IND vs BAN: ಮೊದಲ ಟಿ20 ಪಂದ್ಯಕ್ಕೆ ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ ಇಲೆವೆನ್

|

Updated on: Oct 05, 2024 | 4:53 PM

India vs Bangladesh: ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿರುವ ಟೀಮ್ ಇಂಡಿಯಾ, ಇದೀಗ ಟಿ20 ಸರಣಿಗೆ ಸಜ್ಜಾಗಿದೆ. ಆದರೆ ಈ ಸರಣಿಯಿಂದ ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ಮೊಹಮ್ಮದ್ ಸಿರಾಜ್ ಸೇರಿದಂತೆ ಟೀಮ್ ಇಂಡಿಯಾದ ಪ್ರಮುಖ ಆಟಗಾರರು ವಿಶ್ರಾಂತಿಯ ಕಾರಣ ಹೊರಗುಳಿದಿದ್ದಾರೆ.

IND vs BAN: ಮೊದಲ ಟಿ20 ಪಂದ್ಯಕ್ಕೆ ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ ಇಲೆವೆನ್
Team India
Follow us on

ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಮೂರು ಪಂದ್ಯಗಳ ಟಿ20 ಸರಣಿ ಭಾನುವಾರದಿಂದ (ಅ.6) ಶುರುವಾಗಲಿದೆ. ಈ ಸರಣಿಯಿಂದ ಪ್ರಮುಖ ಆಟಗಾರರು ಹೊರಗುಳಿದಿದ್ದು, ಹೀಗಾಗಿ ಹೊಸ ಪ್ಲೇಯಿಂಗ್ ಇಲೆವೆನ್ ರೂಪಿಸಿಕೊಳ್ಳಬೇಕಾದ ಅನಿವಾರ್ಯತೆ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಮುಂದಿದೆ. ಅದರಂತೆ ಗ್ವಾಲಿಯರ್​ನಲ್ಲಿ ನಡೆಯಲಿರುವ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಹೊಸ ಆರಂಭಿಕರು ಕಾಣಿಸಿಕೊಳ್ಳುವುದು ಖಚಿತ.

ಏಕೆಂದರೆ ತಂಡದ ಖಾಯಂ ಓಪನರ್​ಗಳಾದ ಶುಭ್​ಮನ್ ಗಿಲ್ ಹಾಗೂ ಯಶಸ್ವಿ ಜೈಸ್ವಾಲ್ ಈ ಸರಣಿಗೆ ಅಲಭ್ಯರಾಗಿದ್ದಾರೆ. ಹೀಗಾಗಿ ಟೀಮ್ ಇಂಡಿಯಾ ಪರ ಆರಂಭಿಕರಾಗಿ ಅಭಿಷೇಕ್ ಶರ್ಮಾ ಹಾಗೂ ಸಂಜು ಸ್ಯಾಮ್ಸನ್ ಕಾಣಿಸಿಕೊಳ್ಳಲಿದ್ದಾರೆ.

ಏಕೆಂದರೆ ಇವರಿಬ್ಬರನ್ನು ಹೊರತುಪಡಿಸಿದರೆ, ಭಾರತ ತಂಡದಲ್ಲಿ ಬೇರೆ ಯಾವುದೇ ಓಪನರ್​ಗಳಿಲ್ಲ. ಹೀಗಾಗಿ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಜೋಡಿ ಇನಿಂಗ್ಸ್ ಆರಂಭಿಸುವುದು ಖಚಿತ ಎನ್ನಬಹುದು.

ಇನ್ನು ಮೂರನೇ ಕ್ರಮಾಂಕದಲ್ಲಿ ನಾಯಕ ಸೂರ್ಯಕುಮಾರ್ ಯಾದವ್ ಕಣಕ್ಕಿಳಿಯಲಿದ್ದಾರೆ. ಹಾಗೆಯೇ ನಾಲ್ಕನೇ ಕ್ರಮಾಂಕದಲ್ಲಿ ಶಿವಂ ದುಬೆ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಹಾಗೆಯೇ ಐದನೇ ಮತ್ತು ಆರನೇ ಕ್ರಮಾಂಕಗಳಲ್ಲಿ ರಿಂಕು ಸಿಂಗ್ ಹಾಗೂ ಹಾರ್ದಿಕ್ ಪಾಂಡ್ಯ ಬ್ಯಾಟ್ ಬೀಸಲಿದ್ದಾರೆ.

ಅದೇ ರೀತಿ ರಿಯಾನ್ ಪರಾಗ್​ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಬಹುದು. ಇನ್ನು 8ನೇ ಕ್ರಮಾಂಕದಲ್ಲಿ ವಾಷಿಂಗ್ಟನ್ ಸುಂದರ್, 9ನೇ ಸ್ಥಾನ ರವಿ ಬಿಷ್ಣೋಯ್ ಕಾಣಿಸಿಕೊಳ್ಳಲಿದ್ದಾರೆ. ವೇಗಿಗಳಾಗಿ ಅರ್ಷದೀಪ್ ಸಿಂಗ್ ಜೊತೆ ಮಯಾಂಕ್ ಯಾದವ್ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…

  1. ಅಭಿಷೇಕ್ ಶರ್ಮಾ
  2. ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್)
  3. ಸೂರ್ಯಕುಮಾರ್ ಯಾದವ್
  4. ಶಿವಂ ದುಬೆ
  5. ರಿಂಕು ಸಿಂಗ್
  6. ಹಾರ್ದಿಕ್ ಪಾಂಡ್ಯ
  7. ರಿಯಾನ್ ಪರಾಗ್
  8. ವಾಷಿಂಗ್ಟನ್ ಸುಂದರ್
  9. ರವಿ ಬಿಷ್ಣೋಯ್
  10. ಅರ್ಷದೀಪ್ ಸಿಂಗ್
  11. ಮಯಾಂಕ್ ಯಾದವ್

ಇದನ್ನೂ ಓದಿ: IPL 2025: ಐಪಿಎಲ್ ಫ್ರಾಂಚೈಸಿಗಳ ಚಿಂತೆ ಹೆಚ್ಚಿಸಿದ ಹೊಸ ರೂಲ್ಸ್

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್(ನಾಯಕ) ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ಮಯಾಂಕ್ ಯಾದವ್.

ಭಾರತ ಮತ್ತು ಬಾಂಗ್ಲಾದೇಶ್ ಟಿ20 ಸರಣಿ ವೇಳಾಪಟ್ಟಿ:

1ನೇ ಟಿ20, ಭಾರತ vs ಬಾಂಗ್ಲಾದೇಶ ಸೋಮವಾರ, 7 ಅಕ್ಟೋಬರ್ 2024 7 PM ಗ್ವಾಲಿಯರ್
2ನೇ ಟಿ20, ಭಾರತ vs ಬಾಂಗ್ಲಾದೇಶ ಗುರುವಾರ, 10 ಅಕ್ಟೋಬರ್ 2024 7 PM ದೆಹಲಿ
3ನೇ ಟಿ20, ಭಾರತ vs ಬಾಂಗ್ಲಾದೇಶ ಭಾನುವಾರ, 13 ಅಕ್ಟೋಬರ್ 2024 7 PM ಹೈದರಾಬಾದ್