IND vs PAK: ಇನ್ನೇರಡು ದಿನಗಳಲ್ಲಿ ಭಾರತ- ಪಾಕ್ ನಡುವೆ ಕ್ರಿಕೆಟ್ ಫೈಟ್

ACC U19 Asia Cup 2024: ನವೆಂಬರ್ 29 ರಿಂದ ಡಿಸೆಂಬರ್ 8 ರವರೆಗೆ ಯುಎಇಯಲ್ಲಿ ನಡೆಯಲಿರುವ ಅಂಡರ್-19 ಏಷ್ಯಾಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ನವೆಂಬರ್ 30 ರಂದು ದುಬೈನಲ್ಲಿ ಮುಖಾಮುಖಿಯಾಗಲಿವೆ. ಎ ಗುಂಪಿನಲ್ಲಿರುವ ಈ ಎರಡು ತಂಡಗಳು ಗುಂಪು ಹಂತದಲ್ಲೇ ಪರಸ್ಪರ ಎದುರಾಗಲಿವೆ.

IND vs PAK: ಇನ್ನೇರಡು ದಿನಗಳಲ್ಲಿ ಭಾರತ- ಪಾಕ್ ನಡುವೆ ಕ್ರಿಕೆಟ್ ಫೈಟ್
19 ವರ್ಷದೊಳಗಿನವರ ಏಷ್ಯಾಕಪ್
Follow us
ಪೃಥ್ವಿಶಂಕರ
|

Updated on:Nov 28, 2024 | 7:24 PM

2025ರ ಫೆಬ್ರವರಿ-ಮಾರ್ಚ್‌ನಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಗೆ ಸಂಬಂಧಿಸಿದಂತೆ ಭಾರತ ಮತ್ತು ಪಾಕಿಸ್ತಾನದ ನಡುವಿನ ವಿವಾದ ಇದುವರೆಗೂ ಬಗೆಹರಿದಿಲ್ಲ. ಹೀಗಾಗಿ ಐಸಿಸಿ ಕೂಡ ಈ ಪಂದ್ಯಾವಳಿಯ ವೇಳಾಪಟ್ಟಿಯನ್ನು ಪ್ರಕಟಿಸಿಲ್ಲ. ಆದರೀಗ ಭಾರತ ಹಾಗೂ ಪಾಕಿಸ್ತಾನ ನಡುವಿನ ವಿವಾದವನ್ನು ಬಗೆಹರಿಸುವ ಸಲುವಾಗಿಯೇ ಐಸಿಸಿ, ನವೆಂಬರ್ 29 ರಂದು ಸಭೆ ನಡೆಸಲು ತೀರ್ಮಾನಿಸಿದೆ. ಈ ಸಭೆಯ ಬಳಿಕ ಪಂದ್ಯಾವಳಿಯ ವೇಳಾಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆಗಳಿವೆ. ಆದರೆ ಅದಕ್ಕೂ ಮುನ್ನ ಅಂದರೆ ಕೇವಲ ಇನ್ನೇರಡು ದಿನಗಳಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಕ್ರಿಕೆಟ್ ಪಂದ್ಯ ನಡೆಯಲಿದೆ.

ದುಬೈನಲ್ಲಿ ಭಾರತ- ಪಾಕ್ ಫೈಟ್

ವಾಸ್ತವವಾಗಿ ಪುರುಷರ ಅಂಡರ್-19 ಏಷ್ಯಾಕಪ್ ನವೆಂಬರ್ 29 ರಿಂದ ಡಿಸೆಂಬರ್ 8 ರವರೆಗೆ ಯುಎಇಯಲ್ಲಿ ನಡೆಯಲಿದೆ. ಈ ಟೂರ್ನಿಯಲ್ಲಿ ಭಾರತ, ಪಾಕಿಸ್ತಾನ, ಅಫ್ಘಾನಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ, ಜಪಾನ್, ಯುಎಇ ಮತ್ತು ನೇಪಾಳ ಸೇರಿದಂತೆ ಒಟ್ಟು 8 ತಂಡಗಳು ಭಾಗವಹಿಸಲಿವೆ. 1989 ರಲ್ಲಿ ಪ್ರಾರಂಭವಾದ ಅಂಡರ್-19 ಏಷ್ಯಾಕಪ್​ನ 11ನೇ ಆವೃತ್ತಿಯ ಟೂರ್ನಿ ನಡೆಯಲಿದ್ದು, ಸತತ ನಾಲ್ಕನೇ ಬಾರಿಗೆ ಯುಎಇ ಆತಿಥ್ಯ ವಹಿಸಲಿದೆ. ಈ ಟೂರ್ನಿಯಲ್ಲಿ ಭಾಗವಹಿಸುವ 8 ತಂಡಗಳನ್ನು ತಲಾ 4ರ ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಭಾರತ, ಪಾಕಿಸ್ತಾನ, ಜಪಾನ್ ಮತ್ತು ಯುಎಇ ತಂಡಗಳು ಎ ಗುಂಪಿನಲ್ಲಿದ್ದರೆ, ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ನೇಪಾಳವನ್ನು ಬಿ ಗುಂಪಿನಲ್ಲಿ ಸ್ಥಾನ ಪಡೆದಿವೆ.

