ಏಷ್ಯಾಕಪ್ನ ಸೂಪರ್ ಫೋರ್ ಹಂತದ 3ನೇ ಪಂದ್ಯದಲ್ಲಿ ಭಾರತ-ಪಾಕಿಸ್ತಾನ್ ಮುಖಾಮುಖಿಯಾಗಿದೆ. ಕೊಲಂಬೊದ ಆರ್. ಪ್ರೇಮದಾಸ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಟೀಮ್ ಇಂಡಿಯಾ ಮೊದಲು ಬ್ಯಾಟ್ ಮಾಡಲಿದೆ.
ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ಎರಡು ಬದಲಾವಣೆ ಮಾಡಿಕೊಂಡಿದೆ. ಅದರಂತೆ ಜಸ್ಪ್ರೀತ್ ಬುಮ್ರಾ ತಂಡಕ್ಕೆ ಕಂಬ್ಯಾಕ್ ಮಾಡಿದ್ದು, ಮೊಹಮ್ಮದ್ ಶಮಿ ಹೊರಗುಳಿದಿದ್ದಾರೆ. ಇನ್ನು ಇಶಾನ್ ಕಿಶನ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಲಾಗಿದ್ದು, ಶ್ರೇಯಸ್ ಅಯ್ಯರ್ ಸ್ಥಾನದಲ್ಲಿ ಕೆಎಲ್ ರಾಹುಲ್ ಅವರನ್ನು ಆಯ್ಕೆ ಮಾಡಲಾಗಿದೆ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ.
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್.
ಪಾಕಿಸ್ತಾನ್ ಪ್ಲೇಯಿಂಗ್ 11: ಫಖರ್ ಝಮಾನ್, ಇಮಾಮ್ ಉಲ್ ಹಕ್, ಬಾಬರ್ ಆಝಂ (ನಾಯಕ), ಮೊಹಮ್ಮದ್ ರಿಝ್ವಾನ್ (ವಿಕೆಟ್ ಕೀಪರ್), ಸಲ್ಮಾನ್ ಆಘಾ, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಫಹೀಮ್ ಅಶ್ರಫ್, ಶಾಹೀನ್ ಅಫ್ರಿದಿ, ನಸೀಮ್ ಶಾ, ಹ್ಯಾರಿಸ್ ರೌಫ್.
ಏಕದಿನ ಕ್ರಿಕೆಟ್ನಲ್ಲಿ ಭಾರತ-ಪಾಕಿಸ್ತಾನ್ ಇದುವರೆಗೆ 133 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಭಾರತ ತಂಡವು ಕೇವಲ 55 ಪಂದ್ಯಗಳಲ್ಲಿ ಮಾತ್ರ ಜಯ ಸಾಧಿಸಿದೆ. ಮತ್ತೊಂದೆಡೆ ಪಾಕಿಸ್ತಾನ್ ತಂಡವು 73 ಪಂದ್ಯಗಳಲ್ಲಿ ಜಯಭೇರಿ ಬಾರಿಸಿದೆ. ಇನ್ನು 5 ಪಂದ್ಯಗಳು ಕಾರಣಾಂತರಗಳಿಂದ ರದ್ದಾಗಿದೆ.
ಆದರೆ ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ ಎಂದರೆ ಭಾರತ-ಪಾಕ್ ನಡುವಣ ಕೊನೆಯ 5 ಏಕದಿನ ಪಂದ್ಯಗಳಲ್ಲಿ ಟೀಮ್ ಇಂಡಿಯಾ 4 ಬಾರಿ ಗೆಲುವಿನ ನಗೆ ಬೀರಿರುವುದು. ಹೀಗಾಗಿ ಕೊಲಂಬೊದಲ್ಲೂ ಭಾರತ ತಂಡದ ಗೆಲುವವನ್ನು ನಿರೀಕ್ಷಿಸಬಹುದು.
ಪಾಕಿಸ್ತಾನ್ ತಂಡ: ಬಾಬರ್ ಆಝಂ (ನಾಯಕ), ಶಾದಾಬ್ ಖಾನ್ (ಉಪನಾಯಕ), ಅಬ್ದುಲ್ಲಾ ಶಫೀಕ್, ಫಹೀಮ್ ಅಶ್ರಫ್, ಫಖರ್ ಝಮಾನ್, ಹ್ಯಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಇಮಾಮ್-ಉಲ್-ಹಕ್, ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಝ್, ಮೊಹಮ್ಮದ್ ರಿಝ್ವಾನ್ (ವಿಕೆಟ್ ಕೀಪರ್), ಮೊಹಮ್ಮದ್ ವಾಸಿಮ್ ಜೂನಿಯರ್, ನಸೀಮ್ ಶಾ, ಸಲ್ಮಾನ್ ಅಲಿ ಅಘಾ, ಸೌದ್ ಶಕೀಲ್, ಶಾಹೀನ್ ಅಫ್ರಿದಿ ಮತ್ತು ಉಸಾಮಾ ಮಿರ್, ತಯ್ಯಬ್ ತಾಹಿರ್ (ಮೀಸಲು ಆಟಗಾರ).
ಇದನ್ನೂ ಓದಿ: ಸಚಿನ್ ತೆಂಡೂಲ್ಕರ್ ವಿಶ್ವ ದಾಖಲೆ ಮುರಿದ ಡೇವಿಡ್ ವಾರ್ನರ್
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ.
Published On - 2:36 pm, Sun, 10 September 23