IND vs WI: ಭಾರತ ತಂಡದಲ್ಲಿ ಒಂದು ಬದಲಾವಣೆ ಸಾಧ್ಯತೆ: ಹೀಗಿರಲಿದೆ ಪ್ಲೇಯಿಂಗ್ 11

India vs West Indies: ವೆಸ್ಟ್ ಇಂಡೀಸ್ ವಿರುದ್ಧದ 3ನೇ ಟಿ20 ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಏಕೆಂದರೆ ಐದು ಪಂದ್ಯಗಳ ಸರಣಿಯ ಮೊದಲೆರಡು ಮ್ಯಾಚ್​ಗಳಲ್ಲಿ ಗೆದ್ದು ವೆಸ್ಟ್ ಇಂಡೀಸ್ 2-0 ಅಂತರದಿಂದ ಮುನ್ನಡೆ ಸಾಧಿಸಿದೆ.

IND vs WI: ಭಾರತ ತಂಡದಲ್ಲಿ ಒಂದು ಬದಲಾವಣೆ ಸಾಧ್ಯತೆ: ಹೀಗಿರಲಿದೆ ಪ್ಲೇಯಿಂಗ್ 11
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on:Aug 07, 2023 | 11:01 PM

India vs West Indies: ಭಾರತ-ವೆಸ್ಟ್ ಇಂಡೀಸ್ ನಡುವಣ 3ನೇ ಟಿ20 ಪಂದ್ಯ ಮಂಗಳವಾರ (ಆಗಸ್ಟ್ 8) ನಡೆಯಲಿದೆ. ಗಯಾನಾದ ಪ್ರಾವಿಡೆನ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ (Team India) ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಮೊದಲೆರಡು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಆರಂಭಿಕರು ವಿಫಲರಾಗಿದ್ದಾರೆ. ಹೀಗಾಗಿ ಆರಂಭಿಕರ ಸ್ಥಾನದಲ್ಲಿ ಬದಲಾವಣೆಯಾಗುವ ಸಾಧ್ಯತೆಯಿದೆ.

ಜೈಸ್ವಾಲ್​ಗೆ ಚೊಚ್ಚಲ ಅವಕಾಶ:

ಮೊದಲೆರಡು ಎರಡು ಪಂದ್ಯಗಳಲ್ಲಿ ಇಶಾನ್ ಕಿಶನ್ ಕ್ರಮವಾಗಿ 27, 6 ರನ್​ಗಳಿಸಿದರೆ, ಶುಭ್​ಮನ್ ಗಿಲ್ 3, 7 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಹೀಗಾಗಿ ಮೂರನೇ ಟಿ20 ಪಂದ್ಯದಲ್ಲಿ ಯುವ ಎಡಗೈ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್​ಗೆ ಚಾನ್ಸ್ ಸಿಗುವ ಸಾಧ್ಯತೆಯಿದೆ.

ತಂಡದಿಂದ ಹೊರಬೀಳುವುದು ಯಾರು?

ವಿಂಡೀಸ್ ವಿರುದ್ಧದ ಮೊದಲ ಎರಡೂ ಪಂದ್ಯಗಳಲ್ಲೂ ಟೀಮ್ ಇಂಡಿಯಾ ಬ್ಯಾಟರ್​ಗಳು ವಿಫಲರಾಗಿದ್ದಾರೆ. ಹೀಗಾಗಿ ಭಾರತ ತಂಡವು ಬ್ಯಾಟಿಂಗ್ ಲೈನಪ್​ ಅನ್ನು ಬಲಿಷ್ಠಗೊಳಿಸುವ ಸಾಧ್ಯತೆಯಿದೆ. ಇಲ್ಲಿ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಹಾಗೂ ಶುಭ್​ಮನ್ ಗಿಲ್ ಕಣಕ್ಕಿಳಿಯಬಹುದು. ಇನ್ನು ಇಶಾನ್ ಕಿಶನ್ 3ನೇ ಕ್ರಮಾಂಕದಲ್ಲಿ ಆಡಬಹುದು. ಇಲ್ಲಿ ಇಶಾನ್​ ಅಥವಾ ಗಿಲ್​​ಗೆ ಅವಕಾಶ ನೀಡಿದರೆ ಓರ್ವ ಬೌಲರ್​ನನ್ನು ಹೊರಗಿಡಬಹುದು.

