AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ತಂಡದ ಪರ ಆಡಿದ್ದಲ್ಲದೆ ಪಾಕ್ ಆಟಗಾರನೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಇಶಾನ್ ಕಿಶನ್; ಫೋಟೋ ವೈರಲ್

Ishaan Kishan's Selfie with Pakistani Cricketer Sparks Controversy: ಭಾರತ ಮತ್ತು ಪಾಕಿಸ್ತಾನದ ನಡುವಿನ ರಾಜತಾಂತ್ರಿಕ ಸಂಬಂಧಗಳು ಹದಗೆಟ್ಟಿರುವ ಸಂದರ್ಭದಲ್ಲಿ, ಭಾರತೀಯ ಕ್ರಿಕೆಟಿಗ ಇಶಾನ್ ಕಿಶನ್ ಪಾಕಿಸ್ತಾನಿ ಕ್ರಿಕೆಟಿಗ ಮೊಹಮ್ಮದ್ ಅಬ್ಬಾಸ್ ಜೊತೆ ಸೆಲ್ಫಿ ತೆಗೆದುಕೊಂಡ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಬ್ಬರೂ ನಾಟಿಂಗ್‌ಹ್ಯಾಮ್‌ಶೈರ್ ಕೌಂಟಿ ಕ್ರಿಕೆಟ್ ತಂಡದಲ್ಲಿದ್ದು, ಒಟ್ಟಿಗೆ ಆಡುತ್ತಿದ್ದಾರೆ ಎಂಬುದು ಈ ಫೋಟೋದ ಹಿನ್ನೆಲೆಯಾಗಿದೆ. ಆದಾಗ್ಯೂ, ಭಾರತ-ಪಾಕಿಸ್ತಾನ ಉದ್ವಿಗ್ನತೆಯ ನಡುವೆ ಈ ಫೋಟೋ ವಿವಾದಕ್ಕೆ ಕಾರಣವಾಗಿದೆ.

ಒಂದೇ ತಂಡದ ಪರ ಆಡಿದ್ದಲ್ಲದೆ ಪಾಕ್ ಆಟಗಾರನೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಇಶಾನ್ ಕಿಶನ್; ಫೋಟೋ ವೈರಲ್
ಪಾಕ್ ಕ್ರಿಕೆಟಿಗನೊಂದಿಗೆ ಕಿಶನ್
ಪೃಥ್ವಿಶಂಕರ
|

Updated on:Jun 26, 2025 | 5:09 PM

Share

ಹಲವಾರು ವರ್ಷಗಳಿಂದ ಭಾರತ ಮತ್ತು ಪಾಕಿಸ್ತಾನ (India- Pakistan) ನಡುವಿನ ರಾಜತಾಂತ್ರಿಕ ಸಂಬಂಧಗಳು ಮುರಿದುಬಿದ್ದಿದ್ದವು. ಆದರೆ ಏಪ್ರಿಲ್ 23 ರಂದು, ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕರು ಪಹಲ್ಗಾಮ್‌ನಲ್ಲಿ (Pahalgam attack) 26 ಪ್ರವಾಸಿಗರನ್ನು ಕೊಂದ ನಂತರ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿತು. ಆ ಬಳಿಕ ಪಾಕಿಸ್ತಾನದ ವಿರುದ್ಧ ಪ್ರತಿಕಾರಕ್ಕಿಳಿದಿದ್ದ ಭಾರತ, ಪಾಕಿಸ್ತಾನದ ವಿರುದ್ಧ ಯುದ್ಧ ಸಾರಿತ್ತು. ಭಾರತದ ದಾಳಿಗೆ ನಲುಗಿ ಹೋಗಿದ್ದ ಪಾಕಿಸ್ತಾನ ಕದನ ವಿರಾಮಕ್ಕೆ ಬೇಡಿಕೆ ಇಟ್ಟಿತು. ಆ ಬಳಿಕ ಉಭಯ ದೇಶಗಳ ನಡುವೆ ಯಾವುದೇ ರೀತಿಯ ವ್ಯಾಪಾರ ವ್ಯವಹಾರಗಳಾಗಲಿ ನಡೆಯುತ್ತಿಲ್ಲ. ಇದರ ಜೊತೆಗೆ ಪಾಕಿಸ್ತಾನದೊಂದಿಗೆ ಎಲ್ಲಾ ಸಂಬಂಧಗಳನ್ನು ಮುರಿದುಕೊಳ್ಳಬೇಕೆಂಬ ಒತ್ತಾಯ ಹೆಚ್ಚಾಗಿದ್ದು, ಇದರಲ್ಲಿ ಕ್ರಿಕೆಟ್ ಕೂಡ ಸೇರಿದೆ.

