
ಭಾರತ ಮತ್ತು ಪಾಕಿಸ್ತಾನ್ ನಡುವಣ ಏಷ್ಯಾಕಪ್ ಫೈನಲ್ ಪಂದ್ಯವು ನಾಳೆ (ಸೆ.28) ನಡೆಯಲಿದೆ. ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಬೇಕಾದ ಅನಿವಾರ್ಯತೆ ಇದೆ. ಏಕೆಂದರೆ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದ ಇಬ್ಬರು ಆಟಗಾರರು ಫಿಟ್ನೆಸ್ ಸಮಸ್ಯೆಗೆ ಒಳಗಾಗಿದ್ದಾರೆ.
ಸೂಪರ್-4 ಹಂತದ ಕೊನೆಯ ಮ್ಯಾಚ್ನಲ್ಲಿ ಕಣಕ್ಕಿಳಿದಿದ್ದ ಟೀಮ್ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಸ್ನಾಯು ಸೆಳೆತಕ್ಕೆ ಒಳಗಾಗಿದ್ದಾರೆ. ಹೀಗಾಗಿ ಅವರು ಫೈನಲ್ ಪಂದ್ಯದಲ್ಲಿ ಕಣಕ್ಕಿಳಿಯುವುದು ಇನ್ನೂ ಸಹ ಖಚಿತವಾಗಿಲ್ಲ.
ಇನ್ನು ಫೀಲ್ಡಿಂಗ್ ವೇಳೆ ತಿಲಕ್ ವರ್ಮಾ ಅವರ ಕಾಲಿಗೆ ಗಾಯವಾಗಿದೆ. ಹೀಗಾಗಿ ಅವರು ಅಂತಿಮ ಓವರ್ಗಳ ವೇಳೆ ಮೈದಾನ ತೊರೆದಿದ್ದರು. ಆ ನಂತರದ ಫೀಲ್ಡಿಂಗ್ನಲ್ಲಿ ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ತಿಲಕ್ ವರ್ಮಾ ಕಣಕ್ಕಿಳಿಯುವುದು ಸಹ ಅನುಮಾನ ಎನ್ನಲಾಗುತ್ತಿದೆ.
ಅಂದರೆ ಹಾರ್ದಿಕ್ ಪಾಂಡ್ಯ ಹಾಗೂ ತಿಲಕ್ ವರ್ಮಾ ಹೊರಗುಳಿದರೆ ಎರಡು ಬದಲಾವಣೆ ಕಂಡು ಬರುವುದು ಖಚಿತ. ಅಲ್ಲದೆ ಕಳೆದ ಪಂದ್ಯದಿಂದ ಹೊರಗುಳಿದಿದ್ದ ಜಸ್ಪ್ರೀತ್ ಬುಮ್ರಾ ಫೈನಲ್ ಮ್ಯಾಚ್ ಆಡಲಿದ್ದಾರೆ. ಹೀಗಾಗಿ ಹರ್ಷಿತ್ ರಾಣಾ ಪ್ಲೇಯಿಂಗ್ ಇಲೆವೆನ್ನಿಂದ ಹೊರಬೀಳಲಿದ್ದಾರೆ.
ಅದರಂತೆ ಟೀಮ್ ಇಂಡಿಯಾ ಪರ ಆರಂಭಿಕರಾಗಿ ಅಭಿಷೇಕ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಕಾಣಿಸಿಕೊಳ್ಳಲಿದ್ದಾರೆ. ಮೂರನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಬ್ಯಾಟ್ ಬೀಸಲಿದ್ದಾರೆ. ತಿಲಕ್ ವರ್ಮಾ ಹೊರಗುಳಿದರೆ ನಾಲ್ಕನೇ ಕ್ರಮಾಂಕದಲ್ಲಿ ರಿಂಕು ಸಿಂಗ್ಗೆ ಅವಕಾಶ ಸಿಗಬಹುದು.
ಐದನೇ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಕಣಕ್ಕಿಳಿಯಲಿದ್ದಾರೆ. ಇನ್ನು ಆರನೇ ಕ್ರಮಾಂಕದಲ್ಲಿ ಹಾರ್ದಿಕ್ ಪಾಂಡ್ಯ ಇದ್ದು, ಅವರು ಸಹ ಫೈನಲ್ ಮ್ಯಾಚ್ಗೆ ಅಲಭ್ಯರಾದರೆ ಶಿವಂ ದುಬೆ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಏಳನೇ ಕ್ರಮಾಂಕದಲ್ಲಿ ಅಕ್ಷರ್ ಪಟೇಲ್ ಕಾಣಿಸಿಕೊಂಡರೆ, ಬೌಲರ್ಗಳಾಗಿ ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್ ಹಾಗೂ ವರುಣ್ ಚಕ್ರವರ್ತಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…
ಇದನ್ನೂ ಓದಿ: ಭಾರತದ ಅಹಂಕಾರವನ್ನ ಮುಗಿಸಿಬಿಡಿ: ಪಾಕ್ ಪಡೆಗೆ ಅಖ್ತರ್ ಖಡಕ್ ಸಂದೇಶ