AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್ ಪ್ರಸಾರವನ್ನು ನಿಷೇಧಿಸಿದ ಪಾಕಿಸ್ತಾನಕ

India-Pakistan Digital War: ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಡಿಜಿಟಲ್ ಯುದ್ಧ ಆರಂಭವಾಗಿದೆ. ಭಾರತವು ಪಾಕಿಸ್ತಾನ ಸೂಪರ್ ಲೀಗ್ (ಪಿಎಸ್‌ಎಲ್) ಪ್ರಸಾರವನ್ನು ನಿಷೇಧಿಸಿದ್ದಕ್ಕೆ ಪ್ರತಿಕ್ರಿಯೆಯಾಗಿ ಪಾಕಿಸ್ತಾನವು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪ್ರಸಾರವನ್ನು ನಿಷೇಧಿಸಿದೆ. ಈ ಮೊದಲು ಭಾರತ ಪಾಕ್ ಪ್ರಮುಖ ವ್ಯಕ್ತಿಗಳ ಸೋಶಿಯಲ್ ಮೀಡಿಯಾ ಖಾತೆಗಳನ್ನು ಬ್ಯಾನ್ ಮಾಡಿತ್ತು.

IPL 2025: ಐಪಿಎಲ್ ಪ್ರಸಾರವನ್ನು ನಿಷೇಧಿಸಿದ ಪಾಕಿಸ್ತಾನಕ
Ipl
ಪೃಥ್ವಿಶಂಕರ
|

Updated on:May 04, 2025 | 5:07 PM

Share

ಪಹಲ್ಗಾಮ್ ಭಯೋತ್ಪಾದಕ ದಾಳಿಯ (Pahalgam terror attack) ನಂತರ ಭಾರತ ಸರ್ಕಾರವು, ಪಾಕಿಸ್ತಾನದ ವಿರುದ್ಧ ಉಗ್ರ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆ ಪ್ರಕಾರ ಪಾಕಿಸ್ತಾನದೊಂದಿಗಿನ ಎಲ್ಲಾ ಸಂಬಂಧಗಳನ್ನು ಮುರಿದುಕೊಂಡಿರುವ ಭಾರತ, ಇದು ಮಾತ್ರವಲ್ಲದೆ ಡಿಜಿಟಲ್ ದಾಳಿಯನ್ನು ಮಾಡಿತ್ತು. ಅಂದರೆ ಪಾಕಿಸ್ತಾನದ ಪ್ರಮುಖ ವ್ಯಕ್ತಿಗಳ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡದ ಸ್ಟಾರ್ ಆಟಗಾರರ ಸೋಶಿಯಲ್ ಮೀಡಿಯಾ ಖಾತೆಯನ್ನು ಭಾರತದಲ್ಲಿ ಬ್ಯಾನ್ ಮಾಡಲಾಗಿತ್ತು. ಹಾಗೆಯೇ ಪಾಕಿಸ್ತಾನದಲ್ಲಿ ನಡೆಯುತ್ತಿರುವ ಪಾಕಿಸ್ತಾನ ಸೂಪರ್ ಲೀಗ್ (PSL) ಪ್ರಸಾರವನ್ನು ಭಾರತದಲ್ಲಿ ನಿಷೇಧಿಸಲಾಗಿತ್ತು. ಇದೀಗ ಪಾಕಿಸ್ತಾನ ಕೂಡ ಭಾರತದ ವಿರುದ್ಧ ಡಿಜಿಟಲ್ ದಾಳಿ ನಡೆಸಿದ್ದು, ಐಪಿಎಲ್ (IPL) ಪಂದ್ಯಾವಳಿಯನ್ನು ಪಾಕಿಸ್ತಾನದಲ್ಲಿ ಪ್ರಸಾರ ಮಾಡುವುದನ್ನು ನಿಷೇಧಿಸಿದ ಎಂದು ವರದಿಯಾಗಿದೆ.

