AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Playing XI vs NZ 3rd ODI: ಮೂರನೇ ಏಕದಿನದಿಂದಲೂ ಸಂಜು ಔಟ್: ಇಲ್ಲಿದೆ ನೋಡಿ ಭಾರತದ ಸಂಭಾವ್ಯ ಪ್ಲೇಯಿಂಗ್ XI

India vs New Zealand 3rd ODI: ನ್ಯೂಜಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯಕ್ಕೆ ಭಾರತದಲ್ಲಿ ನಾಯಕ ಶಿಖರ್ ಧವನ್ ಹಾಗೂ ಕೋಚ್ ವಿವಿಎಸ್ ಲಕ್ಷ್ಮಣ್ ತಂಡದಲ್ಲಿ ಬದಲಾವಣೆ ಮಾಡುವುದು ಅನುಮಾನ.

India Playing XI vs NZ 3rd ODI: ಮೂರನೇ ಏಕದಿನದಿಂದಲೂ ಸಂಜು ಔಟ್: ಇಲ್ಲಿದೆ ನೋಡಿ ಭಾರತದ ಸಂಭಾವ್ಯ ಪ್ಲೇಯಿಂಗ್ XI
India Playing XI vs NZ 3rrd ODI
TV9 Web
| Edited By: |

Updated on: Nov 29, 2022 | 9:29 AM

Share

ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಏಕದಿನ ಪಂದ್ಯ ಮಳೆಯಿಂದ ರದ್ದಾದ ಕಾರಣ ಸರಣಿ ವಶಪಡಿಸಿಕೊಳ್ಳುವ ಭಾರತದ (India vs New Zealand) ಕಸನು ಈಡೇರಲಿಲ್ಲ. ಹ್ಯಾಮಿಲ್ಟನ್​ನಲ್ಲಿ 12.5 ಓವರ್​ ಗಳ ಪಂದ್ಯ ಮಾತ್ರ ನಡೆಯಿತು. ಓವರ್​ ಕಡಿತಗೊಳಿಸಿದರೂ ಯಾವುದೇ ಪ್ರಯೋಜನ ಆಗಲಿಲ್ಲ. ತಂಡದಲ್ಲಿ ಬದಲಾವಣೆ ಮಾಡಿದರೂ ಉಪಯೋಗಕ್ಕೆ ಬರಲಿಲ್ಲ. ಶಿಖರ್ ಧವನ್ (Shikhar Dhawan), ಶುಭ್​ಮನ್ ಗಿಲ್ ಹಾಗೂ ಸುರ್ಯಕುಮಾರ್ ಯಾದವ್ ಬಿಟ್ಟರೆ ಭಾರತದ ಮತ್ಯಾವ ಆಟಗಾರರು ಮೈದಾನಕ್ಕೆ ಇಳಿಯಲಿಲ್ಲ. ಇದೀಗ ನವೆಂಬರ್ 30 ಬುಧವಾರದಂದು ಕ್ರಿಸ್ಟ್​ಚರ್ಚ್​ನ ಹೇಗ್ಲೆ ಓವಲ್ ಮೈದಾನದಲ್ಲಿ ತೃತೀಯ ಏಕದಿನ ಆಯೋಜಿಸಲಾಗಿದೆ. ಈ ಪಂದ್ಯದ ಮೇಲೆ ಕಣ್ಣಿಟ್ಟಿರುವ ಟೀಮ್ ಇಂಡಿಯಾ ಪಂದ್ಯವನ್ನು ಗೆದ್ದು ಕನಿಷ್ಠ ಸರಣಿ ಸಮಬಲ ಮಾಡುವ ಯೋಜನೆಯಲ್ಲಿದೆ. ಈಗಾಗಲೇ ಕ್ರಿಸ್ಟ್​ಚರ್ಚ್​ಗೆ (Christchurch) ಬಂದಿಳಿದಿರುವ ಧವನ್ ಪಡೆ ಬೆಳಗ್ಗಿನಿಂದಲೇ ಅಭ್ಯಾಸ ಕೂಡ ಶುರು ಮಾಡಿದೆ.

ಮೂರನೇ ಏಕದಿನಕ್ಕೆ ನಾಯ ಶಿಖರ್ ಧವನ್ ಹಾಗೂ ಕೋಚ್ ವಿವಿಎಸ್ ಲಕ್ಷ್ಮಣ್ ತಂಡದಲ್ಲಿ ಬದಲಾವಣೆ ಮಾಡುವುದು ಅನುಮಾನ. ಪ್ಲೇಯಿಂಗ್ ಇಲೆವೆನ್​ನಲ್ಲಿ ಇತರೆ ಆಟಗಾರರನ್ನು ತರಲು ಯಾವುದೇ ಅವಕಾಶ ಕೂಡ ಇಲ್ಲ. ಹೀಗಾಗಿ ಸಂಜು ಸ್ಯಾಮ್ಸನ್ ಮತ್ತೊಮ್ಮೆ ಬೆಂಚ್ ಕಾಯಬೇಕಿದೆ. ಇವರ ಸ್ಥಾನದಲ್ಲಿ ಕಣಕ್ಕಿಳಿದಿದ್ದ ದೀಪಕ್ ಹೂಡ ಮೂರನೇ ಏಕದಿನದಲ್ಲೂ ಕಣಕ್ಕಿಳಿಯಲಿದ್ದಾರೆ.

