T20 World Cup 2022: ಟೀಮ್ ಇಂಡಿಯಾದಲ್ಲಿ 7 ಬೌಲರ್​​ಗಳು: ಪ್ಲೇಯಿಂಗ್ 11 ನಲ್ಲಿ ಯಾರಿಗೆ ಸಿಗಲಿದೆ ಚಾನ್ಸ್​?

T20 World Cup 2022: ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶವೆಂದರೆ ಈ ಪಂದ್ಯದಲ್ಲಿ ಮೊಹಮ್ಮದ್ ಶಮಿ ಕೇವಲ 1 ಓವರ್ ಮಾತ್ರ ಮಾಡಿದ್ದರು. ಅಂದರೆ ಆ ಪಂದ್ಯದಲ್ಲಿ ಟೀಮ್ ಇಂಡಿಯಾ ಒಟ್ಟು 7 ಬೌಲರ್​ಗಳನ್ನು ಬಳಸಿಕೊಂಡಿತ್ತು.

T20 World Cup 2022: ಟೀಮ್ ಇಂಡಿಯಾದಲ್ಲಿ 7 ಬೌಲರ್​​ಗಳು: ಪ್ಲೇಯಿಂಗ್ 11 ನಲ್ಲಿ ಯಾರಿಗೆ ಸಿಗಲಿದೆ ಚಾನ್ಸ್​?
team india
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 18, 2022 | 6:09 PM

T20 World Cup 2022: ಟಿ20 ವಿಶ್ವಕಪ್​ನ ಮೊದಲ ಅಭ್ಯಾಸ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿ ಟೀಮ್ ಇಂಡಿಯಾ (Team India) ಶುಭಾರಂಭ ಮಾಡಿದೆ. ಇದೀಗ ಅಕ್ಟೋಬರ್ 19 ರಂದು ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ 2ನೇ ಅಭ್ಯಾಸ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಸಜ್ಜಾಗಿದೆ. ವಿಶೇಷ ಎಂದರೆ ಇದೀಗ ಎಲ್ಲರ ಕಣ್ಣು ಟೀಮ್ ಇಂಡಿಯಾದ 2ನೇ ಅಭ್ಯಾಸ ಪಂದ್ಯದ ಮೇಲೆ ನೆಟ್ಟಿದೆ. ಏಕೆಂದರೆ ಮೊದಲ ಅಭ್ಯಾಸ ಪಂದ್ಯದಲ್ಲಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ ಅನ್ನು ಕಣಕ್ಕಿಳಿಸಿರಲಿಲ್ಲ. ಬದಲಾಗಿ ಬಹುತೇಕ ಆಟಗಾರರಿಗೆ ಅವಕಾಶ ನೀಡಿದ್ದರು.

ಅಂದರೆ ಅಭ್ಯಾಸ ಪಂದ್ಯದಲ್ಲಿ 15 ಆಟಗಾರರನ್ನು ವಿಭಿನ್ನ ಪಾತ್ರದಲ್ಲಿ ಬಳಸಿಕೊಳ್ಳುವ ಅವಕಾಶವಿದೆ. ಅದರಂತೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊಹಮ್ಮದ್ ಶಮಿ ಅವರನ್ನು 20ನೇ ಓವರ್​ ವೇಳೆ ಕರೆಸಿಕೊಂಡಿದ್ದರು. ಕೊನೆಯ ಓವರ್​ನಲ್ಲಿ ಆಸ್ಟ್ರೇಲಿಯಾಗೆ ಗೆಲ್ಲಲು 11 ರನ್​ ಬೇಕಿದ್ದ ವೇಳೆ ಶಮಿ ಮೂರು ವಿಕೆಟ್ ಹಾಗೂ ಒಂದು ರನೌಟ್ ಮಾಡುವ ಮೂಲಕ ಟೀಮ್ ಇಂಡಿಯಾಗೆ 6 ರನ್​ಗಳ ಜಯ ತಂದುಕೊಟ್ಟಿದ್ದರು.