ಭಾರತದಲ್ಲಿ ಪಿಎಸ್​ಎಲ್ ಬ್ಯಾನ್

ಮೇಲೆ ಹೇಳಿದಂತೆ ಪಾಕಿಸ್ತಾನ ಸೂಪರ್ ಲೀಗ್ ಪ್ರಸಾರವನ್ನು ಭಾರತ ನಿರ್ಬಂಧಿಸಿದ್ದಕ್ಕೆ ಪ್ರತಿಕ್ರಿಯೆಯಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ, ಪಾಕ್ ಸೂಪರ್ ಲೀಗ್ ಪ್ರಸಾರವನ್ನು ನಿಷೇಧಿಸಿತ್ತು. ಹಾಗಾಗಿ ಏಪ್ರಿಲ್ 24 ರಂದು, ಪಿಎಸ್​ಎಲ್ ಪಂದ್ಯಗಳ ಅಧಿಕೃತ ಸ್ಟ್ರೀಮಿಂಗ್ ಹಕ್ಕುಗಳನ್ನು ಹೊಂದಿದ್ದ ಭಾರತೀಯ ಸ್ಟ್ರೀಮಿಂಗ್ ವೇದಿಕೆಯಾದ ಫ್ಯಾನ್‌ಕೋಡ್, ತಕ್ಷಣದಿಂದ ಜಾರಿಗೆ ಬರುವಂತೆ ಪಿಎಸ್​ಎಲ್ ಪ್ರಸಾರವನ್ನು ನಿಲ್ಲಿಸುವುದಾಗಿ ಘೋಷಿಸಿತ್ತು.

ಐಪಿಎಲ್​ಗೆ ಬ್ರೇಕ್ ಹಾಕಿದ ಪಾಕ್

ಇದೀಗ ಪಾಕಿಸ್ತಾನದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್​ನ ಅಧಿಕೃತ ಸ್ಟ್ರೀಮಿಂಗ್ ಹಕ್ಕುಗಳನ್ನು ಹೊಂದಿದ್ದ ಟ್ಯಾಪ್‌ಮಾಡ್‌, ಮೇ 3 ರಂದು ಐಪಿಎಲ್ ಪ್ರಸಾರವನ್ನು ನಿಲ್ಲಿಸುವುದಾಗಿ ಘೋಷಿಸಿದೆ. ಪಾಕಿಸ್ತಾನದ ಈ ನಿರ್ಧಾರದಿಂದ ಐಪಿಎಲ್​ಗೆ ಯಾವುದೇ ನಷ್ಟವಿಲ್ಲದಿದ್ದರೂ, ಪಿಎಸ್​ಎಲ್ ನಿಷೇಧದಿಂದ ಪಾಕಿಸ್ತಾನಕ್ಕೆ ಭಾರಿ ನಷ್ಟವುಂಟಾಗಲಿದೆ. ಏಕೆಂದರೆ, ಪಿಎಸ್​ಎಲ್ ಪಂದ್ಯಗಳನ್ನು ವೀಕ್ಷಿಸಲು ಪ್ರೇಕ್ಷಕರೇ ಮೈದಾನಕ್ಕೆ ಬರುತ್ತಿಲ್ಲ. ಹೀಗಾಗಿ ಡಿಜಿಟಲ್ ಪ್ರಸಾರದಿಂದ ಕೊಂಚ ಆದಾಯ ಗಳಿಸುತ್ತಿದ್ದ ಆಯೋಜಕರಿಗೆ ಆಘಾತ ಎದುರಾಗಿದೆ.

RCB vs CSK Highlights, IPL 2025: ರಣರೋಚಕ ಪಂದ್ಯದಲ್ಲಿ ಗೆದ್ದು ಬೀಗಿದ ಆರ್​​ಸಿಬಿ

ಏಷ್ಯಾಕಪ್ ರದ್ದಾಗುವ ಸಾಧ್ಯತೆ

ಪ್ರಸ್ತುತ ಎರಡೂ ದೇಶಗಳಿಂದ ವಿಧಿಸಲಾಗಿರುವ ನಿಷೇಧದ ಶಿಕ್ಷೆ ಎಷ್ಟು ಕಾಲ ಉಳಿಯುತ್ತವೆ ಎಂಬುದು ಸ್ಪಷ್ಟವಾಗಿಲ್ಲ. ಆದರೆ ಐಸಿಸಿ ಮತ್ತು ಎಸಿಸಿ ಟೂರ್ನಿಗಳಲ್ಲಿ ಪಾಕಿಸ್ತಾನದ ವಿರುದ್ಧ ಆಡುವುದನ್ನು ನಿಲ್ಲಿಸುವ ಮೂಲಕ ಬಿಸಿಸಿಐ, ಪಾಕಿಸ್ತಾನದೊಂದಿಗಿನ ಸಂಬಂಧವನ್ನು ಸಂಪೂರ್ಣವಾಗಿ ಕೊನೆಗೊಳಿಸಬಹುದು ಎಂಬ ವರದಿಳಗಳಿವೆ. ಅಲ್ಲದೆ, ಈ ವರ್ಷ ಭಾರತದಲ್ಲಿ ನಡೆಯಲಿರುವ ಏಷ್ಯಾಕಪ್ ಕೂಡ ಇದರಿಂದಾಗಿ ರದ್ದಾಗುವ ಸಾಧ್ಯತೆ ಇದೆ ಎಂತಲೂ ಹೇಳಲಾಗುತ್ತಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:06 pm, Sun, 4 May 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