
ಭಾರತ ಮತ್ತು ನ್ಯೂಝಿಲೆಂಡ್ ನಡುವಣ 5 ಪಂದ್ಯಗಳ ಟಿ20 ಸರಣಿಯು ಬುಧವಾರದಿಂದ ಶುರುವಾಗಲಿದೆ. ನಾಗ್ಪುರದಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಮ್ಯಾಚ್ನಲ್ಲಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ಮೂರು ಬದಲಾವಣೆ ಕಂಡು ಬರುವುದು ಖಚಿತ. ಏಕೆಂದರೆ ಭಾರತದ ಪರ ಕೊನೆಯ ಟಿ20 ಪಂದ್ಯದಲ್ಲಿ ಕಣಕ್ಕಿಳಿದಿದ್ದ ಮೂವರು ಆಟಗಾರರು ಈ ಸರಣಿಯಿಂದ ಹೊರಗುಳಿದಿದ್ದಾರೆ.
ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಕೊನೆಯ ಟಿ20 ಪಂದ್ಯದಲ್ಲಿ ಕಣಕ್ಕಿಳಿದಿದ್ದ ತಿಲಕ್ ವರ್ಮಾ, ವಾಷಿಂಗ್ಟನ್ ಸುಂದರ್ ಗಾಯದ ಕಾರಣ ತಂಡದಿಂದ ಹೊರಗುಳಿದಿದ್ದಾರೆ. ಇನ್ನು ಕೊನೆಯ ಪಂದ್ಯದಲ್ಲಿ ವಿಕೆಟ್ ಕೀಪರ್ ಆಗಿ ಕಣಕ್ಕಿಳಿದಿದ್ದ ಜಿತೇಶ್ ಶರ್ಮಾ ತಂಡದಿಂದ ಹೊರಬಿದ್ದಿದ್ದಾರೆ. ಹೀಗಾಗಿ ನ್ಯೂಝಿಲೆಂಡ್ ವಿರುದ್ಧ ಭಾರತ ಮೂರು ಬದಲಾವಣೆಯೊಂದಿಗೆ ಕಣಕ್ಕಿಳಿಯಲಿದೆ.
ಅದರಂತೆ ಟೀಮ್ ಇಂಡಿಯಾ ಪರ ಆರಂಭಿಕರಾಗಿ ಅಭಿಷೇಕ್ ಶರ್ಮಾ ಹಾಗೂ ಸಂಜು ಸ್ಯಾಮ್ಸನ್ ಕಣಕ್ಕಿಳಿಯಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಬ್ಯಾಟ್ ಬೀಸಲಿದ್ದಾರೆ. ಹಾಗೆಯೇ ನಾಲ್ಕನೇ ಕ್ರಮಾಂಕದಲ್ಲಿ ತಿಲಕ್ ವರ್ಮಾ ಬದಲು ಈ ಬಾರಿ ಶ್ರೇಯಸ್ ಅಯ್ಯರ್ ಕಣಕ್ಕಿಳಿಯಲಿದ್ದಾರೆ.
ಇನ್ನು ಆಲ್ರೌಂಡರ್ಗಳಾಗಿ ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್ ಹಾಗೂ ಶಿವಂ ದುಬೆ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಅದೇ ರೀತಿ ಬೌಲರ್ಗಳಾಗಿ ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ ಹಾಗೂ ವರುಣ್ ಚಕ್ರವರ್ತಿ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…
ಇದನ್ನೂ ಓದಿ: ನೇರವಾಗಿ ಫೈನಲ್ಗೇರಲು RCB ಇನ್ನೆಷ್ಟು ಪಂದ್ಯ ಗೆಲ್ಲಬೇಕು?