ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಖಚಿತ
India vs New Zealand: ನ್ಯೂಝಿಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯ ಮೊದಲೆರಡು ಮ್ಯಾಚ್ಗಳಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದೆ. ಮೊದಲ ಪಂದ್ಯದಲ್ಲಿ 48 ರನ್ಗಳ ಗೆಲುವು ದಾಖಲಿಸಿದ್ದ ಭಾರತ ತಂಡವು ದ್ವಿತೀಯ ಟಿ20 ಪಂದ್ಯದಲ್ಲಿ 7 ವಿಕೆಟ್ ಗಳಿಂದ ಜಯಭೇರಿ ಬಾರಿಸಿದೆ. ಇದೀಗ ಮೂರನೇ ಪಂದ್ಯಕ್ಕಾಗಿ ಉಭಯ ತಂಡಗಳು ಸಜ್ಜಾಗಿದೆ.

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 5 ಪಂದ್ಯಗಳ ಟಿ20 ಸರಣಿಯ 3ನೇ ಪಂದ್ಯವು ಇಂದು (ಜ.25) ನಡೆಯಲಿದೆ. ಗುವಾಹಟಿಯಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಕಂಡು ಬರುವುದು ಖಚಿತ. ಏಕೆಂದರೆ ಕಳೆದ ಮ್ಯಾಚ್ ವೇಳೆ ವಿಶ್ರಾಂತಿ ಪಡೆದಿದ್ದ ಜಸ್ಪ್ರೀತ್ ಬುಮ್ರಾ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.
ಈ ಪಂದ್ಯವು ಸರಣಿ ನಿರ್ಣಾಯಕವಾಗಿರುವುದರಿಂದ ಬುಮ್ರಾ ಹರ್ಷಿತ್ ರಾಣಾ ಅಥವಾ ಅರ್ಷದೀಪ್ ಸಿಂಗ್ ಸ್ಥಾನದಲ್ಲಿ ಕಣಕ್ಕಿಳಿಯಬಹುದು.
ಅದರಂತೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಆರಂಭಿಕರಾಗಿ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ಇಶಾನ್ ಕಿಶನ್ ಬ್ಯಾಟ್ ಬೀಸಿದರೆ, ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಆಡಲಿದ್ದಾರೆ.
ಇನ್ನು ಐದನೇ ಕ್ರಮಾಂಕದಲ್ಲಿ ಶಿವಂ ದುಬೆ ಕಣಕ್ಕಿಳಿದರೆ, ಆರನೇ ಕ್ರಮಾಂಕದಲ್ಲಿ ಹಾರ್ದಿಕ್ ಪಾಂಡ್ಯ ಬ್ಯಾಟ್ ಬೀಸಲಿದ್ದಾರೆ. ಹಾಗೆಯೇ ಏಳನೇ ಕ್ರಮಾಂಕದಲ್ಲಿ ರಿಂಕು ಸಿಂಗ್ ಕಾಣಿಸಿಕೊಳ್ಳಲಿದ್ದಾರೆ.
ಇನ್ನುಳಿದಂತೆ ಜಸ್ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್ ಹಾಗೂ ವರುಣ್ ಚಕ್ರವರ್ತಿ ಬೌಲರ್ಗಳಾಗಿ ಕಣಕ್ಕಿಳಿಯುವುದನ್ನು ಎದುರು ನೋಡಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ 11 ಈ ಕೆಳಗಿನಂತಿರಲಿದೆ…
- ಅಭಿಷೇಕ್ ಶರ್ಮಾ
- ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್)
- ಇಶಾನ್ ಕಿಶನ್
- ಸೂರ್ಯಕುಮಾರ್ ಯಾದವ್
- ಶಿವಂ ದುಬೆ
- ಹಾರ್ದಿಕ್ ಪಾಂಡ್ಯ
- ರಿಂಕು ಸಿಂಗ್
- ಜಸ್ಪ್ರೀತ್ ಬುಮ್ರಾ
- ಅರ್ಷದೀಪ್ ಸಿಂಗ್
- ಕುಲ್ದೀಪ್ ಯಾದವ್
- ವರುಣ್ ಚಕ್ರವರ್ತಿ.
ನಿರ್ಣಾಯಕ ಪಂದ್ಯ:
ಈ ಪಂದ್ಯವು ಸರಣಿ ನಿರ್ಣಾಯಕ. ಏಕೆಂದರೆ ಐದು ಪಂದ್ಯಗಳ ಮೊದಲೆರಡು ಮ್ಯಾಚ್ಗಳಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಭಾರತ ತಂಡವು ಗೆದ್ದರೆ ಸರಣಿಯನ್ನು ವಶಪಡಿಸಿಕೊಳ್ಳಬಹುದು. ಅತ್ತ ಸರಣಿ ಗೆಲುವಿನ ಆಸೆಯನ್ನು ಜೀವಂತವಿರಿಸಿಕೊಳ್ಳಬೇಕಿದ್ದರೆ ನ್ಯೂಝಿಲೆಂಡ್ ತಂಡವು ಇಂದಿನ ಮ್ಯಾಚ್ನಲ್ಲಿ ಗೆಲ್ಲಲೇಬೇಕು. ಹೀಗಾಗಿ ಈ ಪಂದ್ಯದಲ್ಲೂ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.
ಇದನ್ನೂ ಓದಿ: ನೇರವಾಗಿ ಫೈನಲ್ಗೇರಲು RCB ಇನ್ನೆಷ್ಟು ಪಂದ್ಯ ಗೆಲ್ಲಬೇಕು?
