IND vs SL 2nd T20: ಈ ಪಂದ್ಯದಲ್ಲಾದರೂ ಇದೆಯೇ ಅವಕಾಶ?: ಎರಡನೇ ಟಿ20ಗೆ ಭಾರತದ ಸಂಭಾವ್ಯ ಪ್ಲೇಯಿಂಗ್ XI

India Playing XI 2nd T20: ಶ್ರೀಲಂಕಾ ವಿರುದ್ಧದ ಮೊದಲ ಟಿ20 ಯಲ್ಲಿ ಗೆಲುವು ಸಾಧಿಸಿದ್ದರೂ ಎರಡನೇ ಕದನಕ್ಕೆ ರೋಹಿತ್ ಶರ್ಮಾ ತಂಡದಲ್ಲಿ ಒಂದು ಬದಲಾವಣೆ ಮಾಡುವ ಸಂಭವವಿದೆ. ಇಲ್ಲಿದೆ ನೋಡಿ ಭಾರತದ ಸಂಭಾವ್ಯ ಪ್ಲೇಯಿಂಗ್ XI.

IND vs SL 2nd T20: ಈ ಪಂದ್ಯದಲ್ಲಾದರೂ ಇದೆಯೇ ಅವಕಾಶ?: ಎರಡನೇ ಟಿ20ಗೆ ಭಾರತದ ಸಂಭಾವ್ಯ ಪ್ಲೇಯಿಂಗ್ XI
India Playing XI vs SL 2nd T20
Follow us
TV9 Web
| Updated By: Vinay Bhat

Updated on: Feb 26, 2022 | 9:52 AM

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣದಲ್ಲಿ ಇಂದು ಭಾರತ ಹಾಗೂ ಶ್ರೀಲಂಕಾ (IND vs SL 2nd T20) ನಡುವೆ ಎರಡನೇ ಟಿ20 ಪಂದ್ಯ ನಡೆಯಲಿದೆ. ಮೊದಲ ಕದನದಲ್ಲಿ 62 ರನ್​ಗಳ ಅಮೋಘ ಗೆಲುವು ಕಂಡು ಸೋಲಿಲ್ಲದ ಸರದಾರನಾಗಿ ಮೆರೆಯುತ್ತಿರುವ ಟೀಮ್ ಇಂಡಿಯಾ (Team India) ಇಂದಿನ ಪಂದ್ಯ ಕೂಡ ಗೆದ್ದು ಈ ಸರಣಿಯನ್ನೂ ವಶಪಡಿಸಿಕೊಳ್ಳುವ ಯೋಜನೆಯಲ್ಲಿದೆ. ಇತ್ತ ಪ್ರವಾಸಿ ಶ್ರೀಲಂಕಾ ತಂಡ ಸರಣಿ ಗೆಲುಚಿನ ಆಸೆ ಉಳಿಸಿಕೊಳ್ಳಬೇಕಾದರೆ ಈ ಪಂದ್ಯದಲ್ಲಿ ಗೆಲ್ಲಲೇಬೇಕು. ಅನುಭವದ ಕೊರತೆ ಇರುವ ಲಂಕಾ ಬೌಲರ್‌ಗಳು ಶಿಸ್ತಿನ ದಾಳಿ ನಡೆಸುವ ಅನಿವಾರ್ಯತೆ ಇದೆ. ಭಾರತ ಪರ ರುತುರಾಜ್ ಗಾಯಕ್ವಾಡ್ (Ruturaj Gaikwad) ಇಂಜುರಿಯಿಂದಾಗಿ ಟೂರ್ನಿಯಿಂದ ಹೊರಬಿದ್ದಿದ್ದು ಮಯಾಂಕ್ ಅಗರ್ವಾಲ್ ತಂಡ ಸೇರಿಕೊಂಡಿದ್ದಾರೆ. ಮೊದಲ ಟಿ20 ಯಲ್ಲಿ ಗೆಲುವು ಸಾಧಿಸಿದ್ದರೂ ಎರಡನೇ ಕದನಕ್ಕೆ ರೋಹಿತ್ ತಂಡದಲ್ಲಿ ಒಂದು ಬದಲಾವಣೆ ಮಾಡುವ ಸಂಭವವಿದೆ.

