
ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ದ್ವಿತೀಯ ಟಿ20 ಪಂದ್ಯವು ನಾಳೆ (ಡಿ.11) ನಡೆಯಲಿದೆ. ಮುಲ್ಲನ್ಪುರ್ನ ಪಿಸಿಎ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯದಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಆಡುವ ಬಳಗವನ್ನೇ ಕಣಕ್ಕಿಳಿಸಲಿದೆ. ಅದರಂತೆ ಮೊದಲ ಮ್ಯಾಚ್ನಲ್ಲಿ ಕಣಕ್ಕಿಳಿದ ಬಳಗವೇ ದ್ವಿತೀಯ ಪಂದ್ಯವನ್ನು ಆಡುವ ಸಾಧ್ಯತೆಯಿದೆ.
ಏಕೆಂದರೆ ಕಟಕ್ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಅದರಲ್ಲೂ ಭಾರತೀಯ ಬೌಲರ್ಗಳಿಂದ ಅಮೋಘ ಪ್ರದರ್ಶನ ಮೂಡಿಬಂದಿತ್ತು. ಹೀಗಾಗಿ ಬೌಲಿಂಗ್ ವಿಭಾಗದಲ್ಲಿ ಯಾವುದೇ ಬದಲಾವಣೆ ಕಂಡು ಬರುವ ಸಾಧ್ಯತೆಯಿಲ್ಲ.
ಇನ್ನು ಬ್ಯಾಟರ್ಗಳನ್ನು ಸಹ ಬದಲಿಸುವ ಸಾಧ್ಯತೆ ತುಂಬಾ ಕಡಿಮೆ. ಏಕೆಂದರೆ ಮೊದಲ ಮ್ಯಾಚ್ನಲ್ಲಿ ಅಗ್ರ ಕ್ರಮಾಂಕದ ದಾಂಡಿಗರೆಲ್ಲರೂ ವಿಫಲರಾಗಿದ್ದಾರೆ. ಹೀಗಾಗಿ ದ್ವಿತೀಯ ಪಂದ್ಯದಲ್ಲಿ ಮತ್ತೊಂದು ಚಾನ್ಸ್ ನೀಡುವ ಸಾಧ್ಯತೆ ಹೆಚ್ಚು. ಅದರಂತೆ ಆರಂಭಿಕರಾಗಿ ಶುಭ್ಮನ್ ಗಿಲ್ ಹಾಗೂ ಅಭಿಷೇಕ್ ಶರ್ಮಾ ಮುಂದುವರೆಯಲಿದ್ದಾರೆ.
ಮೂರನೇ ಕ್ರಮಾಂಕದಲ್ಲಿ ನಾಯಕ ಸೂರ್ಯಕುಮಾರ್ ಯಾದವ್ ಬ್ಯಾಟ್ ಬೀಸಲಿದ್ದಾರೆ. ನಾಲ್ಕನೇ ಕ್ರಮಾಂಕದಲ್ಲಿ ತಿಲಕ್ ವರ್ಮಾ ಕಣಕ್ಕಿಳಿದರೆ, ಆಲ್ರೌಂಡರ್ಗಳಾಗಿ ಅಕ್ಷರ್ ಪಟೇಲ್, ಶಿವಂ ದುಬೆ ಹಾಗೂ ಹಾರ್ದಿಕ್ ಪಾಂಡ್ಯ ಸ್ಥಾನ ಪಡೆಯಲಿದ್ದಾರೆ. ಇನ್ನು ವಿಕೆಟ್ ಕೀಪರ್ ಆಗಿ ಜಿತೇಶ್ ಶರ್ಮಾ ಅವರನ್ನು ಮುಂದುವರೆಸುವ ಸಾಧ್ಯತೆ ಹೆಚ್ಚು.
ಹೀಗಾಗಿ ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್ ಹಾಗೂ ಹರ್ಷಿತ್ ರಾಣಾ ದ್ವಿತೀಯ ಪಂದ್ಯದ ವೇಳೆಯೂ ಬೆಂಚ್ ಕಾಯಬೇಕಾಗಿ ಬರಬಹುದು. ಅದರಂತ ಎರಡನೇ ಟಿ20 ಪಂದ್ಯಕ್ಕಾಗಿ ಟೀಮ್ ಇಂಡಿಯಾದ ಸಂಭವನೀಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…
ಇದನ್ನೂ ಓದಿ: IPL 2026: ಮೊದಲ ಸುತ್ತಿನಲ್ಲಿ ಹರಾಜಾಗಲಿರುವ 7 ಆಲ್ರೌಂಡರ್ಗಳು ಇವರೇ
ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್.