AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನ್ ಸವಾಲಿಗೆ ಟೀಮ್ ಇಂಡಿಯಾ ರೆಡಿ: ಹೀಗಿರಲಿದೆ ಪ್ಲೇಯಿಂಗ್ ಇಲೆವೆನ್

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯು ಸೆಪ್ಟೆಂಬರ್ 13, 2026 ರಿಂದ ಆರಂಭವಾಗಲಿದೆ. ಈ ಸರಣಿಯ ದ್ವಿತೀಯ ಪಂದ್ಯ ಸೆಪ್ಟೆಂಬರ್ 15 ರಂದು ಹಾಗೂ ತೃತೀಯ ಪಂದ್ಯ ಸೆಪ್ಟೆಂಬರ್ 17 ರಂದು ಜರುಗಲಿದೆ. ಇನ್ನು ಈ ಸರಣಿಯ ಎಲ್ಲಾ ಪಂದ್ಯಗಳಿಗೂ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂ ಆತಿಥ್ಯ ವಹಿಸಲಿದೆ.

ಅಫ್ಘಾನ್ ಸವಾಲಿಗೆ ಟೀಮ್ ಇಂಡಿಯಾ ರೆಡಿ: ಹೀಗಿರಲಿದೆ ಪ್ಲೇಯಿಂಗ್ ಇಲೆವೆನ್
ಟೀಮ್ ಇಂಡಿಯಾImage Credit source: GettyImages
ಝಾಹಿರ್ ಯೂಸುಫ್
|

Updated on: Sep 12, 2026 | 2:02 PM

Share

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಿನ ಟಿ20 ಸರಣಿಯು ನಾಳೆಯಿಂದ (ಸೆ.13) ಆರಂಭವಾಗಲಿದೆ. ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಸರಣಿಯ ಪಂದ್ಯಕ್ಕೆ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಈ ಪ್ಲೇಯಿಂಗ್ ಇಲೆವೆನ್​ನಲ್ಲಿ ಎಡಗೈ ದಾಂಡಿಗರ ದಂಡೇ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಏಕೆಂದರೆ ಟೀಮ್ ಇಂಡಿಯಾದಲ್ಲಿ ಲೆಫ್ಟ್ ಹ್ಯಾಂಡ್ ಬ್ಯಾಟರ್​ಗಳ ಸಂಖ್ಯೆ ಹೆಚ್ಚಿದ್ದು, ಹೀಗಾಗಿ ಟಾಪ್-4 ನಲ್ಲಿ ಮೂವರು ಎಡಗೈ ದಾಂಡಿಗರು ಕಣಕ್ಕಿಳಿಯುವುದು ಖಚಿತ ಎಂದೇ ಹೇಳಬಹುದು. ಇದಾದ ಬಳಿಕ ಆಲ್​ರೌಂಡರ್​ಗಳಾಗಿ ಇಬ್ಬರು ಎಡಗೈ ದಾಂಡಿಗರು ಕಾಣಿಸಿಕೊಳ್ಳಲಿದ್ದಾರೆ.

ಅದರಂತೆ ಟೀಮ್ ಇಂಡಿಯಾ ಪರ ಆರಂಭಿಕರಾಗಿ ವೈಭವ್ ಸೂರ್ಯವಂಶಿ ಹಾಗೂ ಅಭಿಷೇಕ್ ಶರ್ಮಾ ಕಣಕ್ಕಿಳಿಯಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ನಾಯಕ ಶ್ರೇಯಸ್ ಅಯ್ಯರ್ ಬ್ಯಾಟ್ ಬೀಸಿದರೆ, ನಾಲ್ಕನೇ ಕ್ರಮಾಂಕದಲ್ಲಿ ಉಪನಾಯಕ ತಿಲಕ್ ವರ್ಮಾ ಕಾಣಿಸಿಕೊಳ್ಳಲಿದ್ದಾರೆ.

ವಿಕೆಟ್ ಕೀಪರ್ ಆಗಿ ಇಶಾನ್ ಕಿಶನ್ ಬದಲು ಸಂಜು ಸ್ಯಾಮ್ಸನ್​ಗೆ ಚಾನ್ಸ್ ಸಿಗುವ ಸಾಧ್ಯತೆ ಹೆಚ್ಚು. ಏಕೆಂದರೆ ಇಶಾನ್ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಮೊದಲ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆಯಿದೆ.

