6+2+3 ಸಂಯೋಜನೆಯಲ್ಲಿ ಕಣಕ್ಕಿಳಿಯಲಿದೆ ಟೀಮ್ ಇಂಡಿಯಾ

IND vs SL: ಆಗಸ್ಟ್ 15 ರಿಂದ ಗಾಲೆ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆರಂಭವಾಗಲಿರುವ ಶ್ರೀಲಂಕಾ ವಿರುದ್ಧದ ಟೆಸ್ಟ್ ಪಂದ್ಯಕ್ಕಾಗಿ ಹೆಡ್ ಕೋಚ್ ಗೌತಮ್ ಗಂಭೀರ್ ವಿಶೇಷ ಮಾಸ್ಟರ್ ಪ್ಲ್ಯಾನ್ ರೂಪಿಸಲಿದ್ದಾರೆ. ಗಾಲೆ ಸಾಂಪ್ರದಾಯಿಕ ಸ್ಪಿನ್ ಸ್ನೇಹಿ ಪಿಚ್ ಅನ್ನು ಗಮನದಲ್ಲಿಟ್ಟುಕೊಂಡು ಟೀಮ್ ಇಂಡಿಯಾ ಈ ಬಾರಿ '6+2+3' ಸಂಯೋಜನೆಯಲ್ಲಿ ಕಣಕ್ಕಿಳಿಯಲಿದೆ.

6+2+3 ಸಂಯೋಜನೆಯಲ್ಲಿ ಕಣಕ್ಕಿಳಿಯಲಿದೆ ಟೀಮ್ ಇಂಡಿಯಾ
Team India
Image Credit source: GettyImages

Updated on: Aug 13, 2026 | 2:18 PM

ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯವು ಆಗಸ್ಟ್ 15 ರಿಂದ ಶುರುವಾಗಲಿದೆ. ಶ್ರೀಲಂಕಾ ಗಾಲೆಯಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಈ ಪ್ಲೇಯಿಂಗ್ ಇಲೆವೆನ್​ನಲ್ಲಿ ಇಬ್ಬರು ಕನ್ನಡಿಗರು ಕಾಣಿಸಿಕೊಳ್ಳುವುದು ಖಚಿತ. ಏಕೆಂದರೆ ಈ ಸರಣಿಯಿಂದ ಸಾಯಿ ಸುದರ್ಶನ್ ಹೊರಗುಳಿದಿದ್ದು ಅವರ ಬದಲಿಗೆ ದೇವದತ್ ಪಡಿಕ್ಕಲ್​ಗೆ ಸ್ಥಾನ ಸಿಗುವುದು ಬಹುತೇಕ ಕನ್ಫರ್ಮ್ ಆಗಿದೆ.

ಅದರಂತೆ ಟೀಮ್ ಇಂಡಿಯಾದ ಪ್ಲೇಯಿಂಗ್​ ಇಲೆವೆನ್​ನಲ್ಲಿ ಕನ್ನಡಿಗರಾದ ಕೆ. ಎಲ್. ರಾಹುಲ್ ಹಾಗೂ ದೇವದತ್ ಪಡಿಕ್ಕಲ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು. ಇನ್ನು ವೇಗದ ಬೌಲಿಂಗ್ ವಿಭಾಗದಲ್ಲಿ ಮತ್ತೊಬ್ಬ ಕನ್ನಡಿಗ ಪ್ರಸಿದ್ಧ್ ಕೃಷ್ಣ ಸ್ಥಾನ ಪಡೆದರೆ, ಅಂತಿಮ ತಂಡದಲ್ಲಿ ಕಾಣಿಸಿಕೊಳ್ಳುವ ಕನ್ನಡಿಗರ ಒಟ್ಟು ಸಂಖ್ಯೆ ಮೂರಕ್ಕೆ ಏರಲಿದೆ.

ಹೇಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11?

