AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2025: ಪತ್ರಿಕಾಗೋಷ್ಠಿಯಲ್ಲಿ ಇನ್ನು ಮುಂದೆ ಈ ರೀತಿಯ ಪ್ರಶ್ನೆಗಳಿಗೆ ಬ್ರೇಕ್; ಎಸಿಸಿ ಮಹತ್ವದ ನಿರ್ಧಾರ

Asia Cup 2025: 2025ರ ಏಷ್ಯಾಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ವಿವಾದದ ನಂತರ, ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ಪತ್ರಿಕಾಗೋಷ್ಠಿಗಳಲ್ಲಿ ರಾಜಕೀಯ ಪ್ರಶ್ನೆಗಳನ್ನು ನಿಷೇಧಿಸುವ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಭಾರತೀಯ ಆಟಗಾರರು ಪಾಕಿಸ್ತಾನದೊಂದಿಗೆ ಕೈಕುಲುಕಲು ನಿರಾಕರಿಸಿದ ಘಟನೆಯಿಂದ ಉಂಟಾದ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪಾಕಿಸ್ತಾನ ತಂಡ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸದಿರುವುದು ಐಸಿಸಿಯನ್ನು ಅಸಮಾಧಾನಗೊಳಿಸಿದೆ.

Asia Cup 2025: ಪತ್ರಿಕಾಗೋಷ್ಠಿಯಲ್ಲಿ ಇನ್ನು ಮುಂದೆ ಈ ರೀತಿಯ ಪ್ರಶ್ನೆಗಳಿಗೆ ಬ್ರೇಕ್; ಎಸಿಸಿ ಮಹತ್ವದ ನಿರ್ಧಾರ
Asia Cup 2025
ಪೃಥ್ವಿಶಂಕರ
|

Updated on:Sep 19, 2025 | 3:59 PM

Share

2025 ರ ಏಷ್ಯಾಕಪ್ (Asia Cup 2025) ಪಂದ್ಯಗಳಿಂದ ಮಾತ್ರವಲ್ಲ, ವಿವಾದಗಳಿಂದಲೂ ಸುದ್ದಿಯಲ್ಲಿದೆ. ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಗುಂಪು ಹಂತದ ಪಂದ್ಯದ ಸಮಯದಲ್ಲಿ ಹುಟ್ಟಿಕೊಂಡಿದ್ದ ವಿವಾದ ಇಂದಿಗೂ ತಣ್ಣಗಾಗಿಲ್ಲ. ಟೀಂ ಇಂಡಿಯಾ ಆಟಗಾರರು ಪಾಕಿಸ್ತಾನ ತಂಡದೊಂದಿಗೆ ಕೈಕುಲುಕಲು ನಿರಾಕರಿಸಿದ ಘಟನೆ ಪಾಕ್ ಕ್ರಿಕೆಟ್​ನ ಅಸಮಾಧಾನಕ್ಕೆ ಕಾರಣವಾಯಿತು. ಈ ವಿವಾದ ಐಸಿಸಿ ಕದವನ್ನು ತಟ್ಟಿತು. ಇದು ಪಾಕಿಸ್ತಾನ ಮತ್ತು ಯುಎಇ ನಡುವಿನ ಪಂದ್ಯದ ಮೇಲೂ ಪರಿಣಾಮ ಬೀರಿತು. ಹೀಗಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮೇಲೆ ಶಿಷ್ಟಾಚಾರ ಉಲ್ಲಂಘಿಸಿದ ಗಂಭೀರ ಆರೋಪಗಳನ್ನು ಹೊರಿಸಲಾಗಿದೆ. ಇದೆಲ್ಲದರ ನಡುವೆ, ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ.

ಎಸಿಸಿ ತೆಗೆದುಕೊಂಡ ನಿರ್ಧಾರವೇನು?

