ಇಬ್ಬರು ಅಲಭ್ಯ: ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಸಾಧ್ಯತೆ

India vs Afghanistan: ಅಫ್ಘಾನಿಸ್ತಾನ್ ವಿರುದ್ಧದ ಮೂರು ಮ್ಯಾಚ್​ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿತ್ತು. ಮಳೆಯ ಕಾರಣ 25 ಓವರ್​ಗಳಿಗೆ ಸೀಮಿತವಾಗಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಅಫ್ಘಾನಿಸ್ತಾನ್ 194 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಟೀಮ್ ಇಂಡಿಯಾ 22.5 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ 7 ವಿಕೆಟ್​ಗಳ ಜಯ ಸಾಧಿಸಿತ್ತು.

ಇಬ್ಬರು ಅಲಭ್ಯ: ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಸಾಧ್ಯತೆ
Team India
Image Credit source: BCCI

Updated on: Jun 16, 2026 | 2:31 PM

ಲಕ್ನೋದ ಏಕನಾ ಕ್ರೀಡಾಂಗಣದಲ್ಲಿ ಬುಧವಾರ (ಜೂನ್ 17) ಭಾರತ ಮತ್ತು ಅಫ್ಘಾನಿಸ್ತಾನ್ ನಡುವೆ ಎರಡನೇ ಏಕದಿನ ಪಂದ್ಯ ನಡೆಯಲಿದೆ. ಧರ್ಮಶಾಲಾದಲ್ಲಿ ನಡೆದ ಮೊದಲ ಪಂದ್ಯದಲ್ಲಿ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿರುವ ಶುಭ್‌ಮನ್ ಗಿಲ್ ನೇತೃತ್ವದ ಟೀಮ್ ಇಂಡಿಯಾ, ಸದ್ಯ 3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಕಾಯ್ದುಕೊಂಡಿದೆ. ನಾಳೆಯ ಪಂದ್ಯವನ್ನು ಭಾರತ ತಂಡ ಗೆದ್ದರೆ ಸರಣಿ ವಶಪಡಿಸಿಕೊಳ್ಳಬಹುದು.

ವಿರಾಟ್ ಕೊಹ್ಲಿ, ಹಾರ್ದಿಕ್ ಅಲಭ್ಯ:

ಗಾಯದ ಸಮಸ್ಯೆಯಿಂದಾಗಿ ವಿರಾಟ್ ಕೊಹ್ಲಿ ಮತ್ತು ಹಾರ್ದಿಕ್ ಪಾಂಡ್ಯ ಈ ಸರಣಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ಈ ಇಬ್ಬರು ಸ್ಟಾರ್ ಆಟಗಾರರು ದ್ವಿತೀಯ ಏಕದಿನ ಪಂದ್ಯದಲ್ಲೂ ಕಾಣಿಸಿಕೊಳ್ಳುವುದಿಲ್ಲ.

ಇತ್ತ ವಿರಾಟ್ ಕೊಹ್ಲಿ ತಂಡದಲ್ಲಿ ಇಲ್ಲದ ಕಾರಣ 2ನೇ ಏಕದಿನ ಪಂದ್ಯದಲ್ಲೂ ಇಶಾನ್ ಕಿಶನ್ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ. ಹಾಗೆಯೇ ಆಲ್​ರೌಂಡರ್ ಆಗಿ ನಿತೀಶ್ ಕುಮಾರ್ ರೆಡ್ಡಿ ಈ ಮ್ಯಾಚ್​ನಲ್ಲೂ ಕಾಣಿಸಿಕೊಳ್ಳಲಿದ್ದಾರೆ.

ಹೀಗಿರಲಿದೆ ಪ್ಲೇಯಿಂಗ್ ಇಲೆವೆನ್:

ಧರ್ಮಶಾಲಾದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗಿ ಪ್ರಸಿದ್ಧ್ ಕೃಷ್ಣ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಹೀಗಾಗಿ ಅವರನ್ನು ಆಡುವ ಬಳಗದಿಂದ ಕೈ ಬಿಡುವ ಸಾಧ್ಯತೆಯಿದೆ. ಅವರ ಬದಲಿಗೆ ಪ್ರಿನ್ಸ್​ ಯಾದವ್​ಗೆ ಚಾನ್ಸ್ ನೀಡಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ…

  1. ರೋಹಿತ್ ಶರ್ಮಾ
  2.  ಶುಭ್‌ಮನ್ ಗಿಲ್ (ನಾಯಕ)
  3. ಇಶಾನ್ ಕಿಶನ್
  4. ಶ್ರೇಯಸ್ ಅಯ್ಯರ್
  5.  ಕೆ.ಎಲ್. ರಾಹುಲ್ (ವಿಕೆಟ್ ಕೀಪರ್)
  6.  ನಿತೀಶ್ ಕುಮಾರ್ ರೆಡ್ಡಿ
  7.  ವಾಷಿಂಗ್ಟನ್ ಸುಂದರ್
  8.  ಹರ್ಷ್ ದುಬೆ
  9.  ಅರ್ಷದೀಪ್ ಸಿಂಗ್
  10.  ಗುರ್ನೂರ್ ಬ್ರಾರ್
  11.  ಪ್ರಿನ್ಸ್ ಯಾದವ್

ಪಂದ್ಯದ ವಿವರಗಳು:

  • ದಿನಾಂಕ: ಜೂನ್ 17, 2026 (ಬುಧವಾರ)
  •  ಸಮಯ: ಮಧ್ಯಾಹ್ನ 1:30 ಕ್ಕೆ (ಟಾಸ್ 1:00 ಗಂಟೆಗೆ)
  • ಮೈದಾನ: ಏಕನಾ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ, ಲಕ್ನೋ.
  • ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ಮತ್ತು ‘ಜಿಯೋಹಾಟ್‌ಸ್ಟಾರ್’ ಆ್ಯಪ್/ವೆಬ್.

ಇದನ್ನೂ ಓದಿ: 500, 1000, 2000 ಮತ್ತು 14000… ದಾಖಲೆಗಳ ಮೇಲೆ ಕಣ್ಣಿಟ್ಟಿರುವ ರೂಟ್

ಭಾರತ ಏಕದಿನ ತಂಡ: ಶುಭ್​ಮನ್ ಗಿಲ್ (ನಾಯಕ) , ಕೆಎಲ್ ರಾಹುಲ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ , ಯಶಸ್ವಿ ಜೈಸ್ವಾಲ್ , ಇಶಾನ್ ಕಿಶನ್ , ಶ್ರೇಯಸ್ ಅಯ್ಯರ್ , ವಾಷಿಂಗ್ಟನ್ ಸುಂದರ್ , ನಿತೀಶ್ ಕುಮಾರ್ ರೆಡ್ಡಿ , ಹರ್ಷ್ ದುಬೆ , ಕುಲ್ದೀಪ್ ಯಾದವ್ , ಅರ್ಷದೀಪ್ ಸಿಂಗ್ , ಗುರ್ನೂರ್ ಬ್ರಾರ್ , ಪ್ರಸಿದ್ಧ್ ಕೃಷ್ಣ , ಪ್ರಿನ್ಸ್ ಯಾದವ್.

 

 

Published On - 2:29 pm, Tue, 16 June 26

ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us