AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂದ್ಯದ ದಿನ ಗುಡುಗು ಸಹಿತ ಮಳೆ.! ಭಾರತ-ಪಾಕ್ ಪಂದ್ಯ ನಡೆಯುವುದು ಅನುಮಾನ

India vs Pakistan T20 World Cup 2026: ಫೆಬ್ರವರಿ 15 ರಂದು ಕೊಲಂಬೊದಲ್ಲಿ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ಟಿ20 ವಿಶ್ವಕಪ್ 2026 ಪಂದ್ಯವು ಸೂಪರ್ 8 ನಿರ್ಧಾರಕ್ಕೆ ನಿರ್ಣಾಯಕವಾಗಿದೆ. ಮಳೆ, ಪಿಚ್ ಸವಾಲು ಎದುರಿಸುವ ಸಾಧ್ಯತೆ ಇದೆ. ಶ್ರೀಲಂಕಾ ಹವಾಮಾನ ಇಲಾಖೆಯು ಮಳೆಯ ಎಚ್ಚರಿಕೆ ನೀಡಿದ್ದು, ಪಂದ್ಯ ವಿಳಂಬ ಅಥವಾ ರದ್ದಾಗಬಹುದು. ಸ್ಪಿನ್ ಸ್ನೇಹಿ ಪಿಚ್ ಭಾರತೀಯ ಬ್ಯಾಟ್ಸ್‌ಮನ್‌ಗಳಿಗೆ ಸವಾಲಾಗಿ ಪರಿಣಮಿಸಲಿದೆ.

ಪಂದ್ಯದ ದಿನ ಗುಡುಗು ಸಹಿತ ಮಳೆ.! ಭಾರತ-ಪಾಕ್ ಪಂದ್ಯ ನಡೆಯುವುದು ಅನುಮಾನ
Ind Vs Pak Weather
ಪೃಥ್ವಿಶಂಕರ
|

Updated on: Feb 13, 2026 | 10:41 PM

Share

ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಟಿ20 ವಿಶ್ವಕಪ್ 2026 (T20 World Cup 2026) ಪಂದ್ಯವು ಫೆಬ್ರವರಿ 15 ರ ಭಾನುವಾರದಂದು ಕೊಲಂಬೊದಲ್ಲಿ ನಡೆಯಲಿದೆ. ಈ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ಎರಡೂ ತಂಡಗಳ ಮೂರನೇ ಪಂದ್ಯ ಇದಾಗಿದೆ. ಎರಡೂ ತಂಡಗಳು ಈ ಹಿಂದೆ ಆಡಿದ ಎರಡೂ ಪಂದ್ಯಗಳನ್ನು ಗೆದ್ದಿವೆ. ಆದ್ದರಿಂದ, ಈ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ಸೂಪರ್ 8 ಸುತ್ತಿನಲ್ಲಿ ಸ್ಥಾನ ಪಡೆಯುತ್ತವೆ. ಇದರ ಜೊತೆಗೆ ಕ್ರಿಕೆಟ್​ನಲ್ಲಿ ಉಭಯ ತಂಡಗಳ ನಡುವಿನ ಪಂದ್ಯವೆಂದರೆ ಅದು ಅಭಿಮಾನಿಗಳಿಗೆ ಹಬ್ಬವೇ ಸರಿ. ಆದ್ದರಿಂದ, ಈ ಪಂದ್ಯವನ್ನು ನೋಡಲು ಅಭಿಮಾನಿಗಳು ಕಾತುರದಿಂದ ಕಾದು ಕುಳಿತಿದ್ದಾರೆ. ಆದರೆ ಶ್ರೀಲಂಕಾದ ಹವಾಮಾನ ಇಲಾಖೆ ನೀಡಿರುವ ಹವಾಮಾನ ವರದಿ ಅಭಿಮಾನಿಗಳ ಆಸೆಗೆ ತಣ್ಣೀರೆರಚಿದೆ.

ಗುಡುಗು ಸಹಿತ ಮಳೆ

ಶ್ರೀಲಂಕಾದ ಹವಾಮಾನ ಇಲಾಖೆ ನೀಡಿರುವ ಹವಾಮಾನ ವರದಿಯ ಪ್ರಕಾರ, ಫೆಬ್ರವರಿ 15 ಮತ್ತು 16 ರಂದು ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆ ನೀಡಿದೆ. ಅಲ್ಲದೆ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯದ ದಿನದಂದು ಸುಮಾರು ನಾಲ್ಕು ಗಂಟೆಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಇದರೊಂದಿಗೆ, ಬಿರುಗಾಳಿ ಬೀಸುವ ಸಾಧ್ಯತೆ ಶೇ. 26 ರಷ್ಟು ಇದೆ. ಇದರಿಂದಾಗಿ ಪಂದ್ಯ ವಿಳಂಬವಾಗಬಹುದು ಅಥವಾ ರದ್ದಾಗಬಹುದು.