ಹಾಗೆಯೇ ಆಲ್​ರೌಂಡರ್​ಗಳಾಗಿ ಅಕ್ಷರ್ ಪಟೇಲ್, ಶಿವಂ ದುಬೆ ಹಾಗೂ ವಾಷಿಂಗ್ಟನ್ ಸುಂದರ್ ಆಡುವ ಬಳಗದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಿದೆ. ಇನ್ನು ಬೌಲರ್​ಗಳಾಗಿ ವರುಣ್ ಚಕ್ರವರ್ತಿ, ಜಸ್​ಪ್ರೀತ್ ಬುಮ್ರಾ ಹಾಗೂ ಅರ್ಷದೀಪ್ ಸಿಂಗ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…

  • ಅಭಿಷೇಕ್ ಶರ್ಮಾ (ಆರಂಭಿಕ ಬ್ಯಾಟರ್)
  • ವೈಭವ್ ಸೂರ್ಯವಂಶಿ (ಆರಂಭಿಕ ಬ್ಯಾಟರ್)
  • ಶ್ರೇಯಸ್ ಅಯ್ಯರ್ (ನಾಯಕ)
  • ತಿಲಕ್ ವರ್ಮಾ (ಉಪನಾಯಕ)
  • ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್)
  • ಶಿವಂ ದುಬೆ (ಆಲ್ ರೌಂಡರ್)
  • ಅಕ್ಷರ್ ಪಟೇಲ್ (ಆಲ್ ರೌಂಡರ್)
  • ವಾಷಿಂಗ್ಟನ್ ಸುಂದರ್ (ಆಲ್ ರೌಂಡರ್)
  • ವರುಣ್ ಚಕ್ರವರ್ತಿ (ಸ್ಪಿನ್ನರ್)
  • ಜಸ್​ಪ್ರೀತ್ ಬುಮ್ರಾ (ವೇಗಿ)
  • ಅರ್ಷದೀಪ್ ಸಿಂಗ್ (ಎಡಗೈ ವೇಗಿ)

ಪಿಚ್ ರಿಪೋರ್ಟ್​:

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದ ಪಿಚ್ ಬ್ಯಾಟಿಂಗ್‌ಗೆ ಹೆಚ್ಚು ಸಹಕಾರಿಯಾಗಿದ್ದು, ಇಲ್ಲಿ ರನ್ ಮಳೆ ಹರಿಯುವ ಸಾಧ್ಯತೆಯಿದೆ. ಹೀಗಾಗಿ, ಆರಂಭಿಕರಾದ ಅಭಿಷೇಕ್ ಶರ್ಮಾ ಮತ್ತು ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಆರಂಭದ ಮೇಲೆ ಭಾರತ ಭಾರಿ ಭರವಸೆ ಇಟ್ಟಿದೆ. ಮಧ್ಯಮ ಕ್ರಮಾಂಕದಲ್ಲಿ ತಿಲಕ್ ವರ್ಮಾ ಹಾಗೂ ಆಲ್ ರೌಂಡರ್‌ಗಳಾದ ಅಕ್ಷರ್ ಪಟೇಲ್ ಮತ್ತು ಶಿವಂ ದುಬೆ ಅವರ ಪ್ರದರ್ಶನ ತಂಡಕ್ಕೆ ದಿಕ್ಸೂಚಿಯಾಗಲಿದೆ. ಇನ್ನು ಗಾಯದಿಂದ ಚೇತರಿಸಿಕೊಂಡು ಮರಳಿರುವ ಜಸ್​ಪ್ರೀತ್ ಬುಮ್ರಾ  ಎಸೆಯಲಿರುವ ನಾಲ್ಕು ಓವರ್‌ಗಳು ಇಡೀ ಪಂದ್ಯದ ಫಲಿತಾಂಶದ ಮೇಲೆ ಬೀರಲಿರುವ ಪ್ರಭಾವವನ್ನು ಅಭಿಮಾನಿಗಳು ಕುತೂಹಲದಿಂದ ಎದುರು ನೋಡುತ್ತಿದ್ದಾರೆ.

ಇದನ್ನೂ ಓದಿ: ‘ಇಂಡಿಯಾ ಚಾಂಪಿಯನ್ಸ್​’ ತಂಡ ಪ್ರಕಟ

ಭಾರತ ಟಿ20 ತಂಡ: ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ (ಉಪನಾಯಕ), ಶಿವಂ ದುಬೆ, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್, ರವಿ ಬಿಷ್ಣೋಯ್, ಜಸ್​ಪ್ರೀತ್ ಬುಮ್ರಾ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!