  • ಆರಂಭಿಕ ಜೋಡಿ: ಯಶಸ್ವಿ ಜೈಸ್ವಾಲ್ ಮತ್ತು ಕೆ. ಎಲ್. ರಾಹುಲ್ ಇನಿಂಗ್ಸ್ ಆರಂಭಿಸಲಿದ್ದಾರೆ.
  • ಮೂರನೇ ಕ್ರಮಾಂಕ: ಕರ್ನಾಟಕದ ದೇವದತ್ ಪಡಿಕ್ಕಲ್ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.
  • ಮಧ್ಯಮ ಕ್ರಮಾಂಕ: ಶುಭ್​ಮನ್ ಗಿಲ್, ರಿಷಭ್ ಪಂತ್ ಹಾಗೂ ಧ್ರುವ್ ಜುರೇಲ್ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ.
  • ಆಲ್​ರೌಂಡರ್​: ಆಲ್​ರೌಂಡರ್​ಗಳಾಗಿ ರವೀಂದ್ರ ಜಡೇಜಾ ಹಾಗೂ ಸರಂಶ್ ಜೈನ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಬಹುದು.
  • ಬೌಲರ್​ಗಳು: ಪರಿಪೂರ್ಣ ಬೌಲರ್​ಗಳಾಗಿ ಮೊಹಮ್ಮದ್ ಸಿರಾಜ್, ಗುರ್ನೂರ್ ಬ್ರಾರ್ ಹಾಗೂ ಕುಲ್ದೀಪ್ ಯಾದವ್ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.

ಅಂದರೆ ಟೀಮ್ ಇಂಡಿಯಾ ಮೊದಲ ಪಂದ್ಯಕ್ಕಾಗಿ 6 ಪರಿಪೂರ್ಣ ಬ್ಯಾಟರ್​ಗಳು, ಇಬ್ಬರು ಆಲ್​ರೌಂಡರ್​ಗಳು ಹಾಗೂ ಮೂವರು ಬೌಲರ್​ಗಳೊಂದಿಗೆ ಪ್ಲೇಯಿಂಗ್ ಇಲೆವೆನ್ ಸಂಯೋಜಿಸುವ ಸಾಧ್ಯತೆ ಹೆಚ್ಚಿದೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…

  1. ಯಶಸ್ವಿ ಜೈಸ್ವಾಲ್
  2. ಕೆ.ಎಲ್. ರಾಹುಲ್
  3. ದೇವದತ್ ಪಡಿಕ್ಕಲ್
  4. ಶುಭ್​ಮನ್ ಗಿಲ್ (ನಾಯಕ)
  5. ರಿಷಭ್ ಪಂತ್ (ವಿಕೆಟ್ ಕೀಪರ್)
  6. ಧ್ರುವ್ ಜುರೆಲ್
  7. ರವೀಂದ್ರ ಜಡೇಜಾ
  8. ಸರಂಶ್ ಜೈನ್
  9. ಕುಲ್ದೀಪ್ ಯಾದವ್
  10. ಮೊಹಮ್ಮದ್ ಸಿರಾಜ್
  11. ಗುರ್ನೂರ್ ಬ್ರಾರ್.

ಇದನ್ನೂ ಓದಿ: ಏಷ್ಯನ್ ಗೇಮ್ಸ್​ಗೆ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಪ್ರಕಟ

ಭಾರತ ಟೆಸ್ಟ್ ತಂಡ: ಶುಭ್‌ಮನ್ ಗಿಲ್ (ನಾಯಕ), ಕೆ.ಎಲ್. ರಾಹುಲ್ (ಉಪನಾಯಕ), ರಿಷಭ್ ಪಂತ್, ಧ್ರುವ್ ಜುರೆಲ್, ಯಶಸ್ವಿ ಜೈಸ್ವಾಲ್, ದೇವದತ್ ಪಡಿಕ್ಕಲ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮಾನವ್ ಸುತಾರ್, ಸರಂಶ್ ಜೈನ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್, ಆಖಿಬ್ ನಬಿ, ಸರ್ಫರಾಝ್ ಖಾನ್.

ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Loading...
Unable to load recommendations.
Follow Us