ಆದರೆ ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶವೆಂದರೆ ಈ ಪಂದ್ಯದಲ್ಲಿ ಮೊಹಮ್ಮದ್ ಶಮಿ ಕೇವಲ 1 ಓವರ್ ಮಾತ್ರ ಮಾಡಿದ್ದರು. ಅಂದರೆ ಆ ಪಂದ್ಯದಲ್ಲಿ ಟೀಮ್ ಇಂಡಿಯಾ ಒಟ್ಟು 7 ಬೌಲರ್​ಗಳನ್ನು ಬಳಸಿಕೊಂಡಿತ್ತು. ಇದಾಗ್ಯೂ ಅಕ್ಷರ್ ಪಟೇಲ್​ಗೆ ಓವರ್​ ನೀಡಿರಲಿಲ್ಲ. ಹೀಗಾಗಿಯೇ ಟೀಮ್ ಇಂಡಿಯಾದ ಬೌಲಿಂಗ್ ವಿಭಾಗದಲ್ಲಿ ಯಾರು ಸ್ಥಾನ ಪಡೆಯಲಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಇದನ್ನೂ ಓದಿ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ವಿದೇಶಿ ತಂಡದ ಪರ ಆಡುತ್ತಿರುವ ಭಾರತೀಯ ಮೂಲದವರು ಯಾರೆಲ್ಲಾ ಗೊತ್ತಾ?
Image
T20 World Cup 2022 All Squad: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳ ಆಟಗಾರರ ಸಂಪೂರ್ಣ ಪಟ್ಟಿ ಇಲ್ಲಿದೆ
Image
T20 World Cup 2022: ಭಾರತ-ಪಾಕ್ ಅಲ್ಲ, ಈ ಬಾರಿ ಸೂರ್ಯ vs ರಿಜ್ವಾನ್..!
Image
Team India: ಟೀಮ್ ಇಂಡಿಯಾದ ಮೊದಲ ಟಿ20 ತಂಡದಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?

ಏಕೆಂದರೆ ತಂಡದಲ್ಲಿ ವೇಗಿಗಳಾಗಿ ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್ ಹಾಗೂ ಮೊಹಮ್ಮದ್ ಶಮಿ ಇದ್ದಾರೆ. ಇವರಲ್ಲಿ ಒಬ್ಬರನ್ನು ಕೈ ಬಿಡುವುದು ಖಚಿತ. ಆದರೆ ಯಾರನ್ನೂ ಕೈ ಬಿಡಲಿದ್ದಾರೆ ಎಂಬುದೇ ದೊಡ್ಡ ಪ್ರಶ್ನೆ. ಏಕೆಂದರೆ 4ನೇ ವೇಗಿಯಾಗಿ ಹಾರ್ದಿಕ್ ಪಾಂಡ್ಯ ಕೂಡ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ.

ಅಂದರೆ ಇಲ್ಲಿ ಟೀಮ್ ಇಂಡಿಯಾ ಮೂವರು ಮುಖ್ಯ ವೇಗಿಗಳು ಹಾಗೂ ಓರ್ವ ವೇಗದ ಆಲ್​ರೌಂಡರ್​ ಜೊತೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಇನ್ನು ಓರ್ವ ಅಥವಾ ಇಬ್ಬರು ಸ್ಪಿನ್ನರ್​ಗೆ ಮಣೆಹಾಕಬಹುದು. ಆದರೆ ಇಲ್ಲಿ ಸ್ಪಿನ್ನರ್​ಗಳ ವಿಷಯದಲ್ಲೂ ಪೈಪೋಟಿ ಇದೆ.

