IND vs PAK: ಪಾಕ್ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾಗೆ ಹೊಸ ಚಿಂತೆ ಶುರು

India Playing 11: ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಚಹಾಲ್ ಅವರನ್ನು ಪರಿಪೂರ್ಣ ಬೌಲರ್​ಗಳಾಗಿ ಆಯ್ಕೆ ಮಾಡಿದರೆ, ಆಲ್​ರೌಂಡರ್​ಗಳಾದ ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾ ಅವರನ್ನು ಹೆಚ್ಚುವರಿ ಬೌಲರ್​ಗಳಾಗಿ ಬಳಿಸಿಕೊಳ್ಳಬಹುದು.

IND vs PAK: ಪಾಕ್ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾಗೆ ಹೊಸ ಚಿಂತೆ ಶುರು
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 27, 2022 | 11:05 AM

Asia Cup 2022: ಏಷ್ಯನ್ ರಾಷ್ಟ್ರಗಳ ಕ್ರಿಕೆಟ್ ಕದನ ಏಷ್ಯಾಕಪ್ (Asia Cup 2022) ಟಿ20 ಟೂರ್ನಿ ಶನಿವಾರ ಶುರುವಾಗಲಿದೆ. ಯುಎಇನ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಹಾಗೆಯೇ ಆಗಸ್ಟ್ 28 ರಂದು ನಡೆಯಲಿರುವ ಹೈವೊಲ್ಟೇಜ್ ಪಂದ್ಯದಲ್ಲಿ ಭಾರತ ತಂಡ ಸಾಂಪ್ರಾಯಿಕ ಎದುರಾಳಿ ಪಾಕಿಸ್ತಾನ್ (India Vs Pakistan) ವಿರುದ್ದ ಸೆಣಸಲಿದೆ. ಆದರೆ ಈ ಮಹತ್ವದ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾಗೆ ಪ್ಲೇಯಿಂಗ್ ಇಲೆವೆನ್ ಆಯ್ಕೆಯೇ ದೊಡ್ಡ ಚಿಂತೆಯಾಗಿದೆ. ಏಕೆಂದರೆ ತಂಡದಲ್ಲಿ ಸ್ಟಾರ ಆಟಗಾರ ದಂಡೇ ಇದ್ದು, ಹೀಗಾಗಿ ಆಡುವ ಬಳಗದಲ್ಲಿ ಯಾರಿಗೆ ಚಾನ್ಸ್ ನೀಡಬೇಕು, ಯಾರನ್ನು ಕೈ ಬಿಡಬೇಕು ಎನ್ನುವ ಪ್ರಶ್ನೆ ಎದುರಾಗಿದೆ.

ಇಲ್ಲಿ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಕಾಣಿಸಿಕೊಳ್ಳುವುದು ಖಚಿತ. ಹಾಗೆಯೇ 3ನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಆಡಲಿದ್ದಾರೆ. ಕೊಹ್ಲಿ ಮೂರನೇ ಸ್ಥಾನದಲ್ಲಿ ಕಣಕ್ಕಿಳಿದರೆ ಸೂರ್ಯಕುಮಾರ್ ಯಾದವ್ 4ನೇ ಕ್ರಮಾಂಕದಲ್ಲಿ ಆಡಬೇಕಾಗುತ್ತದೆ.

ಇನ್ನು ಆಲ್​ರೌಂಡರ್​ಗಳಾಗಿ ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾಗೂ ಪ್ಲೇಯಿಂಗ್​ನಲ್ಲಿ ಸ್ಥಾನ ನೀಡಬಹುದು. ಆದರೆ ಇಲ್ಲಿ ಸಮಸ್ಯೆ ಎದುರಾಗುವುದು ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಯ್ಕೆಯಲ್ಲಿ. ಅಂದರೆ ವಿಕೆಟ್ ಕೀಪರ್​ ಬ್ಯಾಟ್ಸ್​ಮನ್​ಗಳಾಗಿ ಕೆಎಲ್ ರಾಹುಲ್, ರಿಷಭ್ ಪಂತ್ ಹಾಗೂ ದಿನೇಶ್ ಕಾರ್ತಿಕ್ ತಂಡದಲ್ಲಿದ್ದಾರೆ.

ಇದನ್ನೂ ಓದಿ
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Team India: ಟೀಮ್ ಇಂಡಿಯಾದ ಸರ್ವಶ್ರೇಷ್ಠ ಆರಂಭಿಕ ಆಟಗಾರ ಯಾರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಇಲ್ಲಿ ಕೆಎಲ್ ರಾಹುಲ್ ಓಪನರ್ ಆಗಿ ಆಡುವುದು ಖಚಿತ. ಇನ್ನು ರಿಷಭ್ ಪಂತ್ ಅವರನ್ನು ವಿಕೆಟ್ ಕೀಪರ್ ಆಗಿ ಆಯ್ಕೆ ಮಾಡಿದರೆ ದಿನೇಶ್ ಕಾರ್ತಿಕ್ ಅವರನ್ನು ಕೈ ಬಿಡಬೇಕಾಗುತ್ತದೆ. ಒಂದು ವೇಳೆ ದಿನೇಶ್ ಕಾರ್ತಿಕ್​ಗೂ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ನೀಡಿದರೆ, ಒರ್ವ ಬೌಲರ್​ನನ್ನು ಕೈ ಬಿಡಬೇಕಾಗುತ್ತದೆ.

