IND vs WI T20: 2ನೇ ಟಿ20ಯಿಂದ ಸ್ಟಾರ್ ಪ್ಲೇಯರ್ ಔಟ್: ಭಾರತ ಪರ ಮತ್ತೊಬ್ಬ ಆಟಗಾರ ಪದಾರ್ಪಣೆ?

India Playing XI 2nd T20 vs West Indies: ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟಿ20 ಪಂದ್ಯಕ್ಕೂ ಮುನ್ನ ಭಾರತಕ್ಕೆ ಆಘಾತ ಉಂಟಾಗಿದೆ. ತಂಡದ ಸ್ಟಾರ್ ಬೌಲರ್ ಇಂಜುರಿಗೆ ತುತ್ತಾಗಿದ್ದು, ಇಂದಿನ ದ್ವಿತೀಯ ಟಿ20 ಯಲ್ಲಿ ಕಣಕ್ಕಿಳಿಯುವುದು ಅನುಮಾನ. ಹೀಗಾಗಿ ಭಾರತದ ಪ್ಲೇಯಿಂಗ್ XI ನಲ್ಲಿ ದೊಡ್ಡ ಬದಲಾವಣೆ ಆಗಲಿದೆ.

IND vs WI T20: 2ನೇ ಟಿ20ಯಿಂದ ಸ್ಟಾರ್ ಪ್ಲೇಯರ್ ಔಟ್: ಭಾರತ ಪರ ಮತ್ತೊಬ್ಬ ಆಟಗಾರ ಪದಾರ್ಪಣೆ?
India Playing XI vs WI 2nd T20I
Follow us
TV9 Web
| Updated By: Vinay Bhat

Updated on: Feb 18, 2022 | 9:42 AM

ಏಕದಿನ ಸರಣಿಯಿಂತೆ ಟಿ20 ಸರಣಿಯನ್ನೂ ಕ್ಲೀನ್​ಸ್ವೀಪ್ ಮಾಡುವ ಯೋಜನೆಯಲ್ಲಿರುವ ಭಾರತ ಇಂದು ವೆಸ್ಟ್ ಇಂಡೀಸ್ (India vs West Indies) ವಿರುದ್ಧದ ಎರಡನೇ ಟಿ20 ಪಂದ್ಯಕ್ಕೆ ಸಜ್ಜಾಗುತ್ತಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿಂದು ದ್ವಿತೀಯ ಚುಟುಕು ಕದನ ನಡೆಯಲಿದ್ದು, ಟೀಮ್ ಇಂಡಿಯಾ (Team India) ಸರಣಿ ವಶಪಡಿಸಿಕೊಳ್ಳುವ ಇರಾದೆಯಲ್ಲಿದೆ. ಅಹ್ಮದಾಬಾದ್‌ನಲ್ಲಿ ನಡೆದ 3 ಪಂದ್ಯಗಳ ಏಕದಿನ ಸರಣಿಯನ್ನು ಕ್ಲೀನ್‌ಸ್ವೀಪ್ ಮಾಡಿದ್ದ ಭಾರತ ತಂಡ, 3 ಪಂದ್ಯಗಳ ಚುಟುಕು ಕ್ರಿಕೆಟ್ ಸರಣಿಯಲ್ಲಿ 1-0 ಯಿಂದ ಮುನ್ನಡೆ ಸಾಧಿಸಿದೆ. ಇತ್ತ ಕೀರೊನ್ ಪೊಲಾರ್ಡ್ ನೇತೃತ್ವದ ವೆಸ್ಟ್ ಇಂಡೀಸ್ ತಂಡ ಚೊಚ್ಚಲ ಗೆಲುವನ್ನು ಎದುರುನೋಡುತ್ತಿದೆ. ತವರು ನೆಲದಲ್ಲಿ ಬಲಿಷ್ಠ ಇಂಗ್ಲೆಂಡ್ ತಂಡವನ್ನು ಟಿ20 ಸರಣಿಯಲ್ಲಿ ಮಣಿಸಿ ಭಾರತಕ್ಕೆ ಆಗಮಿಸಿದ್ದ ಕೆರಿಬಿಯನ್ನರ ಪ್ರದರ್ಶನ ಇಲ್ಲಿ ಮಂಕಾಗಿದ್ದು, ಇಂದಿನ ಪಂದ್ಯ ಮಹತ್ವದ್ದಾಗಿದೆ. ಇದರ ನಡುವೆ ರೋಹಿತ್ ಶರ್ಮಾ (Rohit Sharma) ಪಡೆಗೆ ಆಘಾತ ಉಂಟಾಗಿದೆ. ತಂಡದ ಸ್ಟಾರ್ ಬೌಲರ್ ಇಂಜುರಿಗೆ ತುತ್ತಾಗಿದ್ದು, ಇಂದಿನ ಎರಡನೇ ಟಿ20 ಯಲ್ಲಿ ಕಣಕ್ಕಿಳಿಯುವುದು ಅನುಮಾನ ಎನ್ನಲಾಗಿದೆ.