ತಂಡದಲ್ಲಿ ಸ್ಪಿನ್ ಆಲ್​ರೌಂಡರ್​ಗಳಾಗಿ ಅಕ್ಷರ್ ಪಟೇಲ್ ಹಾಗೂ ಆಶ್ವಿನ್ ಇದ್ದಾರೆ. ಹಾಗೆಯೇ ಪೂರ್ಣ ಪ್ರಮಾಣದ ಸ್ಪಿನ್ನರ್​ ಆಗಿ ಯುಜ್ವೇಂದ್ರ ಚಹಾಲ್ ಕೂಡ ತಂಡದಲ್ಲಿದ್ದಾರೆ. ಹೀಗಾಗಿ ಈ ಮೂವರಲ್ಲಿ ಒಬ್ಬರನ್ನು ಅಥವಾ ಇಬ್ಬರನ್ನು ಆಯ್ಕೆ ಮಾಡಿಕೊಳ್ಳಬೇಕಾದ ಅನಿವಾರ್ಯತೆಯಿದೆ.

ಇತ್ತ ಮೊದಲ ಅಭ್ಯಾಸ ಪಂದ್ಯದಲ್ಲಿ ಬ್ಯಾಟಿಂಗ್ ಮಾಡಿದ್ದ ಅಕ್ಷರ್ ಪಟೇಲ್​ಗೆ ರೋಹಿತ್ ಶರ್ಮಾ ಬೌಲಿಂಗ್ ನೀಡಿರಲಿಲ್ಲ. ಇನ್ನು ಚಹಾಲ್ ಹಾಗೂ ಅಶ್ವಿನ್​ಗೆ ಓವರ್​ಗಳನ್ನು ನೀಡಿದ್ದರು. ಈ ವೇಳೆ ನಾಲ್ಕು ಓವರ್ ಬೌಲಿಂಗ್ ಮಾಡಿದ್ದ ಅಶ್ವಿನ್ 28 ರನ್ ನೀಡಿದರೆ, 3 ಓವರ್ ಬೌಲ್ ಮಾಡಿದ ಚಹಾಲ್ 28 ರನ್ ಬಿಟ್ಟುಕೊಟ್ಟಿದ್ದರು. ಇನ್ನು ಎಡಗೈ ಸ್ಪಿನ್ನರ್ ಆಗಿರುವ ಅಕ್ಷರ್ ಪಟೇಲ್​ಗೆ ಓವರ್ ನೀಡದೇ ಅಚ್ಚರಿ ಮೂಡಿಸಿದರು. ಹೀಗಾಗಿ ಸ್ಪಿನ್ನರ್​ ಆಗಿ ಯಾರಿಗೆ ತಂಡದಲ್ಲಿ ಸ್ಥಾನ ಸಿಗಲಿದೆ ಎಂಬುದು ನಿಗೂಢ.

ಇಲ್ಲಿ ಟೀಮ್ ಇಂಡಿಯಾ 6+5 ಲೆಕ್ಕಾಚಾರದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಅಂದರೆ ಆರು ಬ್ಯಾಟ್ಸ್​ಮನ್​ಗಳು ಹಾಗೂ ಐದು ಬೌಲರ್​ಗಳನ್ನು ಒಳಗೊಂಡ ಪ್ಲೇಯಿಂಗ್ ಇಲೆವೆನ್. ಅದರಂತೆ ಬ್ಯಾಟ್ಸ್​ಮನ್​ಗಳಾಗಿ ಕೆಎಲ್ ರಾಹುಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದಿನೇಶ್ ಕಾರ್ತಿಕ್ ಸ್ಥಾನ ಪಡೆಯಲಿದ್ದಾರೆ. ಅದರ ಜೊತೆಗೆ ಆಲ್​ರೌಂಡರ್​ ಆಗಿ ಹಾರ್ದಿಕ್ ಪಾಂಡ್ಯ ಕೂಡ 6 ಮಂದಿಯ ಪಟ್ಟಿಯಲ್ಲಿ ಇರಲಿದ್ದಾರೆ. ಇನ್ನುಳಿದ ಐವರು ಬೌಲರ್​ಗಳ ಆಯ್ಕೆಯೇ ಈಗ ಟೀಮ್ ಇಂಡಿಯಾ ಮುಂದಿರುವ ದೊಡ್ಡ ಸವಾಲು.