2025 ರ ಏಷ್ಯಾಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈ-ವೋಲ್ಟೇಜ್ ಪಂದ್ಯದ ಸಮಯದಲ್ಲಿ ಹುಟ್ಟಿಕೊಂಡಿದ್ದ ವಿವಾದವನ್ನು ಕಡಿಮೆ ಮಾಡಲು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಒಂದು ಪ್ರಮುಖ ಹೆಜ್ಜೆ ಇಟ್ಟಿದೆ. ಇನ್ನು ಮುಂದೆ ಪತ್ರಿಕಾಗೋಷ್ಠಿಗಳಲ್ಲಿ ಪತ್ರಕರ್ತರು ರಾಜಕೀಯ ಕುರಿತ ಪ್ರಶ್ನೆಗಳನ್ನು ಕೇಳುವುದನ್ನು ನಿಷೇಧಿಸುವ ಹೊಸ ಮಾರ್ಗಸೂಚಿಗಳನ್ನು ಎಸಿಸಿ ಹೊರಡಿಸಿದೆ. ಭಾರತ ಮತ್ತು ಪಾಕಿಸ್ತಾನ ನಡುವೆ ಉಂಟಾಗಿರುವ ಉದ್ವಿಗ್ನತೆಯನ್ನು ಶಾಂತಗೊಳಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಭಾರತ ಹಾಗೂ ಪಾಕ್ ನಡುವಿನ ಹ್ಯಾಂಡ್‌ಶೇಕ್ ವಿವಾದದ ನಂತರ, ಭಾರತೀಯ ಪತ್ರಕರ್ತರು ಪತ್ರಿಕಾಗೋಷ್ಠಿಯಲ್ಲಿ ಪಂದ್ಯವನ್ನು ಹೊರತುಪಡಿಸಿ ರಾಜಕೀಯ ಸಂಬಂಧಿತ ಪ್ರಶ್ನೆಗಳನ್ನು ಎತ್ತಿದರು. ಇದು ಎಸಿಸಿಗೆ ಮುಜುಗರವನ್ನು ತಂದಿದೆ.

ಹೀಗಾಗಿ ಒಮಾನ್ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಪರ ಕುಲ್ದೀಪ್ ಯಾದವ್ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು. ಆದರೆ ಈ ಪತ್ರಿಕಾಗೋಷ್ಠಿ ಆರಂಭಕ್ಕೂ ಮುನ್ನ ಎಸಿಸಿ ಮಾಧ್ಯಮ ಅಧಿಕಾರಿಯೊಬ್ಬರು ಭಾರತೀಯ ಪತ್ರಕರ್ತರು ಯಾವುದೇ ರಾಜಕೀಯ ಪ್ರಶ್ನೆಗಳನ್ನು ಕೇಳದಂತೆ ಸೂಚನೆ ನೀಡಿದ್ದರು ಎಂದು ವರದಿಯಾಗಿದೆ.

Asia Cup 2025: ಅಭ್ಯಾಸಕ್ಕೆ ಟೀಂ ಇಂಡಿಯಾದ 6 ಆಟಗಾರರು ಗೈರು; ತಂಡದಲ್ಲಿ ಎಷ್ಟು ಬದಲಾವಣೆ?

ಪತ್ರಿಕಾಗೋಷ್ಠಿ ನಡೆಸದ ಪಾಕ್ ತಂಡ

ಪಾಕಿಸ್ತಾನ ಮತ್ತು ಯುಎಇ ನಡುವಿನ ಪಂದ್ಯಕ್ಕೂ ಮೊದಲು ಪತ್ರಿಕಾಗೋಷ್ಠಿ ನಡೆದಿತ್ತು. ಆದರೆ, ಪಾಕಿಸ್ತಾನ ತಂಡದಿಂದ ಯಾರೂ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿರಲಿಲ್ಲ. ಇದರಿಂದ ಅಸಮಾಧಾನಗೊಂಡಿರುವ ಐಸಿಸಿಯ ಹಿರಿಯ ಸದಸ್ಯರೊಬ್ಬರು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮನೋಭಾವವನ್ನು ಪ್ರಶ್ನಿಸಿದ್ದಾರೆ. ಪಾಕಿಸ್ತಾನ ತಂಡವು ಅಭ್ಯಾಸ ಅವಧಿಗಳಲ್ಲಿ ಭಾಗವಹಿಸುತ್ತಿದ್ದರೂ ಕಡ್ಡಾಯ ಪತ್ರಿಕಾಗೋಷ್ಠಿಯಲ್ಲಿ ಏಕೆ ಭಾಗವಹಿಸಲಿಲ್ಲ ಎಂಬ ಪ್ರಶ್ನೆಯನ್ನು ಪಿಸಿಬಿ ಮುಂದಿಟ್ಟಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:56 pm, Fri, 19 September 25

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