ಹೌದು, ಟೀಮ್ ಇಂಡಿಯಾದ ಸ್ಟಾರ್ ವೇಗಿ ದೀಪಕ್ ಚಹರ್ ಮೊದಲ ಟಿ20 ಪಂದ್ಯದಲ್ಲಿ ಫೀಲ್ಡಿಂಗ್ ಮಾಡುತ್ತಿದ್ದಾಗ ಬಲಗೈಗೆ ಗಾಯಮಾಡಿಕೊಂಡಿದ್ದಾರೆ. ಹೀಗಾಗಿ ಇವರು ಇಂದಿನ ಪಂದ್ಯಕ್ಕೆ ಅನುಮಾನ ಎನ್ನಲಾಗಿದೆ. ಗುಣಮುಖರಾದರೂ ವಿಶ್ರಾಂತಿ ಬೇಕಾಗಿರುವ ಕಾರಣ ಆಡುವ ಬಳಗದಿಂದ ಹೊರಗುಳಿಯುವ ಸಾಧ್ಯತೆ ದಟ್ಟವಾಗಿದೆ. ಹೀಗಾಗಿ ಅವಕಾಶಕ್ಕಾಗಿ ಕಾಯುತ್ತಿರುವ ಐಪಿಎಲ್​ನ ಸ್ಟಾರ್ ವೇಗಿ ಆವೇಶ್ ಖಾನ್​ ಸ್ಥಾನ ಪಡೆಯಬಹುದು. ಹೀಗಾದಲ್ಲಿ ಮತ್ತೊಬ್ಬ ಆಟಗಾರ ಭಾರತ ಪರ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಲಿದ್ದಾರೆ. ಮೊದಲ ಪಂದ್ಯದಲ್ಲಿ ರವಿ ಬಿಷ್ಟೋಯ್ ಟೀಮ್ ಇಂಡಿಯಾ ಪರ ಚೊಚ್ಚಲ ಪಂದ್ಯವನ್ನಾಡಿದ್ದರು.

ಇನ್ನುಳಿದಂತೆ ಎರಡನೇ ಟಿ20 ಪಂದ್ಯಕ್ಕೆ ಭಾರತ ತಂಡದಲ್ಲಿ ಕೆಲವು ಬದಲಾವಣೆ ನಿರೀಕ್ಷಿಸಲಾಗಿದೆ. ರೋಹಿತ್ ಶರ್ಮಾ ಜೊತೆ ಇನ್ನಿಂಗ್ಸ್ ಆರಂಭಿಸುವ ಓಪನರ್ ಇಶಾನ್ ಕಿಶನ್ ನಿರೀಕ್ಷೆಗೆ ತಕ್ಕಂತೆ ಬ್ಯಾಟ್ ಬೀಸುತ್ತಿಲ್ಲ. ಕಳೆದ ಪಂದ್ಯದಲ್ಲೂ ಬ್ಯಾಟಿಂಗ್ ನಡೆಸಲು ಪರದಾಡಿದರು. ಹೀಗಾಗಿ ಕಣಕ್ಕಿಳಿಯಲು ತುದಿಗಾಲಿನಲ್ಲಿ ನಿಂತಿರುವ ರುತುರಾಜ್ ಗಾಯಕ್ವಾಡ್​ಗೆ ಇಂದಾದರೂ ಅವಕಾಶ ಸಿಗುತ್ತಾ ಎಂಬುದು ಕುತೂಹಲ ಕೆರಳಿಸಿದೆ. ಇದರ ಜೊತೆಗೆ ಶ್ರೇಯಸ್ ಅಯ್ಯರ್ ಅವರನ್ನೂ ಆಡುವ ಬಳಗಕ್ಕೆ ಕರೆತರುವ ಯೋಜನೆ ಭಾರತ ತಂಡದಲ್ಲಿದೆ ಎನ್ನಲಾಗಿದೆ. ಹೀಗಾದಲ್ಲಿ ಯಾರನ್ನ ಕೈಬಿಡಬಿಹುದು ಎಂಬುದು ನೋಡಬೇಕಿದೆ.