ಅತ್ತ ವೇಗದ ಬೌಲಿಂಗ್ ವಿಭಾಗದಲ್ಲಿ 4 ಮಂದಿ ಇದ್ದು, ಇತ್ತ ಸ್ಪಿನ್ನರ್​ಗಳ ವಿಭಾಗದಲ್ಲಿ ಮೂವರಿದ್ದಾರೆ. ಹೀಗಾಗಿ ಈ 7 ಮಂದಿಯಿಂದ ಯಾರನ್ನು ಕಣಕ್ಕಿಳಿಸಬೇಕೆಂಬ ಸವಾಲು ಎದುರಾಗಿದೆ. ಏಕೆಂದರೆ ಇಲ್ಲಿ ಇಲ್ಲಿ ಸ್ಪಿನ್ನ್ ಆಲ್​ರೌಂಡರ್​ಗಳಾಗಿ ಅಶ್ವಿನ್ ಹಾಗೂ ಅಕ್ಷರ್ ಪಟೇಲ್ ಇದ್ದಾರೆ. ಜೊತೆಗೆ ಚಹಾಲ್ ಕೂಡ ಮುಖ್ಯ ಸ್ಪಿನ್ನರ್​ ಆಗಿ ತಂಡದಲ್ಲಿದ್ದಾರೆ. ಇದುವೇ ಈಗ  ಟೀಮ್ ಇಂಡಿಯಾದ ಚಿಂತೆಯನ್ನು ಹೆಚ್ಚಿಸಿದೆ.

ಒಂದು ವೇಳೆ ನಾಲ್ವರು ವೇಗಿಗಳನ್ನು ಕಣಕ್ಕಿಳಿಸಿದರೆ ಓರ್ವ ಸ್ಪಿನ್ನರ್​ಗೆ ಮಾತ್ರ ಅವಕಾಶ ನೀಡಬೇಕಾಗುತ್ತದೆ. ಹಾಗೆಯೇ ಹೆಚ್ಚುವರಿ ವೇಗಿಯಾಗಿ ಹಾರ್ದಿಕ್ ಪಾಂಡ್ಯರನ್ನು ಬಳಸಿಕೊಳ್ಳಬಹುದು. ಇಲ್ಲಿ ಟೀಮ್ ಇಂಡಿಯಾ ಇಬ್ಬರು ಸ್ಪಿನ್ನರ್​ಗಳಿಗೆ ಅವಕಾಶ ನೀಡಿದ್ರೆ ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್ ಹಾಗೂ ಮೊಹಮ್ಮದ್ ಶಮಿ…ಇವರಲ್ಲಿ ಒಬ್ಬರು ತಂಡದಿಂದ ಹೊರಗುಳಿಬೇಕಾಗುತ್ತದೆ. ಆದರೆ ಪ್ರಸ್ತುತ ಸನ್ನಿವೇಶದಲ್ಲಿ ಈ ನಾಲ್ವರು ವೇಗಿಗಳಲ್ಲಿ ಯಾರನ್ನು ಕೈ ಬಿಡಲಿದ್ದಾರೆ ಎಂಬುದೇ ಈಗ ಕುತೂಹಲ.

ಭಾರತ ತಂಡ ಹೀಗಿದೆ:

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್ ಅಶ್ವಿನ್, ಮೊಹಮ್ಮದ್ ಶಮಿ, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಭುವನೇಶ್ವರ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

ಮೀಸಲು ಆಟಗಾರರು: ಮೊಹಮ್ಮದ್ ಸಿರಾಜ್, ರವಿ ಬಿಷ್ಣೋಯ್, ಶ್ರೇಯಸ್ ಅಯ್ಯರ್, ಶಾರ್ದೂಲ್ ಠಾಕೂರ್

ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