India vs Pakistan: ಭಾರತ-ಪಾಕ್ ಮತ್ತೆ ಮುಖಾಮುಖಿ: ಚತುಷ್ಕೋನ ಟಿ20 ಸರಣಿಗೆ ಪ್ಲ್ಯಾನ್..!

India-Pakistan: ಈ ಹಿಂದೆ ಟಿ20 ವಿಶ್ವಕಪ್ ವೇಳೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹಾಗೂ ರಮೀಜ್ ರಾಜಾ ಚರ್ಚೆ ನಡೆಸಿದ್ದರು. ಅಷ್ಟೇ ಅಲ್ಲದೆ ಈ ವೇಳೆ ಪಾಕ್ ಕ್ರಿಕೆಟ್ ಮಂಡಳಿ ಅಧ್ಯಕ್ಷ ಉಭಯ ತಂಡಗಳ ನಡುವೆ ದ್ವಿಪಕ್ಷೀಯ ಸರಣಿ ಆಯೋಜಿಸುವ ಬಗ್ಗೆ ಪ್ರಸ್ತಾಪವಿಟ್ಟಿದ್ದರು.

India vs Pakistan: ಭಾರತ-ಪಾಕ್ ಮತ್ತೆ ಮುಖಾಮುಖಿ: ಚತುಷ್ಕೋನ ಟಿ20 ಸರಣಿಗೆ ಪ್ಲ್ಯಾನ್..!
India-Pakistan
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jan 11, 2022 | 9:23 PM

ಭಾರತ-ಪಾಕಿಸ್ತಾನ್ (India vs Pakistan) ತಂಡಗಳು ಮತ್ತೆ ಮುಖಾಮುಖಿಯಾಗಬೇಕಿದ್ದರೆ ಏಷ್ಯಾ ಕಪ್ ತನಕ ಕಾಯಲೇಬೇಕು, ಇಲ್ಲ ಐಸಿಸಿ ಟಿ20 ವಿಶ್ವಕಪ್ (T20 World Cup 2022) ಅನ್ನು ಎದುರು ನೋಡಬೇಕು…ಆದರೆ ಈ ಪ್ರಮುಖ ಟೂರ್ನಿಗಳ ಹೊರತಾಗಿ ಇದೀಗ ಚತುಷ್ಕೋನ ಟಿ20 ಸರಣಿಯನ್ನು ಆಯೋಜಿಸುವ ಬಗ್ಗೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಅಧ್ಯಕ್ಷ ರಮೀಜಾ ರಾಜಾ ವಿಶೇಷ ಪ್ರಸ್ತಾಪವನ್ನು ಬಿಸಿಸಿಐ ಮುಂದಿಟ್ಟಿದೆ ಎಂದು ವರದಿಯಾಗಿದೆ. ಅಂದರೆ ನಾಲ್ಕು ತಂಡಗಳ ಟಿ20 ಸರಣಿ ಆಯೋಜಿಸುವ ಬಗ್ಗೆ ಪಾಕ್ ಕ್ರಿಕೆಟ್ ಮಂಡಳಿ ಆಸಕ್ತಿ ಹೊಂದಿದೆ. ಅದರಂತೆ ಈ ಸರಣಿಯಲ್ಲಿ ಭಾರತ, ಪಾಕಿಸ್ತಾನ್, ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ತಂಡಗಳು ಆಡಲಿವೆ.

ಬಲಿಷ್ಠ ತಂಡಗಳ ನಡುವಣ ಚತುಷ್ಕೋನ ಟಿ20 ಸರಣಿಗಾಗಿ ಈಗಾಗಲೇ ಪಾಕ್ ಕ್ರಿಕೆಟ್ ಮಂಡಳಿ ರೂಪುರೇಷೆಗಳನ್ನು ಸಿದ್ದಪಡಿಸಿದ್ದು, ಈ ಬಗ್ಗೆ ಮುಂದಿನ ಐಸಿಸಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಯಿದೆ. ಈ ಮೂಲಕ ಸಂಪ್ರಾದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ್ ನಡುವಣ ಸರಣಿಯನ್ನು ಮುಂದುವರೆಸಲು ಪ್ಲ್ಯಾನ್ ರೂಪಿಸಲಾಗಿದೆ. ಎರಡು ದೇಶಗಳ ನಡುವಿನ ರಾಜಕೀಯ ಕಾರಣಗಳಿಂದಾಗಿ 2012-13ರ ಬಳಿಕ ದ್ವಿಪಕ್ಷೀಯ ಸರಣಿ ನಡೆದಿಲ್ಲ. ಇದೀಗ ದ್ವಿಪಕ್ಷೀಯ ಸರಣಿಯ ಬದಲು ನಾಲ್ಕು ತಂಡಗಳ ಚತುಷ್ಕೋನ ಟಿ20 ಸರಣಿ ನಡೆಸಲು ಪಾಕ್ ಕ್ರಿಕೆಟ್ ಮಂಡಳಿ ಪ್ಲ್ಯಾನ್ ರೂಪಿಸಿದೆ.