ವೆಂಕಟೇಶ್ ಅಯ್ಯರ್ ಕೂಡ ಮೊದಲ ಟಿ20 ಪಂದ್ಯದ ವೇಳೆ ಗಾಯಕ್ಕೆ ತುತ್ತಾಗಿದ್ದರು. ಅರ್ಧದಲ್ಲೇ ಫಿಲ್ಡಿಂಗ್ ಮಾಡಲು ಸಾಧ್ಯವಾಗದೆ ಎದ್ದು ಹೋಗಿದ್ದರು. ಅಲ್ಲದೆ ಇವರ ಕಡೆಯಿಂದ ಭಾರತಕ್ಕೆ ದೊಡ್ಡ ಮಟ್ಟದ ಪ್ರಯೋಜನ ಸಿಗುತ್ತಿಲ್ಲ. ಹೀಗಾಗಿ ಇವರ ಜಾಗದಲ್ಲಿ ದೀಪಕ್ ಹೂಡಾಗೆ ಅವಕಾಶ ನೀಡ್ತಾರ ಅಥವಾ ಶ್ರೇಯಸ್ ಅಯ್ಯರ್​​ ಅವರನ್ನು ಕಣಕ್ಕಿಳಿಸುವ ಬಗ್ಗೆ ಮ್ಯಾನೇಜ್ಮೆಂಟ್ ತೀರ್ಮಾನ ಕೈಗೊಳ್ಳಲಿದೆ.

ಇತ್ತ ಗಾಯದ ಸಮಸ್ಯೆಯಿಂದಾಗಿ ಮುನ್ನೆಚ್ಚರಿಕೆ ಕ್ರಮವಾಗಿ ವಿಶ್ರಾಂತಿಯಲ್ಲಿದ್ದ ಜೇಸನ್ ಹೋಲ್ಡರ್ ಇಂದಿನ ಎರಡನೇ ಟಿ20 ಪಂದ್ಯದ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಜೇಸನ್ ಬಂದರೆ ರೋಸ್ಟನ್ ಚೇಸ್ ಅಥವಾ ಅಕೀಲ್ ಹೊಸೀನ್ ಹೊರಗುಳಿಯಲಿದ್ದಾರೆ. ಉಳಿದಂತೆ ಬೌಲಿಂಗ ಪಡೆಯಲ್ಲಿ ಇನ್ನೂ ಕೆಲ ಬದಲಾವಣೆ ನಿರೀಕ್ಷಿಸಲಾಗಿದೆ. ನಿಕೋಲಸ್ ಪೂರನ್ ಫಾರ್ಮ್​ಗೆ ಬಂದಿರುವುದು ಕೆರಿಬಿಯನ್ನರ ಮೊಗದಲ್ಲಿ ಮಂದಹಾಸ ಮೂಡಿದೆ.

ಭಾರತ ಸಂಭಾವ್ಯ ಪ್ಲೇಯಿಂಗ್ XI:

ಇಶಾನ್ ಕಿಶನ್/ ರುತುರಾಜ್ ಗಾಯಕ್ವಾಡ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಶಾರ್ದೂಲ್ ಠಾಕೂರ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ರವಿ ಬಿಷ್ಟೋಯ್, ಯುಜ್ವೇಂದ್ರ ಚಹಲ್, ಆವೇಶ್ ಖಾನ್.

IND vs WI T20: ಇಂದು ಭಾರತ- ವೆಸ್ಟ್ ಇಂಡೀಸ್ ಎರಡನೇ ಟಿ20: ಸರಣಿ ವಶಪಡಸಿಕೊಳ್ಳುವತ್ತ ರೋಹಿತ್ ಚಿತ್ತ

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