ಭಾರತದ ವೇಳಾಪಟ್ಟಿ

ಭಾರತ ಮತ್ತು ಪಾಕಿಸ್ತಾನ ತಂಡಗಳು ಒಂದೇ ಗುಂಪಿನಲ್ಲಿರುವುದರಿಂದ ಎರಡೂ ತಂಡಗಳು ಗುಂಪು ಹಂತದಲ್ಲೇ ಮುಖಾಮುಖಿಯಾಗಲಿವೆ. ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಈ ಪಂದ್ಯ ನವೆಂಬರ್ 30 ರಂದು ದುಬೈ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯ ಭಾರತೀಯ ಕಾಲಮಾನ ಬೆಳಗ್ಗೆ 10.30ಕ್ಕೆ ನಡೆಯಲಿದೆ. ಇದರ ನಂತರ, ಭಾರತ ತಂಡವು ಡಿಸೆಂಬರ್ 2 ರಂದು ಶಾರ್ಜಾದಲ್ಲಿ ಜಪಾನ್ ತಂಡವನ್ನು ಎದುರಿಸಲಿದೆ. ಆ ನಂತರ ಭಾರತ ತನ್ನ ಕೊನೆಯ ಗುಂಪು ಹಂತದ ಪಂದ್ಯವನ್ನು ಯುಎಇ ತಂಡದ ವಿರುದ್ಧ ಡಿಸೆಂಬರ್ 4 ರಂದು ಆಡಲಿದೆ.

ಅಂಡರ್-19 ಏಷ್ಯಾಕಪ್​ಗೆ ಟೀಂ ಇಂಡಿಯಾ: ಆಯುಷ್ ಮ್ಹಾತ್ರೆ, ವೈಭವ್ ಸೂರ್ಯವಂಶಿ, ಸಿ ಆಂಡ್ರೆ ಸಿದ್ಧಾರ್ಥ್, ಮೊಹಮ್ಮದ್ ಅಮನ್ (ನಾಯಕ), ಕಿರಣ್ ಚೋರ್ಮಲೆ (ಉಪನಾಯಕ), ಪ್ರಣಬ್ ಪಂತ್, ಹರ್ವಂಶ್ ಸಿಂಗ್ ಪಂಗಾಲಿಯಾ (ವಿಕೆಟ್ ಕೀಪರ್), ಅನುರಾಗ್ ಕಾವ್ಡೆ (ವಿಕೆಟ್ ಕೀಪರ್), ಹಾರ್ದಿಕ್ ರಾಜ್, ಮೊಹಮ್ಮದ್ ಅನನ್, ಸಮರ್ತ್ ಕಾರ್ತಿಕೇಯ, ನಾಗರಾಜ್, ಯುಧಾಜಿತ್ ಗುಹಾ, ಚೇತನ್ ಶರ್ಮಾ, ನಿಖಿಲ್ ಕುಮಾರ್.

ನಾನ್ ಟ್ರಾವೆಲಿಂಗ್ ರಿಸರ್ವ್: ಸಾಹಿಲ್ ಪರಾಖ್, ನಮನ್ ಪುಷ್ಪಕ್, ಅನ್ಮೋಲ್ಜೀತ್ ಸಿಂಗ್, ಪ್ರಣವ್ ರಾಘವೇಂದ್ರ, ಡಿ ದೀಪೇಶ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:22 pm, Thu, 28 November 24

ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಹಾಸನದಲ್ಲಿ ಜೆಡಿಎಸ್ ಪ್ರಭಾವ ಸಂಪೂರ್ಣವಾಗಿ ತಗ್ಗಿಸಲು ಕಾಂಗ್ರೆಸ್ ಹುನ್ನಾರ
ಹಾಸನದಲ್ಲಿ ಜೆಡಿಎಸ್ ಪ್ರಭಾವ ಸಂಪೂರ್ಣವಾಗಿ ತಗ್ಗಿಸಲು ಕಾಂಗ್ರೆಸ್ ಹುನ್ನಾರ
ವಿಜಯೇಂದ್ರ ತಂಡದಿಂದ ಕಲ್ಯಾಣ ಕರ್ನಾಟಕದಲ್ಲಿ ರೈತರ ಪರ ಹೋರಾಟ ಬೇಕಿತ್ತಾ?
ವಿಜಯೇಂದ್ರ ತಂಡದಿಂದ ಕಲ್ಯಾಣ ಕರ್ನಾಟಕದಲ್ಲಿ ರೈತರ ಪರ ಹೋರಾಟ ಬೇಕಿತ್ತಾ?