಲ ಎಂಬುದನ್ನು ನಾನು ಆತ್ಮವಿಶ್ವಾಸದಿಂದ ಹೇಳಬಲ್ಲೆ … ಆಪರೇಷನ್ ಸಿಂಧೂರ್ ಯಶಸ್ವಿಯಾಗಿದೆ, ಇದು ಸಹ ಯಶಸ್ವಿಯಾಗಲಿದೆ ಎಂದು ಕೇದಾರ್ ಜಾಧವ್ ಹೇಳಿದ್ದಾರೆ.

ಅಂದರೆ ಕೇದಾರ್ ಜಾಧವ್ ಪ್ರಕಾರ, ಪಾಕಿಸ್ತಾನ್ ವಿರುದ್ಧದ ಪಂದ್ಯದಿಂದ ಟೀಮ್ ಇಂಡಿಯಾ ಹಿಂದೆ ಸರಿಯಲಿದೆ. ಇತ್ತೀಚೆಗೆ ವರ್ಲ್ಡ್ ಚಾಂಪಿಯನ್ಸ್​ ಆಫ್​ ಲೆಜೆಂಡ್ಸ್ ಟೂರ್ನಿಯಲ್ಲಿ ಪಾಕಿಸ್ತಾನ್ ಚಾಂಪಿಯನ್ಸ್ ವಿರುದ್ಧದ ಕಣಕ್ಕಿಳಿಯಲು ಇಂಡಿಯಾ ಚಾಂಪಿಯನ್ಸ್ ತಂಡ ನಿರಾಕರಿಸಿತ್ತು.

ಪಾಕಿಸ್ತಾನ್ ಚಾಂಪಿಯನ್ಸ್ ವಿರುದ್ಧದ ಲೀಗ್ ಸುತ್ತಿನ ಪಂದ್ಯದಿಂದ ಹಿಂದೆ ಸರಿದಿದ್ದ ಇಂಡಿಯಾ ಚಾಂಪಿಯನ್ಸ್, ಆ ಬಳಿಕ ಪಾಕ್ ವಿರುದ್ಧ ಸೆಮಿಫೈನಲ್ ಆಡಲು ಕೂಡ ನಿರಾಕರಿಸಿತ್ತು. ಅತ್ತ ಸೆಮಿಫೈನಲ್ ಪಂದ್ಯದಿಂದ ಇಂಡಿಯಾ ಚಾಂಪಿಯನ್ಸ್ ಹಿಂದೆ ಸರಿದ ಕಾರಣ, ಪಾಕಿಸ್ತಾನ್ ಚಾಂಪಿಯನ್ಸ್ ಫೈನಲ್​ಗೇರಿದ್ದರು.

ಇದೀಗ ಇದೇ ಮಾದರಿಯಲ್ಲಿ ಏಷ್ಯಾಕಪ್​ನಲ್ಲೂ ಸಂಭವಿಸಲಿದೆ ಎಂದು ಕೇದಾರ್ ಜಾಧವ್ ಭವಿಷ್ಯ ನುಡಿದಿದ್ದಾರೆ. ಅಂದರೆ ಪಹಲ್ಗಾಮ್​ನಲ್ಲಿ ನಡೆದ ಪಾಕ್ ಪ್ರೇರಿತ ಉಗ್ರರ ದಾಳಿಯನ್ನು ಖಂಡಿಸಿ ಪಾಕಿಸ್ತಾನ್ ವಿರುದ್ಧದ ಪಂದ್ಯದಿಂದ ಟೀಮ್ ಇಂಡಿಯಾ ಆಟಗಾರರು ಹಿಂದೆ ಸರಿಯಲಿದೆ. ಈ ಮೂಲಕ ಭಾರತ ತಂಡವು ತನ್ನ ನಿಲುವನ್ನು ಸ್ಪಷ್ಟಪಡಿಸಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಮ್ಯಾಕ್ಸ್​ವೆಲ್ ಸಿಕ್ಸರ್​ಗೆ ರೋಹಿತ್ ಶರ್ಮಾ ವಿಶ್ವ ದಾಖಲೆಯೇ ಉಡೀಸ್

ಏಷ್ಯಾಕಪ್ ಟಿ20 ಟೂರ್ನಿಯು ಸೆಪ್ಟೆಂಬರ್ 9 ರಿಂದ ಶುರುವಾಗಲಿದೆ. ಪಾಕಿಸ್ತಾನ್ ತಂಡವು ಸೆಪ್ಟೆಂಬರ್ 12 ರಂದು ಒಮಾನ್ ವಿರುದ್ಧ ಕಣಕ್ಕಿಳಿಯುವ ಮೂಲಕ ಏಷ್ಯಾಕಪ್ ಅಭಿಯಾನ ಆರಂಭಿಸಲಿದೆ. ಇದಾದ ಬಳಿಕ ಸೆಪ್ಟೆಂಬರ್ 14 ರಂದು ಸಾಂಪ್ರದಾಯಿಕ ಎದುರಾಳಿ ಭಾರತ ತಂಡವನ್ನು ಎದುರಿಸಲಿದೆ. ಈ ಪಂದ್ಯದಿಂದ ಟೀಮ್ ಇಂಡಿಯಾ ಹಿಂದೆ ಸರಿಯಲಿದೆಯಾ ಕಾದು ನೋಡಬೇಕಿದೆ.

ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