World Cup 2025: ಪಾಕ್ ನಾಯಕಿಯೊಂದಿಗೆ ಕೈಕುಲುಕದ ಹರ್ಮನ್‌ಪ್ರೀತ್ ಕೌರ್; ವಿಡಿಯೋ
Women's World Cup 2025: 2025ರ ಮಹಿಳಾ ವಿಶ್ವಕಪ್‌ನಲ್ಲಿಯೂ ಭಾರತ-ಪಾಕಿಸ್ತಾನ ಪಂದ್ಯದ ಟಾಸ್ ವೇಳೆ ಉಭಯ ನಾಯಕಿಯರ ನಡುವೆ ಹಸ್ತಲಾಘವ ನಡೆದಿಲ್ಲ. ಪಹಲ್ಗಾಮ್ ದಾಳಿ ವಿರೋಧಿಸಿ ಭಾರತದ ಮಹಿಳಾ ತಂಡ ನಾಯಕಿ ಹರ್ಮನ್‌ಪ್ರೀತ್ ಕೌರ್ ಪಾಕ್ ನಾಯಕಿಯೊಂದಿಗೆ ಕೈಕುಲುಕಲಿಲ್ಲ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಯೋತ್ಪಾದನೆ ವಿರುದ್ಧ ಭಾರತದ ನಿಲುವನ್ನು ಎತ್ತಿಹಿಡಿದಿದೆ.

2025 ರ ಐಸಿಸಿ ಮಹಿಳಾ ವಿಶ್ವಕಪ್‌ನ (Women’s World Cup 2025) ಆರನೇ ಪಂದ್ಯವು ಕೊಲಂಬೊದ ಆರ್. ಪ್ರೇಮದಾಸ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವೆ ನಡೆಯುತ್ತಿದೆ. ಪಾಕಿಸ್ತಾನದ ವಿರುದ್ಧ ಏಷ್ಯಾಕಪ್‌ನಲ್ಲಿ ಭಾರತದ ಪುರುಷರ ತಂಡ ಯಾವ ನಿಲುವು ತಾಳಿತ್ತೋ ಅದೇ ನಿಲುವನ್ನು ಮಹಿಳಾ ತಂಡವೂ ಮುಂದುವರೆಸಿದೆ. ಅಂದರೆ ಪುರುಷರ ತಂಡದಂತೆ ಮಹಿಳಾ ತಂಡವೂ ಕೂಡ ಪಾಕಿಸ್ತಾನ ತಂಡದೊಂದಿಗೆ ಕೈಕುಲುಕದಿರಲು (No Handshake) ನಿರ್ಧರಿಸಿದೆ. ಅದರಂತೆ ಪಂದ್ಯ ಆರಂಭಕ್ಕೂ ಮುನ್ನ ನಡೆದ ಟಾಸ್ ಸಮಯದಲ್ಲಿ ಉಭಯ ತಂಡಗಳ ನಾಯಕಿಯರ ನಡುವೆ ಯಾವುದೇ ಹ್ಯಾಂಡ್ಶೇಕ್ ನಡೆಯಲಿಲ್ಲ. ಇದೀಗ ಅದರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಪಾಕಿಸ್ತಾನಕ್ಕೆ ಭಾರಿ ಹಿನ್ನಡೆ
ಶ್ರೀಲಂಕಾ ವಿರುದ್ಧ ಭರ್ಜರಿ ಗೆಲುವಿನೊಂದಿಗೆ ಟೂರ್ನಿಯನ್ನು ಆರಂಭಿಸಿರುವ ಭಾರತೀಯ ಮಹಿಳಾ ತಂಡ, ಪಾಕಿಸ್ತಾನ ವಿರುದ್ಧದ ಗೆಲುವಿನ ಓಟವನ್ನು ಮುಂದುವರಿಸಲು ಎದುರು ನೋಡುತ್ತಿದೆ. ಟಾಸ್ ಸಮಯದಲ್ಲಿ, ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್, ಪಾಕಿಸ್ತಾನ ಮಹಿಳಾ ತಂಡದ ನಾಯಕಿ ಫಾತಿಮಾ ಸನಾ ಅವರೊಂದಿಗೆ ಹಸ್ತಲಾಘವ ಮಾಡಲು ನಿರಾಕರಿಸಿದರು. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಪ್ರತಿಭಟಿಸಿ ಮಹಿಳಾ ತಂಡ ಈ ಕ್ರಮ ಕೈಗೊಂಡಿದೆ. ಇನ್ನು ಈ ಪಂದ್ಯದಲ್ಲಿ ಪಾಕಿಸ್ತಾನ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