Rishabh Pant: ಇಷ್ಟೆಲ್ಲಾ ಫ್ಲಾಪ್​ ಆದ್ಮೇಲಾದ್ರೂ ಪಂತ್​ಗೆ ಒಂದು ಸಣ್ಣ ಬ್ರೇಕ್​ ನೀಡಿ: ಕ್ರಿಸ್ ಶ್ರೀಕಾಂತ್

ಇದನ್ನೂ ಓದಿ
Image
IND vs NZ 3rd ODI: ಟೀಮ್ ಇಂಡಿಯಾಕ್ಕೆ ಗೆಲ್ಲಲೇ ಬೇಕಾದ ಒತ್ತಡ: ಬೆಳಗ್ಗೆ 7 ಗಂಟೆಗೇ ಅಭ್ಯಾಸ ಶುರುಮಾಡಿದ ಧವನ್ ಪಡೆ
Image
Ruturaj Gaikwad: ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಸಹ ಆಟಗಾರನಿಗೆ ನೀಡಿ ಹೃದಯ ಗೆದ್ದ ರುತುರಾಜ್
Image
Riyan Parag: 12 ಸಿಕ್ಸ್, 12 ಫೋರ್: ರಿಯಾನ್ ಪರಾಗ್ ಸಿಡಿಲಬ್ಬರದ ಶತಕ..!
Image
IPL 2023: ಯುವ ಆಟಗಾರನ ಮೇಲೆ 3 ಫ್ರಾಂಚೈಸಿಗಳ ಕಣ್ಣು..!

ಭಾರತದಲ್ಲಿ ಆರನೇ ಬೌಲರ್​ ಅವಶ್ಯತೆ ತುಂಬಾ ಇದೆ. ಧವನ್ ನಾಯಕನಾದರೆ, ಗಿಲ್ ಓಪನರ್, ಶ್ರೇಯಸ್ ಅಯ್ಯರ್ ಹಾಗೂ ಸೂರ್ಯಕುಮರ್ ಫಾರ್ಮ್​ನಲ್ಲಿದ್ದಾರೆ. ರಿಷಭ್ ಪಂತ್ ಉಪ ನಾಯಕ. ಹೀಗೆ ತಂಡದಿಂದ ಸ್ಯಾಮ್ಸನ್ ಅವರನ್ನು ಬಿಟ್ಟರೆ ಮತ್ಯಾರನ್ನು ಹೊರಗಿಡುವ ಸ್ಥಿತಿಯಲ್ಲಿ ಮ್ಯಾನೇಜ್ಮೆಂಟ್ ಇರಲಿಲ್ಲ. ಹೀಗಾಗಿ ದ್ವಿತೀಯ ಪಂದ್ಯದಲ್ಲಿ ಬದಲಾವಣೆ ಮಾಡಿದ್ದು ತೃತೀಯ ಕದನಕ್ಕೂ ಮುಂದುವರೆಯಲಿದೆ.

ಬಾರತೀಯ ಕಾಲಮಾನದ ಪ್ರಕಾರ ಇಂಡೋ-ಕಿವೀಸ್ ಮೂರನೇ ಏಕದಿನ ಪಂದ್ಯ ಬೆಳಗ್ಗೆ 7 ಗಂಟೆಗೆ ಶುರುವಾಗಲಿದೆ. 6:30 ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಹೇಗ್ಲೆ ಓವಲ್ ಮೈದಾನದ ಪಿಚ್ ಬ್ಯಾಟರ್​ ಮತ್ತು ಬೌಲರ್ ಇಬ್ಬರಿಗೂ ಸಹಾಯ ಮಾಡಲಿದೆ. ಇಲ್ಲಿ 300+ ರನ್ ಸುಲಭವಾಗಿ ಕಲೆಹಾಕಬಹುದು. ವೇಗಿಗಳು ಲೈನ್ ಮತ್ತು ಲೆಂತ್ ಅನ್ನು ಅರಿತು ಬೌಲಿಂಗ್ ಮಾಡಿದರೆ ಬ್ಯಾಟರ್​ಗಳು ಪರದಾಡುವುದು ಖಚಿತ.

Vijay Hazare Trophy 2022: ಕಾವೇರಪ್ಪ ಕರಾರುವಾಕ್ ದಾಳಿ: ಸೆಮೀಸ್​ಗೆ ಕರ್ನಾಟಕ

ವಿಶೇಷ ಎಂದರೆ ಭಾರತ ಈ ಮೈದಾನದಲ್ಲಿ ಇದುವರೆಗೆ ಒಂದೂ ಏಕದಿನ ಪಂದ್ಯವನ್ನು ಆಡಿಲ್ಲ. ನ್ಯೂಜಿಲೆಂಡ್ ಆಡಿದ 11 ಪಂದ್ಯಗಳ ಪೈಕಿ 10 ರಲ್ಲಿ ಜಯ ಸಾಧಿಸಿದೆ. ಹೀಗಾಗಿ ಈ ಪಂದ್ಯ ಭಾರತಕ್ಕೆ ಕಠಿಣವಾಗುವುದು ಖಚಿತ. ಈ ಪಂದ್ಯಕ್ಕೂ ಮಳೆಯ ಕಾಟ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಪಂದ್ಯದ ವೇಳೆ ಕ್ರಿಸ್ಟ್ ಚರ್ಚ್​ನಲ್ಲಿ ಶೇ. 70ರಷ್ಟು ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಮಳೆಯಿಂದಾಗಿ ಮೂರನೇ ಏಕದಿನ ಪಂದ್ಯವೂ ರದ್ದಾಗುವ ಸಾಧ್ಯತೆ ಹೆಚ್ಚಿದೆ.

ಭಾರತ ಸಂಭಾವ್ಯ ಪ್ಲೇಯಿಂಗ್ XI: ಶಿಖರ್ ಧವನ್ (ನಾಯಕ), ಶುಭ್​​ಮನನ್ ಗಿಲ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ದೀಪಕ್ ಚಹರ್, ಯುಜ್ವೇಂದ್ರ ಚಹಲ್, ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