ಅದರಂತೆ ಮುಖೇಶ್ ಕುಮಾರ್ ಪ್ಲೇಯಿಂಗ್ ಇಲೆವೆನ್​ನಿಂದ ಹೊರಬೀಳುವ ಸಾಧ್ಯತೆಯಿದೆ. ಏಕೆಂದರೆ ಮೊದಲೆರಡು ಪಂದ್ಯಗಳಲ್ಲಿ ಮುಖೇಶ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಇತ್ತ ತಂಡದಲ್ಲಿ ಅಕ್ಷರ್ ಪಟೇಲ್ ಇದ್ದರೂ 2ನೇ ಟಿ20 ಪಂದ್ಯದಲ್ಲಿ ಅವರು ಬೌಲಿಂಗ್ ಮಾಡಿರಲಿಲ್ಲ. ಹೀಗಾಗಿ 3ನೇ ಟಿ20 ಪಂದ್ಯದಲ್ಲಿ 5ನೇ ಬೌಲರ್​ ಆಗಿ ಅಕ್ಷರ್ ಪಟೇಲ್ ಕಾಣಿಸಿಕೊಳ್ಳಬಹುದು. ಅದರಂತೆ ಭಾರತ ತಂಡದ ಸಂಭವನೀಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ.

ಟೀಮ್ ಇಂಡಿಯಾ ಪ್ಲೇಯಿಂಗ್ 11:

  1. ಯಶಸ್ವಿ ಜೈಸ್ವಾಲ್
  2. ಶುಭ್​ಮನ್ ಗಿಲ್
  3. ಇಶಾನ್ ಕಿಶನ್ (ವಿಕೆಟ್ ಕೀಪರ್)
  4. ಸೂರ್ಯಕುಮಾರ್ ಯಾದವ್
  5. ತಿಲಕ್ ವರ್ಮಾ
  6. ಹಾರ್ದಿಕ್ ಪಾಂಡ್ಯ (ನಾಯಕ)
  7. ಸಂಜು ಸ್ಯಾಮ್ಸನ್
  8. ಅಕ್ಷರ್ ಪಟೇಲ್
  9. ಅರ್ಷದೀಪ್ ಸಿಂಗ್
  10. ಯುಜುವೇಂದ್ರ ಚಾಹಲ್
  11. ರವಿ ಬಿಷ್ಣೋಯ್

ಭಾರತ ಟಿ20 ತಂಡ: ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ಉಪನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್.

ಇದನ್ನೂ ಓದಿ: Babar Azam: ಭರ್ಜರಿ ಸೆಂಚುರಿ ಸಿಡಿಸಿ ವಿಶ್ವ ದಾಖಲೆ ಬರೆದ ಬಾಬರ್

ಮಾಡು ಇಲ್ಲವೇ ಮಡಿ ಪಂದ್ಯ:

3ನೇ ಟಿ20 ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಏಕೆಂದರೆ ಐದು ಪಂದ್ಯಗಳ ಸರಣಿಯ ಮೊದಲೆರಡು ಮ್ಯಾಚ್​ಗಳಲ್ಲಿ ಗೆದ್ದು ವೆಸ್ಟ್ ಇಂಡೀಸ್ 2-0 ಅಂತರದಿಂದ ಮುನ್ನಡೆ ಸಾಧಿಸಿದೆ. ಹೀಗಾಗಿ ಈ ಪಂದ್ಯದಲ್ಲಿ ಗೆದ್ದರೆ ಮಾತ್ರ ಭಾರತ ತಂಡಕ್ಕೆ ಸರಣಿ ಗೆಲ್ಲುವ ಅವಕಾಶ ಇರಲಿದೆ. ಹೀಗಾಗಿಯೇ ಇದು ಭಾರತ ತಂಡದ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ.

Published On - 10:59 pm, Mon, 7 August 23

ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಹಾಸನದಲ್ಲಿ ಜೆಡಿಎಸ್ ಪ್ರಭಾವ ಸಂಪೂರ್ಣವಾಗಿ ತಗ್ಗಿಸಲು ಕಾಂಗ್ರೆಸ್ ಹುನ್ನಾರ
ಹಾಸನದಲ್ಲಿ ಜೆಡಿಎಸ್ ಪ್ರಭಾವ ಸಂಪೂರ್ಣವಾಗಿ ತಗ್ಗಿಸಲು ಕಾಂಗ್ರೆಸ್ ಹುನ್ನಾರ
ವಿಜಯೇಂದ್ರ ತಂಡದಿಂದ ಕಲ್ಯಾಣ ಕರ್ನಾಟಕದಲ್ಲಿ ರೈತರ ಪರ ಹೋರಾಟ ಬೇಕಿತ್ತಾ?
ವಿಜಯೇಂದ್ರ ತಂಡದಿಂದ ಕಲ್ಯಾಣ ಕರ್ನಾಟಕದಲ್ಲಿ ರೈತರ ಪರ ಹೋರಾಟ ಬೇಕಿತ್ತಾ?
ಲಕ್ಷ್ಮಿದೇವಿ ಸಮುದಾಯ ಭವನ ಉದ್ಘಾಟಿಸಿದ ಸಿದ್ದರಾಮಯ್ಯ
ಲಕ್ಷ್ಮಿದೇವಿ ಸಮುದಾಯ ಭವನ ಉದ್ಘಾಟಿಸಿದ ಸಿದ್ದರಾಮಯ್ಯ
"ಇಸ್ಪೀಟ್ ಆಟ ಆಡಲೇಬೇಕಾ ಸರ್​"? ಪೊಲೀಸರಿಗೆ ಮಕ್ಕಳ ಪ್ರಶ್ನೆ
ಫೆಂಗಲ್ ಪರಿಣಾಮ: ಟೊಮೆಟೋಗೆ ಭಾರಿ ಬೇಡಿಕೆ, ದರವೂ ಹೆಚ್ಚಳ
ಫೆಂಗಲ್ ಪರಿಣಾಮ: ಟೊಮೆಟೋಗೆ ಭಾರಿ ಬೇಡಿಕೆ, ದರವೂ ಹೆಚ್ಚಳ
ರಜತ್ ಆಯ್ತು ಈಗ ತ್ರಿವಿಕ್ರಂಗೆ ತಲೆ ಬೋಳಿಸೋ ಚಾಲೆಂಜ್; ಒಪ್ಪಿದ್ರಾ?
ರಜತ್ ಆಯ್ತು ಈಗ ತ್ರಿವಿಕ್ರಂಗೆ ತಲೆ ಬೋಳಿಸೋ ಚಾಲೆಂಜ್; ಒಪ್ಪಿದ್ರಾ?
ವಿಜಯೇಂದ್ರ ಹೊಂದಾಣಿಕೆ ರಾಜಕಾರಣ ಮಾಡಬಾರದು: ಬಸನಗೌಡ ಯತ್ನಾಳ್
ವಿಜಯೇಂದ್ರ ಹೊಂದಾಣಿಕೆ ರಾಜಕಾರಣ ಮಾಡಬಾರದು: ಬಸನಗೌಡ ಯತ್ನಾಳ್
ದೆಹಲಿಯಲ್ಲಿ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿದ್ದೇನೆ: ರೇವಣ್ಣ
ದೆಹಲಿಯಲ್ಲಿ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿದ್ದೇನೆ: ರೇವಣ್ಣ