India Playing XI: ಹಾರ್ದಿಕ್ ಸೇಮ್ ಟೀಮ್ ಸೂತ್ರ: ಇಶಾನ್, ಉಮ್ರಾನ್​ಗಿಲ್ಲ ಚಾನ್ಸ್

India Playing XI 5th T20: ಭಾರತ-ವೆಸ್ಟ್ ಇಂಡೀಸ್ ನಡುವಣ ಸರಣಿಯು 2-2 ಅಂತರದಿಂದ ಸಮಬಲದಲ್ಲಿದ್ದು, ಹೀಗಾಗಿ ಅಂತಿಮ ಟಿ20 ಪಂದ್ಯ ಫೈನಲ್ ಫೈಟ್ ಆಗಿ ಮಾರ್ಪಟ್ಟಿದೆ. ಆದರೆ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ಪ್ಲೇಯಿಂಗ್ ಇಲೆವೆನ್​ನಲ್ಲಿ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿಲ್ಲ.

India Playing XI: ಹಾರ್ದಿಕ್ ಸೇಮ್ ಟೀಮ್ ಸೂತ್ರ: ಇಶಾನ್, ಉಮ್ರಾನ್​ಗಿಲ್ಲ ಚಾನ್ಸ್
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on:Aug 13, 2023 | 3:08 PM

ಭಾರತ-ವೆಸ್ಟ್ ಇಂಡೀಸ್ (India vs West Indies) ನಡುವಣ 5ನೇ ಟಿ20 ಪಂದ್ಯ ಇಂದು ನಡೆಯಲಿದೆ. ಫ್ಲೋರಿಡಾದ ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂ ಟರ್ಫ್ ಗ್ರೌಂಡ್​ನಲ್ಲಿ ಜರುಗಲಿರುವ ಈ ಪಂದ್ಯದಲ್ಲಿ ಗೆದ್ದ ತಂಡ ಸರಣಿ ವಶಪಡಿಸಿಕೊಳ್ಳಲಿದೆ. 5 ಪಂದ್ಯಗಳ ಈ ಸರಣಿ ಮೊದಲ ಎರಡು ಪಂದ್ಯಗಳಲ್ಲಿ ವೆಸ್ಟ್ ಇಂಡೀಸ್ ಜಯ ಸಾಧಿಸಿದರೆ, 3ನೇ ಮತ್ತು 4ನೇ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ.

ಇದೀಗ ಸರಣಿಯು 2-2 ಅಂತರದಿಂದ ಸಮಬಲದಲ್ಲಿದ್ದು, ಹೀಗಾಗಿ ಅಂತಿಮ ಟಿ20 ಪಂದ್ಯ ಫೈನಲ್ ಫೈಟ್ ಆಗಿ ಮಾರ್ಪಟ್ಟಿದೆ. ಆದರೆ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ಪ್ಲೇಯಿಂಗ್ ಇಲೆವೆನ್​ನಲ್ಲಿ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿಲ್ಲ.

ಏಕೆಂದರೆ ಮೊದಲೆರಡು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಇಶಾನ್ ಕಿಶನ್, ಉಮ್ರಾನ್ ಮಲಿಕ್ ಹಾಗೂ ರವಿಬಿಷ್ಣೋಯ್​ರನ್ನು ನಂತರದ ಪಂದ್ಯಗಳಿಂದ ಕೈ ಬಿಡಲಾಗಿತ್ತು. ಹೀಗೆ ಮಾಡಲಾದ ಬದಲಾವಣೆ ಬಳಿಕ ಟೀಮ್ ಇಂಡಿಯಾ ಸತತ 2 ಗೆಲುವು ದಾಖಲಿಸಿದೆ.

ಹೀಗಾಗಿ 5ನೇ ಟಿ20 ಪಂದ್ಯದಲ್ಲೂ ಗೆಲುವಿನ ಲಯದಲ್ಲಿರುವ ತಂಡವನ್ನೇ ಮುಂದುವರೆಸಲು ಹಾರ್ದಿಕ್ ಪಾಂಡ್ಯ ಇಚ್ಛಿಸಿದ್ದಾರೆ. ಹೀಗಾಗಿ ಈ ಪಂದ್ಯದಲ್ಲೂ ಇಶಾನ್ ಕಿಶನ್ ಹಾಗೂ ಉಮ್ರಾನ್ ಮಲಿಕ್ ಬೆಂಚ್ ಕಾಯಲಿದ್ದಾರೆ.

ಜೈಸ್ವಾಲ್ ಯಶಸ್ವಿ:

ಮೊದಲೆರಡು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಪರ ಇನಿಂಗ್ಸ್ ಆರಂಭಿಸಿದ್ದ ಇಶಾನ್ ಕಿಶನ್ ಬದಲಿಗೆ ಮೂರನೇ ಹಾಗೂ ನಾಲ್ಕನೇ ಟಿ20 ಪಂದ್ಯಗಳಲ್ಲಿ ಯಶಸ್ವಿ ಜೈಸ್ವಾಲ್ ಅವರನ್ನು ಕಣಕ್ಕಿಳಿಸಲಾಗಿತ್ತು. 3ನೇ ಪಂದ್ಯದಲ್ಲಿ ಬೇಗನೆ ಔಟಾಗಿದ್ದ ಯಶಸ್ವಿ, 4ನೇ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.

ಕೇವಲ 51 ಎಸೆತಗಳನ್ನು ಎದುರಿಸಿದ ಜೈಸ್ವಾಲ್ 3 ಭರ್ಜರಿ ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ ಅಜೇಯ 84 ರನ್ ಬಾರಿಸಿ ಮಿಂಚಿದ್ದಾರೆ. ಹೀಗಾಗಿ ಕೊನೆಯ ಟಿ20 ಪಂದ್ಯದಲ್ಲೂ ಯಶಸ್ವಿ ಜೈಸ್ವಾಲ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ.

ಇನ್ನು ಮೊದಲ ಮೂರು ಪಂದ್ಯಗಳಲ್ಲಿ ಸಾಧಾರಣ ಪ್ರದರ್ಶನ ನೀಡಿದ್ದ ಶುಭ್​ಮನ್ ಗಿಲ್ ಕೂಡ 4ನೇ ಟಿ20 ಪಂದ್ಯದಲ್ಲಿ ಅಬ್ಬರಿಸಿದ್ದಾರೆ. ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕವಾಗಿದ್ದ ಈ ಪಂದ್ಯದಲ್ಲಿ 47 ಎಸೆತಗಳನ್ನು ಎದುರಿಸಿದ್ದ ಗಿಲ್ 5 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 77 ರನ್ ಚಚ್ಚಿದ್ದರು. ಹೀಗಾಗಿ ಗಿಲ್ ಸ್ಥಾನ ಕೂಡ ಭದ್ರವಾಗಿದೆ. ಅದರಂತೆ ಟೀಮ್ ಇಂಡಿಯಾದ ಸಂಭವನೀಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ.

  1. ಶುಭಮನ್ ಗಿಲ್
  2. ಯಶಸ್ವಿ ಜೈಸ್ವಾಲ್
  3. ಸೂರ್ಯಕುಮಾರ್ ಯಾದವ್
  4. ತಿಲಕ್ ವರ್ಮಾ
  5. ಹಾರ್ದಿಕ್ ಪಾಂಡ್ಯ
  6. ಸಂಜು ಸ್ಯಾಮ್ಸನ್
  7. ಅಕ್ಷರ್ ಪಟೇಲ್
  8. ಕುಲ್ದೀಪ್ ಯಾದವ್
  9. ಅರ್ಷದೀಪ್ ಸಿಂಗ್
  10. ಮುಖೇಶ್ ಕುಮಾರ್
  11. ಯುಜುವೇಂದ್ರ ಚಹಲ್.

ಇದನ್ನೂ ಓದಿ: ಟೀಮ್ ಇಂಡಿಯಾ ಪಾಲಿಗೆ ಶ್ರೇಯಸ್ ಅಯ್ಯರ್ ಅನಿವಾರ್ಯ..!

ಭಾರತ ಟಿ20 ತಂಡ:

ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ಉಪನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್.

Published On - 3:07 pm, Sun, 13 August 23

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