ಅಂದರೆ ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಿಷಭ್ ಪಂತ್ ಹಾಗೂ ದಿನೇಶ್ ಕಾರ್ತಿಕ್ ಅವರನ್ನು ಆಯ್ಕೆ ಮಾಡಿದರೆ 8 ಬ್ಯಾಟ್ಸ್​ಮನ್​ಗಳು ತಂಡದಲ್ಲಿ ಇರಲಿದ್ದಾರೆ. ಇದರಿಂದ ಪ್ಲೇಯಿಂಗ್ ಇಲೆವೆನ್​ನಲ್ಲಿ ಮೂವರು ಪರಿಪೂರ್ಣ ಬೌಲರ್​ಗಳಿಗೆ ಮಾತ್ರ ಅವಕಾಶ ನೀಡಬಹುದು. ಇಲ್ಲಿ ವೇಗಿಗಳಾಗಿ ಭುವನೇಶ್ವರ್ ಕುಮಾರ್ ಹಾಗೂ ಅರ್ಷದೀಪ್ ಸಿಂಗ್ ಸ್ಥಾನ ಪಡೆಯಬಹುದು. ಇನ್ನು ಸ್ಪಿನ್ನರ್ ಆಗಿ ಯುಜ್ವೇಂದ್ರ ಚಹಾಲ್ ಅಥವಾ ರವಿಚಂದ್ರನ್​ ಅಶ್ವಿನ್​ಗೆ ಅವಕಾಶ ನೀಡಬಹುದು.

ಇಲ್ಲಿ ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಚಹಾಲ್ ಅವರನ್ನು ಪರಿಪೂರ್ಣ ಬೌಲರ್​ಗಳಾಗಿ ಆಯ್ಕೆ ಮಾಡಿದರೆ, ಆಲ್​ರೌಂಡರ್​ಗಳಾದ ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾ ಅವರನ್ನು ಹೆಚ್ಚುವರಿ ಬೌಲರ್​ಗಳಾಗಿ ಬಳಿಸಿಕೊಳ್ಳಬಹುದು. ಈ ಮೂಲಕ 5 ಬೌಲರ್​ಗಳೊಂದಿಗೆ ಟೀಮ್ ಇಂಡಿಯಾ ಕಣಕ್ಕಿಳಿಯಬಹುದು.

ಆದರೆ ಇಲ್ಲಿ ಐವರು ಬೌಲರ್ ಮಾತ್ರ ಆಡಿದ್ರೆ, ಓರ್ವ ಬೌಲರ್ ದುಬಾರಿಯಾದರೆ ಅಥವಾ ಬೌಲರ್​ರೊಬ್ಬರು ಗಾಯಗೊಂಡರೆ ಬದಲಿ ಬೌಲರ್​ನ ಆಯ್ಕೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಇರುವುದಿಲ್ಲ. ಮತ್ತೊಂದೆಡೆ ಹಾರ್ದಿಕ್ ಪಾಂಡ್ಯ-ರವೀಂದ್ರ ಜಡೇಜಾರನ್ನು ಹೊರತುಪಡಿಸಿ ನಾಲ್ವರು ಪರಿಪೂರ್ಣ ಬೌಲರ್​ಗಳೊಂದಿಗೆ ಟೀಮ್ ಇಂಡಿಯಾ ಕಣಕ್ಕಿಳಿಯಬೇಕಿದ್ದರೆ ಓರ್ವ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಹೊರಗುಳಿಯಬೇಕಾಗುತ್ತದೆ. ಅದರಂತೆ ರಿಷಭ್ ಪಂತ್ ಹಾಗೂ ದಿನೇಶ್ ಕಾರ್ತಿಕ್ ಇವರಿಬ್ಬರಲ್ಲಿ ಒಬ್ಬರನ್ನು ಕೈ ಬಿಡಬೇಕಾಗುತ್ತದೆ.

ಆದರೀಗ ತಂಡದಿಂದ ಯಾರನ್ನು ಕೈ ಬಿಡುವುದು ಎಂಬುದೇ ಪ್ರಶ್ನೆ. 6 ಬೌಲರ್​ಗಳ ಆಯ್ಕೆಯೊಂದಿಗೆ ಟೀಮ್ ಇಂಡಿಯಾ ಕಣಕ್ಕಿಳಿಯಲು ಬಯಸಿದರೆ, ದಿನೇಶ್ ಕಾರ್ತಿಕ್ ಅಥವಾ ರಿಷಭ್ ಪಂತ್ ಹೊರಗುಳಿಯಬೇಕಾಗುತ್ತದೆ. ಆದರೆ ಈ ಇಬ್ಬರೂ ಆಟಗಾರರು ಉತ್ತಮ ಫಾರ್ಮ್​ನಲ್ಲಿದ್ದು, ಹೀಗಾಗಿ ಯಾರನ್ನು ಕೈ ಬಿಡುವುದು ಎಂಬುದೇ ಟೀಮ್ ಇಂಡಿಯಾ ಮುಂದಿರುವ ದೊಡ್ಡ ಸವಾಲು.

ಒಟ್ಟಿನಲ್ಲಿ ಸ್ಟಾರ್ ಆಟಗಾರರ ದಂಡೇ ಹೊಂದಿರುವ ಟೀಮ್ ಇಂಡಿಯಾ ಪಾಕಿಸ್ತಾನ್ ವಿರುದ್ದದ ಮಹತ್ವದ ಪಂದ್ಯದಲ್ಲಿ ಯಾರಿಗೆಲ್ಲಾ ಚಾನ್ಸ್ ನೀಡಲಿದ್ದಾರೆ, ಯಾವ ಆಟಗಾರನನ್ನು ಪ್ಲೇಯಿಂಗ್ ಇಲೆವೆನ್​ನಿಂದ ಕೈ ಬಿಡಲಿದ್ದಾರೆ ಕಾದು ನೋಡಬೇಕಿದೆ.

ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು