AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ

India Playing 11: ಈ ಪಂದ್ಯವು ಆಸ್ಟ್ರೇಲಿಯಾ ತಂಡದ ಪಾಲಿಗೆ ನಿರ್ಣಾಯಕ. ಏಕೆಂದರೆ ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯವನ್ನು ಟೀಮ್ ಇಂಡಿಯಾ 5 ವಿಕೆಟ್​ಗಳಿಂದ ಗೆದ್ದುಕೊಂಡಿದೆ. ಇದೀಗ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿರುವ ಭಾರತ ತಂಡವು 2ನೇ ಪಂದ್ಯವನ್ನು ಗೆದ್ದರೆ ಸರಣಿ ವಶಪಡಿಸಿಕೊಳ್ಳಬಹುದು.

IND vs AUS: ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ
TV9 Web
| Edited By: |

Updated on:Sep 24, 2023 | 1:29 PM

Share

ಭಾರತ-ಆಸ್ಟ್ರೇಲಿಯಾ 2ನೇ ಏಕದಿನ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಇಂದೋರ್​ನ ಹೋಲ್ಕರ್ ಕ್ರಿಕೆಟ್​​ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬೌಲಿಂಗ್ ಆಯ್ದುಕೊಂಡಿದ್ದಾರೆ.  ಅದರಂತೆ ಟೀಮ್ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಲಿದೆ. ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಮಾಡಲಾಗಿದೆ.

ಭಾರತ ತಂಡದ ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾಗೆ ಈ ಪಂದ್ಯದ ವೇಳೆ ವಿಶ್ರಾಂತಿ ನೀಡಲಾಗಿದ್ದು, ಅವರ ಬದಲಿಗೆ ಪ್ರಸಿದ್ಧ್ ಕೃಷ್ಣ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಹಾಗೆಯೇ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಸ್ಟೀವ್ ಸ್ಮಿತ್ ಮುನ್ನಡೆಸುತ್ತಿದ್ದು, ಪ್ಯಾಟ್ ಕಮಿನ್ಸ್ ವಿಶ್ರಾಂತಿಗಾಗಿ ಹೊರಗುಳಿದಿದ್ದಾರೆ.

ಈ ಪಂದ್ಯವು ಆಸ್ಟ್ರೇಲಿಯಾ ತಂಡದ ಪಾಲಿಗೆ ನಿರ್ಣಾಯಕ. ಏಕೆಂದರೆ ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯವನ್ನು ಟೀಮ್ ಇಂಡಿಯಾ 5 ವಿಕೆಟ್​ಗಳಿಂದ ಗೆದ್ದುಕೊಂಡಿದೆ. ಇದೀಗ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿರುವ ಭಾರತ ತಂಡವು 2ನೇ ಪಂದ್ಯವನ್ನು ಗೆದ್ದರೆ ಸರಣಿ ವಶಪಡಿಸಿಕೊಳ್ಳಬಹುದು.

ಆಸ್ಟ್ರೇಲಿಯಾ (ಪ್ಲೇಯಿಂಗ್ XI): ಡೇವಿಡ್ ವಾರ್ನರ್, ಮ್ಯಾಥ್ಯೂ ಶಾರ್ಟ್, ಸ್ಟೀವನ್ ಸ್ಮಿತ್ (ನಾಯಕ), ಮಾರ್ನಸ್ ಲಾಬುಶೇನ್, ಜೋಶ್ ಇಂಗ್ಲಿಸ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕ್ಯಾಮರೋನ್ ಗ್ರೀನ್, ಶಾನ್ ಅಬಾಟ್, ಆ್ಯಡಂ ಝಂಪಾ, ಜೋಶ್ ಹ್ಯಾಝಲ್​ವುಡ್, ಸ್ಪೆನ್ಸರ್ ಜಾನ್ಸನ್

ಇದನ್ನೂ ಓದಿ: ಟೀಮ್ ಇಂಡಿಯಾದ ಬ್ಯಾಟಿಂಗ್ ಶಕ್ತಿ ಕನ್ನಡಿಗ, ಟ್ರಾಫಿಕ್ ಪೊಲೀಸ್, ಡ್ರೈವರ್..!

ಭಾರತ (ಪ್ಲೇಯಿಂಗ್ XI): ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾಯಕ), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ.

ಅತ್ತ ಸರಣಿ ಆಸೆಯನ್ನು ಜೀವಂತವಿರಿಸಿಕೊಳ್ಳಬೇಕಿದ್ದರೆ ಆಸ್ಟ್ರೇಲಿಯಾ ತಂಡವು ದ್ವಿತೀಯ ಪಂದ್ಯವನ್ನು ಗೆಲ್ಲಲೇಬೇಕು. ಈ ಮೂಲಕ ಸರಣಿಯನ್ನು ಮೂರನೇ ಪಂದ್ಯದತ್ತ ಕೊಂಡೊಯ್ಯಬಹುದು. ಹೀಗಾಗಿ ಇಂದೋರ್​ನ ಹೋಲ್ಕರ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಬಳಗದಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮ್ಮಿನ್ಸ್, ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್, ಅಲೆಕ್ಸ್ ಕ್ಯಾರಿ, ಮಾರ್ನಸ್ ಲಾಬುಶೇನ್, ಸೀನ್ ಅಬಾಟ್, ನಾಥನ್ ಎಲ್ಲಿಸ್, ಕ್ಯಾಮರೋನ್ ಗ್ರೀನ್, ಜೋಶ್ ಹ್ಯಾಝಲ್​ವುಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್​ವೆಲ್, ತನ್ವೀರ್ ಸಾಂಘಾ, ಮ್ಯಾಟ್ ಶಾರ್ಟ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಆ್ಯಡಮ್ ಝಂಪಾ.

ಭಾರತ ತಂಡ: ಕೆಎಲ್ ರಾಹುಲ್ (ನಾಯಕ), ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ತಿಲಕ್ ವರ್ಮಾ, ಪ್ರಸಿದ್ಧ್ ಕೃಷ್ಣ, ರವಿಚಂದ್ರನ್ ಅಶ್ವಿನ್ ಮತ್ತು ವಾಷಿಂಗ್ಟನ್ ಸುಂದರ್.

Published On - 1:23 pm, Sun, 24 September 23