ಓಪನರ್​ಗಳಾಗಿ ನಾಯಕ ರೋಹಿತ್ ಶರ್ಮಾ ಜೊತೆ ಇಶಾನ್ ಕಿಶನ್ ಇನ್ನಿಂಗ್ಸ್ ಆರಂಭಿಸುವುದು ಖಚಿತ. ಈ ಜೋಡಿ ಮೊದಲ ಟಿ20 ಯಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿತ್ತು. ಆರಂಭದಿಂದಲೇ ಲಂಕಾ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದ ಇವರಿಬ್ಬರು 11.5 ಓವರ್‌ಗಳಲ್ಲೇ 111 ರನ್‌ಗಳ ಜೊತೆಯಾಟ ಕಟ್ಟಿ ಭದ್ರ ಅಡಿಪಾಯ ಹಾಕಿಕೊಟ್ಟಿದ್ದರು. ರೋಹಿತ್ 44 ರನ್, ಕಿಶನ್ 89 ರನ್ ಚಚ್ಚಿದ್ದರು. ಇಂದುಕೂಡ ಇವರ ಕಡೆಯಿಂದ ಇದೇರೀತಿಯ ಮತ್ತೊಂದು ಇನ್ನಿಂಗ್ಸ್ ನಿರೀಕ್ಷಿಸಲಾಗಿದೆ.

ಕೊಹ್ಲಿ ಅನುಪಸ್ಥಿತಿಯಲ್ಲಿ ಅವರ ಜಾಗದಲ್ಲಿ ಕಣಕ್ಕಿಳಿಯುತ್ತಿರುವ ಶ್ರೇಯಸ್ ಅಯ್ಯರ್ ಕೂಡ ಸ್ಫೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದಾರೆ. ರೋಹಿತ್ ಶರ್ಮಾ ಹೇಳಿರುವಂತೆ ರವೀಂದ್ರ ಜಡೇಜಾ ಅಗ್ರಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ. ಅದರಂತೆ ಇವರು ನಾಲ್ಕನೇ ಸ್ಥಾನದಲ್ಲಿ ಮತ್ತೊಮ್ಮೆ ಅಗ್ನಿಪರೀಕ್ಷೆಗೆ ಇಳಿಯಲಿದ್ದಾರೆ. ಸಂಜು ಸ್ಯಾಮ್ಸನ್ ಮತ್ತು ವೆಂಕಟೇಶ್ ಅಯ್ಯರ್ ಫಿನಿಶಿಂಗ್ ಜವಾಬ್ದಾರಿ ನಿರ್ವಹಿಸಲಿದ್ದಾರೆ.