ಸೆಲ್ಫಿ ಫೋಟೋ ವೈರಲ್

ಮೇಲೆ ಹೇಳಿದಂತೆ ಕ್ರಿಕೆಟ್‌ನಿಂದ ಹಿಡಿದು ಮನರಂಜನಾ ಉದ್ಯಮದವರೆಗೆ ಭಾರತ ಮತ್ತು ಪಾಕಿಸ್ತಾನದ ನಡುವಿನ ಎಲ್ಲಾ ರೀತಿಯ ಸಂಬಂಧಗಳನ್ನು ಕೊನೆಗೊಳಿಸಬೇಕೆಂಬ ಬೇಡಿಕೆ ಈಗಾಗಲೇ ಇದೆ. ಆದರೆ ಇದೆಲ್ಲದರ ನಡುವೆ, ಟೀಂ ಇಂಡಿಯಾದ ಸ್ಟಾರ್ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಪಾಕಿಸ್ತಾನಿ ಕ್ರಿಕೆಟಿಗನೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡಿರುವ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ.

ಎಡಗೈ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಈ ದಿನಗಳಲ್ಲಿ ಇಂಗ್ಲೆಂಡ್‌ನಲ್ಲಿದ್ದಾರೆ. ಆದಾಗ್ಯೂ, ಅವರು ಇಲ್ಲಿ ಟೀಂ ಇಂಡಿಯಾದ ಭಾಗವಾಗಿಲ್ಲ, ಬದಲಿಗೆ ಇಂಗ್ಲೆಂಡ್‌ನ ದೇಶೀಯ ಪ್ರಥಮ ದರ್ಜೆ ಟೂರ್ನಮೆಂಟ್ ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ ಆಡುತ್ತಿದ್ದಾರೆ. ಇಶಾನ್ ಮೊದಲ ಬಾರಿಗೆ ಕೌಂಟಿ ಕ್ರಿಕೆಟ್ ಆಡುತ್ತಿದ್ದು, ನಾಟಿಂಗ್‌ಹ್ಯಾಮ್‌ಶೈರ್ ತಂಡದ ಭಾಗವಾಗಿದ್ದಾರೆ. ಈ ತಂಡಕ್ಕೆ ಪಾದಾರ್ಪಣೆ ಮಾಡಿದ ಮೊದಲ ಪಂದ್ಯದಲ್ಲೇ ಅಬ್ಬರಿಸಿದ ಕಿಶನ್, ಮೊದಲ ಇನ್ನಿಂಗ್ಸ್‌ನಲ್ಲಿ ಶತಕದ ಇನ್ನಿಂಗ್ಸ್ ಆಡಿದ್ದರು. ಆದರೀಗ ಕಿಶನ್ ತಮ್ಮ ಶತಕದಿಂದ ಹೆಚ್ಚು ಚರ್ಚೆಯಾಗುವ ಬದಲು ಪಾಕ್ ಆಟಗಾರನೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡಿದ್ದರಿಂದ ಹೆಚ್ಚು ಸುದ್ದಿಯಾಗಿದ್ದಾರೆ.

