ಕೇವಲ 13 ಆಟಗಾರರು: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11

| Updated By: ಝಾಹಿರ್ ಯೂಸುಫ್

Updated on: Sep 26, 2023 | 10:57 PM

India vs Australia: ಟೀಮ್ ಇಂಡಿಯಾ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಇಶಾನ್ ಕಿಶನ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು 3ನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಯಲಿದ್ದಾರೆ. 4ನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಹಾಗೂ 5ನೇ ಕ್ರಮಾಂಕದಲ್ಲಿ ಕೆಎಲ್ ರಾಹುಲ್ ಬ್ಯಾಟ್ ಬೀಸಲಿದ್ದಾರೆ.

ಕೇವಲ 13 ಆಟಗಾರರು: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11
Team India
Follow us on

ಭಾರತ-ಆಸ್ಟ್ರೇಲಿಯಾ ನಡುವಣ 3ನೇ ಏಕದಿನ ಪಂದ್ಯವು ಬುಧವಾರ ನಡೆಯಲಿದೆ. ರಾಜ್‌ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಕಂಡು ಬರಲಿದೆ. ಏಕೆಂದರೆ ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಇದೀಗ ತಂಡವನ್ನು ಕೂಡಿಕೊಂಡಿದ್ದಾರೆ.

ಆದರೆ ಮತ್ತೊಂದೆಡೆ ಗಾಯದ ಕಾರಣ ಅಕ್ಷರ್ ಪಟೇಲ್ ಈ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ. ಹಾಗೆಯೇ ವಿಶ್ರಾಂತಿಯ ಕಾರಣ ಶುಭ್​ಮನ್ ಗಿಲ್, ಹಾರ್ದಿಕ್ ಪಾಂಡ್ಯ, ಶಾರ್ದೂಲ್ ಠಾಕೂರ್ ಮತ್ತು ಮೊಹಮ್ಮದ್ ಶಮಿ ಈ ಪಂದ್ಯದಿಂದ ಹೊರಗುಳಿದಿದ್ದಾರೆ.
ಇತ್ತ ಐವರು ಆಟಗಾರರು 3ನೇ ಏಕದಿನ ಪಂದ್ಯದಿಂದ ಹೊರಗುಳಿದಿರುವ ಕಾರಣ ಪ್ರಸ್ತುತ ತಂಡದಲ್ಲಿ ಕೇವಲ 13 ಆಟಗಾರರು ಮಾತ್ರ ಇದ್ದಾರೆ. ಹೀಗಾಗಿ ಈ ಹದಿಮೂರು ಆಟಗಾರರಿಂದಲೇ ಪ್ಲೇಯಿಂಗ್ ಇಲೆವೆನ್ ರೂಪಿಸಿಕೊಳ್ಳಬೇಕಾದ ಅನಿವಾರ್ಯತೆಯಿದೆ.

ಅದರಂತೆ ರಾಜ್​​ಕೋಟ್​ನಲ್ಲಿ ಟೀಮ್ ಇಂಡಿಯಾ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಇಶಾನ್ ಕಿಶನ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು 3ನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಯಲಿದ್ದಾರೆ. 4ನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಹಾಗೂ 5ನೇ ಕ್ರಮಾಂಕದಲ್ಲಿ ಕೆಎಲ್ ರಾಹುಲ್ ಬ್ಯಾಟ್ ಬೀಸಲಿದ್ದಾರೆ. ಇನ್ನು 6ನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಕಣಕ್ಕಿಳಿದರೆ, 7ನೇ ಕ್ರಮಾಂಕದಲ್ಲಿ ರವೀಂದ್ರ ಜಡೇಜಾ ಕಾಣಿಸಿಕೊಳ್ಳಲಿದ್ದಾರೆ.

ಬೌಲಿಂಗ್ ವಿಭಾಗದಲ್ಲಿ ರವಿಚಂದ್ರನ್ ಅಶ್ವಿನ್ ಹಾಗೂ ಕುಲ್ದೀಪ್ ಯಾದವ್ ಸ್ಪಿನ್ನರ್​ಗಳಾಗಿ ಆಡುವ ಸಾಧ್ಯತೆಯಿದೆ. ಇನ್ನು ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್ ಕಣಕ್ಕಿಳಿಯುವುದು ಖಚಿತ. ಒಂದು ವೇಳೆ ಕುಲ್ದೀಪ್ ಯಾದವ್ ಹೊರಗುಳಿದರೆ ಮಾತ್ರ ಮೂರನೇ ವೇಗಿಯಾಗಿ ಮುಖೇಶ್ ಕುಮಾರ್ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆದರೆ ಏಕದಿನ ವಿಶ್ವಕಪ್ ತಂಡದಲ್ಲಿರುವ ಕಾರಣ ಮುಖೇಶ್ ಕುಮಾರ್​ಗೆ ಸ್ಥಾನ ನೀಡುವ ಸಾಧ್ಯತೆ ತುಂಬಾ ಕಡಿಮೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ…

  1. ರೋಹಿತ್ ಶರ್ಮಾ
  2. ಇಶಾನ್ ಕಿಶನ್
  3. ವಿರಾಟ್ ಕೊಹ್ಲಿ
  4. ಶ್ರೇಯಸ್ ಅಯ್ಯರ್
  5. ಕೆಎಲ್ ರಾಹುಲ್ (ವಿಕೆಟ್ ಕೀಪರ್)
  6. ಸೂರ್ಯಕುಮಾರ್ ಯಾದವ್
  7. ರವೀಂದ್ರ ಜಡೇಜಾ
  8. ರವಿಚಂದ್ರನ್ ಅಶ್ವಿನ್
  9. ಕುಲ್ದೀಪ್ ಯಾದವ್
  10. ಜಸ್​ಪ್ರೀತ್ ಬುಮ್ರಾ
  11. ಮೊಹಮ್ಮದ್ ಸಿರಾಜ್

ಇದನ್ನೂ ಓದಿ:  ಏಕದಿನ ವಿಶ್ವಕಪ್​ಗೆ 10 ತಂಡಗಳು ಪ್ರಕಟ

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಆರ್ ಅಶ್ವಿನ್, ಮುಖೇಶ್ ಕುಮಾರ್.