ಮೊದಲ ಟಿ20 ಪಂದ್ಯದಲ್ಲಿ ಆಡಿ ಪದಾರ್ಪಣೆ ಮಾಡಿದ್ದ ದೀಪಕ್ ಹೂಡ ಅವರಿಗೆ ಮತ್ತೊಂದು ಅವಕಾಶ ಅನುಮಾನ. ಹೀಗಾಗಿ ಹೆಚ್ಚುವರಿ ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ ಅವರನ್ನು ಆಡಿಸಿದರೆ ಅಚ್ಚರಿ ಪಡಬೇಕಿಲ್ಲ. ಅಲ್ಲದೆ ಕುಲ್ದೀಪ್ ಕಳದ ವೆಸ್ಟ್ ಇಂಡೀಸ್ ಸರಣಿಯಿಂದಲೂ ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಉಳಿದಂತೆ ಜಸ್​ಪ್ರೀತ್ ಬುಮ್ರಾ ತಂಡಕ್ಕೆ ಕಮ್​ಬ್ಯಾಕ್ ಮಾಡಿರುವುದು ಬೌಲರ್​ಗಳ ಬಲ ಹೆಚ್ಚಿಸಿದೆ. ಕಳೆದ ಎರಡು ಪಂದ್ಯಗಳಲ್ಲಿ ಭುವನೇಶ್ವರ್‌ ಕುಮಾರ್‌ ಕೂಡ ಅತ್ಯುತ್ತಮ ಬೌಲಿಂಗ್‌ ಪ್ರದರ್ಶನ ತೋರಿದ್ದರು. ಗುರುವಾರ ನಡೆದಿದ್ದ ಪಂದ್ಯದಲ್ಲಿಯೂ ಭುವಿ ಉತ್ತಮವಾಗಿ ಬೌಲ್‌ ಮಾಡಿ ಎರಡು ನಿರ್ಣಾಯಕ ವಿಕೆಟ್‌ಗಳನ್ನು ಕಬಳಿಸಿದ್ದರು. ಎರಡು ಓವರ್‌ ಬೌಲ್‌ ಮಾಡಿದ್ದ ಅವರು ಕೇವಲ 9 ರನ್ ನೀಡಿದ್ದರು. ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಯುಜ್ವೇಂದ್ರ ಚಹಾಲ್ ತಂಡದಲ್ಲಿ ತಮ್ಮ ಸ್ಥಾನವನ್ನು ಭದ್ರ ಪಡಿಸಿಕೊಂಡಿದ್ದಾರೆ.

ಭಾರತ ಸಂಭಾವ್ಯ ತಂಡ: ಇಶಾನ್ ಕಿಶನ್ (ವಿಕೆಟ್ ಕೀಪರ್), ರೋಹಿತ್ ಶರ್ಮ (ನಾಯಕ), ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ಸಂಜು ಸ್ಯಾಮ್ಸನ್, ವೆಂಕಟೇಶ್ ಅಯ್ಯರ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಕುಲ್ದೀಪ್ ಯಾದವ್, ಜಸ್‌ಪ್ರೀತ್ ಬುಮ್ರಾ, ಯುಜ್ವೇಂದ್ರ ಚಹಲ್.

ಉಭಯ ತಂಡಗಳು ಈವರೆಗೆ ಟಿ20 ಯಲ್ಲಿ 23 ಸಲ ಮುಖಾಮುಖಿಯಾಗಿದ್ದು, ಭಾರತ 15 ಬಾರಿ ಗೆಲುವು ಕಂಡಿದೆ. ಶ್ರೀಲಂಕಾ 7 ಸಲ ಜಯಿಸಿದ್ದು, 1 ಪಂದ್ಯದ ಫಲಿತಾಂಶ ಬಂದಿಲ್ಲ. ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಸ್ಟಾರ್‌ ಸ್ಪೋರ್ಟ್ಸ್​ ನೆಟ್ವರ್ಕ್​​ನಲ್ಲಿ ನೇರಪ್ರಸಾರ ವೀಕ್ಷಿಸಬಹುದು.

Pro Kabaddi League: ರಣ ರೋಚಕ ಫೈನಲ್: ಚೊಚ್ಚಲ ಬಾರಿಗೆ ಪ್ರೊ ಕಬಡ್ಡಿ ಲೀಗ್ ಪ್ರಶಸ್ತಿ ಗೆದ್ದ ದಬಾಂಗ್ ಡೆಲ್ಲಿ

IND vs SL 2nd T20: ಇಂದು ಭಾರತ- ಶ್ರೀಲಂಕಾ ದ್ವಿತೀಯ ಟಿ20: ಗೆಲುವಿನ ಓಟ ಮುಂದುವರಿಸುತ್ತಾ ರೋಹಿತ್ ಪಡೆ?

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