IND vs SA: ಅಭಿಷೇಕ್ಗೆ ಮತ್ತೊಂದು ಚಾನ್ಸ್: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11
South Africa vs India: ಸೌತ್ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಮ್ಯಾಚ್ನಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ. ಒಂದು ವೇಳೆ ಇಂದಿನ ಪಂದ್ಯದಲ್ಲಿ ಭಾರತ ತಂಡ ಜಯ ಸಾಧಿಸಿದರೆ, ಸರಣಿ ಟೀಮ್ ಇಂಡಿಯಾ ಪಾಲಾಗಲಿದೆ. ಹೀಗಾಗಿ ಈ ಮ್ಯಾಚ್ ಸೌತ್ ಆಫ್ರಿಕಾ ಪಾಲಿಗೆ ನಿರ್ಣಾಯಕ.
ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಎರಡನೇ ಟಿ20 ಪಂದ್ಯ ಇಂದು (ನ.10) ನಡೆಯಲಿದೆ. ಗೆಬಹಾದಲ್ಲಿ ಜರುಗಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ಬದಲಾವಣೆ ಮಾಡುವ ಸಾಧ್ಯತೆ ತುಂಬಾ ಕಡಿಮೆ. ಏಕೆಂದರೆ ಮೊದಲ ಮ್ಯಾಚ್ನಲ್ಲಿ ಭಾರತ ತಂಡವು 61 ರನ್ಗಳ ಭರ್ಜರಿ ಜಯ ಸಾಧಿಸಿದ್ದು, ಹೀಗಾಗಿ ಅದೇ ಬಳಗವನ್ನೇ ಈ ಪಂದ್ಯದಲ್ಲೂ ಕಣಕ್ಕಿಳಿಸಲಿದೆ.
ಆದರೆ ಅತ್ತ ಟೀಮ್ ಇಂಡಿಯಾ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಸತತ ವೈಫಲ್ಯ ಅನುಭವಿಸುತ್ತಿರುವುದು ಚಿಂತೆಗೆ ಕಾರಣವಾಗಿದೆ. ಇದಾಗ್ಯೂ ತಂಡದಲ್ಲಿ ಬದಲಿ ಆರಂಭಿಕ ಆಟಗಾರ ಇಲ್ಲದಿರುವುದರಿಂದ ಅಭಿಷೇಕ್ಗೆ ಮತ್ತೊಂದು ಅವಕಾಶ ಸಿಗುವುದರಲ್ಲಿ ಅನುಮಾನವೇ ಇಲ್ಲ.
ಅದರಂತೆ ಎರಡನೇ ಪಂದ್ಯದಲ್ಲೂ ಟೀಮ್ ಇಂಡಿಯಾ ಆರಂಭಿಕರಾಗಿ ಅಭಿಷೇಕ್ ಶರ್ಮಾ ಹಾಗೂ ಸಂಜು ಸ್ಯಾಮ್ಸನ್ ಕಣಕ್ಕಿಳಿಯಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ನಾಯಕ ಸೂರ್ಯಕುಮಾರ್ ಯಾದವ್ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ನಾಲ್ಕನೇ ಕ್ರಮಾಂಕದಲ್ಲಿ ಎಡಗೈ ದಾಂಡಿಗ ತಿಲಕ್ ವರ್ಮಾ ಬ್ಯಾಟ್ ಬೀಸಲಿದ್ದಾರೆ.
ಐದನೇ ಕ್ರಮಾಂಕದಲ್ಲಿ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಕಣಕ್ಕಿಳಿಯಲಿದ್ದು, ಆರನೇ ಕ್ರಮಾಂಕವು ರಿಂಕು ಸಿಂಗ್ ಪಾಲಾಗಲಿದೆ. ಹಾಗೆಯೇ ಏಳನೇ ಕ್ರಮಾಂಕದಲ್ಲಿ ಸ್ಪಿನ್ ಆಲ್ರೌಂಡರ್ ಆಗಿ ಅಕ್ಷರ್ ಪಟೇಲ್ಗೆ ಚಾನ್ಸ್ ಸಿಗಲಿದೆ.
ಇನ್ನು ಬೌಲರ್ಗಳಾಗಿ ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್ ಹಾಗೂ ಅವೇಶ್ ಖಾನ್ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…
- ಅಭಿಷೇಕ್ ಶರ್ಮಾ
- ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್)
- ಸೂರ್ಯಕುಮಾರ್ ಯಾದವ್ (ನಾಯಕ)
- ತಿಲಕ್ ವರ್ಮಾ
- ಹಾರ್ದಿಕ್ ಪಾಂಡ್ಯ
- ರಿಂಕು ಸಿಂಗ್
- ಅಕ್ಷರ್ ಪಟೇಲ್
- ಅರ್ಷದೀಪ್ ಸಿಂಗ್
- ವರುಣ್ ಚಕ್ರವರ್ತಿ
- ರವಿ ಬಿಷ್ಣೋಯ್
- ಅವೇಶ್ ಖಾನ್
ಇದನ್ನೂ ಓದಿ: ಅಮೋಘ ಗೆಲುವಿನೊಂದಿಗೆ ಭಾರತದ ದಾಖಲೆ ಮುರಿದ ಪಾಕಿಸ್ತಾನ್
ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ತಿಲಕ್ ವರ್ಮಾ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ , ಅಕ್ಷರ್ ಪಟೇಲ್, ರಮಣ್ದೀಪ್ ಸಿಂಗ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್ , ಅರ್ಷದೀಪ್ ಸಿಂಗ್, ವಿಜಯಕುಮಾರ್ ವೈಶಾಕ್, ಅವೇಶ್ ಖಾನ್, ಯಶ್ ದಯಾಳ್.