ಈ ಸರಣಿಗಾಗಿ ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿಯಿಂದ ಗ್ರೀನ್ ಸಿಗ್ನಲ್ ಸಿಗುವ ಸಾಧ್ಯತೆಯಿದ್ದು, ಹಾಗೆಯೇ ಭಾರತದ ಮನವೊಲಿಸಲು ರಮೀಜ್ ರಾಜಾ ಮುಂದಾಗಲಿದ್ದಾರೆ. ಏಕೆಂದರೆ ಈ ಹಿಂದೆ ಟಿ20 ವಿಶ್ವಕಪ್ ವೇಳೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹಾಗೂ ರಮೀಜ್ ರಾಜಾ ಚರ್ಚೆ ನಡೆಸಿದ್ದರು. ಅಷ್ಟೇ ಅಲ್ಲದೆ ಈ ವೇಳೆ ಪಾಕ್ ಕ್ರಿಕೆಟ್ ಮಂಡಳಿ ಅಧ್ಯಕ್ಷ ಉಭಯ ತಂಡಗಳ ನಡುವೆ ದ್ವಿಪಕ್ಷೀಯ ಸರಣಿ ಆಯೋಜಿಸುವ ಬಗ್ಗೆ ಪ್ರಸ್ತಾಪವಿಟ್ಟಿದ್ದರು.

ಆದರೆ ಈ ವೇಳೆ ಸೌರವ್ ಗಂಗೂಲಿ, ಪಾಕಿಸ್ತಾನ್ ವಿರುದ್ದದ ಸರಣಿ ಆಯೋಜನೆ ಕೇವಲ ಬಿಸಿಸಿಐ ಮಾತ್ರ ತೆಗೆದುಕೊಳ್ಳಬೇಕಾದ ತೀರ್ಮಾನವಲ್ಲ ಎಂದಿದ್ದರು. ಇದೀಗ ಚತುಷ್ಕೋನ ಟಿ20 ಸರಣಿ ಆಯೋಜನೆಯ ಸುದ್ದಿ ಹೊರಬಿದ್ದ ಬೆನ್ನಲ್ಲೇ ಬಿಸಿಸಿಐ ಕೂಡ ಈ ಪ್ರಸ್ತಾಪವನ್ನು ಒಪ್ಪಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ. ಏಕೆಂದರೆ ಈ ಸರಣಿಯು ಪ್ರತಿ ವರ್ಷದ ಆಯಾ ದೇಶಗಳಲ್ಲಿ ನಡೆಯಲಿದೆ. ಉದಾಹರಣೆಗೆ ಮೊದಲ ಬಾರಿ ಭಾರತದಲ್ಲಿ ನಡೆದರೆ, 2ನೇ ಬಾರಿ ಆಸ್ಟ್ರೇಲಿಯಾದಲ್ಲಿ ಅಥವಾ ನ್ಯೂಜಿಲೆಂಡ್​ನಲ್ಲಿ ಆಯೋಜಿಸಬಹುದು…ಹೀಗೆ ನಾಲ್ಕು ವರ್ಷ ನಾಲ್ಕು ದೇಶಗಳಲ್ಲಿ ಸರಣಿ ನಡೆಯಲಿದೆ. ಅತ್ತ ಟೀಮ್ ಇಂಡಿಯಾ ಪಾಕ್​ನಲ್ಲಿ ಆಡಲು ನಿರಾಕರಿಸಿದರೆ 2ನೇ ಆಯ್ಕೆಯಾಗಿ ಪಾಕಿಸ್ತಾನದ ಮುಂದೆ ಯುಎಇ ಇದೆ. ಹೀಗಾಗಿ ಈ ಸರಣಿ ಆಯೋಜನೆ ಬಗ್ಗೆ ಮುಂದಿನ ಐಸಿಸಿ ಸಭೆಯ ಚರ್ಚೆಯ ನಂತರ ಸ್ಪಷ್ಟ ಉತ್ತರ ಸಿಗಲಿದೆ.

ಇದನ್ನೂ ಓದಿ: IPL 2022: ಮತ್ತೆ RCB ಪರ ಆಡಬೇಕೆಂದ ಸ್ಟಾರ್ ಬೌಲರ್

ಇದನ್ನೂ ಓದಿ:  Sachin Tendulkar: ಆಲ್‌ ಟೈಮ್ ಬೆಸ್ಟ್‌ 11 ಹೆಸರಿಸಿದ ಸಚಿನ್: ಪ್ರಮುಖ ಆಟಗಾರರಿಗಿಲ್ಲ ಸ್ಥಾನ

ಇದನ್ನೂ ಓದಿ: IPL 2022 Mega Auction: ಐಪಿಎಲ್ ಮೆಗಾ ಹರಾಜು ಡೇಟ್ ಫಿಕ್ಸ್..!

ಇದನ್ನೂ ಓದಿ: IPL 2022: ಅಹಮದಾಬಾದ್ ತಂಡಕ್ಕೆ ಟೀಮ್ ಇಂಡಿಯಾ ಮಾಜಿ ಆಟಗಾರ ಕೋಚ್..!

(India-Pakistan can resume rivalry? PCB chief Ramiz Raja set to propose annual T20)

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