ಏಷ್ಯಾಕಪ್ನ 5ನೇ ಪಂದ್ಯದಲ್ಲಿ ಭಾರತ ಹಾಗೂ ನೇಪಾಳ ತಂಡಗಳು ಮುಖಾಮುಖಿಯಾಗಲಿದೆ. ಪಲ್ಲೆಕೆಲೆಯ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ (Team India) ಪ್ಲೇಯಿಂಗ್ ಇಲೆವೆನ್ನಲ್ಲಿ ಒಂದು ಬದಲಾವಣೆ ಕಂಡು ಬರುವುದು ಖಚಿತವಾಗಿದೆ.
ಏಕೆಂದರೆ ತಂಡದ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಭಾರತಕ್ಕೆ ಮರಳಿದ್ದಾರೆ. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಬುಮ್ರಾ ಮುಂಬೈಗೆ ವಾಪಾಸ್ಸಾಗಿದ್ದು, ಹೀಗಾಗಿ ನೇಪಾಳ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.
ಅದರಂತೆ ನೇಪಾಳ ವಿರುದ್ಧ ಮೊಹಮ್ಮದ್ ಶಮಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಪಾಕಿಸ್ತಾನ್ ವಿರುದ್ಧದ ಪಂದ್ಯಕ್ಕೆ ಆಯ್ಕೆಯಾಗಿದ್ದ ಆಡುವ ಬಳಗದಲ್ಲಿ ಶಮಿ ಕಾಣಿಸಿಕೊಂಡಿರಲಿಲ್ಲ.
ಇದೀಗ ಜಸ್ಪ್ರೀತ್ ಬುಮ್ರಾ ತಂಡದಿಂದ ಹೊರಗುಳಿದಿರುವ ಕಾರಣ ಅವರ ಸ್ಥಾನದಲ್ಲಿ ಹಿರಿಯ ವೇಗಿಯಾಗಿರುವ ಮೊಹಮ್ಮದ್ ಶಮಿ ಕಣಕ್ಕಿಳಿಯುವುದು ಖಚಿತ ಎನ್ನಬಹುದು.
ಇನ್ನುಳಿದಂತೆ ಪಾಕಿಸ್ತಾನ್ ವಿರುದ್ಧ ಕಾಣಿಸಿಕೊಂಡ ಬಳಗವೇ ನೇಪಾಳ ವಿರುದ್ಧ ಕೂಡ ಆಡುವ ಸಾಧ್ಯತೆ ಹೆಚ್ಚಿದೆ. ಅದರಂತೆ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ.
ಪಾಕಿಸ್ತಾನ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದ ಕೆಎಲ್ ರಾಹುಲ್ ಸೋಮವಾರ ಶ್ರೀಲಂಕಾಗೆ ಪ್ರಯಾಣಿಸಲಿದ್ದಾರೆ ಎಂದು ತಿಳಿದು ಬಂದಿದೆ. ಫಿಟ್ನೆಸ್ ಸಮಸ್ಯೆಯ ಕಾರಣ ಮೊದಲ ಎರಡು ಪಂದ್ಯಗಳಿಂದ ಹೊರಗುಳಿದಿದ್ದ ರಾಹುಲ್ ಇದೀಗ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಿಂದ ಫಿಟ್ನೆಸ್ ಕ್ಲಿಯರೆನ್ಸ್ ಪಡೆದಿದ್ದಾರೆ. ಅದರಂತೆ ಅವರು ಸೋಮವಾರ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ.
ಇತ್ತ ಭಾರತ-ನೇಪಾಳ ನಡುವಣ ಪಂದ್ಯವು ಸೋಮವಾರ ನಡೆಯಲಿದ್ದು, ಹೀಗಾಗಿ ಈ ಪಂದ್ಯಕ್ಕೂ ಕೆಎಲ್ ರಾಹುಲ್ ಅಲಭ್ಯರಾಗಲಿದ್ದಾರೆ. ಇನ್ನು ಟೀಮ್ ಇಂಡಿಯಾ ಸೂಪರ್-4 ಹಂತಕ್ಕೇರಿದರೆ ಅವರು ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ಮೀಸಲು ಆಟಗಾರ).
Published On - 10:58 pm, Sun, 3 September 23