ಕೊಲಂಬೊ ಪಿಚ್ ಹೇಗಿದೆ?

ಭಾರತ ತಂಡದ ತಂಡ ಯಾವಾಗಲೂ ಬ್ಯಾಟ್ಸ್‌ಮನ್‌ಗಳ ಮೇಲೆ ಅವಲಂಬಿತವಾಗಿದೆ. ಆದರೆ ಕೊಲಂಬೊ ಪಿಚ್ ಹಾಗೆ ಇರುವುದಿಲ್ಲ. ಏಕೆಂದರೆ ಈ ಪಿಚ್ ಸ್ಪಿನ್ನರ್‌ಗಳಿಗೆ ಸಹಾಯ ಮಾಡಲಿದೆ. ಆದ್ದರಿಂದ ಭಾರತ ಈ ಪಂದ್ಯ ಗೆಲ್ಲಲು ಸಾಕಷ್ಟು ಬೆವರು ಹರಿಸಬೇಕಿದೆ. ಏಕೆಂದರೆ ಪಾಕಿಸ್ತಾನ ಉತ್ತಮ ಸ್ಪಿನ್ ದಾಳಿಯನ್ನು ಹೊಂದಿದೆ. ಆದ್ದರಿಂದ ಈ ಪಿಚ್ ಭಾರತೀಯ ಬ್ಯಾಟ್ಸ್‌ಮನ್‌ಗಳಿಗೆ ಒಂದು ಪರೀಕ್ಷೆಯಾಗಲಿದೆ. ಈ ಪಂದ್ಯದಲ್ಲಿ ಭಾರತ ಚೆನ್ನಾಗಿ ಬ್ಯಾಟಿಂಗ್ ಮಾಡಿದರೆ ಗೆಲುವು ಖಚಿತ. ಆದ್ದರಿಂದ, ಟಾಸ್ ಗೆದ್ದ ನಂತರ ಮೊದಲು ಬ್ಯಾಟಿಂಗ್ ಮಾಡುವುದು ಪ್ರಯೋಜನಕಾರಿಯಾಗಿದೆ. ಆದಾಗ್ಯೂ ಎರಡನೇ ಇನ್ನಿಂಗ್ಸ್​ನಲ್ಲಿ ಬ್ಯಾಟಿಂಗ್ ಮಾಡುವ ತಂಡಕ್ಕೆ ಇಬ್ಬನಿ ನೆರವು ಸಿಗಲಿದೆ.

T20 World Cup: 43 ವರ್ಷಗಳಲ್ಲಿ 3ನೇ ಬಾರಿಗೆ; ಭಾರತವೇ ಚಾಂಪಿಯನ್ ಎನ್ನುತ್ತಿದೆ ಇತಿಹಾಸ

ಭಾರತದ್ದೇ ಮೇಲುಗೈ

ಭಾರತ ಮತ್ತು ಪಾಕಿಸ್ತಾನ ತಂಡಗಳು ಇದುವರೆಗೆ ಟಿ20 ವಿಶ್ವಕಪ್‌ನಲ್ಲಿ ಎಂಟು ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ 7 ಪಂದ್ಯಗಳನ್ನು ಭಾರತ ಗೆದ್ದಿದ್ದರೆ, ಪಾಕಿಸ್ತಾನ ಕೇವಲ ಒಂದು ಪಂದ್ಯವನ್ನು ಮಾತ್ರ ಗೆದ್ದಿದೆ. ಮುಖಾಮುಖಿ ದಾಖಲೆಯು ಭಾರತೀಯ ತಂಡದ ಪರವಾಗಿದ್ದರೂ, ಪಾಕ್ ತಂಡವನ್ನು ಕಡಿಮೆ ಅಂದಾಜು ಮಾಡಲು ಸಾಧ್ಯವಿಲ್ಲ. ಈ ಪಂದ್ಯದಲ್ಲಿ ಭಾರತ ತನ್ನ ತಂತ್ರದ ಪ್ರಕಾರ ಆಡಬೇಕಾಗುತ್ತದೆ. ಏಕೆಂದರೆ ಪಿಚ್ ಸ್ಪಿನ್‌ಗೆ ಅನುಕೂಲಕರವಾಗಿರುತ್ತದೆ. ಇದರ ಜೊತೆಗೆ ಇದಕ್ಕೂ ಮೊದಲು, ಶ್ರೀಲಂಕಾದಲ್ಲಿ ಆಡುವಾಗ ಭಾರತ ತಂಡವು ಸಮಸ್ಯೆಗಳನ್ನು ಎದುರಿಸಿತ್ತು. ಆದ್ದರಿಂದ, ಭಾರತ ಜಾಗರೂಕವಾಗಿರಬೇಕು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!