ಪಹಲ್ಗಾಮ್ ದಾಳಿಯ ನಂತರ ಫೋಟೋ ವೈರಲ್

ಪಾಕ್ ಕ್ರಿಕೆಟಿಗ ಮೊಹಮ್ಮದ್ ಅಬ್ಬಾಸ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಇಶಾನ್ ಜೊತೆಗಿನ ಎರಡು ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. ಈ ಫೋಟೋಗಳು ತಕ್ಷಣವೇ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಪಹಲ್ಗಾಮ್ ದಾಳಿಯ ನಂತರ, ಭಾರತ ಮತ್ತು ಪಾಕಿಸ್ತಾನ ನಡುವಿನ ಎಲ್ಲಾ ರೀತಿಯ ಸಂಬಂಧಗಳನ್ನು ಕೊನೆಗೊಳಿಸುವ ಬೇಡಿಕೆ ಇರುವ ಸಮಯದಲ್ಲಿ ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಹುಟ್ಟಿಹಾಕಿವೆ. ಐಸಿಸಿ ಪಂದ್ಯಾವಳಿಗಳ ಮಟ್ಟದಲ್ಲಿಯೂ ಭಾರತ-ಪಾಕಿಸ್ತಾನ ಕ್ರಿಕೆಟ್ ಅನ್ನು ನಿಲ್ಲಿಸುವ ಬೇಡಿಕೆ ಇರುವ ಇಂತಹ ಪರಿಸ್ಥಿತಿಯಲ್ಲಿ, ಪಾಕಿಸ್ತಾನಿ ಕ್ರಿಕೆಟಿಗನೊಂದಿಗೆ ಇಶಾನ್ ಅವರ ಫೋಟೋ ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದೆ.

Ishan Kishan: 12 ಬೌಂಡರಿ,1 ಸಿಕ್ಸ್; ಇಂಗ್ಲೆಂಡ್‌ನಲ್ಲಿ ಅಬ್ಬರಿಸಿದ ಇಶಾನ್ ಕಿಶನ್

ಒಂದೇ ತಂಡದಲ್ಲಿ ಇಶಾನ್ ಮತ್ತು ಅಬ್ಬಾಸ್

ಆದರೆ, ಈ ಫೋಟೋಗೆ ಒಂದು ಕಾರಣವೆಂದರೆ ಇಬ್ಬರೂ ಆಟಗಾರರು ಕೌಂಟಿಯಲ್ಲಿ ಒಂದೇ ತಂಡದ ಪರ ಆಡುತ್ತಿದ್ದಾರೆ. ಇಶಾನ್ ಕಿಶನ್ ನಾಟಿಂಗ್‌ಹ್ಯಾಮ್‌ಶೈರ್‌ ಜೊತೆ ಕೇವಲ 2 ಪಂದ್ಯಗಳಿಗೆ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಆದರೆ ಮೊಹಮ್ಮದ್ ಅಬ್ಬಾಸ್ ಕಳೆದ ಕೆಲವು ಸೀಸನ್​ಗಳಿಂದ ಈ ಕೌಂಟಿ ಕ್ಲಬ್‌ನ ಭಾಗವಾಗಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ, ಇಬ್ಬರೂ ತಂಡಕ್ಕಾಗಿ ಒಟ್ಟಿಗೆ ಆಡುತ್ತಿದ್ದಾರೆ. ಅಲ್ಲದೆ ಮೊಹಮ್ಮದ್ ಅಬ್ಬಾಸ್ ಅವರ ಮೊದಲ ಎಸೆತದಲ್ಲಿಯೇ ಎದುರಾಳಿ ತಂಡದ ಬ್ಯಾಟ್ಸ್‌ಮನ್ ನೀಡಿದ ಕ್ಯಾಚ್ ಅನ್ನು ಇಶಾನ್ ಕಿಶನ್ ಹಿಡಿದು ತಂಡಕ್ಕೆ ಯಶಸ್ಸನ್ನು ನೀಡಿದ್ದರು. ಇದರ ನಂತರ, ಇಬ್ಬರೂ ಆಟಗಾರರು ಒಟ್ಟಿಗೆ ಆಚರಿಸುತ್ತಿರುವುದು ಕಂಡುಬಂದಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:50 pm, Thu, 26 June 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