NO HANDSHAKE BETWEEN HARMAN & FATIMA SANA !!#ICCWomensCricketWorldCup pic.twitter.com/kz7zOfiT37
— Navin Mittal (@NavinSports) October 5, 2025
ಇದಕ್ಕೂ ಮೊದಲು, 2025 ರ ಏಷ್ಯಾಕಪ್ನಲ್ಲಿಯೂ ಭಾರತದ ನಾಯಕ ಸೂರ್ಯಕುಮಾರ್ ಯಾದವ್, ಪಾಕಿಸ್ತಾನ ನಾಯಕ ಸಲ್ಮಾನ್ ಆಘಾ ಅವರೊಂದಿಗೆ ಕೈಕುಲುಕಲು ನಿರಾಕರಿಸಿದ್ದರು. ಇದು ಸಾಕಷ್ಟು ವಿವಾದಕ್ಕೆ ಕಾರಣವಾಯಿತು. ಅದು ಮಾತ್ರವಲ್ಲದೆ ಏಷ್ಯಾಕಪ್ ಗೆದ್ದ ಟೀಂ ಇಂಡಿಯಾ, ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮತ್ತು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರಿಂದ ಟ್ರೋಫಿಯನ್ನು ಸ್ವೀಕರಿಸಲು ನಿರಾಕರಿಸಿತು. ಹೀಗಾಗಿ ಇದುವರೆಗೂ ಭಾರತ ತಂಡಕ್ಕೆ ಟ್ರೋಫಿ ಸಿಕ್ಕಿಲ್ಲ.
World Cup 2025: ಭಾರತದ ವಿರುದ್ಧ ಟಾಸ್ ಗೆದ್ದ ಪಾಕಿಸ್ತಾನ; ಹರ್ಮನ್‌ಪ್ರೀತ್ ಪಡೆಯಲ್ಲಿ 1 ಬದಲಾವಣೆ
ಭಾರತ ತಂಡ: ಪ್ರತೀಕಾ ರಾವಲ್, ಸ್ಮೃತಿ ಮಂಧಾನ, ಹರ್ಲೀನ್ ಡಿಯೋಲ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಜೆಮಿಮಾ ರಾಡ್ರಿಗಸ್, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಸ್ನೇಹ ರಾಣಾ, ರೇಣುಕಾ ಸಿಂಗ್ ಠಾಕೂರ್, ಕ್ರಾಂತಿ ಗೌಡ್, ಶ್ರೀ ಚರಣಿ.
ಪಾಕಿಸ್ತಾನ ತಂಡ: ಮುನೀಬಾ ಅಲಿ, ಸದಾಫ್ ಶಮಾಸ್, ಸಿದ್ರಾ ಅಮೀನ್, ರಮೀನ್ ಶಮೀಮ್, ಅಲಿಯಾ ರಿಯಾಜ್, ಸಿದ್ರಾ ನವಾಜ್ (ವಿಕೆಟ್ ಕೀಪರ್), ಫಾತಿಮಾ ಸನಾ (ನಾಯಕಿ), ನತಾಲಿಯಾ ಪರ್ವೇಜ್, ಡಯಾನಾ ಬೇಗ್, ನಶ್ರಾ ಸಂಧು, ಸಾದಿಯಾ ಇಕ್ಬಾಲ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:25 pm, Sun, 5 October 25
